ಹಾಸ್ಟೆಲ್ ಶುಲ್ಕ ಮತ್ತು ದಾಖಲಾತಿ ಶುಲ್ಕ ಹೆಚ್ಚಳದ ವಿರುದ್ಧ ಒಂದು ತಿಂಗಳಿನಿಂದ ನಡೆಯುತ್ತಿರುವ ಜೆಎನ್‌ಯು ವಿದ್ಯಾರ್ಥಿಗಳ ಹೋರಾಟ ನಿಲ್ಲುವ ಸೂಚನೆಗಳು ಕಾಣುತ್ತಿಲ್ಲ. ಈ ಮಧ್ಯೆ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲು ಮುಂದಾದ JNU ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ಮತ್ತೆ ಲಾಠಿ ಚಾರ್ಜ್ ಮಾಡಿದ್ದಾರೆ.
#WATCH: Police resorted to lathicharge after a clash with protesting Jawaharlal Nehru University (JNU) students, who were marching towards Rashtrapati Bhawan to meet President over fee hike issue. pic.twitter.com/sAbuN05n2q
— ANI (@ANI) December 9, 2019
ಎರಡು ವಾರಗಳ ಹಿಂದಷ್ಟೇ ಶುಲ್ಕ ಪರಿಶೀಲಿಸಲು ಕೇಂದ್ರ ಸರ್ಕಾರ ರಚಿಸಿದ್ದ ಸಮಿತಿಯೊಂದು ವಿಶ್ವವಿದ್ಯಾಲಯದ ಶಿಕ್ಷಕರು ಮತ್ತು ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿ ಹಿಂದುರಿಗಿತ್ತು. ಆದರೆ ಅದು ಒಮ್ಮತದ ಅಭಿಪ್ರಾಯಕ್ಕೆ ಬರಲಾಗಿರಲಿಲ್ಲ.
ಇಂದು ವಿದ್ಯಾರ್ಥಿಗಳು ಶುಲ್ಕ ಹೆಚ್ಚಳದ ಆದೇಶವನ್ನು ಸಂಪೂರ್ಣವಾಗಿ ಹಿಂಪಡೆಯುವಂತೆ ಒತ್ತಾಯಿಸದ್ದರು. ತಮ್ಮ ಮನವಿಯನ್ನು ರಾಷ್ಟ್ರಪತಿಗಳಿಗೆ ಸಲ್ಲಿಸಲು ರಾಷ್ಟ್ರಪತಿ ಭವನಕ್ಕೆ ಮೆರವಣಿಗೆ ನಡೆಸಲು ತೀರ್ಮಾನಿಸಿದ್ದರು.
Delhi: Police resorted to lathicharge after a clash with protesting Jawaharlal Nehru University (JNU) students, who were marching towards Rashtrapati Bhawan to meet President over fee hike issue. pic.twitter.com/H0iPeFWKnw
— ANI (@ANI) December 9, 2019
ಇದನ್ನು ತಡೆದ ಪೊಲೀಸರು ವಿದ್ಯಾರ್ಥಿಗಳ ಮೇಲೆ ತೀವ್ರ ಲಾಠಿ ಚಾರ್ಜ್ ಮಾಡಿದ್ದಾರೆ. ಇದನ್ನು ತಡೆದ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದಿದೆ. ಆಗ ಲಾಠಿ ಚಾರ್ಜ್ ಮಾಡಲಾಗಿದೆ.


