Homeಮುಖಪುಟಬಿಹಾರದ ಹಂಗಾಮಿ ಸ್ಪೀಕರ್‌ ಆಗಿ ಜಿತನ್ ರಾಮ್ ಮಾಂಜಿ ಪ್ರಮಾಣ ವಚನ- ಯಾರಿವರು ?

ಬಿಹಾರದ ಹಂಗಾಮಿ ಸ್ಪೀಕರ್‌ ಆಗಿ ಜಿತನ್ ರಾಮ್ ಮಾಂಜಿ ಪ್ರಮಾಣ ವಚನ- ಯಾರಿವರು ?

- Advertisement -
- Advertisement -

ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಜಿ ಬಿಹಾರ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎಂದು ರಾಜ ಭವನ ಬಿಡುಗಡೆ ಮಾಡಿದ ಪ್ರಕಟನೆಯಲ್ಲಿ ತಿಳಿಸಲಾಗಿದೆ. ಹಿಂದೂಸ್ತಾನಿ ಅವಮ್ ಮೋರ್ಚಾದ ಸ್ಥಾಪಕ ಅಧ್ಯಕ್ಷರಾಗಿರುವ ಜಿತಾನ್ ರಾಮ್ ಮಾಂಜಿ ಅವರಿಗೆ ರಾಜ್ಯಪಾಲ ಫಗು ಚೌಹಾನ್ ಅವರು ಪ್ರಮಾಣವಚನ ಭೋಧಿಸಿದರು.

“2020 ರ ನವೆಂಬರ್ 23-24ರ ಅವಧಿಯಲ್ಲಿ ಹೊಸ ಸ್ಪೀಕರ್ ಆಯ್ಕೆಯಾಗುವವರೆಗೂ ಅವರನ್ನು ನೇಮಕ ಮಾಡಲಾಗಿದೆ” ಎಂದು ಪ್ರಕಟನೆ ತಿಳಿಸಿದೆ. ಹೊಸದಾಗಿ ರಚಿಸಲಾದ ವಿಧಾನಸಭೆಯ ಐದು ದಿನಗಳ ಉದ್ಘಾಟನಾ ಅಧಿವೇಶನ ನವೆಂಬರ್ 23 ರಂದು ಪ್ರಾರಂಭವಾಗಲಿದೆ.

ಇದನ್ನೂ ಓದಿ: ನಿತೀಶ್ ಕುಮಾರ್ ಸಂಪುಟ ಸೇರುವುದಿಲ್ಲ: ಮಾಜಿ ಸಿಎಂ ಜಿತಾನ್ ರಾಮ್ ಮಾಂಜಿ

ಬಿಹಾರ ಚುನವಣೆಯಲ್ಲಿ ಎನ್‌ಡಿಎ ಕೂಟದ ಮಿತ್ರಪಕ್ಷವಾಗದ್ದ ಹಿಂದುಸ್ಥಾನಿ ಅವಾಮ್ ಮೋರ್ಚಾ ಪಕ್ಷವು 07 ಸ್ಥಾನಗಳಲ್ಲಿ ಸ್ಪರ್ಧಿಸಿ 04 ಸ್ಥಾನಗಳಲ್ಲಿ ಜಯಗಳಿಸಿದ್ದು ಎನ್‌ಡಿಎಗೆ ಸರಳ ಬಹುಮತ ಪಡೆಯಲು ಸಹಕರಿಸಿದೆ.

ನವೆಂಬರ್‌ 13 ರಂದು ಹೇಳಿಕೆ ನೀಡಿದ್ದ ಅವರು, “ನಾನು ಈಗಾಗಲೇ ಒಮ್ಮೆ ಮುಖ್ಯಮಂತ್ರಿಯಾಗಿದ್ದವನು. ಹಾಗಾಗಿ ಸಚಿವನಾಗಲು ಬಯಸುವುದಿಲ್ಲ. ಆದ್ದರಿಂದ ನಾನು ನಿತೀಶ್ ಸಂಪುಟ ಸೇರುವುದಿಲ್ಲ. ಆದರೆ ಈ ಸರ್ಕಾರದಿಂದ ಬಿಹಾರದ ಅಭಿವೃದ್ದಿಯಾಗುತ್ತದೆ. ಹಾಗಾಗಿ ಕಾಂಗ್ರೆಸ್‌ನಿಂದ ಆಯ್ಕೆಯಾದ ಶಾಸಕರು ಸಹ ಎನ್‌ಡಿಎ ಸೇರಿ ಎಂದು ಮನವಿ ಮಾಡುತ್ತೇನೆ” ಎಂದಿದ್ದರು.

ಜಿತನ್ ರಾಮ್ ಮಾಂಜಿ ಯಾರು?

ಜಿತನ್ ರಾಮ್ ಮಾಂಜಿ ದಲಿತ ನಾಯಕರಾಗಿದ್ದು, 1980 ರಲ್ಲಿ ಕಾಂಗ್ರೆಸ್ ಸೇರುವುದರೊಂದಿಗೆ ತಮ್ಮ ರಾಜಕೀಯ ಜೀವನ ಆರಂಭಿಸಿದರು. ಅಲ್ಲಿಂದ ಅವರು ಆರ್‌ಜೆಡಿ ಸೇರಿ, ನಂತರ ಆ‌ರ್‌‌ಜೆಡಿ ಬಿಟ್ಟು ಜೆಡಿಯು ಸೇರಿದರು. ಈ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಅವರಿಗೆ ಮುಖ್ಯಮಂತ್ರಿ ಆಗುವ ಅದೃಷ್ಟ ಒಲಿದು ಬಂತು.

ಇದನ್ನೂ ಓದಿ: ಬಿಹಾರ ಚುನಾವಣೆ: ಜಿತಾನ್ ರಾಮ್ ಮಾಂಜಿ ಮಹಾಮೈತ್ರಿ ತೊರೆಯುವುದಾಗಿ ಘೋಷಣೆ

2014 ರವರೆಗೂ ನಿತೀಶ್ ಕುಮಾರ್‌ರವರ ಜೆಡಿಯು ಪಕ್ಷದಲ್ಲಿದ್ದರು, ಆಗ ನಿತೀಶ್‌ ಕುಮಾರ್‌ ಪ್ರಧಾನಿ ನರೇಂದ್ರ ಮೋದಿಯವರು ಕಟ್ಟಾ ವಿರೋಧಿಯಾಗಿದ್ದರು. ಅಂತಹ ಸಂದರ್ಭದಲ್ಲಿ 2014 ರ ಲೋಕಸಭಾ ಚುನಾವಣೆಯನ್ನು ನಿತೀಶ್ ಕುಮಾರ್‌ ಪ್ರತಿಷ್ಠೆಯ ಕಣವಾಗಿ ತೆಗೆದುಕೊಂಡಿದ್ದರು. ಆದರೆ ಅವರ ಪಕ್ಷದಿಂದ ಕೇವಲ 02 ಅಭ್ಯರ್ಥಿಗಳು ಮಾತ್ರ ಗೆದ್ದು ಜೆಡಿಯು ಸೋಲನ್ನು ಅನುಭವಿಸಿತ್ತು. ಸೋಲಿನ ನೈತಿಕ ಹೊಣೆ ಹೊತ್ತ ನಿತೀಶ್ ಕುಮಾರ್‌‌ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಮಾಂಜಿಯವರನ್ನು ಸಿಎಂ ಕುರ್ಚಿಯಲ್ಲಿ ಕುಳ್ಳಿರಿಸಿದರು.

ಆದರೆ ಸ್ವಲ್ಪ ಸಮಯದಲ್ಲಿ ನಿತೀಶ್ ಕುಮಾರ್‌ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ವಾಪಸ್ ಬಯಸಿದಾಗ ಆರಂಭದಲ್ಲಿ ಮಾಂಜಿ ನಿರಾಕರಿಸಿದ್ದರಾದರೂ, ನಂತರ ಅನಿವಾರ್ಯವಾಗಿ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟರು. ಇದಾಗಿ ಜೆಡಿಯು ತೊರೆದ ಜಿತನ್‌ ರಾಮ್ ಮಾಂಜಿ ಹಿಂದುಸ್ಥಾನಿ ಅವಾಮ್ ಮೋರ್ಚಾ ಎಂಬ ಹೊಸ ಪಕ್ಷವನ್ನು ಕಟ್ಟಿದರು.

ಇದನ್ನೂ ಓದಿ: ಜಾತಿ ರಾಜಕಾರಣದಲ್ಲಿ ಬಿಜೆಪಿ ವರ್ಸಸ್ ಬಿಜೆಪಿ: ಯೋಗಿಯನ್ನು ಟೀಕಿಸಿದ ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...