HomeUncategorizedಜಾರ್ಖಂಡ್ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ ಸಾಧ್ಯತೆ

ಜಾರ್ಖಂಡ್ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ ಸಾಧ್ಯತೆ

- Advertisement -
- Advertisement -

ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ (ಇಸಿ) ಮಂಗಳವಾರ ಪ್ರಕಟಿಸಲಿದೆ. ಆಯೋಗವು ಮಧ್ಯಾಹ್ನ 3.30ಕ್ಕೆ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ಕರೆದು ವಿವರಗಳನ್ನು ಪ್ರಕಟಿಸಿದೆ. ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 26 ರಂದು ಕೊನೆಗೊಂಡರೆ, ಜಾರ್ಖಂಡ್ ಮುಂದಿನ ವರ್ಷ ಜನವರಿ 5 ರಂದು ಕೊನೆಗೊಳ್ಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜಾರ್ಖಂಡ್‌ನಲ್ಲಿ ಹೆಮಂತ್ ಸೊರೆನ್ ನೇತೃತ್ವದ ಜೆಎಂಎಂ ಪಕ್ಷ ಆಡಳಿತದಲ್ಲಿದ್ದು, ಅಲ್ಲಿ ಬಿಜೆಪಿ ಅವರಿಗೆ ಸವಾಲು ಹಾಕುತ್ತಿದೆ. ಇತ್ತಿಚೆಗಷ್ಟೆ ಪ್ರಕಣವೊಂದಲ್ಲಿ ಕೇಂದ್ರ ತನಿಖಾ ಸಂಸ್ಥೆ ಸೊರೆನ್ ಅವರನ್ನು ಬಂಧಿಸಿತ್ತು. ಈ ವೇಳೆ ಅವರು ರಾಜೀನಾಮೆ ನೀಡಿದ್ದ ಅವರು ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಮತ್ತೆ ಅಧಿಕಾರಕ್ಕೆ ಏರಿದ್ದರು.

ಮಹಾರಾಷ್ಟ್ರದಲ್ಲಿ ಶಿವಸೇನೆ, ಬಿಜೆಪಿ ಮತ್ತು ಎನ್‌ಸಿಪಿ ಅಧಿಕಾರದಲ್ಲಿದೆ. ಅದಾಗ್ಯೂ ಬಿಜೆಪಿ ಆಪಾದಿತ ಆಪರೇಷನ್ ಕಮಲ ರಾಜ್ಯದಲ್ಲಿ ಅಧಿಕಾರಕ್ಕೆ ಏರಿತ್ತು. ಅಲ್ಲದೆ, ಎನ್‌ಸಿಪಿ ಮತ್ತು ಶಿವಸೇನೆ ಪಕ್ಷಗಳು ಒಡೆದುಹೋಗುವಂತೆ ಕೂಡಾ ಬಿಜೆಪಿ ಮಾಡಿತ್ತು ಎಂದು ಆರೋಪಿಸಲಾಗಿದೆ. ಕಾಂಗ್ರೆಸ್, ಎನ್‌ಸಿಪಿ ಮತ್ತು ಶಿವಸೇನೆ ಮೈತ್ರಿಯಿಂದ ಅಧಿಕಾರನ್ನು ಕಿತ್ತ ಬಿಜೆಪಿ ಶಿವಸೇನೆಯನ್ನು ಶಿವಸೇನೆ ಮತ್ತು ಶಿವಸೇನೆ(ಉದ್ಧವ್ ಠಾಕ್ರೆ) ಮತ್ತು ಎನ್‌ಸಿಪಿಯನ್ನು ಎನ್‌ಸಿಪಿ(ಶರದ್ ಪವಾರ್) ಎಂದು ವಿಭಜನೆ ಮಾಡುವಂತೆ ರಾಜಕೀಯ ತಂತ್ರ ಮಾಡಿತ್ತು.

ಇದನ್ನೂ ಓದಿ: ಬಂಗಾಳದ ಪ್ರತಿಭಟನಾನಿರತ ಕಿರಿಯ ವೈದ್ಯರ ಬೆಂಬಲಕ್ಕೆ ನಿಂತ ಐಎಂಎ; ರಾಷ್ಟ್ರವ್ಯಾಪಿ ಉಪವಾಸ ಸತ್ಯಾಗ್ರಹಕ್ಕೆ ನಿರ್ಧಾರ

288 ವಿಧಾನಸಭಾ ಕ್ಷೇತ್ರಗಳಿರುವ ಮಹಾರಾಷ್ಟ್ರದಲ್ಲಿ ಪ್ರಸ್ತುತ ಆಡಳಿತರೂಢ ಮಹಾ ಯುತಿ ಮೈತ್ರಿಯಲ್ಲಿ 202 ಶಾಸಕರಿದ್ದಾರೆ. ಇದರಲ್ಲಿ ಬಿಜೆಪಿ 102, ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ 40, ಮುಖ್ಯಮಂತ್ರಿ ಶಿಂಧೆ ನೇತೃತ್ವದ ಶಿವಸೇನೆ 38 ಹಾಗೂ ಇತರ ಪಕ್ಷಗಳ ಮತ್ತು ಪಕ್ಷೇತರರ 22 ಶಾಸಕರ ಬೆಂಬಲವಿದೆ.

ವಿಪಕ್ಷ ಮಹಾ ವಿಕಾಸ್ ಅಘಾಡಿಯಲ್ಲಿ 69 ಸ್ಥಾನಗಳಿದ್ದು, ಇದರಲ್ಲಿ ಕಾಂಗ್ರೆಸ್ 37, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ 16, ಶರಾದ್ ಪವಾರ್ ನೇತೃತ್ವದ ಎನ್‌ಸಿಪಿ 12, ಸಮಾಜವಾದಿ ಪಕ್ಷದ 2, ಸಿಪಿಐ(ಎಂ) 1 ಪಿಡಬ್ಲ್ಯೂಪಿಐ ಪಕ್ಷದ 1 ಶಾಸಕರಿದ್ದಾರೆ. ಇಷ್ಟೆ ಅಲ್ಲದೆ, ಎಂಐಎಂ ಪಕ್ಷದ ಇಬ್ಬರು ಶಾಸಕರು ಕೂಡಾ ವಿಪಕ್ಷದಲ್ಲಿದ್ದಾರೆ. ಅದಾಗ್ಯೂ, ರಾಜ್ಯದ 15 ಸ್ಥಾನಗಳು ವಿವಿಧ ಕಾರಣಗಳಿಗೆ ತೆರವುಗೊಂಡಿದೆ.

81 ವಿಧಾನಸಭಾ ಕ್ಷೇತ್ರಗಳಿರುವ ಜಾರ್ಖಂಡ್‌ನಲ್ಲಿ ಇಂಡಿಯಾ ಮೈತ್ರಿಕೂಟದ ಸರ್ಕಾರವಿದ್ದು, ಹೇಮಂತ್ ಸೋರೆನ್ ಅವರ ಜೆಎಂಎಂ ನೇತೃತ್ವದವಿದೆ. ರಾಜ್ಯದಲ್ಲಿ ಜೆಎಂಎಂ 25, ಕಾಂಗ್ರೆಸ್17, ಸಿಪಿಐಎಂಲ್ 1 ಮತ್ತು ಆರ್‌ಜೆಡಿಗೆ ಒಬ್ಬ ಶಾಸಕರಿದ್ದಾರೆ. ವಿಪಕ್ಷದಲ್ಲಿ ಬಿಜೆಪಿ 25, ಎಜೆಎಸ್‌ಯು 3, ಜೆಡಿಯು 1 ಮತ್ತು ಒಬ್ಬ ಪಕ್ಷೇತರ ಶಾಸಕರಿದ್ದಾರೆ. ಇದಲ್ಲದೆ ಜಾರ್ಖಂಡ್ ವಿಧಾನಸಭೆಯಲ್ಲಿ 7 ಸ್ಥಾನಗಳು ತೆರವುಗೊಂಡಿದೆ.

ಇದನ್ನೂ ಓದಿ: ತಮಿಳುನಾಡು| ಕಾರ್ಮಿಕ ಹಕ್ಕು ವಿಚಾರದಲ್ಲಿ ಕೇಂದ್ರದ ಬಿಜೆಪಿಗೂ, ರಾಜ್ಯದ ಡಿಎಂಕೆಗೂ ಯಾವುದೇ ವ್ಯತ್ಯಾಸವಿಲ್ಲ : ನ್ಯಾ. ಚಂದ್ರು

ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲದೆ, ವಿವಿಧ ಕಾರಣಗಳಿಂದ ತೆರವಾಗಿರುವ ಮೂರು ಲೋಕಸಭೆ ಮತ್ತು ಕನಿಷ್ಠ 47 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆಯನ್ನೂ ಆಯೋಗ ಇಂದು ಘೋಷಿಸುವ ಸಂಭವವಿದೆ.

ಕೇರಳದ ವಯನಾಡ್, ಮಹಾರಾಷ್ಟ್ರದ ನಾಂದೇಡ್ ಮತ್ತು ಪಶ್ಚಿಮ ಬಂಗಾಳದ ಬಸಿರ್ಹತ್ ಮೂರು ಲೋಕಸಭಾ ಸ್ಥಾನಗಳು ಖಾಲಿ ಇವೆ. ವಯನಾಡ್ ಕ್ಷೇತ್ರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡಿದ್ದರಿಂದ ತೆರವಾಗಿತ್ತು. ಅವರು ಲೋಕಸಭೆ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರು.

ನಾಂದೇಡ್ ಪ್ರತಿನಿಧಿಸಿದ್ದ ಕಾಂಗ್ರೆಸ್ ಸಂಸದ ವಸಂತ್ ಚವಾಣ್ ಮತ್ತು ಬಸಿರ್ ಹತ್ ಪ್ರತಿನಿಧಿಸಿದ್ದ ಟಿಎಂಸಿ ಸಂಸದ ಹಾಜಿ ಶೇಖ್ ನೂರುಲ್ ಇಸ್ಲಾಂ ಇತ್ತೀಚೆಗೆ ನಿಧನರಾಗಿದ್ದರಿಂದ ಕ್ಷೇತ್ರವು ತೆರವುಗೊಂಡಿತ್ತು.

ವಿಡಿಯೊ ನೋಡಿ: ನೋಡಬನ್ನಿ ಬಸವನಗುಡಿ ಕಡ್ಲೇಕಾಯಿ ಪರಿಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...