Homeಮುಖಪುಟಜೆಎನ್‌ಯು ಕೋರ್ಟ್‌ಗೆ ಮೂವರು ಬಿಜೆಪಿ ಸಂಸದರನ್ನು ನೇಮಿಸಿದ ಉಪ ರಾಷ್ಟ್ರಪತಿ ಧಂಖರ್

ಜೆಎನ್‌ಯು ಕೋರ್ಟ್‌ಗೆ ಮೂವರು ಬಿಜೆಪಿ ಸಂಸದರನ್ನು ನೇಮಿಸಿದ ಉಪ ರಾಷ್ಟ್ರಪತಿ ಧಂಖರ್

- Advertisement -
- Advertisement -

ಉಪರಾಷ್ಟ್ರಪತಿ, ರಾಜ್ಯಸಭಾ ಸ್ಪೀಕರ್ ಜಗದೀಪ್ ಧಂಖರ್ ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಕೋರ್ಟ್‌ಗೆ ರಾಜ್ಯಸಭೆಯಿಂದ ಡಾ.ಕೆ. ಲಕ್ಷ್ಮಣ್, ಡಾ. ಸುಮರ್ ಸಿಂಗ್ ಸೋಲಂಕಿ ಮತ್ತು ಡಾ. ಅನಿಲ್ ಸುಖದೇರಾವ್ ಬೋಂಡೆ ಸೇರಿದಂತೆ ಮೂವರು ಬಿಜೆಪಿ ಸಂಸದರನ್ನು ಸೋಮವಾರ ನಾಮನಿರ್ದೇಶನ ಮಾಡಿದ್ದಾರೆ.

ಜೆಎನ್‌ಯು ಕೋರ್ಟ್‌ ವಿಶ್ವವಿದ್ಯಾನಿಲಯದ ಸರ್ವೋಚ್ಚ ಪ್ರಾಧಿಕಾರವಾಗಿದ್ದು, ಅದು ಕಾರ್ಯಕಾರಿ ಮಂಡಳಿ ಮತ್ತು ಅಕಾಡೆಮಿಕ್ ಕೌನ್ಸಿಲ್‌ನ ಕ್ರಮಗಳನ್ನು ಪರಿಶೀಲಿಸುವ ಅಧಿಕಾರವನ್ನು ಹೊಂದಿದೆ. ವಾರ್ಷಿಕವಾಗಿ ಸಭೆ ಸೇರುವ ಈ ಕೋರ್ಟ್ ವಿಶ್ವವಿದ್ಯಾನಿಲಯದ ವಾರ್ಷಿಕ ವರದಿ, ಲೆಕ್ಕಪತ್ರಗಳು, ಆಡಿಟ್ ವರದಿ ಮತ್ತು ಬಜೆಟ್ ಅನ್ನು ಪರಿಗಣಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಾ. ಲಕ್ಷ್ಮಣ್ ಬಿಜೆಪಿಯ ಒಬಿಸಿ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾಗಿದ್ದು, ಅವರು ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರಲ್ಲಿ ಒಬ್ಬರು. ಅಷ್ಟೆ ಅಲ್ಲದೆ, ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡಲು ಪಕ್ಷದ ಮುಂಬರುವ ಸಾಂಸ್ಥಿಕ ಚುನಾವಣೆಯ ರಾಷ್ಟ್ರೀಯ ಚುನಾವಣಾಧಿಕಾರಿಯಾಗಿ ಲಕ್ಷ್ಮಣ್ ಅವರನ್ನು ನೇಮಿಸಲಾಗಿದೆ.

ಡಾ. ಸುಮೇರ್ ಸಿಂಗ್ ಸೋಲಂಕಿ ಅವರು ಮಧ್ಯಪ್ರದೇಶದ ಸಂಸದರಾಗಿದ್ದು, ಅವರು ಈ ಹಿಂದೆ ಬರ್ವಾನಿಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ (ಇತಿಹಾಸ) ಕೆಲಸ ಮಾಡಿದ್ದರು. ಅವರು ಆರೆಸ್ಸೆಸ್‌ನೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ ಎಂದು ಕೂಡಾ ಹೇಳಲಾಗುತ್ತದೆ.

ಮಹಾರಾಷ್ಟ್ರದವರಾಗಿರುವ ಡಾ. ಅನಿಲ್ ಸುಖದೇವರಾವ್ ಬೋಂಡೆ ಅವರು ವೈದ್ಯಕೀಯ ವೃತ್ತಿಪರರಾಗಿದ್ದು, ಪ್ರಸ್ತುತ ರಾಜಕೀಯಕ್ಕೆ ಇಳಿದಿದ್ದಾರೆ. ಸಂಸತ್ತಿನ ಕಳೆದ ಅಧಿವೇಶನದಲ್ಲಿ, ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಸರ್ಕಾರದ ಕಲ್ಯಾಣ ಯೋಜನೆಗಳ ಪ್ರಯೋಜನಗಳಿಂದ ದೂರವಿಡುವಂತೆ ಅವರು ಧ್ವನಿ ಎತ್ತಿದ್ದರು.

ಜೆಎನ್‌ಯು ಕೋರ್ಟ್‌ ಸಭೆಯು ಅದರ ಉಪಕುಲಪತಿಗಳ ಅಧ್ಯಕ್ಷತೆಯಲ್ಲಿ ನಡೆಯುತ್ತದೆ. ಜೆಎನ್‌ಯು ಕೋರ್ಟ್‌ ಕಾರ್ಯಕಾರಿ ಮಂಡಳಿಯ ಸದಸ್ಯರು, ರೆಕ್ಟರ್, ವಿದ್ಯಾರ್ಥಿಗಳ ಡೀನ್‌ಗಳು, ಮುಖ್ಯ ರಕ್ಷಕ ಹಣಕಾಸು ಅಧಿಕಾರಿ, ವಿಶ್ವವಿದ್ಯಾಲಯದ ಗ್ರಂಥಪಾಲಕರು, ಹಿರಿಯ ವಾರ್ಡನ್‌ಗಳು ಮತ್ತು ಸಂಸತ್ತಿನ ಹತ್ತು ಪ್ರತಿನಿಧಿಗಳನ್ನು ಒಳಗೊಂಡಿದೆ.

ಸಂಸತ್ತಿನ ಪ್ರತಿನಿಧಿಗಳಲ್ಲಿ ಲೋಕಸಭೆಯ ಸ್ಪೀಕರ್ ನಾಮನಿರ್ದೇಶನ ಮಾಡಿದ ಆರು ಸದಸ್ಯರು ಮತ್ತು ರಾಜ್ಯಸಭೆಯ ಸ್ಪೀಕರ್‌ ನಾಮನಿರ್ದೇಶನ ಮಾಡಿದ ನಾಲ್ಕು ಸದಸ್ಯರು ಸೇರಿದ್ದಾರೆ. ಅಲ್ಲದೆ, ಉಪಕುಲಪತಿಯಿಂದ ನಾಮನಿರ್ದೇಶನಗೊಂಡ ಪ್ರತಿ ಮಾನ್ಯತೆ ಪಡೆದ ಸಂಸ್ಥೆಗಳ ಪ್ರತಿನಿಧಿಯೂ ಸಹ ಈ ಕೋರ್ಟ್‌ನ ಸದಸ್ಯರಾಗಿ ಉಳಿಯುತ್ತಾರೆ.

ಹೊಸ ನಾಮನಿರ್ದೇಶನಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜೆಎನ್‌ಯು ನಿವೃತ್ತ ಪ್ರಾಧ್ಯಾಪಕ ಪ್ರೊಫೆಸರ್ ಪುರುಷೋತ್ತಮ ಬಿಳಿಮಲೆ, ”ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಇದು ನಿರೀಕ್ಷಿತ ನಡೆಯಾಗಿದೆ. ಆದರೆ, ಜೆಎನ್‌ಯುವಿನಲ್ಲಿ ನಡೆಯುತ್ತಿದ್ದ ವಿದ್ವತ್‌ಪೂರ್ಣ ಚರ್ಚೆಗಳು, ಅಕಾಡೆಮಿಕ್ ಚರ್ಚೆಗಳು ಈಗ ನಡೆಯುತ್ತಿಲ್ಲ. ಈಗ ಏನಿದ್ದರೂ, ಗುರುಪೂಜೆ ರೀತಿಯ ಧಾರ್ಮಿಕ ಕಾರ್ಯಕ್ರಮಗಳಿಗೆ ಅಲ್ಲಿ ಬೆಲೆ. ಒಂದು ವಿಶ್ವವಿದ್ಯಾನಿಲಯವನ್ನು ಹಾಳುಗೆಡವಲು ಏನು ಮಾಡಬೇಕೊ ಅದನ್ನು ಬಿಜೆಪಿ ಮಾಡುತ್ತಲೆ ಬಂದಿದೆ. ಆದರೆ, ಭಾರತೀಯ ಇತಿಹಾಸದಲ್ಲಿ ಇದು ಒಂದು ಹಂತ ಅಷ್ಟೆ. ಆದರೆ, ಇದು ಹೀಗೆಯೆ ಇರುವುದಿಲ್ಲ, ಮುಂದೊಂದು ದಿನ ಇವೆಲ್ಲಾ ಇಲ್ಲವಾಗಿ ಎಲ್ಲವೂ ಸರಿಯಾಗುತ್ತದೆ ಎಂಬ ಆಶಾವಾದವಿದೆ” ಎಂದು ಹೇಳಿದರು.

ಇದನ್ನೂ ಓದಿ: ದೆಹಲಿ: ಪ್ರಾಂಶುಪಾಲರಿಂದ ಜಾತಿ ನಿಂದನೆ, ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ; ಪ್ರತಿಭಟನೆ

ದೆಹಲಿ: ಪ್ರಾಂಶುಪಾಲರಿಂದ ಜಾತಿ ನಿಂದನೆ, ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ; ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...