Homeಮುಖಪುಟಮೋದಿ ರ್‍ಯಾಲಿ ಹಿನ್ನೆಲೆ: 10ನೇ ತರಗತಿ ಪರೀಕ್ಷೆ ಮುಂದೂಡಿದ ಜಮ್ಮು-ಕಾಶ್ಮೀರ ಆಡಳಿತ!

ಮೋದಿ ರ್‍ಯಾಲಿ ಹಿನ್ನೆಲೆ: 10ನೇ ತರಗತಿ ಪರೀಕ್ಷೆ ಮುಂದೂಡಿದ ಜಮ್ಮು-ಕಾಶ್ಮೀರ ಆಡಳಿತ!

- Advertisement -
- Advertisement -

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ 5 ವರ್ಷಗಳ ನಂತರ ಪ್ರಧಾನಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ಕೇಂದ್ರಾಡಳಿತ ಪ್ರದೇಶವಾದ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದಾರೆ. ಮೋದಿ ಚುನಾವಣಾ ರ್ಯಾಲಿಗೆ ಚಾಲನೆ ಸೇರಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಣಿವೆ ರಾಜ್ಯಕ್ಕೆ ತೆರಳುತ್ತಿದ್ದು, ಈ ವೇಳೆ ಜನಸಂದಣಿಯನ್ನು ತೋರಿಸುವ ಹಿನ್ನೆಲೆ 7,000 ಸರಕಾರಿ ನೌಕರರಿಗೆ ಕಾರ್ಯಕ್ರಮಕ್ಕೆ ಹಾಜರಾಗುವಂತೆ ಸೂಚಿಸಿರುವ ಬಗ್ಗೆ ವರದಿಯಾಗಿತ್ತು. ಇದೀಗ ಇದರ ಬೆನ್ನಲ್ಲಿ ಮೋದಿ ಭೇಟಿ ಹಿನ್ನೆಲೆ ಮಾರ್ಚ್ 7ರಂದು ನಿಗದಿಯಾಗಿದ್ದ 10ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಮುಂದೂಡಿರುವ ಬಗ್ಗೆ ವರದಿಯಾಗಿದೆ.

ಜಮ್ಮು ಮತ್ತು ಕಾಶ್ಮೀರ ಶಾಲಾ ಶಿಕ್ಷಣ ಮಂಡಳಿಯ ಆದೇಶದಲ್ಲಿ ಮೋದಿ ಭೇಟಿಯನ್ನು ಉಲ್ಲೇಖಿಸದಿದ್ದರೂ, ಅನಿವಾರ್ಯ ಸಂದರ್ಭಗಳ ಹಿನ್ನೆಲೆ ಕೃಷಿ,  ಪ್ರವಾಸೋದ್ಯಮ ಸೇರಿದಂತೆ ವೃತ್ತಿಪರ ವಿಷಯಗಳ ಪರೀಕ್ಷೆ, 10ನೇ ತರಗತಿಯ ಪರೀಕ್ಷೆಯನ್ನು ಮುಂದೂಡುವುದಾಗಿ ಶಾಲಾ ಶಿಕ್ಷಣ ಮಂಡಳಿ ತಿಳಿಸಿದೆ ಎಂದು ದಿ ಟೆಲಿಗ್ರಾಫ್ ವರದಿಯನ್ನು ಮಾಡಿದೆ. ಹತ್ತನೇ ತರಗತಿಯ ಬೋರ್ಡ್ ಪರೀಕ್ಷೆಗಳು ಮಾರ್ಚ್ 7 ಮತ್ತು ಏಪ್ರಿಲ್ 3ರ ನಡುವೆ ನಡೆಯಲಿವೆ. ಪ್ರಾಯೋಗಿಕ ದಿನಾಂಕಗಳನ್ನು ನಂತರ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಮಂಡಳಿ ತಿಳಿಸಿದೆ.

ಮಾರ್ಚ್ 7ರಂದು ಶ್ರೀನಗರದ ಬಕ್ಷಿ ಸ್ಟೇಡಿಯಂನಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ, 2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಶ್ರೀನಗರಕ್ಕೆ ಮೋದಿಯ ಮೊದಲ ಭೇಟಿಯಾಗಿದೆ. 370ನೇ ವಿಧಿಯನ್ನು ರದ್ದುಗೊಳಿಸುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಕಾಶ್ಮೀರದಲ್ಲಿ ವ್ಯಾಪಕ ಬೆಂಬಲ ಎಂಬುವುದನ್ನು ಬಿಂಬಿಸಲು ಪ್ರಧಾನಿಯ ರ್ಯಾಲಿಗೆ ಭಾಗವಹಿಸುವಂತೆ ಸರಕಾರಿ ಅಧಿಕಾರಿಗಳಿಗೆ ಈ ಮೊದಲು ಸೂಚನೆಯನ್ನು ನೀಡಲಾಗಿತ್ತು. ಶ್ರೀನಗರದ ಖಾಸಗಿ ಶಾಲೆಗಳಿಗೆ ಈ ನೌಕರರನ್ನು ಶಾಲಾ ಬಸ್‌ಗಳಲ್ಲಿ ಬಕ್ಷಿ ಕ್ರೀಡಾಂಗಣಕ್ಕೆ ಕರೆದೊಯ್ಯುವಂತೆ ಆದೇಶಿಸಿದೆ ಎಂದು ವರದಿಯಾಗಿತ್ತು. ಇದಲ್ಲದೆ ಶ್ರೀನಗರದ ಆಹಾರ ಸುರಕ್ಷತಾ ಇಲಾಖೆಗೆ ಕೂಡ ಇದೇ ರೀತಿಯ ಆದೇಶವನ್ನು ನೀಡಲಾಗಿದೆ ಎಂದು ತಿಳಿದು ಬಂದಿದೆ.

ವರದಿಗಳ ಪ್ರಕಾರ, ಭದ್ರತಾ ಏಜೆನ್ಸಿಗಳಿಗೆ, ಮೋದಿ ಅವರ ರ್ಯಾಲಿಯಲ್ಲಿ ಭಾಗವಹಿಸಲು ಸೂಚಿಸಲಾದ ನೌಕರರು ಪ್ರತ್ಯೇಕತಾವಾದಿ ಗುಂಪುಗಳು ಅಥವಾ ಉಗ್ರಗಾಮಿ ಸಂಘಟನೆಗಳೊಂದಿಗೆ ಸಂಪರ್ಕವನ್ನು ಹೊಂದಿದ್ದಾರೆಯೇ ಎಂದು ಕಂಡುಹಿಡಿಯಲು ಆದೇಶಿಸಲಾಗಿದೆ. ಸ್ಥಳೀಯ ಸುದ್ದಿ ಮಾದ್ಯಮದ ವರದಿಯ ಪ್ರಕಾರ, ಶ್ರೀನಗರದ 100ಕ್ಕೂ ಹೆಚ್ಚು ಹೋಟೆಲ್‌ಗಳು, ಲಾಡ್ಜ್‌ಗಳು ಮತ್ತು ಅತಿಥಿ ಗೃಹಗಳನ್ನು ಮೋದಿ ಕಾರ್ಯಕ್ರಮದ ಹಿನ್ನೆಲೆ ಮುಂಗಡವಾಗಿ ಕಾಯ್ದಿರಿಸಲಾಗಿದೆ. 1,000ಕ್ಕೂ ಹೆಚ್ಚು ವಾಹನಗಳನ್ನು ಬಾಡಿಗೆಗೆ ತೆಗೆದುಕೊಳ್ಳಲಾಗಿದೆ.

ಮೋದಿ ಶ್ರೀನಗರದ ಭೇಟಿಯ ವೇಳೆ ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸುವ ನಿರೀಕ್ಷೆಯಿದೆ, ಯುವಕರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸುವ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ಹೊಸ ಯೋಜನೆಗಳನ್ನು ಘೋಷಿಸುವ ನಿರೀಕ್ಷೆಯಿದೆ. ಮೋದಿ ಭೇಟಿಯ ಹಿನ್ನೆಲೆ ಶ್ರೀನಗರ ನಗರದಾದ್ಯಂತ ಬಿಜೆಪಿ 10,000 ಧ್ವಜಗಳನ್ನು ಹಾಕಿದೆ.

ಇದನ್ನು ಓದಿ: ಹೈಕೋರ್ಟ್‌ ನ್ಯಾಯಾಧೀಶರು ಬಿಜೆಪಿ ಸೇರ್ಪಡೆ: ನ್ಯಾಯಾಂಗದ ಸ್ವಾತಂತ್ರ್ಯದ ಪ್ರಶ್ನೆ ಉದ್ಭವಿಸಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...