Homeಮುಖಪುಟಜಾರ್ಖಂಡ್: ವಾಮಾಚಾರದ ಶಂಕೆಯಿಂದ ವೃದ್ಧೆಗೆ ಬೆಂಕಿ ಹಚ್ಚಿದ್ದ ಐವರ ಬಂಧನ

ಜಾರ್ಖಂಡ್: ವಾಮಾಚಾರದ ಶಂಕೆಯಿಂದ ವೃದ್ಧೆಗೆ ಬೆಂಕಿ ಹಚ್ಚಿದ್ದ ಐವರ ಬಂಧನ

- Advertisement -
- Advertisement -

ವಾಮಾಚಾರ ನಡೆಸಿ ಇನ್ನೊಬ್ಬ ಮಹಿಳೆಯ ಸಾವಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ಹಿರಿಯ ಮಹಿಳೆಯನ್ನು ಅಮಾನುಷವಾಗಿ ಥಳಿಸಿ, ಸಜೀವವಾಗಿ ಸುಟ್ಟು ಹಾಕಲು ಬೆಂಕಿ ಹಚ್ಚಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ.

ಸಿಮ್ಡೆಗಾ ಸಮೀಪದ ಕುಡ್ಪಾನಿ ಹಳ್ಳಿಯಲ್ಲಿ ಕೆಲವು ಜನರು ಬುಧವಾರ ಸಂಜೆ ಹಿರಿಯ ಮಹಿಳೆಯನ್ನು ಅಮಾನುಷವಾಗಿ ಥಳಿಸಿ, ಒಣಹುಲ್ಲಿನ ಬಣವೆಯ ಮೇಲೆ ತಳ್ಳಿದ್ದಾರೆ. ಬಳಿಕ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದರು. ಮಹಿಳೆಯ ಆಕ್ರಂದನ ಕೇಳಿ ಸ್ಥಳಕ್ಕಾಗಮಿಸಿದ ಇತರ ಗ್ರಾಮಸ್ಥರು ಮಹಿಳೆಯನ್ನು ರಕ್ಷಿಸಿದ್ದಾರೆ.

ಥೇತೈತಂಗಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಡ್ಪಾನಿ ​​ಗ್ರಾಮದಲ್ಲಿ, ಫ್ಲಾರೆನ್ಸ್ ಡೆಂಗ್‌ಡುಂಗ್ ಎಂಬುವರ ಪತ್ನಿಯ ಮರಣದ ನಂತರ ಆಯೋಜಿಸಲಾದ ಔತಣಕೂಟಕ್ಕೆ ಮಹಿಳೆ ಜಾರಿಯೋ ದೇವಿ ಎಂಬುವರನ್ನು ಆಹ್ವಾನಿಸಲಾಗಿತ್ತು. ಆದರೆ, ಔತಣಕೂಟದಲ್ಲಿ ಫ್ಲಾರೆನ್ಸ್ ಡೆಂಗ್‌ಡುಂಗ್ ಪತ್ನಿಯ ಸಾವಿಗೆ ಆಕೆಯ ಕಾರಣರು ಎಂದು ಹೇಳಿ ಹಲ್ಲೆ ಮಾಡಲಾಗಿದೆ.

ಇದನ್ನೂ ಓದಿ: ವಾಮಾಚಾರ ಶಂಕೆ: ಸಾಫ್ಟ್‌ವೇರ್‌ ಇಂಜಿನಿಯರ್‌‌ನನ್ನು ಜೀವಂತ ಸುಟ್ಟ ಸಂಬಂಧಿಕರು!

“ಫ್ಲಾರೆನ್ಸ್ ಡೆಂಗ್‌ಡುಂಗ್ ಅವರ ಹೆಂಡತಿಯ ಮರಣದ ನಂತರ ಆಯೋಜಿಸಲಾದ ಔತಣಕೂಟಕ್ಕೆ ಹಾಜರಾಗಲು ನನ್ನ ಅತ್ತೆ ಮತ್ತು ಮಾವ ಅವರನ್ನು ಆಹ್ವಾನಿಸಲಾಗಿತ್ತು. ಔತಣಕ್ಕೆಂದು ಸ್ಥಳಕ್ಕೆ ಬಂದ ಆಕೆಯನ್ನು ಮಾಟಮಂತ್ರ ಮಾಡುತ್ತಿದ್ದಾರೆ ಎಂದೂ, ತನ್ನ ಪತ್ನಿಯ ಸಾವಿಗೆ ಕಾರಣರಾಗಿದ್ದಾರೆ ಎಂದು ಆಕೆಯ ಮೇಲೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ ಎಂದು ಸಂತ್ರಸ್ತ ವೃದ್ಧೆಯ ಸೊಸೆ ತಿಳಿಸಿದ್ದಾರೆ.

“ನನ್ನ ಅತ್ತೆ ಅವರನ್ನು ವಿರೋಧಿಸಿದಾಗ, ಸುಮಾರು 8 ರಿಂದ 10 ಜನರು ಅವರನ್ನು ಒಣಹುಲ್ಲಿನ ಮೇಲೆ ಎಸೆದು ಬೆಂಕಿ ಹಚ್ಚಿದರು. ಗದ್ದಲವನ್ನು ಕೇಳಿದ ನಂತರ ಆಕೆಯ ಪತಿ ಮತ್ತು ಇತರ ಗ್ರಾಮಸ್ಥರು ಅಲ್ಲಿಗೆ ಆಗಮಿಸಿ ಬೆಂಕಿಯನ್ನು ನಂದಿಸಿ ವೃದ್ಧೆಯನ್ನು ರಕ್ಷಿಸಿದ್ದಾರೆ. ಘಟನೆಯಲ್ಲಿ ನನ್ನ ಅತ್ತೆ ತೀವ್ರವಾಗಿ ಗಾಯಾಳುವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಮತ್ತು ಜೀವಕ್ಕಾಗಿ ಹೋರಾಡುತ್ತಿದ್ದಾರೆ.” ಎಂದು ಜಾರಿಯೋ ದೇವಿಯ ಸೊಸೆ ಹೇಳಿದ್ದಾರೆ.

ಇದೇ ವೇಳೆ ಪ್ರಕರಣ ಸಂಬಂಧ ಐವರನ್ನು ಪೊಲೀಸರು ಬಂಧಿಸಿದ್ದಾರೆ. “ನಾವು ಫ್ಲಾರೆನ್ಸ್ ಡೆಂಗ್‌ಡುಂಗ್, ಸಿಲ್ಬಿಯಸ್ ಡೆಂಗ್‌ಡುಂಗ್, ರವಿ ಸೊರೆಂಗ್, ಹೇಮಂತ್ ತೆತೆ ಮತ್ತು ಜ್ಯೋತಿ ತೆತೆ ಎಂಬ ಐವರು ಆರೋಪಿಗಳನ್ನು ಬಂಧಿಸಿದ್ದೇವೆ” ಎಂದು ಥೇತೈತಂಗರ್ ಪೊಲೀಸ್ ಠಾಣೆಯ ಪ್ರಭಾರ ಅಧಿಕಾರಿ ಇಂದ್ರೇಶ್ ಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ಮಧ್ಯಪ್ರದೇಶ: ಎಮ್ಮೆ ಹಾಲು ಕೊಡುತ್ತಿಲ್ಲ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ ರೈತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...