Homeಮುಖಪುಟಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

- Advertisement -
- Advertisement -

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಜಾರಿಬಾಗ್ ಪೊಲೀಸ್ ವರಿಷ್ಠಾಧಿಕಾರಿ ಅಂಜನಿ ಅಂಜನ್ ಮತ್ತು ಹಜಾರಿಬಾಗ್ ಡಿಐಜಿ ಅಂಜನಿ ಝಾ ತಡರಾತ್ರಿ ಪತ್ರಿಕಾಗೋಷ್ಠಿಯಲ್ಲಿ ಬಂಧನದ ಸುದ್ದಿಯನ್ನು ಖಚಿತಪಡಿಸಿದ್ದಾರೆ.

ಬಾಲಕಿಯ ತಾಯಿ ರೇಶ್ಮಿ ದೇವಿ, ಮಾಂತ್ರಿಕನಾದ 55 ವರ್ಷದ ಶಾಂತಿ ದೇವಿ ಮತ್ತು 40 ವರ್ಷದ ಭೀಮ್ ರಾಮ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಇವರೆಲ್ಲರೂ ಒಂದೇ ಗ್ರಾಮದವರು.

ರೇಶ್ಮಿ ದೇವಿ ಮಾನಸಿಕ ಮತ್ತು ದೈಹಿಕ ಕಾಯಿಲೆಯಿಂದ ಬಳಲುತ್ತಿರುವ ತನ್ನ ಕಿರಿಯ ಮಗನ ಚಿಕಿತ್ಸೆಗಾಗಿ ತನ್ನ ಹಳ್ಳಿಯಲ್ಲಿರುವ ‘ತಾಂತ್ರಿಕ’ (ಮಾಂತ್ರಿಕ) ವನ್ನು ಆಗಾಗ್ಗೆ ಭೇಟಿ ಮಾಡುತ್ತಿದ್ದರು ಎಂದು ಅಂಜನಿ ಅಂಜನ್ ಹೇಳಿದರು.

“ಮಗನ ಎಲ್ಲಾ ಕಾಯಿಲೆಗಳನ್ನು ಗುಣಪಡಿಸಲು ಕನ್ಯೆಯಾಗಿರುವ ಹುಡುಗಿಯನ್ನು ಬಲಿ ನೀಡಬೇಕೆಂದು ಮಾಂತ್ರಿಕ ತಾಯಿಗೆ ಹೇಳಿದರು” ಎಂದು ಅವರು ಹೇಳಿದರು.

ಮಾರ್ಚ್ 24 ರಂದು ಅಷ್ಟಮಿಯ ರಾತ್ರಿ ಇಡೀ ಗ್ರಾಮವು ಹಬ್ಬದ ಆಚರಣೆಯಲ್ಲಿ ತೊಡಗಿ ಮಂಗಳ ಜುಲುಸ್ (ರಾಮನವಮಿ ಮೆರವಣಿಗೆ) ನೋಡುತ್ತಿದ್ದಾಗ, ಶಾಂತಿ ದೇವಿಯ ಮನೆಯಲ್ಲಿ ಬಾಲಕಿಯನ್ನು ಕತ್ತು ಹಿಸುಕಿ ಕೊಂದಿದ್ದಾರೆ ಎಂದು ಅಧಿಕಾರಿ ಹೇಳಿದರು.

ಮಾಂತ್ರಿಕನು ಬಾಲಕಿಯ ಗುಪ್ತಾಂಗದೊಳಗೆ ಮರದ ಕೋಲು ಹಾಕಿದ್ದಾನೆ, ಭೀಮ್ ರಾಮ್ ಆಕೆಯ ತಲೆಗೆ ಹೊಡೆದು ರಕ್ತ ಸಂಗ್ರಹಿಸಿದ ಎಂದು ಪೊಲೀಸರು ಹೇಳಿಕೊಂಡಿದ್ದಾರೆ. ಬಾಲಕಿಯನ್ನು ಕೊಂದ ನಂತರ, ಆಕೆಯ ದೇಹವನ್ನು ತೋಟದಲ್ಲಿ ಹೂಳಿದರು.

ಮೂವರು ಅತ್ಯಾಚಾರದ ಆರೋಪ ಹೊರಿಸುವ ಮೂಲಕ ತನಿಖಾಧಿಕಾರಿಗಳನ್ನು ದಾರಿ ತಪ್ಪಿಸಲು ಪ್ರಯತ್ನಿಸಿದರು ಎಂದು ಅಂಜನ್ ಹೇಳಿದರು. ಆದರೆ ಇದು ಮರಣೋತ್ತರ ಪರೀಕ್ಷೆ ಮತ್ತು ವಿಧಿವಿಜ್ಞಾನ ವರದಿಯಲ್ಲಿ ಸಾಬೀತಾಗಿಲ್ಲ ಎಂದರು.

ಭೀಮ್ ರಾಮ್, ತನ್ನ ಅತ್ತಿಗೆ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಕೊಲೆ ಮಾಡಿರುವ ಆರೋಪವನ್ನೂ ಎದುರಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಹಜಾರಿಬಾಗ್‌ನ ಬಿಷ್ಣುಗಢದಲ್ಲಿ ಬಾಲಕಿಯ ಮೇಲೆ ನಡೆದ ಅತ್ಯಾಚಾರ -ಕೊಲೆ ಪ್ರಕರಣವನ್ನು ಸೋಮವಾರ ಜಾರ್ಖಂಡ್ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪರಿಗಣಿಸಿ ರಾಜ್ಯ ಆಡಳಿತ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ನೀಡಿದೆ.

ಮಾಧ್ಯಮ ವರದಿಗಳ ಆಧಾರದ ಮೇಲೆ ನ್ಯಾಯಮೂರ್ತಿ ಸುಜಿತ್ ನಾರಾಯಣ್ ಪ್ರಸಾದ್ ಮತ್ತು ನ್ಯಾಯಮೂರ್ತಿ ಸಂಜಯ್ ಪ್ರಸಾದ್ ಅವರಿದ್ದ ವಿಭಾಗೀಯ ಪೀಠವು ಘಟನೆಯನ್ನು ಗಮನಿಸಿತು.

ಈ ಹಿಂದೆ, ಬಾಲಕಿಯ ತಾಯಿ ತನ್ನ ಮಗಳನ್ನು ಅಪಹರಿಸಲಾಗಿದೆ ಎಂದು ಆರೋಪಿಸಿದ್ದರು. ಮಾರ್ಚ್ 25 ರಂದು ಗ್ರಾಮದ ಹೊಲವೊಂದರಲ್ಲಿ ಆಕೆಯ ಶವ ಪತ್ತೆಯಾಗಿತ್ತು. ಹತ್ಯೆಯನ್ನು ವಿರೋಧಿಸಿ ವಿರೋಧ ಪಕ್ಷ ಬಿಜೆಪಿ ಸೋಮವಾರ ಹಜಾರಿಬಾಗ್‌ನಲ್ಲಿ 12 ಗಂಟೆಗಳ ಬಂದ್ ನಡೆಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...