Homeಮುಖಪುಟಜೆಎನ್‌ಯು ಚುನಾವಣೆ: ಎಡ ವಿದ್ಯಾರ್ಥಿ ಮೈತ್ರಿಗೆ ಭರ್ಜರಿ ಗೆಲುವು, ಒಂದು ಸ್ಥಾನ ಎಬಿವಿಪಿ ಪಾಲು

ಜೆಎನ್‌ಯು ಚುನಾವಣೆ: ಎಡ ವಿದ್ಯಾರ್ಥಿ ಮೈತ್ರಿಗೆ ಭರ್ಜರಿ ಗೆಲುವು, ಒಂದು ಸ್ಥಾನ ಎಬಿವಿಪಿ ಪಾಲು

- Advertisement -
- Advertisement -

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ವಿದ್ಯಾರ್ಥಿ ಒಕ್ಕೂಟದ (ಜೆಎನ್‌ಯುಎಸ್‌ಯು) 2024-25ರ ಚುನಾವಣೆಯಲ್ಲಿ ಎಡ ವಿದ್ಯಾರ್ಥಿಗಳ ಸಂಘಟನೆಗಳ ಮೈತ್ರಿಕೂಟ ನಾಲ್ಕು ಉನ್ನತ ಹುದ್ದೆಗಳಲ್ಲಿ ಮೂರನ್ನು ಗೆಲ್ಲುವ ಮೂಲಕ ತನ್ನ ಭದ್ರಕೋಟೆಯನ್ನು ಮತ್ತಷ್ಟು ಬಲಪಡಿಸಿಕೊಂಡಿದೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ಕೂಡ ಪ್ರಮುಖ ಸ್ಥಾನವೊಂದನ್ನು ಗೆದ್ದಿದೆ.

ನಿತೀಶ್ ಕುಮಾರ್ (AISA)ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಮನೀಷಾ (DSF) ಉಪಾಧ್ಯಕ್ಷ ಸ್ಥಾನವನ್ನು ಗೆದ್ದಿದ್ದಾರೆ ಮತ್ತು ಮಂತೆಹಾ ಫಾತಿಮಾ (DSF) ಪ್ರಧಾನ ಕಾರ್ಯದರ್ಶಿ ಸ್ಥಾನವನ್ನು ತನ್ನದಾಗಿಸಿಕೊಂಡಿದ್ದಾರೆ. ದಶಕಗಳ ಬಳಿಕ ಎಬಿವಿಪಿ ಜಂಟಿ ಕಾರ್ಯದರ್ಶಿ ಹುದ್ದೆಯನ್ನು ಗೆದ್ದುಕೊಂಡಿದೆ. ವೈಭವ್ ಮೀನಾ ವಿಜಯಶಾಲಿಯಾಗಿ ಹೊರಹೊಮ್ಮಿದ್ದಾರೆ.

ಮತಗಳ ಎಣಿಕೆ ವೇಳೆ ನಾಲ್ಕೂ ಕೇಂದ್ರಿಯ ಸ್ಥಾನಗಳಲ್ಲಿ ಎಬಿವಿಪಿ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದರು. ಇದು ಎಡ ವಿದ್ಯಾರ್ಥಿ ಒಕ್ಕೂಟದ ಆತಂಕಕ್ಕೆ ಕಾರಣವಾಗಿತ್ತು. ಕೊನೆಗೆ ಎಬಿವಿಪಿ ಒಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಹುದ್ದೆಗಳ ಸ್ಪರ್ಧೆಯಲ್ಲಿ ಎಬಿವಿಪಿ ಅಂತಿಮವಾಗಿ ಸೋತರೂ, ಅದರ ಸೋಲಿನ ಅಂತರ ಕಡಿಮೆಯಿದ್ದು, ಇದು ಕ್ಯಾಂಪಸ್‌ನಲ್ಲಿ ಗಮನಾರ್ಹ ಬದಲಾವಣೆಯನ್ನು ಸೂಚಿಸುತ್ತದೆ.

ಕ್ಯಾಂಪಸ್ ಹಿಂಸಾಚಾರದಿಂದಾಗಿ ವಿಳಂಬಗೊಂಡಿದ್ದ ಚುನಾವಣೆ, ಏಪ್ರಿಲ್ 25 ರಂದು ನಡೆದಿತ್ತು. ಸುಮಾರು ಶೇ. 70 ರಷ್ಟು ವಿದ್ಯಾರ್ಥಿಗಳು ಮತದಾನ ಮಾಡಿದ್ದರು.

ಸುಮಾರು 5,500 ವಿದ್ಯಾರ್ಥಿಗಳು ತಮ್ಮ ಮತ ಚಲಾಯಿಸಿದ್ದು, ಚತುಷ್ಕೋನ ಸ್ಪರ್ಧೆಯಲ್ಲಿ AISA-DSF, ABVP, ಮತ್ತು NSUI-ಫ್ರಾಟರ್ನಿಟಿ ಮೈತ್ರಿಕೂಟವು ಗೆಲುವಿಗೆ ಪೈಪೋಟಿ ನಡೆಸಿತ್ತು.

ತಮಿಳುನಾಡು ಸರ್ಕಾರದ ಇಬ್ಬರು ಸಚಿವರು ರಾಜೀನಾಮೆ: ಸಂಪುಟ ಪುನರ್‌ರಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...