Homeಅಂತರಾಷ್ಟ್ರೀಯಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

- Advertisement -
- Advertisement -

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

“ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ ಟ್ರಂಪ್ ಈ ಯುದ್ಧವನ್ನು ಪ್ರಾರಂಭಿಸಿದ್ದಾರೆ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತನ್ನ ಆತ್ಮ ಸಾಕ್ಷಿಗೆ ವಿರುದ್ಧವಾಗಿ ಈ ಯುದ್ಧವನ್ನು ಬೆಂಬಲಿಸಲು ಸಾಧ್ಯವಿಲ್ಲ ಎಂದು ತಿಳಿಸಿರುವ ಜೋ ಕೆಂಟ್, ಮಂಗಳವಾರ (ಮಾ. 17) ತಮ್ಮ ರಾಜೀನಾಮೆ ಪತ್ರವನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸಲ್ಲಿಸಿದ್ದಾರೆ.

ಅಮೆರಿಕದ ಪ್ರಮುಖ ಗುಪ್ತಚರ ಸಂಸ್ಥೆಯ ಮುಖ್ಯಸ್ಥರೊಬ್ಬರು ಯುದ್ಧದ ನೀತಿಯನ್ನು ವಿರೋಧಿಸಿ ಅಧಿಕಾರದಿಂದ ಕೆಳಗಿಳಿದಿರುವುದು ಈಗ ಜಾಗತಿಕ ಚರ್ಚೆಯ ವಿಷಯವಾಗಿದೆ. ಇದು ಡೊನಾಲ್ಡ್ ಟ್ರಂಪ್‌ಗೆ ತೀವ್ರ ಮುಖಭಂಗ ಉಂಟು ಮಾಡಿದೆ ಎಂದು ಕೆಲ ವರದಿಗಳು ಹೇಳಿವೆ.

ಜೋ ಕೆಂಟ್ ತಮ್ಮ ರಾಜೀನಾಮೆ ಪತ್ರದ ಪ್ರತಿಯನ್ನು ಮಂಗಳವಾರ ಸಾಮಾಜಿಕ ಮಾಧ್ಯಮ ವೇದಿಕೆಯಾದ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಟ್ರಂಪ್ ಅವರನ್ನು ಉದ್ದೇಶಿಸಿ ಬರೆದ ಈ ಪತ್ರದಲ್ಲಿ, ಇರಾನ್ ವಿರುದ್ಧದ ಯುದ್ಧದ ಬಗ್ಗೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಈ ಯುದ್ಧವು ನೈತಿಕವಾಗಿ ಮತ್ತು ಕಾರ್ಯತಂತ್ರದ ದೃಷ್ಟಿಯಿಂದ ತಪ್ಪು” ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

“ಇರಾನ್ ಜೊತೆಗಿನ ಯುದ್ದ ನನ್ನ ಆತ್ಮ ಸಾಕ್ಷಿ ಒಪ್ಪುವುದಿಲ್ಲ. ಇರಾನ್‌ನಿಂದ ನಮಗೆ ತಕ್ಷಣಕ್ಕೆ ಯಾವುದೇ ಬೆದರಿಕೆ ಇರಲಿಲ್ಲ. ಇಸ್ರೇಲ್‌ನ ಒತ್ತಡಕ್ಕೆ ಮಣಿದು ಈ ಯುದ್ಧ ಪ್ರಾರಂಭಿಸಲಾಗಿದೆ” ಎಂದಿದ್ದಾರೆ.

ಯಾರು ಈ ಜೋ ಕೆಂಟ್?

ಜೋ ಕೆಂಟ್ (45 ವರ್ಷ) ಅವರು ಈ ಹಿಂದೆ ರಾಜಕೀಯ ಅಭ್ಯರ್ಥಿಯಾಗಿದ್ದವರು ಮತ್ತು ತೀವ್ರ ಬಲಪಂಥೀಯ ಗುಂಪುಗಳೊಂದಿಗೆ ಸಂಪರ್ಕ ಹೊಂದಿದ್ದಕ್ಕಾಗಿ ಟೀಕೆಗಳನ್ನು ಎದುರಿಸಿದವರು. ಸೇನೆಯಲ್ಲಿ ‘ಗ್ರೀನ್ ಬೆರೆಟ್’ ಆಗಿ ಸೇವೆ ಸಲ್ಲಿಸಿದ ಅನುಭವ ಹೊಂದಿರುವ ಅವರು, 2022 ಮತ್ತು 2024ರಲ್ಲಿ ವಾಷಿಂಗ್ಟನ್ ರಾಜ್ಯದಿಂದ ಕಾಂಗ್ರೆಸ್‌ಗೆ ಸ್ಪರ್ಧಿಸಿ ಸೋತಿದ್ದರು. ಅವರ ಬಲಪಂಥೀಯ ಒಲವು ಮತ್ತು ಕೆಲವು ವಿವಾದಾತ್ಮಕ ಗುಂಪುಗಳೊಂದಿಗಿನ ಸಂಬಂಧವು ಅವರ ರಾಜಕೀಯ ಜೀವನದಲ್ಲಿ ಸದಾ ಚರ್ಚೆಯ ವಿಷಯವಾಗಿತ್ತು.

ಅಮೆರಿಕ ಸೇನೆಯ ವಿಶೇಷ ಪಡೆಗಳ ಮಾಜಿ ಸೈನಿಕರಾಗಿರುವ ಕೆಂಟ್, ಇರಾಕ್ ಯುದ್ಧ ಸೇರಿದಂತೆ ಒಟ್ಟು 11 ಬಾರಿ ಸಕ್ರಿಯ ಯುದ್ಧ ಭೂಮಿಗಳಲ್ಲಿ ಕೆಲಸ ಮಾಡಿದ್ದಾರೆ. ಸುಮಾರು 20 ವರ್ಷಗಳ ಕಾಲ ಸೈನ್ಯದಲ್ಲಿದ್ದ ಅವರು ‘ಚೀಫ್ ವಾರಂಟ್ ಆಫೀಸರ್’ ಆಗಿ ನಿವೃತ್ತರಾದರು. ಇರಾಕ್ ಮಾತ್ರವಲ್ಲದೆ ಯೆಮನ್ ಮತ್ತು ಉತ್ತರ ಆಫ್ರಿಕಾದಲ್ಲೂ ಅವರು ಕಾರ್ಯಾಚರಣೆ ನಡೆಸಿದ್ದಾರೆ. ಸೈನ್ಯದಿಂದ ನಿವೃತ್ತರಾದ ನಂತರ, ಅವರು ಸಿಐಎನಲ್ಲಿ ಪ್ಯಾರಾಮಿಲಿಟರಿ ಅಧಿಕಾರಿಯಾಗಿ ಕೆಲಸ ಮಾಡಿದ್ದರು.

ಕೆಂಟ್ ಅವರ ಮೊದಲ ಪತ್ನಿ ಶಾನನ್ ಕೆಂಟ್ ಅಮೆರಿಕ ನೌಕಾಪಡೆಯ ಕ್ರಿಪ್ಟೋಲಾಜಿಕ್ ಟೆಕ್ನಿಷಿಯನ್ ಆಗಿದ್ದರು. ಅವರು 2019ರಲ್ಲಿ ಸಿರಿಯಾದ ಮನ್ಬಿಜ್‌ನಲ್ಲಿ ನಡೆದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದರು. 

ಶಾನನ್ ಅವರು ಇಬ್ಬರು ಮಕ್ಕಳನ್ನು ಬಿಟ್ಟು ಅಗಲಿದರು. ಈ ಘಟನೆಯು ಜೋ ಕೆಂಟ್ ಅವರ ಜೀವನದ ಮೇಲೆ ಆಳವಾದ ಪ್ರಭಾವ ಬೀರಿದ್ದು, ಅವರು ಇರಾನ್ ವಿರುದ್ಧದ ಯುದ್ಧವನ್ನು ವಿರೋಧಿಸಿ ರಾಜೀನಾಮೆ ನೀಡಲು ಒಂದು ಮುಖ್ಯ ಕಾರಣ ಎನ್ನಲಾಗ್ತಿದೆ.

ಸೇನೆಯಿಂದ ಹೊರಬಂದ ನಂತರ, ರಾಜಕೀಯಕ್ಕೆ ಪ್ರವೇಶಿಸುವ ಮೊದಲು ಕೆಂಟ್ ಕೇಂದ್ರ ಗುಪ್ತಚರ ಸಂಸ್ಥೆಯಲ್ಲಿ (ಸಿಐಎ) ಪ್ಯಾರಾಮಿಲಿಟರಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. 20 ವರ್ಷಗಳ ಕಾಲ ಸೈನ್ಯದಲ್ಲಿ ‘ಗ್ರೀನ್ ಬೆರೆಟ್’ ಆಗಿ ಕೆಲಸ ಮಾಡಿದ ಅನುಭವ ಹೊಂದಿದ್ದ ಅವರು, ಸಿಐಎನಲ್ಲಿನ ತಮ್ಮ ವೃತ್ತಿಜೀವನದ ನಂತರ ವಾಷಿಂಗ್ಟನ್ ರಾಜ್ಯದಿಂದ ಕಾಂಗ್ರೆಸ್‌ಗೆ ಸ್ಪರ್ಧಿಸುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟರು.

ಕಾಂಗ್ರೆಸ್‌ನಲ್ಲಿ ನೈಋತ್ಯ ವಾಷಿಂಗ್ಟನ್ ರಾಜ್ಯವನ್ನು ಪ್ರತಿನಿಧಿಸಲು ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯಾಗಿ ಎರಡು ಬಾರಿ ಕೆಂಟ್ ಪ್ರಚಾರ ನಡೆಸಿದ್ದರು. ಆದರೆ 2022 ಮತ್ತು 2024 ಎರಡೂ ಬಾರಿಯೂ ಅವರು ಸೆಂಟ್ರಿಸ್ಟ್ ಡೆಮೋಕ್ರಾಟ್ ಅಭ್ಯರ್ಥಿ ಮೇರಿ ಗ್ಲುಸೆನ್‌ಕ್ಯಾಂಪ್ ಪೆರೆಜ್ ವಿರುದ್ಧ ಸೋಲನುಭವಿಸಿದರು.

ಜೋ ಕೆಂಟ್ ಅವರು ಎರಡು ಬಾರಿ ಚುನಾವಣೆಗೆ ಸ್ಪರ್ಧಿಸಿದಾಗಲೂ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆಂಬಲ ಗಳಿಸಿದ್ದರು. ಆದಾಗ್ಯೂ, ಅವರು ಹಲವು ವಿವಾದಗಳಿಗೆ ಸಿಲುಕಿದ್ದರು. ವಿಶೇಷವಾಗಿ, ತೀವ್ರ ಬಲಪಂಥೀಯ ಗುಂಪಾದ ‘ಪ್ರೌಡ್ ಬಾಯ್ಸ್’ ಸದಸ್ಯರೊಬ್ಬರಿಗೆ ಕನ್ಸಲ್ಟಿಂಗ್ ಫೀಸ್ ಪಾವತಿಸಿದ್ದು ದೊಡ್ಡ ಮಟ್ಟದ ಟೀಕೆಗೆ ಗುರಿಯಾಗಿತ್ತು.

ಕಟ್ಟರ್ ಬಲಪಂಥೀಯ ಜೋ ಕೆಂಟ್

ಜೋ ಕೆಂಟ್ ಅವರನ್ನು ರಾಜಕೀಯ ವಿಶ್ಲೇಷಕರು ಮತ್ತು ವಿರೋಧಿಗಳು ಸಾಮಾನ್ಯವಾಗಿ ‘ಕಟ್ಟರ್ ಬಲಪಂಥೀಯ’ ಎಂದೇ ಗುರುತಿಸುತ್ತಾರೆ.

ಏಕೆಂದರೆ, ಅವರು ಈ ಹಿಂದೆ ‘ಪ್ರೌಡ್ ಬಾಯ್ಸ್’ ನಂತಹ ತೀವ್ರಗಾಮಿ ಬಲಪಂಥೀಯ ಗುಂಪಿನ ಸದಸ್ಯರಿಗೆ ಕನ್ಸಲ್ಟಿಂಗ್ ಶುಲ್ಕ ಪಾವತಿಸಿದ್ದು ದೊಡ್ಡ ವಿವಾದವಾಗಿತ್ತು.

ಕೆಂಟ್ ಅಮೆರಿಕದ ‘MAGA’ (Make America Great Again) ಆಂದೋಲನದ ಪ್ರಬಲ ಬೆಂಬಲಿಗರು. ಅವರ ವಿಚಾರಧಾರೆಗಳು ವಲಸೆ ವಿರೋಧಿ ಮತ್ತು ಅಮೆರಿಕದ ಹಿತಾಸಕ್ತಿಗೆ ಮಾತ್ರ ಒತ್ತು ನೀಡುವ ರಾಷ್ಟ್ರೀಯತೆಯನ್ನು ಒಳಗೊಂಡಿವೆ.

2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ವಾದವನ್ನು ಅವರು ಬೆಂಬಲಿಸಿದ್ದರು. ಶ್ವೇತವರ್ಣೀಯ ರಾಷ್ಟ್ರೀಯವಾದಿ ನಿಕ್ ಫ್ಯುಯೆಂಟೆಸ್ ಅವರೊಂದಿಗೆ ಅವರು ನಡೆಸಿದ ಸಂಭಾಷಣೆಯ ಬಗ್ಗೆಯೂ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು.

ಕೆಂಟ್ ಅವರು ತಾವು ಕೇವಲ ‘ಅಮೆರಿಕ ಫಸ್ಟ್’ ನೀತಿಯನ್ನು ಬೆಂಬಲಿಸುವ ರಾಷ್ಟ್ರೀಯವಾದಿ ಎಂದು ಹೇಳಿಕೊಳ್ಳುತ್ತಾರೆ. ಈಗ ಅವರು ಇರಾನ್ ಯುದ್ಧದ ವಿರುದ್ಧ ರಾಜೀನಾಮೆ ನೀಡಿರುವುದು ಅವರ ಬಲಪಂಥೀಯ ನಿಲುವಿನಲ್ಲೇ ಇರುವ ‘ಹೊರದೇಶದ ಯುದ್ಧಗಳಲ್ಲಿ ಅಮೆರಿಕ ಹಸ್ತಕ್ಷೇಪ ಮಾಡಬಾರದು’ ಎಂಬ ಸಿದ್ಧಾಂತದ ಭಾಗವಾಗಿದೆ ಎಂದು ವರದಿಗಳು ಹೇಳುತ್ತವೆ.



ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...