Homeಮುಖಪುಟಹರಿಯಾಣ ವಿಧಾನಸಭೆ ಚುನಾವಣೆ| 2019ರಲ್ಲಿ ಕಿಂಗ್ ಮೇಕರ್ ಆಗಿದ್ದ ಜೆಜೆಪಿ ಖಾತೆ ತೆರೆಯುವಲ್ಲಿ ವಿಫಲ; ದುಶ್ಯಂತ್...

ಹರಿಯಾಣ ವಿಧಾನಸಭೆ ಚುನಾವಣೆ| 2019ರಲ್ಲಿ ಕಿಂಗ್ ಮೇಕರ್ ಆಗಿದ್ದ ಜೆಜೆಪಿ ಖಾತೆ ತೆರೆಯುವಲ್ಲಿ ವಿಫಲ; ದುಶ್ಯಂತ್ ಚೌಟಾಲಾಗೆ ಮುಖಭಂಗ

- Advertisement -
- Advertisement -

2019 ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಿಂಗ್‌ಮೇಕರ್ ಆಗಿದ್ದ ಜನನಾಯಕ್ ಜನತಾ ಪಕ್ಷವು (ಜೆಜೆಪಿ), 2024ರ ಚುನಾವಣೆಯಲ್ಲಿ ಖಾತೆ ತೆರೆಯುವಲ್ಲೂ ವಿಫಲವಾಗಿದೆ. ಹಿಂದೆ ತಾನು ಗೆದ್ದಿದ್ದ ಹತ್ತೂ ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಟ್ಟಿರುವಂತೆ ಭಾಸವಾಗುತ್ತಿದೆ.

ಕಿಂಗ್ ಮೇಕರ್ ಆಗಿ ಹೊರಹೊಮ್ಮುವುದರಿಂದ ಹಿಡಿದು ಐದು ವರ್ಷಗಳ ನಂತರ ಪಕ್ಷದ ಸಂಭಾವ್ಯ ನಾಶವನ್ನು ಎದುರಿಸುವವರೆಗೆ ಅದರ ಮುಖ್ಯಸ್ಥ ದುಶ್ಯಂತ್ ಚೌತಾಲಾ ಭಾರಿ ಮುಖಭಂಗ ಅನುಭವಿಸಿದ್ದಾರೆ. ಇದೇ ವರ್ಷದ ಮಾರ್ಚ್‌ನಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಕೊನೆಗೊಂಡ ನಂತರ ಜನನಾಯಕ್ ಜನತಾ ಪಕ್ಷವು ತನ್ನ ಚುನಾವಣಾ ಅದೃಷ್ಟದಲ್ಲಿ ಭಾರಿ ಕುಸಿತವನ್ನು ಕಂಡಿದೆ.

ಪಕ್ಷದ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ದುಶ್ಯಂತ್ ಚೌಟಾಲಾ ಅವರು 2019 ರಲ್ಲಿ ಗೆದ್ದಿದ್ದ ಉಚ್ಚನ ಕಲಾನ್ ಅಸೆಂಬ್ಲಿ ಕ್ಷೇತ್ರದಲ್ಲೆ ಐದನೇ ಸ್ಥಾನದಲ್ಲಿ ಕುಸಿಯುವ ಮೂಲಕ ಚುನಾವಣೆಯಲ್ಲಿ ಹೀನಾಯ ಸೋಲನ್ನು ಎದುರಿಸಲಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿ ಕೆಲವೇ ಕೆಲವು ಮತಗಳ ಅಂತರದಲ್ಲಿ ಕಾಂಗ್ರೆಸ್ ವಿರುದ್ಧ ಪ್ರಯಾಸದ ಗೆಲುವು ಕಂಡಿದೆ.

2019 ರ ಚುನಾವಣೆಯಲ್ಲಿ ಜೆಜೆಪಿ 90 ಅಸೆಂಬ್ಲಿ ಸ್ಥಾನಗಳಲ್ಲಿ 10 ಅನ್ನು ಗೆದ್ದುಕೊಂಡಿತು. ಆ ಮೂಲಕ, ಅದು ಕಿಂಗ್ ಮೇಕರ್ ಆಗಿ ಹೊರಹೊಮ್ಮಿತು. 40 ಸ್ಥಾನಗಳನ್ನು ಗೆದ್ದ ನಂತರ ಸರಳ ಬಹುಮತಕ್ಕೆ ಆರು ಸ್ಥಾನ ಕಡಿಮೆ ಇದ್ದ ಬಿಜೆಪಿಯೊಂದಿಗೆ ಚುನಾವಣೋತ್ತರ ಮೈತ್ರಿಯನ್ನು ರೂಪಿಸಿತು.

ಕೌಟುಂಬಿಕ ಕಲಹದಿಂದಾಗಿ 2018 ರ ಡಿಸೆಂಬರ್‌ನಲ್ಲಿ ಪೋಷಕ ಸಂಘಟನೆ ಇಂಡಿಯನ್ ನ್ಯಾಷನಲ್ ಲೋಕದಳ (ಐಎನ್‌ಡಿಎಲ್‌) ನ ಜೊತೆಗಿನ ವಿಭಜನೆಯ ನಂತರ ಮುನ್ನೆಲೆಗೆ ಬಂದ ಅಜಯ್ ಸಿಂಗ್ ಚೌಟಾಲಾ ನೇತೃತ್ವದ ಪಕ್ಷವು ಅದರ ಗ್ರಾಫ್‌ನಲ್ಲಿ ಹಠಾತ್ ಏರಿಕೆ ಕಂಡಿತು.

ಬಿಜೆಪಿ ತನ್ನ ನಾಯಕತ್ವದಲ್ಲಿ ಬದಲಾವಣೆಯನ್ನು ಮಾಡಿದ ನಂತರ ಮೈತ್ರಿ ಮುರಿದುಬಿತ್ತು. ಮನೋಹರ್ ಲಾಲ್ ಖಟ್ಟರ್ ಅವರ ಬದಲಿಗೆ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಅವರನ್ನು ನೇಮಿಸಲಾಯಿತು.

ಹರಿಯಾಣ ವಿಧಾನಸಭಾ ಚುನಾವಣೆಯ ಈವರೆಗಿನ ಟ್ರೆಂಡ್‌ಗಳ ಪ್ರಕಾರ ಬಿಜೆಪಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲು ತಯಾರಿ ನಡೆಸಿದೆ. ರಾಜ್ಯದಲ್ಲಿ ಬಿಜೆಪಿ ಹ್ಯಾಟ್ರಿಕ್ ಸಾಧಿಸಲಿದೆ. ಅದೇ ಸಮಯದಲ್ಲಿ, ಕಾಂಗ್ರೆಸ್ ಪ್ರವೃತ್ತಿಯಲ್ಲಿ ದೊಡ್ಡ ಹಿನ್ನಡೆಯನ್ನು ಎದುರಿಸುತ್ತಿದೆ. ಬಹುತೇಕ ಎಕ್ಸಿಟ್ ಪೋಲ್‌ಗಳು ಹರ್ಯಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವುದಾಗಿ ಹೇಳಿಕೊಂಡಿತ್ತು. ಆದರೆ, ಇಲ್ಲಿಯವರೆಗಿನ ಟ್ರೆಂಡ್‌ಗಳ ಪ್ರಕಾರ ಬಿಜೆಪಿ ಪೂರ್ಣ ಬಹುಮತದೊಂದಿಗೆ ಹರ್ಯಾಣದಲ್ಲಿ ಸರ್ಕಾರ ರಚಿಸುತ್ತಿದೆ.

ದುಶ್ಯಂತ್ ಚೌಟಾಲಾ ಅವರ ಪಕ್ಷವಾದ ಜೆಜೆಪಿ ಹರಿಯಾಣದಲ್ಲಿ ಒಂದೇ ಒಂದು ಸ್ಥಾನವನ್ನೂ ಗೆದ್ದಿಲ್ಲ. ಅದರ ಎಲ್ಲ ಅಭ್ಯರ್ಥಿಗಳು ಹೀನಾಯವಾಗಿ ಸೋತಿದ್ದಾರೆ.

ಈ ಬಾರಿ ಜೆಜೆಪಿ ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಸಂಸದ ಚಂದ್ರಶೇಖರ್ ಆಜಾದ್ ಅವರ ಎಎಸ್‌ಪಿ (ಕಾನ್ಶಿ ರಾಮ್) ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿತ್ತು. ಜೆಜೆಪಿ 70 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದರೆ, ಚಂದ್ರಶೇಖರ್ ಆಜಾದ್ ಅವರ ಎಎಸ್‌ಪಿ (ಕಾನ್ಶಿ ರಾಮ್) 20 ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದರೆ, 70 ಸ್ಥಾನಗಳಲ್ಲಿ ಯಾವುದೇ ಜೆಜೆಪಿ ಅಭ್ಯರ್ಥಿ ಗೆದ್ದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಹರಿಯಾಣದಿಂದ ಜೆಜೆಪಿ ನಿರ್ನಾಮವಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇಂತಹ ಪರಿಸ್ಥಿತಿಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ನ ಬಿರುಸಿನ ಸಿದ್ಧತೆಗಳ ನಡುವೆಯೇ ಜನನಾಯಕ ಜನತಾ ಪಕ್ಷ (ಜೆಜೆಪಿ) ಅಸ್ತಿತ್ವದ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಹೇಳಬಹುದು. 2019ರಲ್ಲಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ 10 ಸ್ಥಾನಗಳನ್ನು ಗೆದ್ದಿದ್ದ ಜೆಜೆಪಿ ಈ ಚುನಾವಣೆಗೂ ಮುನ್ನ ಸಾಕಷ್ಟು ಸಂಕಷ್ಟ ಎದುರಿಸಿತ್ತು. ಏಕೆಂದರೆ, ಅದರ ಅನೇಕ ಶಾಸಕರು ಬಂಡಾಯವೆದ್ದಿದ್ದರು. ಲೋಕಸಭೆ ಚುನಾವಣೆಯಲ್ಲೂ ಜೆಜೆಪಿಯ ಸಾಧನೆ ನಿರಾಶಾದಾಯಕವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷ ತೊರೆದಿದ್ದರು.

2019 ರಲ್ಲಿ ಮೊದಲ ಬಾರಿಗೆ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಜೆಜೆಪಿ ಸ್ಪರ್ಧಿಸಿತ್ತು. ಆಗ 10 ಸ್ಥಾನ ಗೆದ್ದಿತ್ತು. ಆ ಸಮಯದಲ್ಲಿ ಅದು ಹರಿಯಾಣ ಮತ್ತು ಜೆಜೆಪಿಗೆ ದೊಡ್ಡ ಯಶಸ್ಸು. ದುಶ್ಯಂತ್ ಚೌಟಾಲಾ ಇದರ ಹಿಂದಿನ ಪ್ರಮುಖ ಕಾರಣ ಎಂದು ಪರಿಗಣಿಸಲಾಗಿತ್ತು. 2019ರ ಚುನಾವಣಾ ಫಲಿತಾಂಶದ ನಂತರ, ಜೆಜೆಪಿ ಖಟ್ಟರ್ ಸರ್ಕಾರವನ್ನು ಬೆಂಬಲಿಸಿತು ಮತ್ತು ಬಿಜೆಪಿಯ ಸಹಯೋಗದೊಂದಿಗೆ ಸರ್ಕಾರವನ್ನು ನಡೆಸಿತು. ಈ ಸರ್ಕಾರ ನಾಲ್ಕೂವರೆ ವರ್ಷಗಳ ಕಾಲ ಇದ್ದು, ಈ ವರ್ಷದ ಮಾರ್ಚ್‌ನಲ್ಲಿ ಬಿಜೆಪಿ ಮತ್ತು ಜೆಜೆಪಿ ಪಕ್ಷಗಳು ಬೇರ್ಪಟ್ಟವು.

ಪಕ್ಷದ ಕಾರ್ಯವೈಖರಿ ನೋಡಿದರೆ ಜೆಜೆಪಿಗೆ ರೈತರ ವಿರೋಧ ವ್ಯಕ್ತವಾಗಿದೆ ಎನ್ನಬಹುದು. ರೈತ ಚಳವಳಿಯ ಸಂದರ್ಭದಲ್ಲಿ ಬಿಜೆಪಿಯೊಂದಿಗೆ ನಿಂತಿದ್ದಕ್ಕಾಗಿ ಜೆಜೆಪಿ ನಾಯಕರು ಭಾರಿ ವಿರೋಧವನ್ನು ಎದುರಿಸಬೇಕಾಯಿತು. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ದುಷ್ಯಂತ್ ಚೌಟಾಲಾ ಅವರ ತಾಯಿ ಮತ್ತು ಶಾಸಕಿ ನೈನಾ ಚೌತಾಲಾ ಅವರು ಹಿಸಾರ್‌ನಿಂದ ಜೆಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದಾಗ, ಅವರು ರೈತರಿಂದ ತೀವ್ರ ವಿರೋಧವನ್ನು ಎದುರಿಸಬೇಕಾಯಿತು.

ಶೇ. 1ರಷ್ಟೂ ಮತ ಪಡೆಯದ ಜೆಜೆಪಿ

ಕಳೆದ ಲೋಕಸಭೆ ಚುನಾವಣೆಯಲ್ಲೂ ಜೆಜೆಪಿಯ ಸಾಧನೆ ತೀರಾ ಕಳಪೆಯಾಗಿದ್ದು, ಯಾವುದೇ ಸ್ಥಾನವನ್ನು ಗೆಲ್ಲಲು ಸಾಧ್ಯವಾಗಿಲ್ಲ. ಅದರ ಸ್ಥಿತಿ ಎಷ್ಟು ಹದಗೆಟ್ಟಿತ್ತು ಎಂದರೆ, ಶೇ.1 ರಷ್ಟೂ ಮತಗಳಿಗೆ ಪಡೆದಿರಲಿಲ್ಲ. ಇದೀಗ ಹರಿಯಾಣದ 90 ವಿಧಾನಸಭಾ ಸ್ಥಾನಗಳ ಒಂದರಲ್ಲಿಯೂ ಜೆಜೆಪಿ ಮುನ್ನಡೆ ಸಾಧಿಸಲು ಸಾಧ್ಯವಾಗಲಿಲ್ಲ. ಅದರ ಎಲ್ಲ ಅಭ್ಯರ್ಥಿಗಳು ಸೋತಿದ್ದು, ಬಹುತೇಕರು ಠೇವಣಿ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ; ಹರಿಯಾಣ ಚುನಾವಣಾ ಫಲಿತಾಂಶವು ಕಾಂಗ್ರೆಸ್‌ಗೆ ದೊಡ್ಡ ಹಿನ್ನಡೆ: ಕುಮಾರಿ ಶೆಲ್ಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...