Homeಚಳವಳಿಶುಲ್ಕ ಹೆಚ್ಚಳದ ಆದೇಶ ಮರುಪರಿಶೀಲನೆಗೆ ಒಪ್ಪಿದ ಕೇಂದ್ರ : JNU ವಿದ್ಯಾರ್ಥಿ ಹೋರಾಟಕ್ಕೆ ಮೊದಲ ಗೆಲುವು..

ಶುಲ್ಕ ಹೆಚ್ಚಳದ ಆದೇಶ ಮರುಪರಿಶೀಲನೆಗೆ ಒಪ್ಪಿದ ಕೇಂದ್ರ : JNU ವಿದ್ಯಾರ್ಥಿ ಹೋರಾಟಕ್ಕೆ ಮೊದಲ ಗೆಲುವು..

- Advertisement -
- Advertisement -

ಶುಲ್ಕ ಹೆಚ್ಚಳದ ವಿರುದ್ಧ ಕಳೆದ 10 ದಿನಗಳಿಂದ ಭಾರೀ ಹೋರಾಟದ ಕಾರಣಕ್ಕೆ ದೇಶದ ಗಮನ ಸೆಳೆದಿರುವ ಜೆಎನ್‌ಯುನಲ್ಲಿ ಪರಿಹಾರ ಭರವಸೆ ದೊರಕಿದೆ. ಶುಲ್ಕ ಹೆಚ್ಚಳದ ಆದೇಶ ಮರುಪರಿಶೀಲನೆಗೆ ಒಪ್ಪಿದ ಕೇಂದ್ರ ಕೇಂದ್ರ ಸರ್ಕಾರವು ಅದಕ್ಕೊಂದು ಸಮಿತಿಯನ್ನು ರಚಿಸಿದೆ. ಸಮಿತಿಯು ಈಗಾಗಲೇ ವಿವಿಯ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಅವರ ಹಕ್ಕೊತ್ತಾಯಗಳ ಕುರಿತು ಚರ್ಚೆ ನಡೆಸಿದೆ.

ಇದು ವಿದ್ಯಾರ್ಥಿಗಳ ನಿರಂತರ ಹೋರಾಟಕ್ಕೆ ಸಿಕ್ಕ ಮೊದಲ ಗೆಲುವಾಗಿದೆ. ಮುಂದಿನ ಒಂದು ವಾರದಲ್ಲಿ ಜೆಎನ್‌ಯು ಶುಲ್ಕ ಹೆಚ್ಚಳದಲ್ಲಿ ವಿಚಾರದಲ್ಲಿ ಸಮಿತಿಯು ತನ್ನ ವರದಿಯನ್ನು ಸಲ್ಲಿಸಲಿದೆ.

ಯುಜಿಸಿ ಮಾಜಿ ಅಧ್ಯಕ್ಷ ವಿ.ಎಸ್.ಚೌಹಾನ್, ಎಐಸಿಟಿಇ ಅಧ್ಯಕ್ಷ ಅನಿಲ್ ಸಹಸ್ರಬುದ್ಧೆ ಮತ್ತು ಯುಜಿಸಿ ಕಾರ್ಯದರ್ಶಿ ರಜನೀಶ್ ಜೈನ್ ಸೇರಿದಂತೆ ಮೂವರು ಸದಸ್ಯರ ಸಮಿತಿಯು ಶುಕ್ರವಾರ ಜೆಎನ್‌ಯು ಕ್ಯಾಂಪಸ್‌ಗೆ ಭೇಟಿ ನೀಡಿ ವಿದ್ಯಾರ್ಥಿ ಸಂಘದ ಪ್ರತಿನಿಧಿಗಳನ್ನು ಭೇಟಿ ಮಾಡಿದೆ.

ಇದನ್ನೂ ಓದಿ: JNU ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡಿಸಿ ರಾಜ್ಯದ್ಯಂತ ವಿದ್ಯಾರ್ಥಿಗಳಿಂದ ಪ್ರತಿಭಟನೆ..

ವಿದ್ಯಾರ್ಥಿಗಳು ತಮ್ಮ ಹೋರಾಟವನ್ನು ತೀವ್ರಗೊಳಿಸಿದ್ದರಿಂದ ಸಂಧಾನಕ್ಕಾಗಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ಮೂರು ಸದಸ್ಯರ ಸಮಿತಿಯನ್ನು ನೇಮಿಸಿದೆ.

“ನಾವು ವಿದ್ಯಾರ್ಥಿ ಸಂಘದ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದೇವೆ ಮತ್ತು ಅವರ ಸಲಹೆಗಳನ್ನು ಗಣನೆಗೆ ತೆಗೆದುಕೊಂಡಿದ್ದೇವೆ. ಸಭೆ ಎರಡು ಗಂಟೆಗಳ ಕಾಲ ನಡೆಯಿತು, ಅಲ್ಲಿ ವಿವಿ ಆಡಳಿತ ಮತ್ತು ವಿದ್ಯಾರ್ಥಿಗಳ ನಡುವಿನ ಭಿನ್ನಾಭಿಪ್ರಾಯದ ಹಿಂದಿನ ಕಾರಣಗಳನ್ನು ನಾವು ತಿಳಿದುಕೊಂಡಿದ್ದೇವೆ” ಎಂದು ಸಮಿತಿಯ ಸದಸ್ಯರೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

“ಇದು ಅಂತಿಮ ಸಭೆಯಾಗಿದ್ದು ನಾವು ಎಲ್ಲಾ ದೃಷ್ಟಿಕೋನಗಳಿಂದಲೂ ಆಲಿಸಿದ್ದೇವೆ. ನಾವು ಈಗ ನಮ್ಮ ಶಿಫಾರಸುಗಳನ್ನು ಒಂದು ವಾರದೊಳಗೆ ಸಲ್ಲಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

“ನಮ್ಮ ಚರ್ಚೆಯು ಸಕಾರಾತ್ಮಕವಾಗಿದೆ ಆದರೆ ಅಂತಿಮ ನಿರ್ಧಾರವನ್ನು ಜೆಎನ್‌ಯು ಆಡಳಿತವು ತೆಗೆದುಕೊಳ್ಳುತ್ತದೆ. ನಾವು ಶೀಘ್ರದಲ್ಲೇ ಶಿಫಾರಸುಗಳನ್ನು ಸಲ್ಲಿಸುತ್ತೇವೆ” ಎಂದು ವಿ.ಎಸ್. ಚೌಹಾನ್ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಹಾಗಾಗಿ ವಿದ್ಯಾರ್ಥಿಗಳು ಸಂಪೂರ್ಣ ಶುಲ್ಕ ಹೆಚ್ಚಳದ ಆದೇಶ ವಾಪಸಾತಿ ಆಗುವವರೆಗೂ ತಮ್ಮ ಹೋರಾಟವನ್ನು ಮುಂದುವರೆಸಲು ನಿರ್ಧರಿಸಿದ್ದಾರೆ. ಅವರ ಹೋರಾಟಕ್ಕೆ JNU ಹಿರಿಯ ವಿದ್ಯಾರ್ಥಿಗಳು ಸಹ ಸಾಥ್‌ ನೀಡಿದ್ದು ಇಂದು ದೆಹಲಿಯ ಮಂಡಿಹೌಸ್‌ನಲ್ಲಿ ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ.

ಜೊತೆಗೆ ಏಮ್ಸ್‌ (All india Institute of medical science) ವಿದ್ಯಾರ್ಥಿ ಸಂಘವು ಕೂಡ ಪತ್ರಿಕಾ ಹೇಳಿಕೆ ನೀಡಿದ್ದು JNU ವಿದ್ಯಾರ್ಥಿಗಳ ಹೋರಾಟಕ್ಕೆ ಪೂರ್ಣ ಬೆಂಬಲ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...