Homeಚಳವಳಿಜ್ಞಾನಪೀಠ ವಿಜೇತ ಲೇಖಕ ದಾಮೋದರ್ ಮೌಜೋ ಸಹ ಸನಾತನಾ ಸಂಸ್ಥೆಯ ಹಿಟ್ ಲಿಸ್ಟ್‌ನಲ್ಲಿದ್ದರು!

ಜ್ಞಾನಪೀಠ ವಿಜೇತ ಲೇಖಕ ದಾಮೋದರ್ ಮೌಜೋ ಸಹ ಸನಾತನಾ ಸಂಸ್ಥೆಯ ಹಿಟ್ ಲಿಸ್ಟ್‌ನಲ್ಲಿದ್ದರು!

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ನಂತರದ ತನಿಖೆಯಲ್ಲಿ ಮೌಜೋರವರ ಹೆಸರು ಸಹ ಇರುವುದು ಬಹಿರಂಗವಾಗಿತ್ತು.

- Advertisement -
- Advertisement -

2021ರ ಸಾಲಿನ ಜ್ಞಾನಪೀಠ ಪ್ರಶಸ್ತಿಯು ಕೊಂಕಣಿ ಭಾಷೆಯ ಖ್ಯಾತ ಲೇಖಕ ದಾಮೋದರ ಮೌಜೋರವರಿಗೆ ಲಭಿಸಿದ್ದು ನಮಗೆಲ್ಲ ಗೊತ್ತಿದೆ. 1944 ರಲ್ಲಿ ಗೋವಾದಲ್ಲಿ ಜನಿಸಿದ ದಾಮೋದರ ಮೌಜೋ ಅವರು ತಮ್ಮ ಸಣ್ಣ ಕತೆಗಳು ಮತ್ತು ಕಾದಂಬರಿಗಳಿಗೆ ಪ್ರಸಿದ್ಧರು. ಜಾತಿ, ಮತ, ಲಿಂಗ ಇತ್ಯಾದಿಗಳು ಮಾನವ ಸಂಬಂಧಗಳಲ್ಲಿ ತಂದೊಡ್ಡುವ ಬಿರುಕುಗಳನ್ನು ಅವರು ದಿಟ್ಟವಾಗಿ ಮತ್ತು ವ್ಯಂಗ್ಯವಾಗಿ ಅಭಿವ್ಯಕ್ತಿಸಿದ್ದಾರೆ. ಜಿ.ಎನ್ ದೇವಿ, ಎಂ.ಎಂ ಕಲಬುರ್ಗಿ ಮೊದಲಾದವರೊಡನೆ ಕೆಲಸ ಮಾಡಿದ ಮೌಜೋ ಅವರು ತಮ್ಮ ಕ್ರಿಯಾಶೀಲತೆಗೂ ಹೆಸರಾದವರು. ಆ ಮೂಲಕ ಕೊಂಕಣಿ ಭಾಷೆಗೆ ಎರಡನೇ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಹೆಗ್ಗಳಿಕೆ ಅವರದು. ಅಷ್ಟು ಮಾತ್ರವಲ್ಲದೆ ಅವರು ಶೋಷಿತರು, ತಳಸಮುದಾಯಗಳು ಪರವಾಗಿ ಮತ್ತು ಕೋಮುವಾದದ ವಿರುದ್ಧದ ಸ್ಪಷ್ಟ ನಿಲುವುಗಳಿಂದಾಗಿ ಸನಾತನಾ ಸಂಸ್ಥೆಯ ಹಿಟ್‌ ಲಿಸ್ಟ್‌ನಲ್ಲಿದ್ದರು ಎಂಬ ಅಂಶ ತಿಳಿದುಬಂದಿದೆ.

ಬಲಪಂಥೀಯ ತೀವ್ರವಾದಿಗಳ ವಿರುದ್ಧ ಮೌಜೋರವರು ಧೈರ್ಯದಿಂದ ಮಾತನಾಡಲು ಎಂದಿಗೂ ಹಿಂಜರಿದಿರಲಿಲ್ಲ. 2015ರಲ್ಲಿ ವಿಚಾರವಾದಿ ಎಂ.ಎಂ ಕಲಬುರ್ಗಿ ಅವರ ಹತ್ಯೆಯ ನಂತರ ಮೌಜೋರವರು ಅಭಿವ್ಯಕ್ತಿ ಸ್ವಾತಂತ್ರ್ಯದ ಉಳಿವಿಗಾಗಿ ದಿಟ್ಟ ನಿಲುವು ತೆಗೆದುಕೊಂಡಿದ್ದರು. ಸಾಹಿತ್ಯ ಅಕಾಡೆಮಿ ಮುಖ್ಯಸ್ಥರಿಗೆ ಬರೆದ ಪತ್ರದಲ್ಲಿ, “ಸಾಹಿತಿ, ಬರಹಗಾರರು, ಚಿಂತಕರು ಏಕ ಸಂಸ್ಕೃತಿಯ ಗೂಂಡಾಗಿರಿ ಮತ್ತು ಮಾರಲ್ ಪೊಲೀಸಿಂಗ್ ಅನ್ನು ತಡೆಯಲು ಒಗ್ಗಟ್ಟಾಗಿ ನಿಲ್ಲಬೇಕು” ಎಂದು ಆಗ್ರಹಿಸಿದ್ದರು. ಹಲವು ಸನಾತನಾವಾದಿಗ ಬೆದರಿಕೆಗಳ ನಡುವೆಯೂ ಜನವರಿ 2016 ರಲ್ಲಿ ಗುಜರಾತ್‌ನ ದಂಡಿಯಲ್ಲಿ ನಡೆದ ಸೆಮಿನಾರ್‌ನಲ್ಲಿ ಅವರ ಭಾಷಣವದಲ್ಲಿ ಅವರು ಬಲಪಂಥೀಯ ಉಗ್ರಗಾಮಿಗಳನ್ನು ಕಟು ಪದಗಳಲ್ಲಿ ಟೀಕಿಸಿದ್ದರು. ಅಲ್ಲದೆ 2019 ರ ಲೋಕಸಭಾ ಚುನಾವಣೆಯ ಮುನ್ನಾದಿನದಂದು “ಫ್ಯಾಸಿಸ್ಟ್ ಆಡಳಿತವನ್ನು ಸೋಲಿಸಿ” ಎಂದು ನಾಗರಿಕರಿಗೆ ಮನವಿ ಮಾಡಿದ್ದರು.

ಹಾಗಾಗಿಯೇ ಸಾಹಿತಿ, ಚಿಂತಕರು, ಪತ್ರಕರ್ತರು ಮತ್ತು ಸಾಮಾಜಿಕ ಕಾರ್ಯಕರ್ತರನ್ನು ಹತ್ಯೆಗೈಯಲು ಬಲಪಂಥೀಯ ಉಗ್ರಗಾಗಮಿಗಳು ಸಿದ್ದಪಡಿಸಿದ್ದ ಲಿಸ್ಟ್‌ನಲ್ಲಿ ದಾಮೋದರ ಮೌಜೋರವರ ಹೆಸರು ಸಹ ಇತ್ತು. ಕರ್ನಾಟಕದಲ್ಲಿ ಕೋಮುವಾದಿಗಳಿಗೆ ಸಿಂಹ ಸ್ವಪ್ನವಾಗಿದ್ದ, ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ನಂತರ ಕರ್ನಾಟಕ ಎಸ್‌ಐಟಿ ಪೊಲೀಸರು ಮತ್ತು ಭಯೋತ್ಪಾದನಾ ನಿಗ್ರಹ ದಳದ ತನಿಖೆಯಲ್ಲಿ ಮೌಜೋರವರ ಹೆಸರು ಸಹ ಇರುವುದು ಬಹಿರಂಗವಾಗಿತ್ತು. ಅವರೊಂದಿಗೆ ದಿವಗಂತ ಗಿರೀಶ್ ಕಾರ್ನಾಡ್, ವಿಚಾರವಾದಿ ಕೆ.ಎಸ್ ಭಗವಾನ್, ಪತ್ರಕರ್ತ ನಿಖಿಲ್ ವಾಗ್ಲೆ ಸೇರಿದಂತೆ ಇತರರ ಹೆಸರುಗಳಿದ್ದವು.

2013 ರ ಆಗಸ್ಟ್ 20 ರಂದು ಪುಣೆಯಲ್ಲಿ ನರೇಂದ್ರ ದಾಭೋಲ್ಕರ್ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಗೋವಿಂದ ಪನ್ಸಾರೆ ಅವರನ್ನು ಫೆಬ್ರವರಿ 16, 2015 ರಂದು ಪಶ್ಚಿಮ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಗುಂಡಿಕ್ಕಲಾಯಿತು, ಇದಾಗಿ ನಾಲ್ಕು ದಿನಗಳ ನಂತರ ಅವರು ನಿಧನರಾದರು. ಸಂಶೋಧಕ ಎಂ.ಎಂ. ಕಲ್ಬುರ್ಗಿ ಅವರನ್ನು ಆಗಸ್ಟ್ 30, 2015 ರಂದು ಧಾರವಾಡದಲ್ಲಿ ಗುಂಡಿಕ್ಕಿ ಕೊಲ್ಲಲಾಯಿತು.

ಈ ಮೂರು ಪ್ರಕರಣಗಳಿಗೂ, ಸೆಪ್ಟಂಬರ್ 05, 2017ರಂದು ಬೆಂಗಳೂರಿನಲ್ಲಿ ಹತ್ಯೆಗೀಡಾದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಗೂ ಸಂಬಂಧವಿದೆ. ಈ ಹತ್ಯೆಗಳ ಹಿಂದೆ ಬಲಪಂಥೀಯ ಸನಾತನಾ ಸಂಸ್ಥೆಯ ಕೈವಾಡವಿದೆ ಎಂದು ತನಿಖಾ ಸಂಸ್ಥೆಗಳು ತಿಳಿಸಿವೆ. ಈ ಸಂಬಂಧ ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿನ 30ಕ್ಕೂ ಹೆಚ್ಚು ಸನಾತನಾ ಸಂಸ್ಥೆಯ ಸದಸ್ಯರನ್ನು ಬಂಧಿಸಲಾಗಿದೆ.

ಆ ಸಂದರ್ಭದಲ್ಲಿ ಎಲ್ಲಾ ಹೋರಾಟಗಾರರಂತೆ ಮೌಜೋರವರಿಗೆ ಇಷ್ಟವಿಲ್ಲದಿದ್ದರೂ ಪೊಲೀಸ್ ರಕ್ಷಣೆ ನೀಡಲಾಗಿತ್ತು. ಆದರೆ ದಾಮೋದರ ಮೌಜೋರವರು ಧೈರ್ಯವಾಗಿ ಮಾತನಾಡುವುದನ್ನು ನಿಲ್ಲಿಸಿರಲಿಲ್ಲ. ಅವರು ಪತ್ರಕರ್ತ ನಿಖಿಲ್ ವಾಗ್ಲೆ ಜೊತೆಗಿನ ಸಂದರ್ಶನವೊಂದರಲ್ಲಿ “ಭಾರತ ಸರ್ಕಾರವು ಸಿಮಿ [ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ] ಅಥವಾ ಝಾಕಿರ್ ನಾಯ್ಕ್ ಅವರ ಸಂಘಟನೆಗಳನ್ನು ನಿಷೇಧಿಸಲು ಸಾಧ್ಯವಾದರೆ, ಹಿಂದುತ್ವದ ಉಗ್ರಗಾಮಿ ಗುಂಪುಗಳನ್ನು ನಿಷೇಧಿಸಲು ಏಕೆ ಸಾಧ್ಯವಿಲ್ಲ? ನಿಷೇಧ ಮಾಡದಂತೆ ತಡೆಯುತ್ತಿರುವವರಾದರೂ ಯಾರು? ಈ ಸಂಘಟನೆಗಳು ಹಿಂದೂ ಗುಂಪು ಎಂಬ ಕಾರಣಕ್ಕಾಗಿ ನಿರ್ಭಯವಾಗಿ ಕುಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ” ಎಂದು ಹೇಳಿದ್ದರು.

ಮೌಝೋರವರು 1980ರಲ್ಲಿಯೇ ‘ಕಾರ್ಮೆಲಿನ್’ ಎಂಬ ಕಾದಂಬರಿಯಲ್ಲಿ ಮಧ್ಯಪ್ರಾಚ್ಯದಲ್ಲಿ ಮನೆಗೆಲಸದ ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಬರೆದಿದ್ದಾರೆ. ಅವರ ‘ದಿ ಬರ್ಗರ್’ ಎಂಬ ಕಥೇಯಲ್ಲಿ ದನದ ಮಾಂಸದ ಪ್ರಸ್ತಾಪ ಬರುತ್ತದೆ. ಇನ್ನೊಂದು ಕಥೆಯಲ್ಲಿ ಗೋರಕ್ಷಕರು ದಲಿತ ಯುವಕರನ್ನು ಹೇಗೆ ಬೆದರಿಸಿದರು ಎಂಬುದನ್ನು ವಿವರಿಸಿದ್ದಾರೆ. ಅಂದರೆ ಬಹುತೇಕ ಈ ವಿಚಾರಗಳು ಇತ್ತೀಚಿನ ದಿನಗಳಲ್ಲಿ ಚರ್ಚೆಗೆ ಬರುವ ಮುನ್ನವೇ ಅವರು ತಮ್ಮ ಸಾಹಿತ್ಯಗಳಲ್ಲಿ ಉಲ್ಲೇಖಿಸಿದ್ದಾರೆ. ಅವರು ಇಂದಿಗೂ ಬಲಪಂಥೀಯ ತೀವ್ರವಾದಗಳ ಅಪಾಯಗಳ ಕುರಿತು ಮಾತನಾಡುತ್ತಲೇ ಇದ್ದಾರೆ.

ಮಾಹಿತಿ ಕೃಪೆ: ನ್ಯೂಸ್ ಕ್ಲಿಕ್


ಇದನ್ನೂ ಓದಿ:  ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಕರ್ನಾಟಕ ವಿಶೇಷ ತನಿಖಾ ದಳ (SIT) ಭೇದಿಸಿದ್ದಾದರೂ ಹೇಗೆ?

ಭಾಗ -2: ಗೌರಿ ಹತ್ಯೆಯ ತನಿಖೆಯ ಜಾಡು ಹಿಡಿದು ಹೊರಟಾಗ ಸಿಕ್ಕ ಸತ್ಯಗಳು… ಭಾಗ-2

ಭಾಗ -3: ಗೌರಿ ಹತ್ಯೆಯ ತನಿಖೆ ನಡೆದದ್ದು ಹೇಗೆ? ಈಗ ಎಲ್ಲಿಯವರೆಗೂ ಬಂದಿದೆ? ಕೊನೆಯ ಭಾಗ ಓದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...