ವಿಶ್ವದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಸಾಕಷ್ಟು ಪ್ರಮಾಣದಲ್ಲಿದೆ. ಈ ನಿಟ್ಟಿನಲ್ಲಿ ಸಾಂಕ್ರಾಮಿಕ ರೋಗಕ್ಕೆ ಲಸಿಕೆ ಕಂಡುಹಿಡಿಯುವ ಪ್ರಯೋಗದಲ್ಲಿ ಹಲವು ಕಂಪನಿಗಳು ಕಾರ್ಯನಿರ್ವಹಿಸುತ್ತಿವೆ. ಅಂತಹ ಕಂಪನಿಗಳಲ್ಲಿ ಅಮೆರಿಕ ಮೂಲದ ಜಾನ್ಸನ್ ಮತ್ತು ಜಾನ್ಸನ್ (ಜೆ & ಜೆ) ಕಂಪೆನಿ ಕೂಡ ಒಂದು.

ಸದ್ಯಕ್ಕೆ ಜಾನ್ಸನ್ & ಜಾನ್ಸನ್ ಕಂಪನಿ ತಾನು ತಯಾರಿಸಿರುವ ಲಸಿಕೆಯ ಪ್ರಾಯೋಗಿಕ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಪ್ರಯೋಗಕ್ಕೆ ಒಳಗಾದವರಿಗೆ ಡೋಸೆಜ್‌ ನೀಡುವುದನ್ನು ನಿಲ್ಲಿಸಲಾಗಿದೆ ಎಂದು ಕಂಪನಿ ತಿಳಿಸಿದೆ.

ಅಧ್ಯಯನದಲ್ಲಿ ಭಾಗವಹಿಸಿದವರಲ್ಲಿ ವಿವರಿಸಲಾಗದ ಅನಾರೋಗ್ಯದ ಲಕ್ಷಣಗಳು ಕಾಣಿಸಿಕೊಂಡ ಕಾರಣ ಮೂರನೇ ಮತ್ತು ಅಂತಿಮ ಹಂತದ ಕ್ಲಿನಿಕಲ್ ಪ್ರಯೋಗವನ್ನು ಅ.12ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ ಎಂದು ಕಂಪನಿ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಕೊರೊನಾ ಲಸಿಕೆ ಮುಂದಿನ ವರ್ಷಕ್ಕೆ ಸಿದ್ಧವಾಗಬಹುದು: ಕೇಂದ್ರ ಸಚಿವ ಹರ್ಷವರ್ಧನ್

 

ಈ ಕಂಪನಿ ತಯಾರಿಸಿರುವ ಲಸಿಕೆಯ ಮೂರನೇ ಹಾಗೂ ಅಂತಿಮ ಹಂತದಲ್ಲಿ 60 ಸಾವಿರ ಜನರ ಮೇಲೆ ಕ್ಲಿನಿಕಲ್‌ ಪರೀಕ್ಷೆ ನಡೆಸುತ್ತಿತ್ತು.

ಕೊರೊನಾ ಲಸಿಕೆ ಪ್ರಯೋಗಗಳು ನಡೆಯುತ್ತಿರುವ ಇತರ ದೇಶಗಳ ಪಟ್ಟಿಯಲ್ಲಿ ಅರ್ಜೆಂಟಿನಾ, ಬ್ರೆಜಿಲ್, ಚಿಲಿ, ಕೊಲಂಬಿಯಾ, ಮೆಕ್ಸಿಕೊ, ಪೆರು ಮತ್ತು ದಕ್ಷಿಣ ಆಫ್ರಿಕಾ ಸೇರಿವೆ.

ಭಾರತದಲ್ಲಿ ಕೊರೊನಾ ಲಸಿಕೆ ಬಿಡುಗಡೆ ಮಾಡಲು ಇನ್ನೂ ಯಾವುದೇ ದಿನಾಂಕವನ್ನು ನಿಗದಿಪಡಿಸಿಲ್ಲ. ಮುಂದಿನ ವರ್ಷದ ಮೊದಲ ತ್ರೈಮಾಸಿಕದ ವೇಳೆಗೆ ಇದು ಸಿದ್ಧವಾಗಬಹುದು ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗದ ಪುನರಾರಂಭ: ಅನುಮತಿ ನೀಡಿದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ

Donate

ಈ ಲೇಖನ, ಈ ವೆಬ್‌ಸೈಟ್ ನಿಮಗೆ ಇಷ್ಟವಾಯಿತೇ? ನಿಮ್ಮ ಬೆಂಬಲ ಇದಕ್ಕೆ ಅಗತ್ಯ.

ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ನಿಮ್ಮ ನಿರಂತರ ಆರ್ಥಿಕ ನೆರವು ಅಗತ್ಯ. ನಿಮ್ಮಿಂದ ಸಾಧ್ಯವಿರುವಷ್ಟು ಹೆಚ್ಚಿನ ವಂತಿಗೆಯನ್ನು ನೀಡಲು ಕೆಳಗಿನ ಲಿಂಕುಗಳನ್ನು ಕ್ಲಿಕ್ಕಿಸಿ.
ಒಂದು ವೇಳೆ ಈ ಲಿಂಕಿನ ಮೂಲಕ ಹಣ ಪಾವತಿ ಮಾಡುವುದಕ್ಕೆ ಅಡಚಣೆ ಇದ್ದರೆ, ಈ ಪುಟದ ಮೇಲೆ ಅಥವಾ ಕೆಳಗೆ ಇರುವ ವಂತಿಗೆ – Donate ಬಟನ್.ಅನ್ನು ಕ್ಲಿಕ್ಕಿಸಿ.
ಧನ್ಯವಾದಗಳು
Independent journalism can’t be independent without your support, contribute by clicking below.

+ posts

LEAVE A REPLY

Please enter your comment!
Please enter your name here