Homeಮುಖಪುಟಡಿಡಿಸಿ ಚುನಾವಣೆ: ಗುಪ್ಕರ್​ ಮೈತ್ರಿಕೂಟಕ್ಕೆ ಭರ್ಜರಿ ಗೆಲುವು - ಪಕ್ಷೇತರರು ಕಿಂಗ್ ಮೇಕರ್?

ಡಿಡಿಸಿ ಚುನಾವಣೆ: ಗುಪ್ಕರ್​ ಮೈತ್ರಿಕೂಟಕ್ಕೆ ಭರ್ಜರಿ ಗೆಲುವು – ಪಕ್ಷೇತರರು ಕಿಂಗ್ ಮೇಕರ್?

"ಕಳೆದ ವರ್ಷ ಆಗಸ್ಟ್‌ನಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರದ ನಿರ್ಧಾರವನ್ನು ಜಮ್ಮು ಮತ್ತು ಕಾಶ್ಮೀರದ ಜನರು ತಿರಸ್ಕರಿಸಿದ್ದಾರೆ ಎಂಬುದನ್ನು ಈ ಚುನಾವಣಾ ಫಲಿತಾಂಶಗಳು ಸ್ಪಷ್ಟಪಡಿಸಿವೆ- ಗುಪ್ಕರ್ ಮೈತ್ರಿಕೂಟ

- Advertisement -
- Advertisement -

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದಾದ ನಂತರ ನಡೆದ ಮೊದಲ ಡಿಸ್ಟ್ರಿಕ್ಟ್ ಡೆವಲಪ್‌ಮೆಂಟ್‌ ಕೌನ್ಸಿಲ್(ಡಿಡಿಸಿ) ಸ್ಥಳೀಯ ಚುನಾವಣೆಯಲ್ಲಿ ಫಾರೂಕ್​​ ಅಬ್ದುಲ್ಲಾ ನೇತೃತ್ವದ ಗುಪ್ಕರ್​ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದೆ.

ಒಟ್ಟು 20 ಜಿಲ್ಲೆಗಳಲ್ಲಿ ನಡೆದ ಡಿಡಿಸಿ ಚುನಾವಣೆಯಲ್ಲಿ ಎನ್‌ಸಿ, ಪಿಡಿಪಿ ಸೇರಿದಂತೆ ಏಳು ಪ್ರಾದೇಶಿಕ ಪಕ್ಷಗಳ ಗುಂಪಾಗಿರುವ ಗುಪ್ಕರ್ ಮೈತ್ರಿಕೂಟ 13 ಜಿಲ್ಲೆಗಳಲ್ಲಿ ಜಯಗಳಿಸಿದೆ. ಜಮ್ಮುವಿನ ಆರು ಜಿಲ್ಲೆಗಳಲ್ಲಿ ಬಿಜೆಪಿ ಜಯ ಸಾಧಿಸಿದೆ.

ಪ್ರತಿ ಜಿಲ್ಲೆಯಲ್ಲಿ 14 ಸ್ಥಾನಗಳಂತೆ ಎಲ್ಲಾ 20 ಜಿಲ್ಲೆಗಳೂ ಸೇರಿ ಜಮ್ಮು ಕಾಶ್ಮೀರದ ಒಟ್ಟು 280 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಗುಪ್ಕರ್ ಮೈತ್ರಿಕೂಟ 110 ಸ್ಥಾನಗಳನ್ನು ಪಡೆದಿದೆ. ಆದರೆ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು 74 ಸ್ಥಾನಗಳನ್ನು ಪಡೆದಿದೆ. ಕಾಂಗ್ರೆಸ್ 27 ಸ್ಥಾನಗಳನ್ನು ಗೆದ್ದು ತೃಪ್ತಿ ಪಟ್ಟುಕೊಂಡಿದೆ.

ಇದನ್ನೂ ಓದಿ: ಜಮ್ಮು ಕಾಶ್ಮೀರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಗುಪ್ಕರ್ ಒಕ್ಕೂಟಕ್ಕೆ ಸ್ಪಷ್ಟ ಮುನ್ನಡೆ, ಬಿಜೆಪಿಗೆ ಹಿನ್ನಡೆ

49 ಸ್ಥಾನಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಜಯ ಸಾಧಿಸಿದ್ದು, ಇವರು ಕಿಂಗ್ ಮೇಕರ್‌ಗಳಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ಒಂದು ಜಿಲ್ಲೆಯ ಫಲಿತಾಂಶ ಹೊರಬೀಳುವುದು ಬಾಕಿ ಇದೆ.

ಕಾಶ್ಮೀರದಲ್ಲಿ ಫಾರೂಕ್ ಅಬ್ದುಲ್ಲಾ ನೇತೃತ್ವದ ಮೈತ್ರಿ 72 ಸ್ಥಾನಗಳನ್ನು ಗಳಿಸಿದರೆ, ಬಿಜೆಪಿ ಮೂರು ಸ್ಥಾನಗಳನ್ನು, ಕಾಂಗ್ರೆಸ್​​ 10 ಸ್ಥಾನಗಳನ್ನ ಗೆದ್ದುಕೊಂಡಿದೆ. ಗುಪ್ಕರ್​ ಮೈತ್ರಿಕೂಟ 9 ಜಿಲ್ಲಾ ಮಂಡಳಿಗಳ ಉಸ್ತುವಾರಿ ವಹಿಸಿಕೊಂಡರೆ, ಸ್ವತಂತ್ರ ಅಭ್ಯರ್ಥಿಗಳು ಗೆದ್ದಿರುವ ಶ್ರೀನಗರ ಜಿಲ್ಲಾ ಮಂಡಳಿಗಳ ಉಸ್ತುವಾರಿಯ ಕುರಿತು ಇನ್ನೂ ತೀರ್ಮಾನವಾಗಿಲ್ಲ.

ಜಮ್ಮು ಪ್ರಾಂತ್ಯದಲ್ಲಿ ಬಿಜೆಪಿ 71 ಸ್ಥಾನಗಳನ್ನು ಗೆದ್ದಿದ್ದು, ಜಮ್ಮು, ಉಧಂಪುರ್, ಸಾಂಬಾ, ಕಥುವಾ, ರಿಯಾಸಿ ಮತ್ತು ದೋಡಾದಲ್ಲಿ ಗೆದ್ದಿದೆ. ಗುಪ್ಕರ್ ಕೂಟ 35 ಸ್ಥಾನ, ಕಾಂಗ್ರೆಸ್ 17 ಸ್ಥಾನಗಳಲ್ಲಿ ಜಯ ಸಾಧಿಸಿದೆ.

ಇದನ್ನೂ ಓದಿ: ರೈತರ ಸಮಸ್ಯೆ ಬಗೆಹರಿಯುವವರೆಗೂ ಇಂಗ್ಲೆಂಡ್ ಪ್ರಧಾನಿ ಭಾರತಕ್ಕೆ ಬರುವುದು ಬೇಡ: ರೈತ ಮುಖಂಡರ ಪತ್ರ

49 ಸ್ಥಾನಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಜಯ ಸಾಧಿಸಿದ್ದು, ಅವರು ಯಾವ ಕಡೆ ಹೊರಳುತ್ತಾರೆ ಎಂಬುದು ಇನ್ನು ಸ್ಪಷ್ಟವಾಗಿಲ್ಲ. ಪಕ್ಷೇತರರ ಸಂಖ್ಯೆ ಕಾಂಗ್ರೆಸ್ ಮತ್ತು ಪಿಡಿಪಿಗಿಂತ ಹೆಚ್ಚಾಗಿದೆ.

“ಕಳೆದ ವರ್ಷ ಆಗಸ್ಟ್‌ನಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರದ ನಿರ್ಧಾರವನ್ನು ಜಮ್ಮು ಮತ್ತು ಕಾಶ್ಮೀರದ ಜನರು ತಿರಸ್ಕರಿಸಿದ್ದಾರೆ ಎಂಬುದನ್ನು ಈ ಚುನಾವಣಾ ಫಲಿತಾಂಶಗಳು ಸ್ಪಷ್ಟಪಡಿಸಿವೆ” ಎಂದು ಗುಪ್ಕರ್‌ ಮೈತ್ರಿಕೂಟದ ಸದಸ್ಯರಾದ ಒಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಹೇಳಿದ್ದಾರೆ.

ಇನ್ನು ಡಿಡಿಸಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಕೆಲವೇ ದಿನಗಳಲ್ಲಿ ಎನ್‌ಐಎಯಿಂದ ಬಂಧನಕ್ಕೆ ಒಳಗಾಗಿದ್ದ ಪೀಪಲ್‌ ಡೆಮಾಕ್ರಟಿಕ್‌ ಪಕ್ಷದ (ಪಿಡಿಪಿ) ಯುವ ಘಟಕದ ಅಧ್ಯಕ್ಷ ವಹೀದ್ ಪರ್ರಾ ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿ ಜಯಗಳಿಸಿದ್ದಾರೆ.


ಇದನ್ನೂ ಓದಿ: ಡಿಡಿಸಿ ಚುನಾವಣೆ: NIA ಬಂಧಿಸಿದ್ದ ಪಿಡಿಪಿಯ ವಹೀದ್‌ ಪರ್ರಾಗೆ ಜಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...