Homeಕರ್ನಾಟಕ’ಜಿನ್ನಾ’ ಕಲ್ಲಡ್ಕ ಪ್ರಭಾಕರ ಭಟ್ಟರ ಗುರು ಎಂಬ ಸಂಶಯವಿದೆ: ಯು. ಟಿ. ಖಾದರ್‌

’ಜಿನ್ನಾ’ ಕಲ್ಲಡ್ಕ ಪ್ರಭಾಕರ ಭಟ್ಟರ ಗುರು ಎಂಬ ಸಂಶಯವಿದೆ: ಯು. ಟಿ. ಖಾದರ್‌

ತನ್ನ ಹೇಳಿಕೆಗೆ RSS ನಾಯಕ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗಿದ್ದು, ಅದರ ಕೆಲವು ತುಣುಕು ಇಲ್ಲಿದೆ

- Advertisement -
- Advertisement -

ಮಂಗಳೂರಿನ ಉಳ್ಳಾಲವು ’ಪಾಕಿಸ್ತಾನ’ ಆಗಿದೆ ಎಂದು ವಿವಾದ ಸೃಷ್ಟಿಸಿದ್ದ RSS ನಾಯಕ ಕಲ್ಲಡ್ಕ ಪ್ರಭಾಕರ ಭಟ್ ಹೇಳಿಕೆಯನ್ನು ವಿರೋಧಿಸಿ ಉಳ್ಳಾಲವನ್ನು ಪ್ರತಿನಿಧಿಸುವ ಶಾಸಕ ಯು.ಟಿ. ಖಾದರ್‌ ತಿರುಗೇಟು ನೀಡಿದ್ದು, “ಕಲ್ಲಡ್ಕ ಪ್ರಭಾಕರ ಭಟ್ಟರ ಪಾಕಿಸ್ತಾನ ಪ್ರೇಮವನ್ನು ನೋಡಿದರೆ ಮುಹಮ್ಮದ್ ಅಲಿ ಜಿನ್ನಾ ಅವರ ಗುರು ಇದ್ದಂತಿದೆ” ಎಂದು ಹೇಳಿದ್ದಾರೆ.

“ಅವರ ಪಾಕಿಸ್ತಾನ ಪ್ರೇಮ ಹೊಸತೇನು ಅಲ್ಲ. ಅವರು ಮಾತು ಮಾತಿಗೆ ಪಾಕಿಸ್ಥಾನದ ಜಪ ಮಾಡುವುದನ್ನು ನೋಡಿದರೆ ಮಹಮದ್ ಅಲಿ ಜಿನ್ಹಾ ಅವರ ಗುರು ಇದ್ದಂತಿದೆ. ಅವರು ಭಾರತಕ್ಕಿಂತ ಪಾಕಿಸ್ಥಾನದ ಇತಿಹಾಸ ಹೆಚ್ಚು ಓದಿದಂತಿದೆ” ಎಂದು ಖಾದರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ಸಂಘಪರಿವಾರಕ್ಕೆ ಬೇಡವಾದರೇ ಕಲ್ಲಡ್ಕ ಪ್ರಭಾಕರ ಭಟ್ಟ?!

“ಸಮಾಜದಲ್ಲಿ ವಿಷಕಕ್ಕುವ ಕೆಲ ಸರ್ಪಗಳಿಗೆ ಪಾಕಿಸ್ಥಾನವೆ ಬಂಡವಾಳ. ನನಗೆ ಉಳ್ಳಾಲದ ಕಣ ಕಣದಲ್ಲೂ ಭಾರತದ ಬಹುಸಂಸ್ಕೃತಿ ಕಾಣುತ್ತದೆ. ಪೋರ್ಚುಗೀಸರನ್ನು ಒದ್ದೋಡಿಸಿದ ಅಬ್ಬಕ್ಕನ ಸೈನ್ಯದಲ್ಲಿ ಹಿಂದೂ-ಮುಸ್ಲಿಂ-ಕ್ರಿಶ್ಚಿಯನ್ ಎಲ್ಲರು ಒಟ್ಟಾಗಿಯೆ ಇದ್ದರು. ಅಂದಿನ ಧಾರ್ಮಿಕ ಕೇಂದ್ರಗಳು ಇಂದೂ ಇದೆ. ಅಂದಿನ ಸಂಪ್ರದಾಯಗಳು ಸರ್ವಧರ್ಮಗಳಿಂದ ಇಂದೂ ಕೂಡ ಗೌರವಿಸಲ್ಪಡುತ್ತಿದೆ. ಉಳ್ಳಾಲದ ಸೌಹಾರ್ದ ಸಂಸ್ಕೃತಿ ಬಲಪಡಿಸುವ ಮಾತುಗಳೆ ಸರ್ವರಿಂದ ಬರಲಿ ಎಂಬುದು ನನ್ನ ಅಪೇಕ್ಷೆ” ಎಂದು ಖಾದರ್ ತಿಳಿದ್ದಾರೆ.

ಮಂಗಳೂರಿನ ಕಿನ್ಯದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ್ದ ಪ್ರಭಾಕರ್‌ ಭಟ್, “ಉಳ್ಳಾಲ ಪೇಟೆಗೆ ಹೋದರೆ ಅದು ಪಾಕಿಸ್ತಾನವೇ ಅಲ್ವಾ. ಪಾಕಿಸ್ತಾನ ಯಾಕೆ ಆಯಿತು? ’ನಮ್ಮವರ’ ಸಂಖ್ಯೆ ಕಡಿಮೆ ಇತ್ತು, ’ಅವರ’ ಸಂಖ್ಯೆ ಹೆಚ್ಚಾಗಿತ್ತು. ಹೀಗಾಗಿ ಪಾಕಿಸ್ತಾನ, ಬಾಂಗ್ಲಾದೇಶ ನಿರ್ಮಾಣವಾದವು. ಅದೇ ರೀತಿ ಅಲ್ಲಲ್ಲಿ ಪಾಕಿಸ್ತಾನಗಳು ಜನ್ಮ ತಾಳುತ್ತಿವೆ” ಎಂದು ಧ್ವೇಷ ಬಿತ್ತುವ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಭಾರತದಲ್ಲಿ ಗೋಹತ್ಯೆ ಏಕೆ? ಕಲ್ಲಡ್ಕ ಪ್ರಭಾಕರ್‌ ಭಟ್ಟರು ಕೇಳಿದ್ದು ಯಾರಿಗೆ?

“ಮನೆಯಲ್ಲಿ ಒಂದೇ ಮಗುವಿದ್ದಾಗ ಆ ಮಗುವಿಗೆ ಅಣ್ಣ, ತಮ್ಮ, ಅಕ್ಕ, ತಂಗಿ ಯಾರೂ ಇರಲ್ಲ. ಆಗ ಆ ಮಗು ಸ್ವಾರ್ಥಿಯಾಗುತ್ತದೆ. ಮನೆಯಲ್ಲಿ ಮಕ್ಕಳು ಹೆಚ್ಚಿದಷ್ಟು ಆನಂದ, ಖುಷಿ ಹೆಚ್ಚಾಗಿರುತ್ತದೆ. ಇದೀಗ ಹಿಂದೂ ಸಮಾಜದಲ್ಲಿ ಸಂಖ್ಯೆ ಕಡಿಮೆ ಇದೆ. ಕಿನ್ಯದಲ್ಲಿ ಕೇಳಿ ಸುತ್ತಲೂ ಯಾರಿದ್ದಾರೆ ಅಂತಾ? ಅಲ್ಲದೇ ಉಳ್ಳಾಲದ ಬಗ್ಗೆ ನಾನೇನು ಹೇಳಬೇಕಾಗಿಲ್ಲ. ನಮ್ಮ ಸಂಖ್ಯೆ ಕಡಿಮೆಯಾದರೆ, ಆಗ ನಮ್ಮ ದೇವಸ್ಥಾನ, ದೈವಸ್ಥಾನಗಳನ್ನು ಉಳಿಸುವವರು ಯಾರು? ನಮ್ಮ ಸಂಪ್ರದಾಯ, ಸಂಸ್ಕೃತಿಯನ್ನು ಉಳಿಸುವವರು ಯಾರು” ಎಂದು ಸೇರಿದ್ದ ಜನರನ್ನು ಉದ್ದೇಶಿಸಿ ಪ್ರಶ್ನಿಸಿದ್ದರು.

ಇದನ್ನೂ ಓದಿ: ಕಲ್ಲಡ್ಕ ಶಾಲೆಯ ಬಾಬ್ರೀ ಡ್ರಾಮಾ! ದ್ವೇಷ ಬಿತ್ತನೆಗೊಂಡ ಮನಸ್ಸು ದ್ವೇಷವನ್ನಷ್ಟೇ ಕೊಡಬಲ್ಲದು

ಸಾಮಾಜಿಕ ಜಾಲತಾಣದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಟ್ರೋಲ್!

ಪ್ರಭಾಕರ ಭಟ್ಟರ ವಿವಾದಾತ್ಮಕ ಹೇಳಿಕೆಗೆ ಕರಾವಳಿಗರು ಅಸಮಧಾನ ವ್ಯಕ್ತಪಡಿಸಿದ್ದು, ಕೆಲವರು ಗಂಭೀರವಾಗಿ ಪ್ರತಿಕ್ರಯಿಸಿದ್ದರೆ, ಇನ್ನು ಕೆಲವರು ಹಾಸ್ಯದಿಂದ ಪ್ರತಿಕ್ರಿಯಿಸಿ ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ಉಡುಪಿಯ ಬಿಲ್ಲವ-ಮುಸ್ಲಿಂ ಸ್ನೇಹ ಸಮಾವೇಶಕ್ಕೆ ಸಂಘಪರಿವಾರ ಹೆದರಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...