Homeಮುಖಪುಟಮೂರು ದಶಕಗಳ ಬಳಿಕ ಜೆಎನ್‌ಯು ವಿದ್ಯಾರ್ಥಿ ಸಂಘಟನೆಗೆ ದಲಿತ ಅಧ್ಯಕ್ಷರ ಆಯ್ಕೆ

ಮೂರು ದಶಕಗಳ ಬಳಿಕ ಜೆಎನ್‌ಯು ವಿದ್ಯಾರ್ಥಿ ಸಂಘಟನೆಗೆ ದಲಿತ ಅಧ್ಯಕ್ಷರ ಆಯ್ಕೆ

- Advertisement -
- Advertisement -

ದೆಹಲಿಯ ಪ್ರತಿಷ್ಠಿತ ಜವಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಎಡರಂಗದ ವಿದ್ಯಾರ್ಥಿ ಸಂಘಟನೆಗಳು ಗೆಲುವನ್ನು ಸಾಧಿಸಿದ್ದು, ಜೆಎನ್‌ಯು ವಿದ್ಯಾರ್ಥಿ ಸಂಘಟನೆಗೆ ಮೂರು ದಶಕಗಳ ಬಳಿಕ ದಲಿತ ಅಧ್ಯಕ್ಷರೋರ್ವರನ್ನು ಆಯ್ಕೆ ಮಾಡಲಾಗಿದೆ.

4 ವರ್ಷಗಳ ನಂತರ ನಡೆದ ಚುನಾವಣೆಯಲ್ಲಿ ಆಲ್ ಇಂಡಿಯಾ ಸ್ಟೂಡೆಂಟ್ ಅಸೋಸಿಯೇಶನ್‌ನ ಧನಂಜಯ್ ಅವರು ಜವಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಪ್ರತಿಸ್ಪರ್ಧಿ ಎಬಿವಿಪಿಯ ಉಮೇಶ್ ಚಂದ್ರ ಅಜ್ಮೀರಾ ಅವರಿಗಿಂತ 922 ಹೆಚ್ಚುವರಿ ಮತಗಳನ್ನು ಪಡೆದಿದ್ದಾರೆ. ಎಐಎಸ್‌ಎನ ಧನಂಜಯ್ ಅವರು 2,598 ಮತಗಳನ್ನು ಪಡೆದಿದ್ದು, ಉಮೇಶ್ ಸಿ ಅಜ್ಮೀರಾ 1,676 ಮತಗಳನ್ನು ಪಡೆದಿದ್ದಾರೆ.

ಧನಂಜಯ್ ಬಿಹಾರದ ಗಯಾ ಮೂಲದವರಾಗಿದ್ದು, 1996-97ರಲ್ಲಿ ಚುನಾಯಿತರಾದ ಬಟ್ಟಿ ಲಾಲ್ ಬೈರ್ವಾ ನಂತರ ಎಡಪಕ್ಷದಿಂದ ಆಯ್ಕೆಯಾದ ಮೊದಲ ದಲಿತ ಅಧ್ಯಕ್ಷರಾಗಿದ್ದಾರೆ. ಧನಂಜಯ್ ಅವರು ಸ್ಕೂಲ್ ಆಫ್ ಆರ್ಟ್ಸ್ ಮತ್ತು ಸೌಂದರ್ಯಶಾಸ್ತ್ರದ ಪಿಎಚ್‌ಡಿ ವಿದ್ಯಾರ್ಥಿಯಾಗಿದ್ದಾರೆ.

ಗೆಲುವಿನ ನಂತರ ಪಿಟಿಐ ಜೊತೆ ಮಾತನಾಡಿದ ಧನಂಜಯ್, ಈ ಗೆಲುವು ಜೆಎನ್‌ಯು ವಿದ್ಯಾರ್ಥಿಗಳು ದ್ವೇಷ ಮತ್ತು ಹಿಂಸಾಚಾರದ ರಾಜಕೀಯವನ್ನು ತಿರಸ್ಕರಿಸುವ ಜನಾಭಿಪ್ರಾಯವಾಗಿದೆ. ವಿದ್ಯಾರ್ಥಿಗಳು ಮತ್ತೊಮ್ಮೆ ನಮ್ಮ ಮೇಲೆ ವಿಶ್ವಾಸವನ್ನು ತೋರಿಸಿದ್ದಾರೆ. ನಾವು ಅವರ ಹಕ್ಕುಗಳಿಗಾಗಿ ಹೋರಾಟವನ್ನು ಮುಂದುವರಿಸುತ್ತೇವೆ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿಷಯಗಳ ಮೇಲೆ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ವಿವಿ ಆವರಣದಲ್ಲಿ ವಿದ್ಯಾರ್ಥಿನಿಯರಿಗೆ ಸುರಕ್ಷತೆ, ಶುಲ್ಕ ಕಡಿತ, ವಿದ್ಯಾರ್ಥಿ ವೇತನ ಹೆಚ್ಚಳ, ಮೂಲಸೌಕರ್ಯ ಅಭಿವೃದ್ಧಿ ಮತ್ತು ನೀರಿನ ಸಮಸ್ಯೆ ಸೇರಿದಂತೆ ವಿದ್ಯಾರ್ಥಿಗಳ ಅಗತ್ಯಗಳಿಗಾಗಿ ವಿದ್ಯಾರ್ಥಿ ಸಂಘಟನೆ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.

ಎಸ್‌ಎಫ್‌ಐ ಅವಿಜಿತ್‌ ಘೋಷ್‌ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಅವರು ಎಬಿವಿಪಿಯ ದೀಪಿಕಾ ಶರ್ಮಾ ಅವರನ್ನು 927 ಮತಗಳ ಅಂತರದಿಂದ ಸೋಲಿಸಿದ್ದಾರೆ. ಘೋಷ್‌ 2,409 ಮತಗಳನ್ನು ಪಡೆದರೆ, ದೀಪಿಕಾಗೆ 1,482 ಮತಗಳು ದೊರೆತಿವೆ.

ಬಿರ್ಸಾ ಅಂಬೇಡ್ಕರ್‌ ಫುಲೆ ವಿದ್ಯಾರ್ಥಿ ಸಂಘಟನೆಯ (ಬಿಎಪಿಎಸ್‌ಎ) ಅಭ್ಯರ್ಥಿ ಪ್ರಿಯಾಂಶಿ ಆರ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಆರ್ಯ ಒಟ್ಟು 2,887 ಮತ ಪಡೆದಿದ್ದಾರೆ, ಅವರ ಪ್ರತಿಸ್ಪರ್ಧಿ ಅರ್ಜುನ್‌ ಆನಂದ್‌ 1961 ಮತಗಳನ್ನು ಪಡೆದಿದ್ದಾರೆ. ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಎಡ ಸಂಘಟನೆಗಳ ಮೊಹಮ್ಮದ್‌ ಸಾಜಿದ್‌ ಆಯ್ಕೆಯಾಗಿದ್ದಾರೆ. ಲಾಲ್ ಸಲಾಂ ಮತ್ತು ಜೈ ಭೀಮ್ ಘೋಷಣೆಗಳ ನಡುವೆ ವಿಜೇತ ವಿದ್ಯಾರ್ಥಿಗಳನ್ನು ಅವರ ಬೆಂಬಲಿಗರು ಶ್ಲಾಘಿಸಿದ್ದಾರೆ.

ಇದನ್ನು ಓದಿ: ಲೋಕಸಭಾ ಚುನಾವಣೆ 2024: ವಿರೋಧಕ್ಕೆ ಮಣಿದು ಜೈಪುರ ಅಭ್ಯರ್ಥಿಯನ್ನು ಬದಲಾಯಿಸಿದ ಕಾಂಗ್ರೆಸ್

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...