Homeಚಳವಳಿಜೆಎನ್‌ಯು ವಿದ್ಯಾಥಿ೯ ನಜೀಬ್ ನಾಪತ್ತೆಯಾಗಿ 3 ವರ್ಷ: ಆತನ ತಾಯಿಯಿಂದ ಅಮಿತ್ ಶಾ ಮನೆಗೆ ಪ್ರತಿಭಟನಾ...

ಜೆಎನ್‌ಯು ವಿದ್ಯಾಥಿ೯ ನಜೀಬ್ ನಾಪತ್ತೆಯಾಗಿ 3 ವರ್ಷ: ಆತನ ತಾಯಿಯಿಂದ ಅಮಿತ್ ಶಾ ಮನೆಗೆ ಪ್ರತಿಭಟನಾ ಮೆರವಣಿಗೆ

- Advertisement -
- Advertisement -

ಜೆಎನ್‌ಯು ವಿದ್ಯಾರ್ಥಿ ನಜೀಬ್ ಅಹ್ಮದ್ ನಾಪತ್ತೆಯಾಗಿ ಮೂರು ವರ್ಷಗಳ ನಂತರವೂ, ಆತನ ತಾಯಿ ಫಾತಿಮಾ ನಫೀಸ್ ತನ್ನ ಮಗನ ಹುಡುಕಾಟವನ್ನು ಮುಂದುವರೆಸಿದ್ದಾರೆ. ಪತ್ರಿಭಟನೆಯ ಅಂಗವಾಗಿ ತನ್ನ ಮಗ ಕಳೆದುಹೋದ ದಿನವಾದ ಅಕ್ಟೋಬರ್ 15 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮನೆಗೆ ಮೆರವಣಿಗೆ ನಡೆಸಲಿದ್ದಾರೆ. ಅವರೊಂದಿಗೆ ಕಳೆದ ವರ್ಷ ಡಿಸೆಂಬರ್‌ನಲ್ಲಿ ಬುಲಂದ್‌ಶಹರ್‌ನಲ್ಲಿ ಜನಸಮೂಹದಿಂದ ಕೊಲ್ಲಲ್ಪಟ್ಟ ಇನ್ಸ್‌ಪೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಅವರ ಪತ್ನಿ ರಜನಿ ಸಿಂಗ್ ಸಹ ಹೆಜ್ಜೆ ಹಾಕಲಿದ್ದಾರೆ.

ನಾಗರಿಕ ಹಕ್ಕುಗಳ ಸಂಘಟನೆಯಾದ ಯುನೈಟೆಡ್ ಎಗೇನ್ಸ್ಟ್ ಹೇಟ್ (ಯುಎಹೆಚ್) ನ ಕಾರ್ಯಕರ್ತ ನದೀಮ್ ಖಾನ್ ಮಾತನಾಡಿ ಈ ವರ್ಷದ ಜೂನ್‌ನಲ್ಲಿ ಜಾರ್ಖಂಡ್‌ನಲ್ಲಿ ಹತ್ಯೆಗೀಡಾದ ತಬ್ರೆಜ್ ಅನ್ಸಾರಿ ಅವರ ಕುಟುಂಬ ಮತ್ತು 2017ರ ಸೆಪ್ಟೆಂಬರ್‌ನಲ್ಲಿ ಕೊಲೆಯಾದ ಪತ್ರಕರ್ತೆ ಗೌರಿ ಲಂಕೇಶ್ ಅವರ ಸಂಬಂಧಿಕರೂ ಮೆರವಣಿಗೆಯಲ್ಲಿ ಜೊತೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ನಜೀಬ್‌ ತಾಯಿ ಫಾತಿಮಾ ನಫೀಸ್

ನವದೆಹಲಿಯ ಪತ್ರಿಕಾ ಕ್ಲಬ್‌ನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಜೀಬ್‌ ತಾಯಿ ಫಾತಿಮಾ  “ನನ್ನ ಎಲ್ಲಾ ಹಣಕಾಸಿನ ಉಳಿತಾಯಗಳು ಬರಿದಾಗಿವೆ, ಆದರೆ ನನ್ನ ಮಗ ಇನ್ನೋ ನನಗೆ ಸಿಕ್ಕಿಲ್ಲ” ಎಂದು ನೊಂದು ನುಡಿದಿದ್ದಾರೆ. ತನ್ನ ಮಗನಿಗಾಗಿ ಮೂರು ವರ್ಷದಿಂದ ಫಾತಿಮಾ ಹೋರಾಟ ನಡೆಸುತ್ತಿದ್ದಾರೆ. ದೆಹಲಿ ಹೈಕೋರ್ಟ್‌ನ ಹೊರಗೆ ಪ್ರತಿಭಟನೆಯಲ್ಲಿ ಕುಳಿತಿದ್ದಾಗ ದೆಹಲಿ ಪೊಲೀಸರಿಂದ 2017ರ ಅಕ್ಟೋಬರ್‌ನಲ್ಲಿ ಬಂಧನಕ್ಕೂ ಒಳಗಾಗಿದ್ದರು.

ತನ್ನ ಮಗನ ಪ್ರಕರಣವನ್ನು ಪೊಲೀಸರು ಎಂದಿಗೂ ಗಂಭೀರವಾಗಿ ಪರಿಗಣಿಸಿಲ್ಲ, ಮೊದಲ ದಿನದಿಂದ ಪೊಲೀಸರು ನಮಗೆ ಮೋಸ ಮಾಡಿದ್ದಾರೆ ಎಂದು  ನಜೀಬ್ ಅವರ ತಾಯಿ ಫಾತಿಮಾ ಆರೋಪಿಸಿದ್ದಾರೆ.

ತಬ್ರೇಜ್ ಅನ್ಸಾರಿ ಕುಟುಂಬ

ನಜೀಬ್ ನಾಪತ್ತೆಯಾಗುವ ಒಂದು ದಿನದ ಮೊದಲು ರಾತ್ರಿ ವೇಳೆ ಅವನಿಗೂ ಮತ್ತು ಎಬಿವಿಪಿ ಸದಸ್ಯರ ನಡುವೆ ಜಗಳವಾಗಿತ್ತು. ತರುವಾಯ, ಜೆಎನ್‌ಯುವಿನ ಎ.ಪಿ.ದಿಮ್ರಿಯವರು ಎಬಿವಿಪಿ ವಿದ್ಯಾರ್ಥಿಗಳು ನಜೀಬ್‌ ಮೇಲೆ ಹಲ್ಲೆ ಮಾಡಿದ್ದನ್ನು ದೃಢಪಡಿಸಿದ್ದರು.

ಆತನನ್ನು ಒಂಬತ್ತು ಎಬಿವಿಪಿ ವಿದ್ಯಾರ್ಥಿಗಳು ಅಪಹರಿಸಿದ್ದಾರೆ ಎಂಬ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದರು. ಆದರೆ ಅವರು ತನಿಖೆಯಲ್ಲಿ ವಿಫಲವಾದ ನಂತರ, ದೆಹಲಿ ಹೈಕೋರ್ಟ್ ಈ ಪ್ರಕರಣವನ್ನು ಮೇ 2017 ರಲ್ಲಿ ಸಿಬಿಐಗೆ ವರ್ಗಾಯಿಸಿತು. ಆದರೆ ಸಿಬಿಐ ಈ ಪ್ರಕರಣವನ್ನು ಕೈಗೆತ್ತಿಕೊಂಡ ಸುಮಾರು ಒಂದೂವರೆ ವರ್ಷದ ನಂತರ, ಕೇಂದ್ರ ತನಿಖಾ ಸಂಸ್ಥೆ ಕೂಡ ಯಾವುದೇ ಪುರಾವೆಗಳನ್ನು ಕಂಡುಹಿಡಿಯುವಲ್ಲಿ ವಿಫಲವಾಗಿದೆ. ಜೊತೆಗೆ ಅಕ್ಟೋಬರ್ 2018 ರಲ್ಲಿ ಪ್ರಕರಣವನ್ನು ಮುಚ್ಚುವ ವರದಿಯನ್ನು ಸಲ್ಲಿಸಿದೆ.

ಸುಭೋದ್‌ ಕುಮಾರ್‌ ಕುಟುಂಬ

“ಸಿಬಿಐನಿಂದ ಈ ಮಟ್ಟದ ಆಘಾತವನ್ನು ನಾವು ನಿರೀಕ್ಷಿಸಿರಲಿಲ್ಲ ಎಂದು ಮಾನವ ಹಕ್ಕುಗಳ ಕಾನೂನು ಜಾಲದ ಸಂಸ್ಥಾಪಕ, ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವೆಸ್ ಹೇಳಿದ್ದಾರೆ. ಯುಎಹೆಚ್ ಬಿಡುಗಡೆ ಮಾಡಿದ ಸಾಕ್ಷ್ಯಚಿತ್ರದಲ್ಲಿ ಮಾತನಾಡಿರುವ ಅವರು ಹಲವು ತಿಂಗಳುಗಳ ನಂತರ ದೆಹಲಿ ಹೈಕೋರ್ಟ್‌ಗೆ ಬಂದು ಅಪರಾಧಿಗಳು ನಮಗೆ ಗೊತ್ತಿಲ್ಲ ಎಂದು ಹೇಳುವುದು ನಾಚಿಗೆಗೇಡಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ಮಾಡಬೇಕೆಂದು ಹೈಕೋರ್ಟ್ ಆದೇಶಿಸದಿರುವುದು ಹೆಚ್ಚು ದುಃಖಕರವಾಗಿದೆ” ಎಂದು ಗೊನ್ಸಾಲ್ವೆಸ್ ಹೇಳಿದ್ದಾರೆ

ಗೌರಿ ಲಂಕೇಶ್ ಕುಟುಂಬ

ಸುದ್ದಿ ಮಾಧ್ಯಮ ಮತ್ತು ಬಿಜೆಪಿಯ ಕಪಿಲ್ ಮಿಶ್ರಾ ವಿರುದ್ಧವೂ ಪ್ರಕರಣ ದಾಖಲಿಸಲಿದೆ

ನಜೀಬ್‌ಗೆ ಐಸಿಸ್‌ನೊಂದಿಗೆ ಸಂಪರ್ಕವಿದೆ, ಅಥವಾ ಭಯೋತ್ಪಾದಕ ಸಂಘಟನೆಯಿಂದ ಪ್ರಭಾವಿತವಾಗಿದೆ ಎಂದು ಹಲವಾರು ಮಾಧ್ಯಮ ಸಂಸ್ಥೆಗಳು ಮಾರ್ಚ್ 2017 ರಲ್ಲಿ ಆರೋಪಿಸಿದ್ದವು. ಅಂತಹ ಆರೋಪಗಳನ್ನು ಯಾವುದೇ ಪುರಾವೆಗಳಿಲ್ಲ ಎಂದು ದೆಹಲಿ ಪೊಲೀಸರು ಸ್ಪಷ್ಟವಾಗಿ ನಿರಾಕರಿಸಿದ್ದರು. ಇದರಿಂದ ಮಗನನ್ನು ಕಳೆದುಕೊಂಡು ನೋವಿನಲ್ಲಿದ್ದ ಫಾತಿಮಾರವರು ಪರಿಶೀಲನೆ ಮಾಡದೇ ಮಾಹಿತಿಯನ್ನು ವರದಿ ಮಾಡಿದ ಮಾಧ್ಯಮ ಸಂಸ್ಥೆಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದು, ಕ್ಷಮೆಯಾಚನೆ ಮತ್ತು ಪರಿಹಾರವನ್ನು ಕೇಳಿದ್ದಾರೆ.

ಮಾರ್ಚ್ 2019 ರಲ್ಲಿ ತಡವಾಗಿಯಾದರೂ ನಜೀಬ್ ಐಸಿಸ್‌ಗೆ ಸೇರ್ಪಡೆಗೊಂಡಿದ್ದಾನೆ ಎಂಬ ಫೇಕ್‌ ನ್ಯೂಸ್‌ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದವು. ವಾಸ್ತವವಾಗಿ, ಪೊಲೀಸರು ಇಂತಹ ಎಲ್ಲಾ ವರದಿಗಳನ್ನು ತಳ್ಳಿಹಾಕಿದರೂ, ಬಿಜೆಪಿಯ ಕಪಿಲ್ ಮಿಶ್ರಾ ಕಳೆದ ವಾರ ನಜೀಬ್ ಐಸಿಸ್ ಗೆ ಸೇರಿದ್ದಾರೆ ಎಂಬ ‘ವದಂತಿಗಳಿವೆ’ ಎಂದು ಟ್ವೀಟ್ ಮಾಡಿದ್ದರು. ಜೊತೆಗೆ ದೆಹಲಿ ವಕ್ಫ್ ಮಂಡಳಿಯು ನಜೀಬ್ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರವನ್ನು ನೀಡಿದ ಪ್ರತಿಕ್ರಿಯೆಯಾಗಿ ಮಿಶ್ರಾ ಮತ್ತೆ ಕೆಟ್ಟದಾಗಿ ಟ್ವೀಟ್ ಮಾಡಿದ್ದರು.

“ನಜೀಬ್ ಐಸಿಸ್ ಸೇರಿಕೊಂಡಿದ್ದಾನೆ ಎಂದು ವದಂತಿಗಳು ಹೇಳುತ್ತವೆ.  ಆದರೂ “ಕಾಣೆಯಾದ ಜೆಎನ್‌ಯು ವಿದ್ಯಾರ್ಥಿ ನಜೀಬ್ ಅವರ ಕುಟುಂಬಕ್ಕೆ ಕೇಜ್ರಿವಾಲ್ 5 ಲಕ್ಷ ರೂ. ಮತ್ತು ಸರ್ಕಾರಿ ಉದ್ಯೋಗವನ್ನು ನೀಡಿದ್ದಾರೆ.” ದೆಹಲಿಯಲ್ಲಿ ಪ್ರತಿ ವರ್ಷ 8,000 ಮಕ್ಕಳು ಕಾಣೆಯಾಗುತ್ತಿದ್ದಾರೆ. ಅವರು ಹಿಂದೂಗಳಾಗಿದ್ದರಿಂದ ಅವರಿಗೆ ಮಾತ್ರ ಪರಿಹಾರ ಹಣ ಸಿಗುತ್ತಿಲ್ಲ. ಅವರ ಹೆತ್ತವರು ಮಾಡಿದ ತಪ್ಪು ಏನು? ಕೇಜ್ರಿವಾಲ್ ಜಿಹಾದಿ ಮತ್ತು ನಕ್ಸಲರಿಗೆ ಮಾತ್ರ ಹಣವನ್ನು ನೀಡುತ್ತಾರೆಯೇ? ” ಎಂದು ಕಪಿಲ್‌ ಮಿಶ್ರಾ ಟ್ವೀಟ್ ಮಾಡಿದ್ದಾರೆ.

ಅವರು ಶೀಘ್ರದಲ್ಲೇ ಕ್ಷಮೆಯಾಚಿಸದಿದ್ದರೆ ಫಾತಿಮಾ ಅವರು ಮಿಶ್ರಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಯೋಜಿಸಿದ್ದಾರೆ.

ಸತ್ಯ ಏನೇಂದರೆ ದೆಹಲಿಯ ಅರವಿಂದ್‌ ಕೇಜ್ರಿವಾಲ್‌ರವರು ಮುಸ್ಲಿಂ ಕುಟುಂಬಗಳಿಗೆ ಮಾತ್ರವಲ್ಲದೇ ಅನಾಹುತ, ಅಪಘಾತಗಳಲ್ಲಿ ಮರಣ ಹೊಂದಿದೆ ಎಲ್ಲಾ ಧರ್ಮದ ಕುಟುಂಬಗಳಿಗೆ ಪರಿಹಾರ ಹಣ ನೀಡಿದ್ದರ ಬಗ್ಗೆ ಸಾಕ್ಷಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಲಾಗಿತ್ತು. ಆದರೂ ಬಿಜೆಪಿಯವರು ಕೇವಲ ರಾಜಕೀಯ ಮಾಡುವುದಕ್ಕಾಗಿ ಮುಸ್ಲಿಂರನ್ನು ಗುರಿಮಾಡುತ್ತಿದ್ದಾರೆ ಎಂದು ಆ ಸಂದರ್ಭದಲ್ಲಿ ಧೃವ್‌ರಾಠೀ ಸೇರಿದಂತೆ ಇತರರು ವಾದ ಮಾಡಿದ್ದರು.

ಆಧಾರ: ದಿಪ್ರಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...