Homeಮುಖಪುಟಜಾರ್ಖಂಡ್ | ಜೆಎಂಎಂ ವಿರುದ್ದ ಅಸಮಾಧಾನ : ಹೊಸ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ ಚಂಪೈ ಸೊರೇನ್

ಜಾರ್ಖಂಡ್ | ಜೆಎಂಎಂ ವಿರುದ್ದ ಅಸಮಾಧಾನ : ಹೊಸ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ ಚಂಪೈ ಸೊರೇನ್

- Advertisement -
- Advertisement -

ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಚಂಪೈ ಸೋರೇನ್ ಅವರು ಜೆಎಂಎಂ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿಯ ನಡುವೆ, ಹೊಸ ಪಕ್ಷ ಸ್ಥಾಪಿಸುವುದಾಗಿ ಅವರು ಘೋಷಿಸಿದ್ದಾರೆ.

ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಚಂಪೈ ಸೊರೇನ್, “ನನ್ನ ಎದುರು ನಿವೃತ್ತಿ, ಸಂಘಟನೆ ಮತ್ತು ಸ್ನೇಹ ಎಂಬ ಮೂರು ಆಯ್ಕೆಗಳಿವೆ. ಆದರೆ, ನಾನು ನಿವೃತ್ತಿಯಾಗುವುದಿಲ್ಲ. ಬದಲಾಗಿ ಹೊಸ ಪಕ್ಷ ಸ್ಥಾಪಿಸಿ, ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ. ಹಾಗೆಯೇ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಬಯಸುತ್ತೇನೆ” ಎಂದಿದ್ದಾರೆ.

“ಒಂದು ವಾರದೊಳಗೆ ಹೊಸ ಪಕ್ಷ ಸ್ಥಾಪಿಸಲಾಗುವುದು. ಒಂದು ದಿನದೊಳಗೆ 30 ಸಾವಿರದಿಂದ 40 ಸಾವಿರ ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆಯಾಗಬಹುದು. ಹಾಗಾಗಿ, ಹೊಸ ಪಕ್ಷ ಸ್ಥಾಪಿಸುವುದರಿಂದ ನನಗೆ ಯಾವುದೇ ಸಮಸ್ಯೆಗಳಿಲ್ಲ” ಎಂದು ಚಂಪೈ ಸೊರೇನ್ ಹೇಳಿದ್ದಾರೆ.

ಈ ಹಿಂದೆ ಎಕ್ಸ್‌ ಪೋಸ್ಟ್‌ ಮೂಲಕ ಅಸಮಧಾನ ವ್ಯಕ್ತಪಡಿಸಿದ್ದ ಚಂಪೈ ಸೊರೇನ್ “ಜುಲೈ 3ರಂದು ಹೇಮಂತ್ ಸೊರೇನ್ ಜೈಲಿನಿಂದ ಹೊರ ಬಂದ ಬಳಿಕ, ಮುಖ್ಯಮಂತ್ರಿಯಾಗಿದ್ದ ನನ್ನ ಎಲ್ಲಾ ನಿಗದಿತ ಕಾರ್ಯಕ್ರಮಗಳನ್ನು ಯಾವುದೇ ಮಾಹಿತಿ ನೀಡದೆ ರದ್ದುಗೊಳಿಸಲಾಗಿತ್ತು. ಈ ಬಗ್ಗೆ ನಾನು ವಿಚಾರಿಸಿದ್ದಕ್ಕೆ ಪಕ್ಷದ ಶಾಸಕರ ಸಭೆ ಇದೆ. ಅಲ್ಲಿಯವರೆಗೆ ನೀವು ಯಾವುದೇ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸಬಾರದು ಎಂದು ಹೇಳಲಾಗಿತ್ತು” ಎಂದು ಬರೆದುಕೊಂಡಿದ್ದರು.

“ಜಾರ್ಖಂಡ್ ಮುಖ್ಯಮಂತ್ರಿಯಾಗಿ ಸಾಕಷ್ಟು ಅವಮಾನ ಸಹಿಸಿದೆ. ತಾನು ಸಿಎಂ ಆಗಿದ್ದ ಅವಧಿಯಲ್ಲಿ ಜಾರಿಗೊಳಿಸಿದ್ದ ಎಲ್ಲಾ ಯೋಜನೆಗಳನ್ನು ಪಕ್ಷದ ಹೈಕಮಾಂಡ್ ರದ್ದುಗೊಳಿಸಿದೆ. ಮುಖ್ಯಮಂತ್ರಿಯೊಬ್ಬರು ಜಾರಿಗೊಳಿಸಿದ ಯೋಜನೆಗಳನ್ನು ಮತ್ತೊಬ್ಬರು ರದ್ದುಗೊಳಿಸುವುದಕ್ಕಿಂತ ದೊಡ್ಡ ಅವಮಾನ ಪ್ರಜಾಪ್ರಭುತ್ವದಲ್ಲಿ ಏನಿದೆ?” ಎಂದು ಪ್ರಶ್ನಿಸಿದ್ದರು.

ಇದನ್ನೂ ಓದಿ : ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ | ಮೂವರು ಆರೋಪಿಗಳ ಖುಲಾಸೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...