Homeಮುಖಪುಟಜ್ಞಾನಪೀಠ ವಿಜೇತ ಮಲಯಾಳಂ ಸಾಹಿತಿ ಅಕ್ಕಿತಂ ಅಚ್ಯುತನ್ ನಂಬೂದಿರಿ (94) ನಿಧನ

ಜ್ಞಾನಪೀಠ ವಿಜೇತ ಮಲಯಾಳಂ ಸಾಹಿತಿ ಅಕ್ಕಿತಂ ಅಚ್ಯುತನ್ ನಂಬೂದಿರಿ (94) ನಿಧನ

ಕೇರಳದ ಪಾಲಕ್ಕಾಡ್ ಜಿಲ್ಲೆಯ ಕುಮಾರನಲ್ಲೂರ್ ಮೂಲದ ಅಕ್ಕಿತಂ, ಬ್ರಿಟಿಷ್ ಆಳ್ವಿಕೆಯ ವಿರುದ್ಧ ಮಹಾತ್ಮ ಗಾಂಧಿ ನೇತೃತ್ವದ ರಾಷ್ಟ್ರೀಯ ಚಳವಳಿಯಲ್ಲಿ ಸಕ್ರಿಯರಾಗಿದ್ದರು.

- Advertisement -
- Advertisement -

ಖ್ಯಾತ ಮಲಯಾಳಂ ಕವಿ, ಜ್ಞಾನಪೀಠ ಪ್ರಶಸ್ತಿ ವಿಜೇತ ಅಕ್ಕಿತಂ ಅಚ್ಯುತನ್ ನಂಬೂದಿರಿ ಇಂದು ಬೆಳಿಗ್ಗೆ ನಿಧನರಾದರು. ಅವರ 94 ವಯಸ್ಸಾಗಿತ್ತು. ಅವರು ಕಳೆದ ಕೆಲವು ದಿನಗಳಿಂದ ತ್ರಿಶೂರ್‌ನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರು.

ಕೇರಳದ ಪಾಲಕ್ಕಾಡ್ ಜಿಲ್ಲೆಯ ಕುಮಾರನಲ್ಲೂರ್ ಮೂಲದ ಅಕ್ಕಿತಂ, ಬ್ರಿಟಿಷ್ ಆಳ್ವಿಕೆಯ ವಿರುದ್ಧ ಮಹಾತ್ಮ ಗಾಂಧಿ ನೇತೃತ್ವದ ರಾಷ್ಟ್ರೀಯ ಚಳವಳಿಯಲ್ಲಿ ಸಕ್ರಿಯರಾಗಿದ್ದರು. ಅವರು ಕವನ, ಸಣ್ಣ ಕಥೆಗಳು, ನಾಟಕಗಳು, ಅನುವಾದಗಳು ಮತ್ತು ಪ್ರಬಂಧಗಳು ಸೇರಿದಂತೆ 40 ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.

ಇದನ್ನೂ ಓದಿ: ಈ ಸಲ ಜ್ಞಾನಪೀಠಕ್ಕೆ ಕಾದೈತೆ ಗಂಡಾಂತರ

ಅಕ್ಕಿತಂಗೆ ಕಳೆದ ಸೆಪ್ಟೆಂಬರ್‌ನಲ್ಲಿ ದೇಶದ ಅತ್ಯುನ್ನತ ಸಾಹಿತ್ಯ ಗೌರವವಾದ ಜ್ಞಾನಪೀಠ ಪ್ರಶಸ್ತಿಯನ್ನು ನೀಡಲಾಗಿತ್ತು. ಅವರು ಮಲಯಾಳಂ ಸಾಹಿತ್ಯಕ್ಕಾಗಿ ಜ್ಞಾನಪೀಠ ಪ್ರಶಸ್ತಿ ಪಡೆದ ಆರನೇ ಸಾಹಿತಿಯಾಗಿದ್ದರು.  ಅಷ್ಟೇ ಅಲ್ಲದೆ ಅವರಿಗೆ ಪದ್ಮಶ್ರೀ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು ಎಳುತಚ್ಚನ್ ಪ್ರಶಸ್ತಿಗಳನ್ನು ಪಡೆದಿದ್ದರು.

ಅಕ್ಕಿತಂ ಅವರ ಕೃತಿಗಳಲ್ಲಿ ’ಇರುವತಾಮ್ ನೂಟಾಡಿಂಡೆ ಇತಿಹಾಸಂ’, ’ಬಲಿದರಾಶನಂ’ ಮತ್ತು ‘ಧರ್ಮ ಸೂರ್ಯನ್’ ಪ್ರಮುಖವಾಗಿದೆ. ಮಲಯಾಳಂ ಕಾವ್ಯದಲ್ಲಿ ಆಧುನಿಕತಾವಾದವನ್ನು ತಿಳಿಸುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು ಎಂದು ಆನ್ ಮನೋರಮ ಬರೆದಿದೆ.

ಸಾಂಪ್ರದಾಯಿಕ ನಂಬೂದಿರಿ (ಬ್ರಾಹ್ಮಣ) ಕುಟುಂಬದಲ್ಲಿ ಮಾರ್ಚ್ 18, 1926 ರಂದು ಜನಿಸಿದ ಅಕ್ಕಿತಂ ತನ್ನ ಎಂಟನೇ ವಯಸ್ಸಿನಲ್ಲಿ ಮಲಯಾಳಂ ಸಾಹಿತ್ಯಕ್ಕೆ ತನ್ನ ಮೊದಲ ಕವಿತೆಯನ್ನು ಬರೆಯುವ ಮೂಲಕ ಸಾಹಿತ್ಯ ಲೋಕಕ್ಕೆ ಪಾದಾರ್ಪಣೆ ಮಾಡಿದ್ದರು. ಬಾಲ್ಯದಲ್ಲಿ ಚಿತ್ರಕಲೆ ಮತ್ತು ಸಂಗೀತದಲ್ಲಿ ಆಸಕ್ತಿ ಹೊಂದಿದ್ದರು. ಅವರು ವೇದ, ಇಂಗ್ಲಿಷ್, ಗಣಿತ ಮತ್ತು ತಮಿಳು ಭಾಷೆಯನ್ನು ಅಧ್ಯಯನ ಮಾಡಿದ್ದಾರೆ.

ಕೋಯಿಕೋಡ್‌ನ ಝಾಮೊರಿನ್ ಗುರುವಾಯೂರಪ್ಪನ್ ಕಾಲೇಜಿಗೆ ಸೇರಿಕೊಂಡಿದ್ದ ಅವರು, ಅನಾರೋಗ್ಯದ ಕಾರಣ ಅಧ್ಯಯನ ಕೈಬಿಟ್ಟರು. ನಂತರ ಅವರು ತ್ರಿಶೂರ್ ಮಂಗಳೋದಯಂ ಪ್ರೆಸ್ ಬಿಡುಗಡೆ ಮಾಡುವ ”ಉಣ್ಣಿ ನಂಬೂದಿರಿ”ಗೆ ಮುದ್ರಕ ಮತ್ತು ಪ್ರಕಾಶಕರಾದರು. ನಂತರ ಸಾಮಾಜಿಕ ಸುಧಾರಣೆ ಮತ್ತು ನವೋದಯ ಚಳುವಳಿಗಳಲ್ಲಿ ಪಾಲ್ಗೊಳ್ಳುವುದರ ಜೊತೆಜೊತೆಗೆ ಕವಿ, ಪ್ರಬಂಧಕಾರ ಮತ್ತು ಸಂಪಾದಕರಾಗಿ ಮಾನ್ಯತೆ ಪಡೆದರು. ಅಷ್ಟೇ ಅಲ್ಲದೆ ಯೋಗಕ್ಷೆಮಂ ಮತ್ತು ಮಂಗಳೋದಯಂ ನಿಯತಕಾಲಿಕೆಗಳ ಸಂಪಾದಕೀಯ ಮಂಡಳಿಯ ಸದಸ್ಯರಾಗಿದ್ದರು.

ಅಕ್ಕಿತಂ ಆಲ್ ಇಂಡಿಯಾ ರೇಡಿಯೊದಲ್ಲಿ ಕೆಲಸ ಮಾಡಿ 1985 ರಲ್ಲಿ ನಿವೃತ್ತರಾದರು. ಕೇರಳ ಸಾಹಿತ್ಯ ಅಕಾಡೆಮಿಯ ಉಪಾಧ್ಯಕ್ಷರಾಗಿ ಕೂಡಾ ಇವರು ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: ’ಲಂಕೇಶ್ ಮೋಹಕ ರೂಪಕಗಳ ನಡುವೆ’: ಪುಸ್ತಕ ಪರಿಚಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...