Homeಮುಖಪುಟ4,078 ಮತಗಳ ಮುನ್ನಡೆ ಕಾಯ್ದುಕೊಂಡ ಜಿಗ್ನೇಶ್ ಮೇವಾನಿ: 8 ಸುತ್ತಿನ ಮತ ಎಣಿಕೆ ಬಾಕಿ

4,078 ಮತಗಳ ಮುನ್ನಡೆ ಕಾಯ್ದುಕೊಂಡ ಜಿಗ್ನೇಶ್ ಮೇವಾನಿ: 8 ಸುತ್ತಿನ ಮತ ಎಣಿಕೆ ಬಾಕಿ

- Advertisement -
- Advertisement -

ತೀವ್ರ ಕೂತುಹಲ ಕೆರಳಿಸಿದ್ದ ಗುಜರಾತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. ಕಳೆದ ಚುನಾವಣೆಯಲ್ಲಿ ವಡ್ಗಾಮ್ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದ ಯುವ ದಲಿತ ಹೋರಾಟಗಾರ ಈ ಬಾರಿ ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಪಕ್ಷದ ಟಿಕೆಟ್‌ನಡಿ ಸ್ಪರ್ಧಿಸಿದ್ದಾರೆ. ಆರಂಭದಲ್ಲಿ ಹಿನ್ನಡೆ ಅನುಭವಿಸಿದ್ದ ಅವರು, 14ನೇ ಸುತ್ತಿನ ಮತ ಎಣಿಕೆಯ ಪ್ರಕಾರ 4,078 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

14ನೇ ಸುತ್ತಿನ ಮತ ಎಣಿಕೆ ಮುಗಿದಾಗ ಜಿಗ್ನೇಶ್ ಮೇವಾನಿ 61,703 ಮತಗಳನ್ನು ಪಡೆದಿದ್ದರೆ ಬಿಜೆಪಿ ಅಭ್ಯರ್ಥಿ ಮನಿಬಾಯ್ ವಘೇಲ 57,625 ಮತಗಳನ್ನು ಪಡೆದು ಅಲ್ಪ ಹಿನ್ನಡೆ ಅನುಭವಿಸಿದ್ದಾರೆ.

ಪ.ಜಾ ಮೀಸಲು ಕ್ಷೇತ್ರವಾದ ವಡ್ಗಾಮ್‌ನಲ್ಲಿ ಜಿಗ್ನೇಶ್ ಮೇವಾನಿಯವರಿಗೆ ಬಿಜೆಪಿ ಅಭ್ಯರ್ಥಿ ಮನಿಬಾಯ್ ವಘೇಲ ತುರುಸಿನ ಸ್ಪರ್ಧೆ ನೀಡುತ್ತಿದ್ದಾರೆ.  ವಘೇಲ 2012ರಲ್ಲಿ ಕಾಂಗ್ರೆಸ್ ಪಕ್ಷದಿಂದ ಈ ಕ್ಷೇತ್ರದಲ್ಲಿ ಆಯ್ಕೆಯಾಗಿದ್ದರು. ಆದರೆ 2017ರಲ್ಲಿ ಜಿಗ್ನೇಶ್ ಮೇವಾನಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆಗ ಕಾಂಗ್ರೆಸ್ ಪಕ್ಷವು ಅವರಿಗೆ ಬೆಂಬಲ ಸೂಚಿಸಿ ತಮ್ಮ ಪಕ್ಷದ ಅಭ್ಯರ್ಥಿ ಹಾಕದೆ ಜಿಗ್ನೇಸ್ ಗೆಲುವಿಗೆ ಸಹಕರಿಸಿತ್ತು.

ಆದರೆ ಕ್ಷೇತ್ರ ಬಿಟ್ಟುಕೊಟ್ಟಿದ್ದ ವಘೇಲ 2021ರಲ್ಲಿ ಬಿಜೆಪಿ ಪಕ್ಷ ಸೇರಿದ್ದರು. ಅವರು ಈ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ನಡಿ ಸ್ಪರ್ಧಿಸಿದ್ದಾರೆ.

ವಕೀಲರಾಗಿ, ಸಾಮಾಜಿಕ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದ ಜಿಗ್ನೇಶ್ ಮೇವಾನಿ ದಲಿತರಿಗೆ ಭೂಮಿ ದೊರಕಿಸಿಕೊಡಲು ಹೋರಾಡುತ್ತಿದ್ದರು. ಆದರೆ ಊನಾದಲ್ಲಿ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಅವರು ನಡೆಸಿದ ಬೃಹತ್ ಹೋರಾಟದ ಮೂಲಕ ಅವರು ದೇಶದ ಗಮನ ಸೆಳೆದಿದ್ದರು.

ಸದ್ಯಕ್ಕೆ ಗುಜರಾತ್‌ನ ಒಟ್ಟು 182 ಕ್ಷೇತ್ರಗಳ ಪೈಕಿ ಬಿಜೆಪಿಯು 15 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಸತತ 7ನೇ ಬಾರಿಗೆ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಾಗಿದೆ.

ಇದನ್ನೂ ಓದಿ: ಹಿಮಾಚಲ ಪ್ರದೇಶ: ಆಪರೇಷನ್‌ ಕಮಲದ ಭೀತಿಯಲ್ಲಿ ಕಾಂಗ್ರೆಸ್!?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...