Homeಮುಖಪುಟಮೋದಿ-ಬೈಡನ್‌ ದ್ವಿಪಕ್ಷೀಯ ಸಭೆ: ಮಾಧ್ಯಮಗಳಿಗೆ ಪ್ರಶ್ನೆ ಕೇಳಲು ಅವಕಾಶ ನಿರಾಕರಣೆ

ಮೋದಿ-ಬೈಡನ್‌ ದ್ವಿಪಕ್ಷೀಯ ಸಭೆ: ಮಾಧ್ಯಮಗಳಿಗೆ ಪ್ರಶ್ನೆ ಕೇಳಲು ಅವಕಾಶ ನಿರಾಕರಣೆ

- Advertisement -
- Advertisement -

ಜಿ-20 ಶೃಂಗಸಭೆಯ ಹಿನ್ನೆಲೆಯಲ್ಲಿ ನಡೆದ ಭಾರತದ ಪ್ರಧಾನಿ ಮೋದಿಯೊಂದಿಗಿನ ದ್ವಿಪಕ್ಷೀಯ ಸಭೆಯ ನಂತರ ಮಾಧ್ಯಮಗಳಿಗೆ ಜೋ ಬೈಡನ್‌ ಮತ್ತು ಪ್ರಧಾನಿ ಮೋದಿಗೆ ಪ್ರಶ್ನೆಗಳನ್ನು ಕೇಳಲು ಭಾರತವು ಅವಕಾಶ ನೀಡಿಲ್ಲ ಎಂದು ಅಮೆರಿಕಾದ ಅಧ್ಯಕ್ಷರಾದ ಜೋ ಬೈಡನ್‌ ತಂಡ ಹೇಳಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಇಂದು ಮತ್ತು ನಾಳೆ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅಮೆರಿಕಾದ ಅಧ್ಯಕ್ಷ ಜೋ ಬೈಡನ್‌ ನಿನ್ನೆ ದೆಹಲಿಗೆ ಆಗಮಿಸಿದ್ದಾರೆ.

ದ್ವಿಪಕ್ಷೀಯ ಸಭೆಯ ಬಳಿಕ ಪ್ರಧಾನಿ ಮೋದಿ ಮತ್ತು ಜೋ ಬೈಡನ್‌ ಅವರಿಗೆ ಪ್ರಶ್ನೆಗಳನ್ನು ಕೇಳಲು ಹಲವು ಬಾರಿ ಮನವಿ ಮಾಡಿಕೊಂಡರೂ ಮಾಧ್ಯಮಗಳಿಗೆ ಅವಕಾಶ ನೀಡಿಲ್ಲ. ಪ್ರಧಾನಿ ಮೋದಿ ಮತ್ತು ಜೋ ಬೈಡನ್‌ ಅವರ ದ್ವಿಪಕ್ಷೀಯ ಸಭೆಗೆ  ಮಾಧ್ಯಮ ಪ್ರವೇಶಕ್ಕಾಗಿ ಯುಎಸ್ ಮಾಡಿದ ವಿನಂತಿಗಳನ್ನು ಭಾರತ ತಿರಸ್ಕರಿಸಿದೆ ಎಂದು ಅಧ್ಯಕ್ಷ ಜೋ ಬೈಡನ್‌ ಅವರ ತಂಡವು ಹೇಳಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಎಕ್ಸ್‌(ಟ್ವಿಟರ್‌)ನಲ್ಲಿ ಬರೆದುಕೊಂಡಿದ್ದಾರೆ.

ಶ್ವೇತಭವನದಲ್ಲಿ ಅಮೆರಿಕದ ಅಧ್ಯಕ್ಷರು ವಿದೇಶಿ ನಾಯಕರಿಗೆ ಆತಿಥ್ಯ ನೀಡುವಾಗ ಸಾಮಾನ್ಯವಾದ ವ್ಯವಸ್ಥೆಯಾದ ಪತ್ರಿಕಾಗೋಷ್ಟಿಗೆ ಅವಕಾಶ ನೀಡುತ್ತಾರೆ. ಆದರೆ ಭಾರತ ಇದಕ್ಕೆ ಅವಕಾಶ ನಿರಾಕರಿಸಿದೆ ಎಂದು ಶ್ವೇತಭವನ ಹೇಳಿದೆ.

2014ರಲ್ಲಿ ಭಾರತದ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ, ಮೋದಿಯವರು ಮಾದ್ಯಮದಿಂದ ದೂರ ಸರಿದಿರುವ ಬಗ್ಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೊಳಗಾಗಿದ್ದಾರೆ. ಕೆಲ ಸಂದರ್ಶನಗಳನ್ನು ಹೊರತುಪಡಿಸಿದರೆ ಅವರು ಒಂದೇ ಒಂದು ಪತ್ರಿಕಾಗೋಷ್ಠಿಯನ್ನು ನಡೆಸಿಲ್ಲ ಎಂದು ಅವರ ಮೇಲೆ ಟೀಕೆಗಳಿವೆ.

ಭಾರತವು ಜಿ20 ಶೃಂಗ ಸಭೆಯನ್ನು ಆಯೋಜಿಸುತ್ತಿದೆ ಮತ್ತು ಅದಕ್ಕೆ ಬೇಕಿದ್ದ ವ್ಯವಸ್ಥೆಗಳನ್ನು ಮಾಡಿದೆ. ಆದರೆ ಪತ್ರಿಕಾಗೋಷ್ಟಿ ಪ್ರೋಟೋಕಾಲ್‌ನ ಭಾಗವಾಗಿಲ್ಲ ಎಂದು ಯುಎಸ್ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವನ್ ಹೇಳಿದ್ದಾರೆ.

ಇದನ್ನು ಓದಿ: ಹಿಮಾಚಲಪ್ರದೇಶ: ಮಾಂಸ ತಿನ್ನುವುದಿಲ್ಲ ಎಂದು ಪ್ರತಿಜ್ಞೆ ಮಾಡುವಂತೆ ವಿದ್ಯಾರ್ಥಿಗಳಿಗೆ ಹೇಳಿದ ಐಐಟಿ ನಿರ್ದೇಶಕ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...