Homeಅಂತರಾಷ್ಟ್ರೀಯಮೋದಿ ಜೊತೆ ಮಾನವ ಹಕ್ಕು, ಪತ್ರಿಕಾ ಸ್ವಾತಂತ್ರ್ಯದ ಪ್ರಾಮುಖ್ಯತೆ ಬಗ್ಗೆ ಪ್ರಸ್ತಾಪಿಸಿದ್ದೇನೆ; ವಿಯಾಟ್ನಂನಲ್ಲಿ ಜೋ ಬೈಡನ್‌...

ಮೋದಿ ಜೊತೆ ಮಾನವ ಹಕ್ಕು, ಪತ್ರಿಕಾ ಸ್ವಾತಂತ್ರ್ಯದ ಪ್ರಾಮುಖ್ಯತೆ ಬಗ್ಗೆ ಪ್ರಸ್ತಾಪಿಸಿದ್ದೇನೆ; ವಿಯಾಟ್ನಂನಲ್ಲಿ ಜೋ ಬೈಡನ್‌ ಹೇಳಿಕೆ

- Advertisement -
- Advertisement -

ಜಿ 20 ಶೃಂಗಸಭೆ ಸಭೆಯ ವೇಳೆ ಭಾರತದಲ್ಲಿ ಮಾದ್ಯಮಗಳ ಜೊತೆ ಮಾತನಾಡಲು ಅವಕಾಶ ನೀಡದಿರುವುದಕ್ಕೆ ಅಮೆರಿಕಾ ಅಧ್ಯಕ್ಷ  ಜೋ ಬೈಡನ್‌ ಕಳವಳ ವ್ಯಕ್ತಪಡಿಸಿದ್ದು, ಮೋದಿ ಜೊತೆ ಮಾತುಕತೆ ವೇಳೆ ಮಾನವ ಹಕ್ಕುಗಳು ಮತ್ತು ಪತ್ರಿಕಾ ಸ್ವಾತಂತ್ರ್ಯದ ಪ್ರಾಮುಖ್ಯತೆ ಬಗ್ಗೆ ಪ್ರಸ್ತಾಪಿಸಿರುವುದಾಗಿ ಹೇಳಿದ್ದಾರೆ.

ಜೋ ಬೈಡನ್‌- ಮೋದಿ ಜೊತೆಗಿನ ದ್ವಿಪಕ್ಷೀಯ ಮಾತುಕತೆ ಬಗ್ಗೆ ವಿಯಾಟ್ನಂನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ್ದು, ಭಾರತದಲ್ಲಿ ನಾನು ಮತ್ತು ಪ್ರಧಾನಿ ಮೋದಿ ಜೊತೆ ಮಾತನಾಡುವಾಗ ಮಾನವ ಹಕ್ಕುಗಳನ್ನು ಗೌರವಿಸುವ ಪ್ರಾಮುಖ್ಯತೆಯನ್ನು ಪ್ರಸ್ತಾಪಿಸಿದ್ದೇನೆ  ಎಂದು ಹೇಳಿದ್ದಾರೆ.

ನಾನು ಯಾವಾಗಲೂ ಹೇಳುವಂತೆ, ಮೋದಿ ಜೊತೆ ಮಾತನಾಡುವಾಗ ನಾನು ಮಾನವ ಹಕ್ಕುಗಳನ್ನು ಗೌರವಿಸುವ ಪ್ರಾಮುಖ್ಯತೆಯನ್ನು ಹೇಳಿದ್ದೇನೆ. ಸಮೃದ್ಧ ದೇಶವನ್ನು ನಿರ್ಮಿಸುವಲ್ಲಿ ನಾಗರಿಕ ಸಮಾಜ ಮತ್ತು ಮುಕ್ತ ಪತ್ರಿಕಾ ಸ್ವಾತಂತ್ರ್ಯದ ಪಾತ್ರದ ಬಗ್ಗೆ ಮಾತನಾಡಿದ್ದೇನೆ. ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಮಾನವ ಹಕ್ಕುಗಳು, ಬಹುತ್ವ ಮತ್ತು ಎಲ್ಲಾ ನಾಗರಿಕರಿಗೆ ಸಮಾನ ಅವಕಾಶಗಳ ಹಂಚಿಕೆಯ ಮೌಲ್ಯಗಳು ಯಶಸ್ಸಿಗೆ ನಿರ್ಣಾಯಕವಾಗಿವೆ ಎಂದು ಬೈಡನ್‌ ಹೇಳಿದ್ದಾರೆ.

ಭಾರತ-ಅಮೆರಿಕ ನಡುವಿನ ಸಂಬಂಧಗಳನ್ನು ಬಲಪಡಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆಗಳನ್ನು ನಡೆಸಿದ್ದೇನೆ. ಇದು ನಮಗೆ ಜಾಗತಿಕ ನಾಯಕತ್ವವನ್ನು ಪ್ರತಿಪಾದಿಸುವ  ಪ್ರಮುಖ ಕ್ಷಣವಾಗಿದೆ ಮತ್ತು ಪ್ರಪಂಚದಾದ್ಯಂತ ಇರುವ ಜನರ ಸವಾಲುಗಳನ್ನು ಪರಿಹರಿಸುವಲ್ಲಿ ನಮ್ಮ ಬದ್ಧತೆಯಾಗಿದೆ. ಅಂತರ್ಗತ ಬೆಳವಣಿಗೆ ಮತ್ತು ಸುಸ್ಥಿರ ಅಭಿವೃದ್ಧಿಗೆ ಹೂಡಿಕೆ ಮಾಡುವುದು, ಹವಾಮಾನ ಬಿಕ್ಕಟ್ಟನ್ನು ಪರಿಹರಿಸುವುದು, ಆಹಾರ ಭದ್ರತೆ ಮತ್ತು ಶಿಕ್ಷಣವನ್ನು ಬಲಪಡಿಸುವುದಾಗಿದೆ ಎಂದು ಬೈಡನ್‌ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಜೈರಾಮ್‌ ರಮೇಶ್, ಮೋದಿ, ನಾನು ಪತ್ರಿಕಾಗೋಷ್ಟಿ ನಡೆಸುವುದಿಲ್ಲ, ಇನ್ನೊಬ್ಬರಿಗೆ ನಡೆಸಲು ಬಿಡುವುದಿಲ್ಲ ಎನ್ನುವುದು ಪ್ರರಿಣಾಮ ಬೀರಿಲ್ಲ. ಭಾರತದಲ್ಲಿ ಮೋದಿಗೆ ಹೇಳಿದ ಅದೇ ವಿಚಾರವನ್ನು ವಿಯೆಟ್ನಾಂನಲ್ಲಿ ಬೈಡನ್‌ ಬಹಿರಂಗಪಡಿಸಿದ್ದಾರೆ. ಮಾನವ ಹಕ್ಕುಗಳು, ನಾಗರಿಕ ಸಮಾಜದ ಪಾತ್ರ ಮತ್ತು ಮುಕ್ತ ಮಾಧ್ಯಮದ ಪಾತ್ರವನ್ನು ಗೌರವಿಸುವ ಬಗ್ಗೆ ಹೇಳಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಕುರಿತು ಬೈಡನ್‌ ಭಾಷಣದ ತುಣುಕನ್ನು ಉಲ್ಲೇಖಿಸಿ ಟ್ವಿಟ್ ಮಾಡಿರುವ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅನುಯಾಯಿಗಳ ಪೇಜ್‌, ಭಾರತದಲ್ಲಿ ಅಮೆರಿಕಾ ಅಧ್ಯಕ್ಷ ಜೋ ಬೈಡೆನ್‌ಗೆ ಪತ್ರಿಕಾಗೋಷ್ಠಿ ನಡೆಸಲು ಅವಕಾಶ ನೀಡಲಿಲ್ಲ, ಆದ್ದರಿಂದ ಅವರು ವಿಯೆಟ್ನಾಂಗೆ ತೆರಳಿ ಶೃಂಗಸಭೆಯ ಸಂದರ್ಭದಲ್ಲಿ ಪಿಎಂ ಮೋದಿ ಅವರೊಂದಿಗೆ ಮಾನವ ಹಕ್ಕುಗಳು ಮತ್ತು ಮುಕ್ತ ಪತ್ರಿಕಾ ಕುರಿತು ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದಾರೆ ಎಂದು ಬರೆದುಕೊಂಡಿದೆ.

ಇದನ್ನು ಓದಿ: ಮಾಜಿ ಸಿಎಂ ಎನ್.ಚಂದ್ರಬಾಬು ನಾಯ್ಡುಗೆ 14 ದಿನಗಳ ನ್ಯಾಯಾಂಗ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...