Homeಮುಖಪುಟ5 ದಿನ ಪೊಲೀಸ್ ಕಸ್ಟಡಿಗೆ ಜಿಗ್ನೇಶ್: 2ನೇ ಪ್ರಕರಣದಲ್ಲಿ ಮಹಿಳಾ ಪೊಲೀಸ್‌ ಅಧಿಕಾರಿ ದೂರಿದ್ದೇನು?

5 ದಿನ ಪೊಲೀಸ್ ಕಸ್ಟಡಿಗೆ ಜಿಗ್ನೇಶ್: 2ನೇ ಪ್ರಕರಣದಲ್ಲಿ ಮಹಿಳಾ ಪೊಲೀಸ್‌ ಅಧಿಕಾರಿ ದೂರಿದ್ದೇನು?

- Advertisement -
- Advertisement -

ಗುಜರಾತ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿ ಅವರನ್ನು ಮಂಗಳವಾರ ಅಸ್ಸಾಂ ನ್ಯಾಯಾಲಯವು ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಪ್ರಧಾನಿ ಮೋದಿಯವರನ್ನು ಟೀಕಿಸಿದ ಟ್ವೀಟ್‌ಗೆ ಸಂಬಂಧಿಸಿದಂತೆ ಬಂಧನಕ್ಕೊಳಕ್ಕಾಗಿದ್ದ ಮೇವಾನಿಯವರು ಸೋಮವಾರ ಜಾಮೀನು ಪಡೆದ ಬೆನ್ನಲ್ಲೇ ಮತ್ತೆ ಬಂಧನಕ್ಕೊಳಗಾಗಿದ್ದರು. ತಕ್ಷಣಕ್ಕೆ ಕಾರಣ ತಿಳಿದುಬಂದಿರಲಿಲ್ಲ.

ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಮತ್ತೆ ಮೇವಾನಿಯವರನ್ನು ಬಂಧಿಸಲಾಗಿದೆ. ಮೇವಾನಿ ವಿರುದ್ಧ ಈ (ಎರಡನೇ) ಪ್ರಕರಣವನ್ನು ಏಪ್ರಿಲ್ 21ರಂದು ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಐಪಿಸಿ ಸೆಕ್ಷನ್ 294 (ಅಶ್ಲೀಲ ಕೃತ್ಯಗಳು), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 353 (ಸಾರ್ವಜನಿಕ ಸೇವೆಯ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಲು ಹಲ್ಲೆ), 354 (ಮಹಿಳೆಯರ ಮೇಲೆ ದೌರ್ಜನ್ಯ ಅಥವಾ ಕ್ರಿಮಿನಲ್ ಫೋರ್ಸ್ ಬಳಸುವುದು) ‌ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸ್ ಮಹಿಳಾ ಅಧಿಕಾರಿಯೊಬ್ಬರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ದೂರುದಾರ ಅಧಿಕಾರಿ ಸೇರಿದಂತೆ ಮೂವರು ಅಧಿಕಾರಿಗಳು ಏಪ್ರಿಲ್ 21ರಂದು ಮಧ್ಯಾಹ್ನ ಮೇವಾನಿ ಅವರನ್ನು ಸರ್ಕಾರಿ ವಾಹನದಲ್ಲಿ ಕರೆತರುತ್ತಿದ್ದರು. ಗುವಾಹಟಿ ವಿಮಾನ ನಿಲ್ದಾಣದಿಂದ ಕೊಕ್ರಜಾರ್‌ಗೆ ಬರಲಾಗುತ್ತಿತ್ತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. “ಅನುಚಿತವಾಗಿ ವರ್ತಿಸಿರುವ ಮೇವಾನಿ ನಮ್ಮ ಮೇಲೆ ಕೋಪಗೊಂಡರು. ಹೆಚ್ಚು ಕೆಟ್ಟ ಪದಗಳನ್ನು ಬಳಸಿದರು” ಎಂದು ಅಧಿಕಾರಿ ಆರೋಪಿಸಿದ್ದಾರೆ.

ಮೇವಾನಿ ನನ್ನ ಕಡೆಗೆ ಬೆರಳು ತೋರಿಸಿ ಬಲವಂತವಾಗಿ ಸೀಟ್‌ ಮೇಲೆ ತಳ್ಳಿದರು. “ನನ್ನ ಕಾನೂನು ಕರ್ತವ್ಯವನ್ನು ನಿರ್ವಹಿಸುವ ಸಮಯದಲ್ಲಿ ಆಕ್ರಮಣ ಮಾಡಲಾಗಿದೆ. ತಳ್ಳುವಾಗ ಅನುಚಿತವಾಗಿ ನನ್ನನ್ನು ಸ್ಪರ್ಶಿಸಿದ್ದಾರೆ” ಎಂದು ದೂರಿದ್ದಾರೆ.

ಇದರ ನಡುವೆ ಮೇವಾನಿ ಅವರ ವಕೀಲ ಅಂಗ್‌ಶುಮನ್ ಬೋರಾ ಅವರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ಪ್ರತಿಕ್ರಿಯೆ ನೀಡಿದ್ದು, “ಇದು ಸಂಪೂರ್ಣವಾಗಿ ಸುಳ್ಳು ಮತ್ತು ಕಟ್ಟುಕಥೆಯ ಪ್ರಕರಣ” ಎಂದು ಸ್ಪಷ್ಟಪಡಿಸಿದ್ದಾರೆ.

ಮೇವಾನಿ ಅವರನ್ನು ಮಂಗಳವಾರ ಬಾರ್‌ಪೇಟಾ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿಸಿದ ಬೋರಾ, ಈಗ ಅಲ್ಲಿಗೆ ಜಾಮೀನಿಗೆ ತೆರಳುವುದಾಗಿ ಮಾಹಿತಿ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರಿಗೆ ಸಂಬಂಧಿಸಿದ ಟ್ವೀಟ್‌ಗಳಿಗೆ ಸಂಬಂಧಿಸಿದಂತೆ ಜಿಗ್ನೇಶ್ ಮೇವಾನಿ ಅವರನ್ನು ಬಂಧಿಸಿಲಾಗಿತ್ತು. ಅಸ್ಸಾಂ ನ್ಯಾಯಾಲಯವು ಜಾಮೀನು ನೀಡಿತ್ತು. ಇದಾದ ಕೆಲವೇ ಗಂಟೆಗಳಲ್ಲಿ ಜಿಗ್ನೇಶ್ ಅವರನ್ನು ಮತ್ತೊಂದು ಪ್ರಕರಣದಲ್ಲಿ ಬಂಧನ ಮಾಡಲಾಗಿತ್ತು. ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ಮೊದಲು ಏಪ್ರಿಲ್ 20 ರಂದು ಗುಜರಾತ್‌ನಲ್ಲಿ ಬಂಧಿಸಿದ್ದರು.

ಜಿಗ್ನೇಶ್ ಒಡನಾಡಿಗಳ ಮೇಲೂ ಪೊಲೀಸ್ ಕಾರ್ಯಾಚರಣೆ

ದಲಿತ ಹೋರಾಟಗಾರರು ಹಾಗೂ ಜಿಗ್ನೇಶ್‌ ಒಡನಾಡಿಗಳ ಮೇಲೂ ಪೊಲೀಸ್ ಕಾರ್ಯಾಚರಣೆ ನಡೆಯುತ್ತಿದೆ.

ಮೆವಾನಿಯ ಆಪ್ತ ಸಹಾಯಕ ಮತ್ತು ಆರ್‌ಡಿಎಎಂ ಸದಸ್ಯ ಕಮಲೇಶ್ ಕಟಾರಿಯಾ ಅವರನ್ನು ಯಶೋದಾನಗರದಲ್ಲಿ ನಡೆದ ಪ್ರತಿಭಟನೆಯ ನಡುವೆ ಅಹಮದಾಬಾದ್ ಕ್ರೈಂ ಬ್ರಾಂಚ್ ವಶಕ್ಕೆ ಪಡೆದಿತ್ತು. ಅದೇ ಸಮಯದಲ್ಲಿ, ಅಹಮದಾಬಾದ್‌ನ ರಾಖಿಯಾಲ್‌ನಲ್ಲಿರುವ ಕಮಲೇಶ್‌ ಅವರ ಮನೆಯನ್ನು ಪೊಲೀಸರ ತಂಡ ಶೋಧಿಸಿದೆ.

“ಮಧ್ಯಾಹ್ನ 3.30ರ ಸುಮಾರಿಗೆ ನನ್ನ ಮನೆಗೆ ಪೊಲೀಸರು ಬಂದಿದ್ದಾರೆ ಎಂದು ನನ್ನ ಹೆಂಡತಿ ಕರೆ ಮಾಡಿ ನನಗೆ ತಿಳಿಸಿದಳು. ಆದರೆ ನಾನು ಮನೆಗೆ ತಲುಪುವ ಮೊದಲೇ ನನ್ನನ್ನು ಪೋಲೀಸರು ಅಸರ್ವಾ ಬಳಿ ಕರೆದೊಯ್ದರು. ಅದೇ ರಾತ್ರಿ ನನ್ನನ್ನು ಬಿಡುಗಡೆ ಮಾಡಲಾಯಿತು. ನನ್ನ ಸುರಕ್ಷತೆಯನ್ನು ನೆನೆಸಿಕೊಂಡು ನನ್ನ ಮನೆಯವರು ಹೆದರುತ್ತಿದ್ದರು. ಪೊಲೀಸರು ನನ್ನ ಮನೆಯ ಪ್ರತಿಯೊಂದು ಮೂಲೆಯನ್ನು ಪರಿಶೀಲಿಸಿದ್ದಾರೆ ಎಂದು ನನಗೆ ತಿಳಿಸಲಾಯಿತು. ಗೋಡೆಗಳು ಟೊಳ್ಳಾಗಿವೆಯೇ ಎಂದು ಪರೀಕ್ಷಿಸಲು ಅವರು ಗೋಡೆಗಳನ್ನು ಬಡಿದರು, ಹಾಸಿಗೆಯನ್ನು ಹೊರತೆಗೆದರು. ಸ್ನಾನಗೃಹ, ಪಾತ್ರೆಗಳು ಮತ್ತು ನಮ್ಮ ಮಕ್ಕಳ ಶಾಲಾ ಬ್ಯಾಗ್‌ಗಳನ್ನು ಸಹ ಬಿಡದೆ ಪರಿಶೀಲಿಸಿದರು” ಎಂದು ಕಮಲೇಶ್ ಕಟಾರಿಯಾ ‘ನ್ಯೂಸ್‌ಕ್ಲಿಕ್‌’ಗೆ ತಿಳಿಸಿದ್ದಾರೆ.

ಇದನ್ನೂ ಓದಿರಿ: ಜಿಗ್ನೇಶ್‌ ಬಂಧನ; ಗುಜರಾತ್‌ನಾದ್ಯಂತ ಪ್ರತಿಭಟನೆಯ ಕಾವು- ದಲಿತ ಹೋರಾಟಗಾರರ ಮೇಲೂ ಪೊಲೀಸ್‌ ಕಾರ್ಯಾಚರಣೆ

ಜಗದೀಶ್ ಚಾವ್ಡಾ ಮಾತನಾಡಿದ್ದು, “ನಾನು ಕೆಲವು ಕೆಲಸದ ನಿಮಿತ್ತ ನೆರೆಹೊರೆಯಲ್ಲಿದ್ದೆ. ನಮ್ಮ ಮನೆಗೆ ಸುಮಾರು 18 ರಿಂದ 20 ಪೊಲೀಸ್ ಸಿಬ್ಬಂದಿ ಬಂದಿದ್ದಾರೆ ಎಂದು ನನ್ನ ಸಹೋದರ ನಮಗೆ ತಿಳಿಸಲು ಕರೆ ಮಾಡಿದ. ನನ್ನ ಮನೆಗೆ ಬರುವ ಪೊಲೀಸರ ದೊಡ್ಡ ಸಂಖ್ಯೆಯನ್ನು ನೋಡಿ ನನ್ನ ಕುಟುಂಬ ಮತ್ತು ನೆರೆಹೊರೆಯವರು ಭಯಗೊಂಡರು. ಪೊಲೀಸರು ನನ್ನ ಮನೆಯಲ್ಲಿ ಹುಡುಕಾಟ ನಡೆಸಿದರು. ಸುಮಾರು 40 ನಿಮಿಷಗಳ ಕಾಲ ನಾವು ಕೇಳಿದ ಯಾವುದೇ ಪ್ರಶ್ನೆಗಳಿಗೆ ಉತ್ತರಿಸಲಿಲ್ಲ. ಜಿಗ್ನೇಶ್ ಮೇವಾನಿ, ಕಮಲೇಶ್ ಕಟಾರಿಯಾ ಮತ್ತು ನನ್ನ ಹೆಸರನ್ನು ಹೊಂದಿರುವ ಸರ್ಚ್‌ ಆರ್ಡರ್‌‌ ಮಾತ್ರ ನನಗೆ ತೋರಿಸಲಾಯಿತು. ಅವರು ನನ್ನ ಚಂದ್‌ಖೇಡಾದ ಮನೆಯ ಪ್ರತಿಯೊಂದು ಮೂಲೆಯನ್ನು ಹುಡುಕಿದರು. ಕಂಪ್ಯೂಟರ್ ವಶಪಡಿಸಿಕೊಂಡರು” ಎಂದು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...