Homeಅಂತರಾಷ್ಟ್ರೀಯಅಮೆರಿಕಾ ಚುನಾವಣೆ: ಟ್ರಂಪ್ ಪಾರುಪತ್ಯದ ರಾಜ್ಯಗಳಲ್ಲಿ ಜೋ ಬೈಡೆನ್ ಗೆಲುವು!

ಅಮೆರಿಕಾ ಚುನಾವಣೆ: ಟ್ರಂಪ್ ಪಾರುಪತ್ಯದ ರಾಜ್ಯಗಳಲ್ಲಿ ಜೋ ಬೈಡೆನ್ ಗೆಲುವು!

ಬೈಡೆನ್ ಗೆಲುವು ಸಾಧಿಸಿರುವ ವಿಸ್ಕಾನ್ಸಿನ್‌ನಲ್ಲಿ ಮರು ಮತ ಏಣಿಕೆಗೆ ಟ್ರಂಪ್ ಒತ್ತಾಯಿಸಿದ್ದಾರೆ.

- Advertisement -
- Advertisement -

ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡೆನ್ 2016ರ ಚುನಾವಣೆಯಲ್ಲಿ ಡೋನಾಲ್ಡ್ ಟ್ರಂಪ್ ಜಯಗಳಿಸಿದ್ದ ಒಂದೊಂದೇ ರಾಜ್ಯಗಳನ್ನು ತಮ್ಮದಾಗಿಸಿಕೊಳ್ಳುತ್ತಿದ್ದಾರೆ. ಜೋ ಬೈಡೆನ್ ಅವರ ಗೆಲುವಿಗೆ ಟ್ರಂಪ್ ಕಳೆದ ಭಾರಿ ಜಯಗಳಿಸಿದ್ದ ಮಿಚಿಗನ್ ಕೂಡ ಸೇರುವ ನಿರೀಕ್ಷೆಯಿದೆ.

ಇತ್ತ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪೆನ್ಸಿಲ್ವೇನಿಯಾ ಮತ್ತು ಮಿಚಿಗನ್‌ನಲ್ಲಿ ಮತ ಎಣಿಕೆಯನ್ನು ನಿಲ್ಲಿಸಿ, ಅಧ್ಯಕ್ಷೀಯ ಚುನಾವಣೆಯ ಅಂತಿಮ ಫಲಿತಾಂಶಗಳನ್ನು ತಡೆಯುವ ಬೆದರಿಕೆ ಹಾಕಿದ್ದಾರೆ. ಬೈಡೆನ್ ಗೆಲುವು ಸಾಧಿಸಿರುವ ವಿಸ್ಕಾನ್ಸಿನ್‌ನಲ್ಲಿ ಮರು ಮತ ಏಣಿಕೆಗೆ ಟ್ರಂಪ್ ಒತ್ತಾಯಿಸಿದ್ದಾರೆ.

ನಿನ್ನೆ, ಟ್ರಂಪ್ ತಾವು ಜಯಗಳಿಸಿರುವುದಾಗಿ ಅನಧಿಕೃತವಾಗಿ ಘೋಷಿಸಿದರು ಮತ್ತು ಮತ ಎಣಿಕೆಯನ್ನು ನಿಲ್ಲಿಸುವಂತೆ ಒತ್ತಾಯಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವುದಾಗಿ ಹೇಳಿದ್ದರು.

ಇದನ್ನೂ ಓದಿ: ಮತದಾನದಲ್ಲಿ ವಂಚನೆ, ಸುಪ್ರೀಂಕೋರ್ಟ್‌ಗೆ ಹೋಗಲಿದ್ದೇವೆ: ಡೊನಾಲ್ಡ್ ಟ್ರಂಪ್

ಇಲ್ಲಿಯವರೆಗೆ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫ್ಲೋರಿಡಾ, ಅಲಬಾಮಾ, ಟೆನ್ನೆಸ್ಸೀ, ಒಕ್ಲಾಹೋಮ, ಇಂಡಿಯಾನಾ, ಕೆಂಟುಕಿ, ಪಶ್ಚಿಮ ವರ್ಜೀನಿಯಾ, ಜಾರ್ಜಿಯಾ, ಅಯೋವಾ, ಉತ್ತರ ಕೆರೊಲಿನಾ, ಓಹಿಯೋದಲ್ಲಿ ಮುಂದಿದ್ದಾರೆ.

ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬಿಡನ್ ವಿಸ್ಕಾನ್ಸಿನ್, ಪೆನ್ಸಿಲ್ವೇನಿಯಾ, ಕ್ಯಾಲಿಫೋರ್ನಿಯಾ, ಮೈನೆ, ವಾಷಿಂಗ್ಟನ್, ಇಲಿನಾಯ್ಸ್, ಕೋನೆಕ್ಟಿಕಟ್, ಮಿಚಿಗನ್, ಮಿನ್ನೇಸೋಟ, ವೆರ್ಮೊಂಟ್, ರೋಡೆ ಐಲೆಂಡ್, ನ್ಯೂಜೆರ್ಸಿ, ಮೇರಿಲ್ಯಾಂಡ್, ಡೆಲವೇರ್, ನೆವಾಡಾ, ನ್ಯೂ ಹ್ಯಾಮ್‌ಶೈರ್ ಮತ್ತು ವರ್ಜೀನಿಯಾದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಒಟ್ಟು 538 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು ಸ್ಪಷ್ಟ ಬಹುಮತಕ್ಕೆ 270 ಸ್ಥಾನಗಳ ಅಗತ್ಯವಿದ್ದು, ಬ್ಯುಸಿನೆಸ್ ಸ್ಟಾಂಡರ್ಡ್ ವರದಿಯ ಪ್ರಕಾರ ಜೋ ಬೈಡೆನ್ 264 ಸ್ಥಾನಗಳನ್ನು ತಮ್ಮ ತೆಕ್ಕೆಗೆ ಸೇರಿಸಿಕೊಂಡಿದ್ದರೆ, ಟ್ರಂಪ್ 214 ಸ್ಥಾನಗಳನ್ನು ಗೆದ್ದುಕೊಂಡಿದ್ದಾರೆ.


ಇದನ್ನೂ ಓದಿ: ಅಮೇರಿಕಾ ಚುನಾವಣೆ: ಗೆಲುವಿನ ತುದಿಯಲ್ಲಿರುವ ಬೈಡೆನ್; ಟ್ರಂಪ್‌ಗೆ ಹಿನ್ನಡೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...