Homeಮುಖಪುಟಜಿಗ್ನೇಶ್ ಮೇವಾನಿ, ಕನ್ಹಯ್ಯ ಕುಮಾರ್ ಕಾಂಗ್ರೆಸ್‌ ಸೇರ್ಪಡೆಗೆ ಡೇಟ್‌ ಫಿಕ್ಸ್‌

ಜಿಗ್ನೇಶ್ ಮೇವಾನಿ, ಕನ್ಹಯ್ಯ ಕುಮಾರ್ ಕಾಂಗ್ರೆಸ್‌ ಸೇರ್ಪಡೆಗೆ ಡೇಟ್‌ ಫಿಕ್ಸ್‌

ಗುಜರಾತ್‌ನ ಶಾಸಕ ಜಿಗ್ನೇಶ್ ಮೇವಾನಿ, ಸಿಪಿಐ ನಾಯಕ ಕನ್ಹಯ್ಯ ಕುಮಾರ್‌ ಕಾಂಗ್ರೆಸ್‌ ಸೇರುತ್ತಾರೆಂಬ ಸುದ್ದಿ ನಿಜವಾಗಿದ್ದು, ಸೇರ್ಪಡೆಯ ದಿನಾಂಕವನ್ನು ಜಿಗ್ನೇಶ್ ಮೇವಾನಿ ತಿಳಿಸಿದ್ದಾರೆ.

- Advertisement -
- Advertisement -

ಗುಜರಾತ್‌ ಶಾಸಕ ಜಿಗ್ನೇಶ್ ಮೇವಾನಿ ಹಾಗೂ ಸಿಪಿಐ ನಾಯಕ ಕನ್ಹಯ್ಯ ಕುಮಾರ್‌ ಕಾಂಗ್ರೆಸ್‌ ಸೇರುತ್ತಾರೆಂಬ ಸುದ್ದಿ ನಿಜವಾಗಿದ್ದು, ಕಾಂಗ್ರೆಸ್ ಸೇರ್ಪಡೆಯ ದಿನಾಂಕವನ್ನು ಜಿಗ್ನೇಶ್ ಮೇವಾನಿ ತಿಳಿಸಿದ್ದಾರೆ.

’ನಾನು ಹಾಗೂ ಸಿಪಿಐ ನಾಯಕ ಕನ್ಹಯ್ಯ ಕುಮಾರ್‌ ಸೆ.28ರಂದು ಕಾಂಗ್ರೆಸ್‌ ಸೇರಲಿದ್ದೇವೆ’ ಎಂದು ಜಿಗ್ನೇಶ್‌ ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

“ಎಲ್ಲ ವಿಷಯಗಳನ್ನು ಕಾಂಗ್ರೆಸ್ ಸೇರಿದ ಬಳಿಕ ಮಾತನಾಡುತ್ತೇವೆ” ಎಂದು ತಿಳಿಸಿದ್ದಾರೆ.

ಮೇವಾನಿ 2017ರ ಗುಜರಾತ್‌ ವಿಧಾನಸಭಾ ಚುನಾವಣೆಯಲ್ಲಿ ವಡ್ಗಾಮ್‌ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ವಿದ್ಯಾರ್ಥಿ ನಾಯಕನಾಗಿ ಮುಂಚೂಣಿಗೆ ಬಂದ ಕನ್ಹಯ್ಯ ಕುಮಾರ್‌ 2019ರ ಲೋಕಸಭಾ ಚುನಾವಣೆಯಲ್ಲಿ ಬೇಗುಸರಾಯ್‌ ಕ್ಷೇತ್ರದಿಂದ ಸಿಪಿಐ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು.

2017ರ ವಿಧಾನಸಭಾ ಚುನಾವಣೆಯಲ್ಲಿ ಮೇವಾನಿ ಪ್ರಮುಖ ದಲಿತ ನಾಯಕನಾಗಿ ಹೊಮ್ಮಿದರು. ಪಾಟಿದಾರ್‌ ಸಮುದಾಯದ ಹಾರ್ದಿಕ್‌ ಪಟೇಲ್‌, ಠಾಕೂರ್‌ ಸಮುದಾಯದ ಅಲ್ಫೇಶ್‌ ಠಾಕೂರ್‌ ಹಾಗೂ ಜಿಗ್ನೇಶ್‌ ಎಂಬ ಮೂವರು ಯುವಕರು ಇಡೀ ಚುನಾವಣೆಯನ್ನು ಬೇರೊಂದು ದಿಕ್ಕಿನತ್ತ ತಿರುಗಿಸಿದ್ದರು. ಬಿಜೆಪಿ ವಿರುದ್ಧ ಈ ಮೂವರು ಯುವಕರು ನಡೆಸಿದ ತೀವ್ರ ವಾಗ್ದಾಳಿಯಿಂದಾಗಿ ಬಿಜೆಪಿ ಗೆಲುವಿನ ದಡ ತಲುಪಲು ತಿಣುಕಾಡಬೇಕಾಯಿತು.

ಜವಾಹರಲಾಲ್‌ ವಿ.ವಿ.ಯ ವಿದ್ಯಾರ್ಥಿ ಮುಖಂಡರಾಗಿದ್ದ ಕನ್ಹಯ್ಯ ಕುಮಾರ್‌ ಅವರ ಮೇಲೆ 2016ರಲ್ಲಿ ದೇಶದ್ರೋಹ ಪ್ರಕರಣವನ್ನು ದಾಖಲಿಸಿದ ಬಳಿಕ ಕನ್ಹಯ್ಯ, ರಾಷ್ಟ್ರಮಟ್ಟದಲ್ಲಿ ಕೇಳಿ ಬಂದಿತು. ಸರ್ಕಾರವನ್ನು ಕಟು ವಿಮರ್ಶೆಗೆ ಒಳಪಡಿಸುವ ಕನ್ಹಯ್ಯ ಯುವಜನರ ಮಾದರಿಯಾಗಿ ಹೊಮ್ಮಿದ್ದರು.

ಇದನ್ನೂ ಓದಿ: ‘ಕೊರೊನಾ ದುರಾಡಳಿತಕ್ಕಾಗಿ ರಾಜೀನಾಮೆ ನೀಡಿದ್ದರೆ ಗುಜರಾತಿನ ಜನ ಮೆಚ್ಚುತ್ತಿದ್ದರು’ – ಜಿಗ್ನೇಶ್ ಮೇವಾನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...