ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ ಘಟನೆಯ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯ ಚಕ್ರಧರಪುರದ ಉಪವಿಭಾಗೀಯ ಆಸ್ಪತ್ರೆಯ ಅಧಿಕಾರಿಗಳು 35 ವರ್ಷದ ದಿನಗೂಲಿ ಕೆಲಸಗಾರನೊಬ್ಬನಿಗೆ ಆಂಬ್ಯುಲೆನ್ಸ್ ನಿರಾಕರಿಸಿದ್ದಾರೆ. ಕಾರ್ಡ್‌ಬೋರ್ಡ್‌ನಲ್ಲೇ ಮಗುವಿನ ಶವ ತೆಗೆದುಕೊಂಡು ಹೋಗುವಂತೆ ಸಿಬ್ಬಂದಿ ಒತ್ತಾಯಿಸಿದ್ದಾರೆ. ಸದ್ಯ. ಆರೋಗ್ಯ ಇಲಾಖೆಯು ಘಟನೆ ಕುರಿತು ತನಿಖೆಗೆ ಆದೇಶಿಸಿದೆ. … Continue reading ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ