ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ರದ್ದುಗೊಳಿಸುವುದರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಾಡಿದ್ದ ರಾಜ್ಯಶಾಸ್ತ್ರದ ಹಿರಿಯ ಉಪನ್ಯಾಸಕ ಜಹೂರ್ ಅಹ್ಮದ್ ಭಟ್ ಅವರನ್ನು ಅಮಾನತು ಮಾಡಿತ್ತು. ಇದೀಗ ಜಮ್ಮು ಮತ್ತು ಕಾಶ್ಮೀರ ಆಡಳಿತವು ಅವರ ಅಮಾನತು ರದ್ದುಗೊಳಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.
#BREAKING J&K’s school education department REVOKES suspension of Zahoor Ahmad Bhat, a lecturer of political science. Bhat's suspension came after he had appeared in #SupremeCourt to argue against abrogation of #Article370
— Bar & Bench (@barandbench) September 3, 2023
ಭಟ್ ಅವರು ಸುಪ್ರೀಂ ಕೋರ್ಟ್‌ಗೆ ಹಾಜರಾಗಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವುದರ ವಿರುದ್ಧ ವಾದ ಮಾಡಿದ್ದರು. ಎರಡು ದಿನಗಳ ನಂತರ ಆಗಸ್ಟ್ 25ರಂದು ಅವರನ್ನು ಅಮಾನತುಗೊಳಿಸಲಾಗಿತ್ತು.
”2019ರಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿರುವ ಕೇಂದ್ರದ ಕ್ರಮವು ೊಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಮತ್ತು ಅದು ಸಂವಿಧಾನದ ಉಲ್ಲಂಘನೆಯಾಗಿದೆ” ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದರು.
”ಶಾಲಾ ಶಿಕ್ಷಣ ಇಲಾಖೆ ಆದೇಶದಲ್ಲಿ ಭಟ್ ಅವರನ್ನು ”ಅಪರಾಧಿ” ಎಂದು ಹೇಳಲಾಗಿದೆ. ಅವರು ಜಮ್ಮು ಮತ್ತು ಕಾಶ್ಮೀರ ನಾಗರಿಕ ಸೇವಾ ನಿಯಮಗಳು, ಜಮ್ಮು ಮತ್ತು ಕಾಶ್ಮೀರ ಸರ್ಕಾರಿ ನೌಕರರ ನಡವಳಿಕೆ ನಿಯಮಗಳು ಮತ್ತು ಜಮ್ಮು ಮತ್ತು ಕಾಶ್ಮೀರ ರಜೆ ನಿಯಮಗಳ ನಿಬಂಧನೆಗಳನ್ನು ಉಲ್ಲಂಘಿಸಿದ್ದಾರೆ” ಎಂದು ಆದೇಶದಲ್ಲಿ ಹೇಳಲಾಗಿದೆ.
ಭಟ್ ಅವರ ಅಮಾನತಿನ ನಂತರ, ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ರಾಜೀವ್ ಧವನ್ ಅವರು ಆಗಸ್ಟ್ 28ರಂದು ಸುಪ್ರೀಂ ಕೋರ್ಟ್‌ನಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದರು.
ಸುಪ್ರೀಂ ಕೋರ್ಟ್‌ಗೆ ಹಾಜರಾಗಿ ಕೇಂದ್ರದ ಕ್ರಮದ ವಿರುದ್ಧ ವಾದಿಸಿದ್ದಕ್ಕೆ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಸಿಬಲ್ ಹೇಳಿದ್ದಾರೆ. ಆದರೆ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಭಟ್ ಅವರ ಅಮಾನತಿಗೆ ಸಂಬಂಧಿಸಿದಂತೆ ಇತರ ಸಮಸ್ಯೆಗಳಿವೆ ಎಂದು ಪ್ರತಿಪಾದಿಸಿದ್ದಾರೆ.
”ಅವರು ವಿವಿಧ ನ್ಯಾಯಾಲಯಗಳಲ್ಲೂ ವಾದ ಮಾಡುತ್ತಾರೆ ಮತ್ತು ಇತರ ಸಮಸ್ಯೆಗಳೂ ಇವೆ” ಎಂದು ಮೆಹ್ತಾ ಹೇಳಿದ್ದರು.
ಇದನ್ನೂ ಓದಿ: ಜಮ್ಮು-ಕಾಶ್ಮೀರ: ಉಪನ್ಯಾಸಕರಿಗೆ ಏಕೆ ಅಮಾನತು ಮಾಡಲಾಗಿದೆ? ಪ್ರತಿಕಾರವೇ? ಸುಪ್ರೀಂಕೋರ್ಟ್ ಪ್ರಶ್ನೆ


