Homeಮುಖಪುಟಜಾರ್ಖಂಡ್ : ಸಿಎಎ, ಎನ್‌ಆರ್‌ಸಿ, ಯುಸಿಸಿ ವಿರುದ್ಧ ನಿರ್ಣಯ ಕೈಗೊಂಡ ಜೆಎಂಎಂ

ಜಾರ್ಖಂಡ್ : ಸಿಎಎ, ಎನ್‌ಆರ್‌ಸಿ, ಯುಸಿಸಿ ವಿರುದ್ಧ ನಿರ್ಣಯ ಕೈಗೊಂಡ ಜೆಎಂಎಂ

- Advertisement -
- Advertisement -

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷ ಭಾನುವಾರ (ಫೆ.2) ರಾತ್ರಿ ಡುಮ್ಕಾದ ಗಾಂಧಿ ಮೈದಾನದಲ್ಲಿ ನಡೆದ 46ನೇ ಸಂಸ್ಥಾಪನಾ ದಿನಾಚರಣೆಯ ಸಂದರ್ಭದಲ್ಲಿ, ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಗಳನ್ನು ದೃಢವಾಗಿ ವಿರೋಧಿಸುವ 50 ಅಂಶಗಳ ನಿರ್ಣಯವನ್ನು ಅಂಗೀಕರಿಸಿದೆ.

ಈ ನೀತಿಗಳನ್ನು ಜಾರ್ಖಂಡ್‌ ಸಂಪೂರ್ಣವಾಗಿ ತಿರಸ್ಕರಿಸಬೇಕು ಎಂದು ಪಕ್ಷ ಮನವಿ ಮಾಡಿದೆ.

ಇದರ ಜೊತೆಗೆ, ಛೋಟಾನಾಗಪುರ ಒಕ್ಕಲು (ಸಿಎನ್‌ಟಿ) ಕಾಯ್ದೆ ಮತ್ತು ಸಂತಾಲ್ ಪ್ರಜ್ಞಾ ಒಕ್ಕಲು (ಎಸ್‌ಪಿಟಿ) ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜೆಎಂಎಂ ಕರೆ ನೀಡಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡಲು ಬಾಕಿ ಇರುವ 1.36 ಲಕ್ಷ ಕೋಟಿ ರೂ.ಗಳನ್ನು ಪಾವತಿಸಬೇಕೆಂದು ಒತ್ತಾಯಿಸಿದೆ.

ಕಾರ್ಯಕ್ರಮದಲ್ಲಿ ಬೃಹತ್ ಜನಸಮೂಹವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಹೇಮಂತ್ ಸೊರೇನ್, ಕೇಂದ್ರ ಸರ್ಕಾರವನ್ನು ಟೀಕಿಸಿದರು. ಈ ಬಾರಿಯ ಬಜೆಟ್‌ನಲ್ಲಿ ಜಾರ್ಖಂಡ್ ಅನ್ನು ಕಡೆಗಣಿಸಲಾಗಿದೆ ಎಂದು ವಾಗ್ದಾಳಿ ನಡೆಸಿದರು. “ಊಳಿಗಮಾನ್ಯ ಮನಸ್ಥಿತಿ” ಹೊಂದಿರುವ ಕೆಲವು ಗುಂಪುಗಳು ರಾಜ್ಯದ ಬುಡಕಟ್ಟು ಜನಸಂಖ್ಯೆಯ ಪ್ರಗತಿಯನ್ನು ತಡೆಯಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದ್ದಾರೆ.

“ಖನಿಜ ಸಂಪನ್ಮೂಲಗಳಿಂದ ಸಮೃದ್ಧವಾಗಿದ್ದರೂ, ರಾಷ್ಟ್ರೀಯ ಖಜಾನೆಗೆ ಗಣನೀಯ ಕೊಡುಗೆ ನೀಡುತ್ತಿದ್ದರೂ ಜಾರ್ಖಂಡ್ ಅತ್ಯಂತ ಹಿಂದುಳಿದ ರಾಜ್ಯಗಳಲ್ಲಿ ಒಂದಾಗಿದೆ” ಎಂದು ಹೇಮಂತ್ ಸೊರೇನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಲ್ಲಾ ರಾಜ್ಯಗಳು, ವಿಶೇಷವಾಗಿ ಅಭಿವೃದ್ಧಿಯಾಗದ ರಾಜ್ಯಗಳು ಕೇಂದ್ರದಿಂದ ಸಮಾನ ಪರಿಗಣನೆ ಪಡೆಯಬೇಕು” ಎಂದು ಅವರು ಒತ್ತಿ ಹೇಳಿದ್ದಾರೆ.

ಕೇಂದ್ರದ ಬಜೆಟ್ ಅನ್ನು ಟೀಕಿಸಿದ ಸೊರೇನ್, “ಇದು ಶ್ರೀಮಂತರ ಪರ ಮತ್ತು ಬಡವರ ಪ್ರಯೋಜನವಿಲ್ಲದ ಬಜೆಟ್ ಎಂದು ಹೇಳಿದ್ದಾರೆ. “ಹಣದುಬ್ಬರವು ಗಗನಕ್ಕೇರುತ್ತಿರುವಾಗ ಮತ್ತು ಜಿಎಸ್‌ಟಿಯಲ್ಲಿ ಯಾವುದೇ ಪರಿಹಾರವಿಲ್ಲದಿದ್ದಾಗ ತೆರಿಗೆ ರಿಯಾಯಿತಿಗಳು ಸಹಾಯ ಮಾಡುವುದಿಲ್ಲ” ಎಂದಿದ್ದಾರೆ. ಸರ್ಕಾರದ ಹೊಸ ಉಪಕ್ರಮವಾದ ಗ್ಯಾನ್ (ಗರಿಬ್, ಯುವ, ಅನ್ನದಾತ, ನಾರಿ), ನೇರ ಆರ್ಥಿಕ ಬೆಂಬಲಕ್ಕಿಂತ ಹೆಚ್ಚಾಗಿ ಸಾಲಗಳನ್ನು ನೀಡುವ ತಂತ್ರವಾಗಿದೆ ಎಂದು ಆರೋಪಿಸಿದ್ದಾರೆ.

ಜಾರ್ಖಂಡ್‌ನ ಕಲ್ಯಾಣ ಯೋಜನೆಗಳನ್ನು ಎತ್ತಿ ತೋರಿಸಿದ ಸೊರೇನ್, ಮಹಿಳೆಯರಿಗೆ ಮಾಸಿಕ 2,500ರೂಪಾಯಿ ಆರ್ಥಿಕ ನೆರವು ನೀಡಿದ ಮೊದಲ ರಾಜ್ಯ ನಮ್ಮದು ಹೇಳಿದರು. ಬಿಜೆಪಿಯನ್ನು ಟೀಕಿಸಿದ ಅವರು, “ಅವರು ನಮ್ಮ ಯೋಜನೆಗಳನ್ನು ಬಿಟ್ಟಿ ಎಂದು ಕರೆದರು. ಆದರೆ, ಈಗ ಅವರೇ ದೆಹಲಿಯಲ್ಲಿ ಉಚಿತ ಭರವಸೆಗಳನ್ನು ನೀಡಿದ್ದಾರೆ. ನಾವು ಮಾಡಿದಾಗ ತಪ್ಪು ಎಂದದ್ದು ಅವರು ಮಾಡಿದಾಗ ಸರಿಯಾಗುತ್ತಾ? ಎಂದು ಪ್ರಶ್ನಿಸಿದ್ದಾರೆ.

ದೆಹಲಿ ಚುನಾವಣೆ: ಹೈ-ವೋಲ್ಟೇಜ್ ಪ್ರಚಾರ ಇಂದು ಅಂತ್ಯ; ರಾಜಧಾನಿಯ ಗದ್ದುಗೆ ಯಾರಿಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....