Homeಮುಖಪುಟಜಾರ್ಖಂಡ್| ಜೆಪಿಎಸ್‌ಸಿ ಸುಧಾರಣೆಗೆ ಆಗ್ರಹಿಸಿ 13ನೇ ದಿನಕ್ಕೆ ಕಾಲಿಟ್ಟ ವಿದ್ಯಾರ್ಥಿಗಳ ಪ್ರತಿಭಟನೆ

ಜಾರ್ಖಂಡ್| ಜೆಪಿಎಸ್‌ಸಿ ಸುಧಾರಣೆಗೆ ಆಗ್ರಹಿಸಿ 13ನೇ ದಿನಕ್ಕೆ ಕಾಲಿಟ್ಟ ವಿದ್ಯಾರ್ಥಿಗಳ ಪ್ರತಿಭಟನೆ

- Advertisement -
- Advertisement -

ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್‌ಎಸ್‌ಸಿ) ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಮತ್ತು ಆಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆ ಗುರುವಾರ 13 ನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯಾದ್ಯಂತ ಹಲವಾರು ವಿದ್ಯಾರ್ಥಿ ಸಂಘಟನೆಗಳಿಂದ ಆಂದೋಲನಕ್ಕೆ ವ್ಯಾಪಕ ಬೆಂಬಲ ಸಿಗುತ್ತಿದೆ.

ರಾಂಚಿಯ ಜೈಪಾಲ್ ಸಿಂಗ್ ಮುಂಡಾ ಕ್ರೀಡಾಂಗಣದಲ್ಲಿ ಪ್ರತಿಭಟನೆ ನಡೆಯುತ್ತಿದೆ. ನೂರಾರು ವಿದ್ಯಾರ್ಥಿಗಳು ಪ್ರತಿಭಟನಾಕಾರರೊಂದಿಗೆ ತಮ್ಮ ಒಗ್ಗಟ್ಟು ವ್ಯಕ್ತಪಡಿಸಿದರು. ಪ್ರತಿಭಟನಾಕಾರರ ನೇಮಕಾತಿ ಪ್ರಕ್ರಿಯೆಯಲ್ಲಿ ಸುಧಾರಣೆಗಳ ಬೇಡಿಕೆಗಳನ್ನು ಬೆಂಬಲಿಸಲು ಶುಕ್ರವಾರ ಬೆಳಿಗ್ಗೆ ಪ್ರತಿಭಟನಾ ಸ್ಥಳಕ್ಕೆ ಹೆಚ್ಚಿನ ವಿದ್ಯಾರ್ಥಿಗಳು ತಲುಪಿದ್ದರಿಂದ ಪ್ರತಿಭಟನೆ ಮತ್ತಷ್ಟು ಬಲ ಬಂದಿದೆ.

ಜೆಪಿಎಸ್‌ಸಿ ಆಕಾಂಕ್ಷಿಗಳ ನೇತೃತ್ವದಲ್ಲಿ ನಡೆದ ಚಳುವಳಿ ಕಳೆದ ಎರಡು ವಾರಗಳಿಂದ ತೀವ್ರಗೊಂಡಿದೆ. ರಾತ್ರಿಯಿಡೀ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹೊರತಾಗಿಯೂ, ಪ್ರತಿಭಟನಾಕಾರರು ಸ್ಥಳದಲ್ಲಿಯೇ ಇದ್ದರು. ಹೋರಾಟ ಹಿಂತೆಗೆದುಕೊಳ್ಳಲು ನಿರಾಕರಿಸಿದರು. ಸರ್ಕಾರವು ತಮ್ಮ ಬೇಡಿಕೆಗಳನ್ನು ಪರಿಹರಿಸುವವರೆಗೆ ತಮ್ಮ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಪುನರುಚ್ಚರಿಸಿದರು.

ವಿದ್ಯಾರ್ಥಿ ನಾಯಕ ದೇವೇಂದ್ರ ಮಹ್ತೊ ಕೂಡ ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಮುಂದುವರೆಸಿದರು. ಪ್ರತಿಕೂಲ ಹವಾಮಾನದ ಹೊರತಾಗಿಯೂ ಪ್ರತಿಭಟನಾಕಾರರು ರಾತ್ರಿಯಿಡೀ ಹೋರಾಟದ ಸ್ಥಳದಲ್ಲಿಯೇ ಇದ್ದರು.

ಮಳೆಯು ತಮ್ಮ ದೃಢಸಂಕಲ್ಪವನ್ನು ದುರ್ಬಲಗೊಳಿಸುವುದಿಲ್ಲ ಎಂದು ವಿದ್ಯಾರ್ಥಿಗಳು ಸಮರ್ಥಿಸಿಕೊಂಡರು. ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳ ವಿರುದ್ಧ ಅರ್ಥಪೂರ್ಣ ಕ್ರಮ ಕೈಗೊಳ್ಳುವವರೆಗೆ ಧ್ವನಿ ಎತ್ತುವುದನ್ನು ಮುಂದುವರಿಸುತ್ತೇವೆ ಎಂದು ಹೇಳಿದರು.

ವರದಿಗಾರರ ಜೊತೆಗೆ ಜೊತೆ ಮಾತನಾಡಿದ ಪ್ರತಿಭಟನಾ ನಿರತ ವಿದ್ಯಾರ್ಥಿಗಳಲ್ಲಿ ಒಬ್ಬರು, ರಾಜ್ಯದ ಶಿಕ್ಷಣ ಮತ್ತು ನೇಮಕಾತಿ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಆಳವಾಗಿ ಬೇರೂರಿದೆ ಎಂದು ಆರೋಪಿಸಿದರು.

“ಇಲ್ಲಿನ ಶಿಕ್ಷಣ ವ್ಯವಸ್ಥೆಯನ್ನು ಭ್ರಷ್ಟಾಚಾರ ಸಂಪೂರ್ಣವಾಗಿ ಆಕ್ರಮಿಸಿಕೊಂಡಿದೆ ಎಂದು ಅವರೆಲ್ಲರಿಗೂ ತಿಳಿದಿದೆ. ಇದು ಇಂದು ಪ್ರಾರಂಭವಾದದ್ದಲ್ಲ; ಇದು ಬಹಳ ದಿನಗಳಿಂದ ನಡೆಯುತ್ತಿದೆ. ಇದು ಭಗವಾನ್ ಬಿರ್ಸಾ ಮುಂಡಾ ಅವರ ಭೂಮಿ, ಅವರನ್ನು ನಾವು ಪೂಜಿಸುತ್ತೇವೆ ಮತ್ತು ಗೌರವಿಸುತ್ತೇವೆ. ದುರದೃಷ್ಟವಶಾತ್, ಈ ಪವಿತ್ರ ಮಣ್ಣಿನಲ್ಲಿ ಇಂತಹ ಭ್ರಷ್ಟಾಚಾರ ನಡೆಯುತ್ತಿದೆ. ಇದರಲ್ಲಿ ಭಾಗಿಯಾಗಿರುವವರು ಜಾರ್ಖಂಡ್‌ನವರೇ ಆಗಿದ್ದಾರೆ. ಅನೇಕರು ಮನೆಗಳನ್ನು ನಿರ್ಮಿಸಲು, ಕಾರುಗಳನ್ನು ಖರೀದಿಸಲು ಮತ್ತು ಸಂಪತ್ತನ್ನು ಸಂಗ್ರಹಿಸಲು ಲಂಚ ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಲಾಗಿದೆ” ಎಂದು ವಿದ್ಯಾರ್ಥಿ ಹೇಳಿದರು.

ನೇಮಕಾತಿ ಪ್ರಕ್ರಿಯೆಯಲ್ಲಿ ಲಂಚವು ಸಾಮಾನ್ಯವಾಗಿದೆ ಎಂದು ಅವರು ಆರೋಪಿಸಿದರು.

“ಪ್ರತಿಯೊಂದು ಹುದ್ದೆಗೂ ಒಬ್ಬರು ಲಂಚ ನೀಡಬೇಕಾಗುತ್ತದೆ, ಆಗ ಮಾತ್ರ ಅವರು ಹುದ್ದೆಯನ್ನು ಪಡೆದುಕೊಳ್ಳುತ್ತಾರೆ. ಸಿಜಿಎಲ್ ಸೀಟನ್ನು 25 ಲಕ್ಷ ರೂ.ಗೆ ಮಾರಾಟ ಮಾಡಲಾಗುತ್ತಿದೆ. ಇದು ನಿಜಕ್ಕೂ ದುರದೃಷ್ಟಕರ” ಎಂದು ಅವರು ಹೇಳಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮತ್ತೊಬ್ಬ ವಿದ್ಯಾರ್ಥಿ ಮಾತನಾಡಿ, “ಶಿಕ್ಷಣ ವ್ಯವಸ್ಥೆಯು ಭಯಾನಕ ಸ್ಥಿತಿಯಲ್ಲಿರುವುದರಿಂದ ನಾವು ಈ ಪ್ರತಿಭಟನೆಗೆ ಸೇರಿಕೊಂಡಿದ್ದೇವೆ. ಸಾಧ್ಯವಾದಷ್ಟು ಬೇಗ ಸುಧಾರಣೆಗಳನ್ನು ಪರಿಚಯಿಸಬೇಕು, ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು, ನಮ್ಮ ಕಾಳಜಿಗಳು ಜಾರ್ಖಂಡ್ ಸರ್ಕಾರವನ್ನು ತಲುಪಬೇಕು ಎಂದು ನಾವು ಬಯಸುತ್ತೇವೆ. ಜಾರ್ಖಂಡ್‌ನಲ್ಲಿ ನಡೆಸುವ ಎಲ್ಲಾ ಪರೀಕ್ಷೆಗಳು ಪತ್ರಿಕೆ ಸೋರಿಕೆಯಿಂದ ಮುಕ್ತವಾಗಬೇಕೆಂದು ನಾವು ಬಯಸುತ್ತೇವೆ” ಎಂದು ಹೇಳಿದರು.

ಅನೇಕ ಆಕಾಂಕ್ಷಿಗಳು ಎದುರಿಸುತ್ತಿರುವ ಆರ್ಥಿಕ ಸವಾಲುಗಳ ಕುರಿತು ಮಾತನಾಡಿ, ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಲಭ್ಯವಿರುವ ಕೆಲವೇ ಅವಕಾಶಗಳಲ್ಲಿ ಸರ್ಕಾರಿ ಉದ್ಯೋಗವು ಒಂದಾಗಿದೆ ಎಂದು ಮತ್ತೊಬ್ಬ ಪ್ರತಿಭಟನಾಕಾರರು ಹೇಳಿದರು.

“ನಾವು ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗಗಳಿಂದ ಬಂದವರು; ಸರ್ಕಾರಿ ಉದ್ಯೋಗವು ಒಂದು ಆಯ್ಕೆಯಾಗಿ ಉಳಿದಿದೆ. ಅಂತಹ ಪರಿಸ್ಥಿತಿಯಲ್ಲಿ, ಇಲ್ಲಿಯೂ ಅಕ್ರಮಗಳಿದ್ದರೆ, ಯಾವುದೇ ಅರ್ಥವಿಲ್ಲ” ಎಂದು ವಿದ್ಯಾರ್ಥಿ ಹೇಳಿದರು.

ನೇಮಕಾತಿ ಪರೀಕ್ಷೆಗಳ ಸುತ್ತಲಿನ ಅನಿಶ್ಚಿತತೆಯು ಸರ್ಕಾರಿ ಉದ್ಯೋಗಗಳಿಗೆ ತಯಾರಿ ನಡೆಸಲು ವರ್ಷಗಳನ್ನು ಮೀಸಲಿಟ್ಟ ಸಾವಿರಾರು ಯುವಜನರ ಮೇಲೆ ಪರಿಣಾಮ ಬೀರುತ್ತಿದೆ ಎಂದು ಆಂದೋಲನದಲ್ಲಿ ಭಾಗವಹಿಸಿದ್ದ ಮತ್ತೊಬ್ಬ ವಿದ್ಯಾರ್ಥಿ ಹೇಳಿದರು.

“ಜಾರ್ಖಂಡ್ ಪೊಲೀಸ್, ವಾರ್ಡರ್ ಮತ್ತು ಇತರ ನೇಮಕಾತಿ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ನಾವೆಲ್ಲರೂ ಭವಿಷ್ಯದಲ್ಲಿ ಸರ್ಕಾರಿ ಉದ್ಯೋಗವನ್ನು ಪಡೆಯುವ ಭರವಸೆಯೊಂದಿಗೆ ಅಪಾರ ಶ್ರಮವಹಿಸುತ್ತೇವೆ ಎಂದು ನಾವು ಹೇಳಲು ಬಯಸುತ್ತೇವೆ. ನಮ್ಮಲ್ಲಿ ಅನೇಕರು ಆರ್ಥಿಕವಾಗಿ ದುರ್ಬಲ ಕುಟುಂಬಗಳಿಂದ ಬಂದವರು, ನಮ್ಮ ಪೋಷಕರು ನಮ್ಮ ಶಿಕ್ಷಣ ಮತ್ತು ತಯಾರಿಗಾಗಿ ದೊಡ್ಡ ತ್ಯಾಗಗಳನ್ನು ಮಾಡುತ್ತಾರೆ” ಎಂದು ಅವರು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...