Homeಕರೋನಾ ತಲ್ಲಣ490 ಉದ್ಯೋಗಿಗಳನ್ನು ಕೆಲಸದಿಂದ ತೆಗೆದ ಜಿಂದಾಲ್: ನಾವೆಲ್ಲಿಗೆ ಹೋಗಬೇಕೆಂದು ಕಾರ್ಮಿಕರ ಅಳಲು

490 ಉದ್ಯೋಗಿಗಳನ್ನು ಕೆಲಸದಿಂದ ತೆಗೆದ ಜಿಂದಾಲ್: ನಾವೆಲ್ಲಿಗೆ ಹೋಗಬೇಕೆಂದು ಕಾರ್ಮಿಕರ ಅಳಲು

ನಮ್ಮ ದಿನದ ಸಂಬಳದ ಭಾಗವಾಗಿ ಪಿಎಂ ಕೇರ್ ಫಂಡ್‌ಗೆ ಕೊರೊನಾ ಪರಿಹಾರಕ್ಕೆಂದು 100 ಕೋಟಿ ಕಳುಹಿಸಲಾಗಿತ್ತು. ಆದರೆ ಇಂದು ನಮ್ಮ ಕಷ್ಟ ಕೇಳುವವರೇ ಇಲ್ಲ ಎಂದು ಜಿಂದಾಲ್ ಉದ್ಯೋಗಿಯೊಬ್ಬರು ಅಳಲು ತೋಡಿಕೊಂಡಿದ್ದಾರೆ.

- Advertisement -
- Advertisement -

ಕೊರೊನಾ ಮತ್ತು ಲಾಕ್ ಡೌನ್ ನೆಪಹೇಳಿ ಜೆ ಡಬ್ಲ್ಯೂ ಎಸ್ (ಜಿಂದಾಲ್) ಕಂಪನಿ ಸುಮಾರು 490 ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿದ್ದನ್ನು ವಿರೋಧಿಸಿ ಹಲವಾರು ಉದ್ಯೋಗಿಗಳು ಮತ್ತು ವಿವಿಧ ಸಂಘಟನೆಗಳು ಸೋಮವಾರ ಬಳ್ಳಾರಿಯ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

ಆಗಸ್ಟ್ 31 ರೊಳಗೆ ಸ್ವಯಂ ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿ, ಮೊದಲ ಹಂತದಲ್ಲಿ ಸುಮಾರು 490 ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಲಾಗಿದೆ ಎಂದು ಉದ್ಯೋಗಿಗಳು ದೂರಿದ್ದಾರೆ.

ಇದನ್ನೂ ಓದಿ: ಮೋದಿ ಭಾರತ ಯುವಜನರಿಗೆ ಉದ್ಯೋಗ ಕೊಡಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ಕಂಪನಿಯವರ ಬೆದರಿಕೆಗೆ ಮಣಿದು ರಾಜಿನಾಮೆ ನೀಡಿದ ಜಾಹ್ನವಿ ಎಂಬ ಉದ್ಯೋಗಿ ನಾನುಗೌರಿ.ಕಾಂ ಜೊತೆ ಮಾತನಾಡಿ, “ಲಾಕ್ ಡೌನ್ ಮುಕ್ತಾಯವಾಗುವ ಹಿಂದಿನ ರಾತ್ರಿ ಎಚ್ ಆರ್ ನನಗೆ ಫೋನ್ ಮಾಡಿದರು. ಕೊರೊನಾ ಕಾರಣದಿಂದ ಕಂಪನಿಗೆ ನಷ್ಟವಾಗಿದೆ. ಹಾಗಾಗಿ ನೀವು ಸ್ವಯಂ ರಾಜಿನಾಮೆ ಕೊಡಬೇಕು ಇಲ್ಲದಿದ್ದರೆ ನಿಮ್ಮನ್ನ ಟರ್ಮಿನೇಟ್ ಮಾಡಲಾಗುತ್ತದೆ ಎಂದು ನೇರವಾಗಿ ಹೇಳಿದರು” ಎಂದು ಅಳಲು ತೋಡಿಕೊಂಡಿದ್ದಾರೆ.

“ಎಷ್ಟು ಬೇಡಿಕೊಂಡರೂ ನಮ್ಮ ಮನವಿಗೆ ಮಣಿಯದೆ, ಇದು ಉನ್ನತ ಮಟ್ಟದ ನಿರ್ಧಾರ ಎಂದು ಹೇಳಿ ನನ್ನಿಂದ ರಾಜಿನಾಮೆ ಪಡೆದುಕೊಂಡರು. ನಮ್ಮದು ಸಾಮಾನ್ಯ ವರ್ಗದ ಕುಟುಂಬವಾಗಿದ್ದು, ನನಗೆ ಈ ಕೆಲಸ ಬಿಟ್ಟರೆ ಬೇರೆ ಆಧಾರವಿಲ್ಲ” ಎಂದು ಕಳೆದ ಹನ್ನೊಂದು ವರ್ಷಗಳಿಂದ ಜಿಂದಾಲ್ ಕಂಪನಿಯಲ್ಲಿ ಮ್ಯಾನೇಜರ್ ಆಗಿರುವ ಜಾಹ್ನವಿ ಹೇಳಿದರು.

“ಈ ಕುರಿತು ಉನ್ನತ ಮಟ್ಟದ ಅಧಿಕಾರಿಗಳನ್ನೇ ಪ್ರಶ್ನಿಸಿದಾಗ, ‘You are Non Performer’ ಎಂದು ಹೇಳಿದರು. ಹನ್ನೊಂದು ವರ್ಷದಿಂದ ಇದು ಇವರಿಗೆ ತಿಳಿದಿರಲಿಲ್ಲವೇ?. ಆದರೆ ಈಗ ಈ ಕಾರಣ ನೀಡುತ್ತಿದ್ದಾರೆ. ನನ್ನ ರೀತಿ ಕಳೆದ 20-25 ವರ್ಷ ಜಿಂದಾಲ್‌ಗಾಗಿ ಕೆಲಸ ಮಾಡಿರುವವರನ್ನೂ ಉದ್ಯೋಗದಿಂದ ತೆಗೆಯಲಾಗುತ್ತಿದೆ. ಈಗ ನಾವೆಲ್ಲ ಎಲ್ಲಿಗೆ ಹೋಗಬೇಕು” ಎಂದು ಪ್ರಶ್ನಿಸಿದ್ದಾರೆ.

“ನಮ್ಮ ಕಂಪನಿಯಿಂದಲೇ ನಮ್ಮ ದಿನದ ಸಂಬಳದ ಭಾಗವಾಗಿ ಪಿಎಂ ಕೇರ್ ಫಂಡ್‌ಗೆ ಕೊರೊನಾ ಪರಿಹಾರಕ್ಕೆಂದು 100 ಕೋಟಿ ಕಳುಹಿಸಲಾಗಿತ್ತು. ಆದರೆ ಇಂದು ನಮ್ಮ ಕಷ್ಟ ಕೇಳುವವರೇ ಇಲ್ಲ. ಯಾವ ರಾಜಕಾರಣಿಗಳು ಇದಕ್ಕೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಕೊರೊನಾ ಸಂಕಷ್ಟದ ಸಮಯದಲ್ಲಿ ಯಾರನ್ನೂ ಕೆಲಸದಿಂದ ತೆಗೆಯಬೇಡಿ ಎಂದು ಪ್ರಧಾನಿಯವರೇ ಹೇಳಿದ್ದಾರೆ. ಆದರೂ ನಮ್ಮನ್ನು ಕೆಲಸದಿಂದ ತೆಗೆಯಲಾಗುತ್ತಿದೆ. ಇದರ ಬಗ್ಗೆ ನಾವು ರಾಜ್ಯ ಮಟ್ಟದಲ್ಲಿ ಪ್ರತಿಭಟನೆ ಕೈಗೊಳ್ಳಲಿದ್ದೇವೆ. ಹಾಗಾಗಿ ನಮಗೆ ಎಲ್ಲರೂ ಸಹಕರಿಸಿ” ಎಂದು ಕೇಳಿಕೊಂಡರು.

ಈ ಕುರಿತು ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಕರಿಯಪ್ಪ ಗುಡಿಮನಿ ನಾನುಗೌರಿ.ಕಾಂ ಗೆ ಪ್ರತಿಕ್ರಿಯಿಸಿ, “ಕೊರೊನಾ ಕಾರಣದಿಂದ ಕಂಪನಿಯಲ್ಲಿ ಉತ್ಪಾದನೆ ಕಡಿಮೆಯಾಗಿದೆ ಎಂಬ ನೆಪ ಹೇಳಿ 40 ವರ್ಷಕ್ಕೆ ಮೇಲ್ಪಟ್ಟ 400ಕ್ಕೂ ಹೆಚ್ಚು ಜನರನ್ನು ಕೆಲಸದಿಂದ ತೆಗೆಯಲಾಗಿದೆ. ಕೆಲಸಕ್ಕೆ ಸ್ವಯಂ ಸ್ವಯಂ ರಾಜಿನಾಮೆ ನೀಡುವಂತೆ ಕಂಪನಿಯೊಳಗೆ ಕೆಲವು ಗೂಂಡಾಗಳಿಂದ ಬೆದರಿಕೆ ಹಾಕಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

“ಅವರಿಗೆ ಸಿಗಬೇಕಾದ ಹಣದ ಸೌಲಭ್ಯಗಳನ್ನು ಒದಗಿಸಿಕೊಡುತ್ತೇವೆ ಎಂಬುದಾಗಿ ಜಿಂದಾಲ್ ಮಾಲಿಕರಾದ ಸಜ್ಜನ್ ಜಿಂದಾಲ್ ಹೇಳಿದ್ದಾರೆ. ಆದರೆ ಅದನ್ನು ಮಾಡುತ್ತಾರೆ ಎಂದು ಕಾರ್ಮಿಕರಿಗೆ ನಂಬಿಕೆಯಿಲ್ಲ. ಅಲ್ಲದೇ ಏಕಾಏಕಿ ಕೆಲಸ ಕಳೆದುಕೊಂಡವರು ಈಗ ಎಲ್ಲಿಗೆ ಹೋಗಬೇಕು” ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಜುಲೈ ತಿಂಗಳೊಂದರಲ್ಲೇ 50 ಲಕ್ಷ ಉದ್ಯೋಗಗಳು ನಷ್ಟ: CMIE

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...