Homeಮುಖಪುಟಜೆಎನ್‌ಯು ಹಿಂಸಾಚಾರ ಪ್ರಕರಣದಲ್ಲಿ ಯಾರನ್ನೂ ಬಂಧಿಸಿಲ್ಲ ಎಂದ ಒಕ್ಕೂಟ ಸರ್ಕಾರ

ಜೆಎನ್‌ಯು ಹಿಂಸಾಚಾರ ಪ್ರಕರಣದಲ್ಲಿ ಯಾರನ್ನೂ ಬಂಧಿಸಿಲ್ಲ ಎಂದ ಒಕ್ಕೂಟ ಸರ್ಕಾರ

- Advertisement -
- Advertisement -

2020 ರ ಜೆಎನ್‌ಯು ಕ್ಯಾಂಪಸ್ ಹಿಂಸಾಚಾರ ಪ್ರಕರಣದಲ್ಲಿ ಯಾರನ್ನೂ ಬಂಧಿಸಿಲ್ಲ ಎಂದು ಗೃಹ ವ್ಯವಹಾರಗಳ ಸಚಿವಾಲಯ (MHA) ಮಂಗಳವಾರ ಲೋಕಸಭೆಯಲ್ಲಿ ತಿಳಿಸಿದೆ. ಕಬ್ಬಿಣದ ಸರಳುಗಳಂತಹ ಶಸ್ತ್ರಗಳಿಡಿದು, ಮುಖವಾಡ ಧರಿಸಿದ ಗೂಂಡಾಗಳು ವಿಶ್ವವಿದ್ಯಾಲಯಕ್ಕೆ ನುಗ್ಗಿ ಹಲವಾರು ವಿದ್ಯಾರ್ಥಿಗಳ ಮೇಳೆ ಮಾರಣಾಂತಿಕ ಹಲ್ಲೆ ನಡೆಸಿದ್ದರು.

2020 ರ ಜನವರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮೂರು ಪ್ರಕರಣಗಳನ್ನು ದೆಹಲಿ ಪೊಲೀಸರು ದಾಖಲಿಸಿದ್ದಾರೆ ಎಂದು  ಕೇಂದ್ರ ಗೃಹ ಖಾತೆಗಳ ರಾಜ್ಯ ಸಚಿವ ನಿತ್ಯಾನಂದ ರೈ ಉತ್ತರಿಸಿದ್ದಾರೆ. ಹಿಂಸಾಚಾರ ಪ್ರಕರಣದಲ್ಲಿ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಘಟನೆ ನಡೆದು ಒಂದೂವರೆ ವರ್ಷಗಳ ನಂತರವೂ ಯಾರನ್ನೂ ಬಂಧಿಸಲಾಗಿಲ್ಲ.

ಹಿಂಸಾಚಾರ ಪ್ರಕರಣದ ತನಿಖೆಯ ವಿಶೇಷ ತನಿಖಾ ತಂಡ ರಚಿಸಲಾಗಿತ್ತು, ಇದರ ಭಾಗವಾಗಿ ಸಾಕ್ಷಿಗಳನ್ನು ಪರಿಶೀಲಿಸಲಾಗಿತ್ತು. ಘಟನೆಗೆ ಸಂಬಂಧಿಸಿದ ಫೂಟೇಜ್‌ಗಳ ಸಂಗ್ರಹ ಮತ್ತು ವಿಶ್ಲೇಷಣೆ ನಡೆಸಲಾಗಿತ್ತು. ಶಂಕಿತರನ್ನು ಪರೀಕ್ಷೆಗೆ ಒಳಪಡಿಸಿ ವಿಚಾರಣೆ ನಡೆಸಲಾಗಿತ್ತು. ಆದರೆ, ಇನ್ನೂ ಯಾರನ್ನೂ ಬಂಧಿಸಿಲ್ಲ ಎಂದು ಕೇಂದ್ರ ಸಚಿವಾಲಯವು ಸಂಸತ್ತಿನಲ್ಲಿ ಡಿಎಂಕೆಯ ದಯಾನಿಧಿ ಮಾರನ್ ಅವರ ಪ್ರಶ್ನೆಗೆ ಮಾಹಿತಿ ನೀಡಿದೆ.

ಜನವರಿ 5, 2020 ರಂದು, ಸುಮಾರು 50 ಮಂದಿ ಮುಖವಾಡ ಧರಿಸಿದ ಯುವಕರು ಮತ್ತು ಮಹಿಳೆಯರು, ಕಬ್ಬಿಣದ ರಾಡ್‌ಗಳು ಮತ್ತು ಸುತ್ತಿಗೆಗಗಳನ್ನು ಹಿಡಿದು ಶಸ್ತ್ರಸಜ್ಜಿತರಾಗಿ, ಜೆಎನ್‌ಯು ಕ್ಯಾಂಪಸ್‌ನಲ್ಲಿ ನುಗ್ಗಿದ್ದರು. ವಿದ್ಯಾರ್ಥಿಗಳು ಎಚ್ಚರಗೊಳ್ಳುವ ಮೊದಲೇ ಹಾಸ್ಟೆಲ್‌ಗಳು ಮತ್ತು ಇತರ ಕಟ್ಟಡಗಳಿಗೆ ನುಗ್ಗಿ ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದರು.

ಇದನ್ನೂ ಓದಿ: “ಜೆಎನ್‌ಯು ಮೇಲಿನ ದಾಳಿ ನನಗೆ 26/11 ಭಯೋತ್ಪಾದಕ ದಾಳಿಯನ್ನು ನೆನಪಿಸುತ್ತದೆ”: ಉದ್ಧವ್ ಠಾಕ್ರೆ

 

ಜೆಎನ್‌ಯು  ಅಧ್ಯಕ್ಷೆ ಐಶೆ ಘೋಷ್ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಘಟನೆಯಲ್ಲಿ ಮಾರಣಾಂತಿಕ ದಾಲೀಗೆ ಒಳಗಾಗಿ ತಲೆಯಿಂದ ರಕ್ತ ಹರಿಯುತ್ತಿದ್ದ ಆಕೆಯ ಫೋಟೋಗಳು ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದವು.

ಜೆಎನ್‌ಯು ವಿದ್ಯಾರ್ಥಿಗಳು ಕ್ಯಾಂಪಸ್‌ನ ಒಳಗೆ ಮತ್ತು ಹೊರಗೆ ತೀವ್ರ ಪ್ರತಿಭಟನೆ ಆರಂಭಿಸಿದ್ದರು. ABVP ಸದಸ್ಯರೇ ದಾಳಿ ನಡೆಸಿದ್ದಾರೆ, ಇದಕ್ಕೆ ಕೇಂದ್ರ ಸರ್ಕಾರದ ಸಂಪೂರ್ಣ ಬೆಂಬಲವಿದೆ, ಹಾಗಾಗಿಯೇ ಪೊಲೀಸರು ದಾಳಿಗೆ ಸಹಕರಿಸಿದ್ದಾರೆ ಎಂದು ಹಿಂಸಾಚಾರದ ವಿರುದ್ಧ ಮುಂಬೈ, ಚೆನ್ನೈ, ಪುಣೆ, ಹೈದರಾಬಾದ್, ಒಡಿಶಾ, ಕೋಲ್ಕತಾ, ಬೆಂಗಳೂರು ಮತ್ತು ಅಹಮದಾಬಾದ್‌ ಸೇರಿದಂತೆ ದೇಶದಾದ್ಯಂತ ಪ್ರತಿಭಟನೆಗಳು ನಡೆದಿದ್ದವು.

ವಿಪಕ್ಷ ನಾಯಕರು ಘಟನೆಯನ್ನು ಖಂಡಿಸಿದ್ದರು. ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಜೆಎನ್‌ಯು ವಿದ್ಯಾರ್ಥಿಗಳ ಮೇಲಿನ ಕ್ರೂರ ದಾಳಿಯನ್ನು 26/11 ಮುಂಬೈ ಭಯೋತ್ಪಾದಕ ದಾಳಿಗೆ ಹೋಲಿಸಿದ್ದರು. ಕಬ್ಬಿಣದ ಸರಳುಗಳಂತಹ ಶಸ್ತ್ರಗಳಿಡಿದು, ಮುಖವಾಡ ಧರಿಸಿದ ಗೂಂಡಾಗಳು ನಡೆಸಿರುವ ಹಿಂಸಾತ್ಮಕ ದಾಳಿಯನ್ನು “ಹೇಡಿತನ” ಎಂದು ಕರೆದಿದ್ದರು.

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಸಚಿವ ಪಿ ಚಿದಂಬರಂ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಸೇರಿದಂತೆ ಹಲವು ಮಂದಿ ತನಿಖೆಗೆ ಆಗ್ರಹಿಸಿದ್ದರು.


ಇದನ್ನೂ ಓದಿ: ಜೆಎನ್‌ಯು ವಿದ್ಯಾರ್ಥಿಗಳ ಪರವಾಗಿ ನಾವಿದ್ದೇವೆ: JNU ಹಿಂಸೆ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...