HomeಮುಖಪುಟJNU ಮೇಲೆ ದಾಳಿ ಮಾಡಿದ್ದು ನಾವೇ: ಹಿಂದೂ ರಕ್ಷಾ ದಳದ ಪಿಂಕಿ ಚೌಧರಿ...

JNU ಮೇಲೆ ದಾಳಿ ಮಾಡಿದ್ದು ನಾವೇ: ಹಿಂದೂ ರಕ್ಷಾ ದಳದ ಪಿಂಕಿ ಚೌಧರಿ…

- Advertisement -
- Advertisement -

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲಿನ ದಾಳಿಯ ಜವಾಬ್ದಾರಿಯನ್ನು ಹಿಂದೂ ರಕ್ಷಾ ದಳ ಎಂಬ ಅಪರಿಚಿತ ಗುಂಪು ವಹಿಸಿಕೊಂಡಿದೆ. ಗುಂಪಿನ ನಾಯಕ ಪಿಂಕಿ ಚೌಧರಿ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದಾರೆ.

“ಜೆಎನ್‌ಯು ರಾಷ್ಟ್ರ ವಿರೋಧಿ ಚಟುವಟಿಕೆಗಳ ಕೇಂದ್ರವಾಗಿದೆ, ಇದನ್ನು ನಾವು ಸಹಿಸುವುದಿಲ್ಲ. ಜೆಎನ್‌ಯುನಲ್ಲಿ ನಡೆದ ದಾಳಿಯ ಸಂಪೂರ್ಣ ಜವಾಬ್ದಾರಿಯನ್ನು ನಾವು ತೆಗೆದುಕೊಳ್ಳುತ್ತೇವೆ ಮತ್ತು ದಾಳಿ ಮಾಡಿದವರು ನಮ್ಮ ಕಾರ್ಯಕರ್ತರು ಎಂದು ಹೇಳಲು ಬಯಸುತ್ತೇವೆ” ಎಂದು ಚೌಧರಿ ವೀಡಿಯೊದಲ್ಲಿ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ವಿಡಿಯೋ ನೋಡಿ…

ಚೌಧರಿಯವರ ಹೇಳಿಕೆ ಆಧಾರದಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು ಹಿಂಸಾಚಾರದಲ್ಲಿ ಭಾಗಿಯಾಗಿರುವವರನ್ನು ಗುರುತಿಸಲು ವಿಡಿಯೋ ತುಣುಕುಗಳ ಆಧಾರದಲ್ಲಿ ಮುಖ ಗುರುತಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಭಾನುವಾರ ನಡೆದ ಹಿಂಸಾಚಾರದಲ್ಲಿ JNUSU ಅಧ್ಯಕ್ಷ ಐಶಾ ಘೋಷ್‌ ಸೇರಿದಂತೆ 34 ಜನ ಗಾಯಗೊಂಡಿದ್ದರು. ಆ ಸಂದರ್ಭದಲ್ಲಿ ಹಿಂಸಾಚಾರವನ್ನು ತಡೆಯಲು ಪೊಲೀಸರು ಏನೂ ಮಾಡಿಲ್ಲ ಎಂದು ಕೆಲವು ವಿದ್ಯಾರ್ಥಿಗಳು ಆರೋಪಿಸಿದರು.

ದಾಳಿಯನ್ನು ಎಬಿವಿಪಿ ಕಾರ್ಯಕರ್ತರು ಮಾಡಿದ್ದಾರೆ ಎಂದು ವಿದ್ಯಾರ್ಥಿ ಸಂಘ ಆರೋಪಿಸಿತ್ತು. ಅದಕ್ಕೆ ಹಲವು ಫೋಟೊಗಳು, ವಿಡಿಯೋಗಳು ಮತ್ತು ವಾಟ್ಸಾಪ್‌ ಚಾಟ್‌ಗಳ ಸ್ಕ್ರೀನ್‌ ಶಾಟ್‌ಗಳಲ್ಲಿ ಸಾಕ್ಷಿಯಾಗಿ ತೋರಿಸಿತ್ತು. ಆದರೆ ಎಬಿವಿಪಿ ಅದನ್ನು ನಿರಾಕರಿಸಿ JNUSU ಮೇಲೆ ಆರೋಪ ಮಾಡಿತ್ತು.

ಇದನ್ನೂ ಓದಿ: ಮುಸುಕುಧಾರಿಗಳು ನಮ್ಮವರು, ಆತ್ಮರಕ್ಷಣೆಗಾಗಿ ಸಶ್ತ್ರಗಳನ್ನು ಹೊಂದಿದ್ದರು : ಒಪ್ಪಿಕೊಂಡ ABVP ದೆಹಲಿ ಜಂಟಿ ಕಾರ್ಯದರ್ಶಿ!

ಜೆಎನ್‌ಯು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರವನ್ನು ಖಂಡಿಸಿ ಸೋಮವಾರ ಭಾರತದಾದ್ಯಂತ ಪ್ರತಿಭಟನೆ ದಾಖಲಾಗಿದೆ. ಸಾವಿರಾರು ಪ್ರದೇಶಗಲ್ಲಿ ಹೋರಾಟ ನಡೆದರೆ ಮುಂಬೈನಲ್ಲಿ 1,000 ಕ್ಕೂ ಹೆಚ್ಚು ಜನರು ದಿನವೀಡಿ ಪ್ರತಿಭಟನೆ ನಡೆಸಿದ್ದಾರೆ. ಬಾಲಿವುಡ್‌ನ ಖ್ಯಾತನಾಮರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸತ್ಯ‌ವನ್ನು ಜನರಿಗೆ ತಲುಪಿಸುವ ಹೊಣೆಗಾರಿಕೆ ಈ ಪತ್ರಿಕೆಯ ಮೂಲಾಧಾರ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...