Homeಮುಖಪುಟಹಿಂದಿ ಹೇರಿಕೆ ವಿರೋಧಿಸಿ ಟ್ವಿಟರ್ ಅಭಿಯಾನ, ಪ್ರತಿಭಟನೆಯಲ್ಲಿ ಪಾಲ್ಗೊಳ್ಳಿ

ಹಿಂದಿ ಹೇರಿಕೆ ವಿರೋಧಿಸಿ ಟ್ವಿಟರ್ ಅಭಿಯಾನ, ಪ್ರತಿಭಟನೆಯಲ್ಲಿ ಪಾಲ್ಗೊಳ್ಳಿ

ಹಿಂದಿಯನ್ನು ಹಿಂದಿಯೇತರ ಭಾಷಿಕ ಸಮುದಾಯಗಳ ಮೇಲೆ ಹೇರುವ ಒಕ್ಕೂಟ ಸರ್ಕಾರದ ದುರುದ್ದೇಶಗಳನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ ಸೆಪ್ಟೆಂಬರ್ 14ರಂದು ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ #StopHindiImposition ಮತ್ತು #ಹಿಂದಿಹೇರಿಕೆನಿಲ್ಲಿಸಿ ಎಂಬ ಟ್ವಿಟರ್ ಅಭಿಯಾನ ಹಮ್ಮಿಕೊಂಡಿದ್ದು, ಎಲ್ಲರೂ ಇದಕ್ಕೆ ಕೈಜೋಡಿಸಬೇಕಿದೆ.

- Advertisement -
- Advertisement -

ಇಂದು (ಸೆಪ್ಟೆಂಬರ್‌ 14) ಒಕ್ಕೂಟ ಸರ್ಕಾರ ಹಿಂದೂ ದಿವಸವನ್ನು ಆಚರಿಸುತ್ತಿದ್ದು, ಭಾರತೀಯರ ಇತರೆ ಭಾಷೆಗಳ ಮೇಲೆ ಹಿಂದಿಯನ್ನು ಹೇರುವುದು ನಿರಂತರವಾಗಿ ನಡೆಯುತ್ತಿದೆ. ಹಿಂದಿ ಭಾಷೆಗೆ ಯಾರೂ ವಿರೋಧಿಸುತ್ತಿಲ್ಲ. ಒಂದು ಭಾಷೆಯಾಗಿ ಎಲ್ಲರೂ ಹಿಂದಿಯನ್ನು ಗೌರವಿಸುತ್ತಾರೆ. ಆದರೆ ಇತರ ಭಾಷಿಗರ ಮೇಲೆ ಹಿಂದಿ ಹೇರಿಕೆಯನ್ನು ಸರ್ಕಾರ ನಿರಂತರ ಮುಂದುವರಿಸುತ್ತಿದೆ. ಉದ್ಯೋಗಗಳನ್ನು ಹಿಂದಿ ಭಾಷಿಗರು ಕಿತ್ತುಕೊಳ್ಳುತ್ತಿದ್ದಾರೆ. ಹಿಂದಿಯೇತರ ಭಾಷಿಗರ ಸಾಂಸ್ಕೃತಿಕ ಅಸ್ಮಿತೆಯನ್ನು ನಿರ್ಲಕ್ಷಿಸಲಾಗುತ್ತಿದೆ. ಈ ಧೋರಣೆಯನ್ನು ಖಂಡಿಸಿ ನಿರಂತರ ಹೋರಾಟ ನಡೆಯುತ್ತಿದೆ.

ಹಿಂದಿಯನ್ನು ಹಿಂದಿಯೇತರ ಭಾಷಿಕ ಸಮುದಾಯಗಳ ಮೇಲೆ ಹೇರುವ ಒಕ್ಕೂಟ ಸರ್ಕಾರದ ದುರುದ್ದೇಶಗಳನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ ಸೆಪ್ಟೆಂಬರ್ 14ರಂದು ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ #StopHindiImposition ಮತ್ತು #ಹಿಂದಿಹೇರಿಕೆನಿಲ್ಲಿಸಿ ಎಂಬ ಟ್ವಿಟರ್ ಅಭಿಯಾನ ಹಮ್ಮಿಕೊಂಡಿದ್ದು, ಎಲ್ಲರೂ ಇದಕ್ಕೆ ಕೈಜೋಡಿಸಬೇಕಿದೆ.

ಹಿಂದಿ ದಿವಸ, ಹಿಂದಿ ಸಪ್ತಾಹ, ಹಿಂದಿ ಪಕ್ವಾಡಾ ಇತ್ಯಾದಿ ಹೆಸರುಗಳಲ್ಲಿ ನಮ್ಮೆಲ್ಲರ ತೆರಿಗೆ ಹಣವನ್ನು ಬಳಸಿ ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿ ಹೇರಲಾಗುತ್ತಿದೆ. ಇದನ್ನು ಖಂಡಿಸಿ, ಎಲ್ಲ ಕನ್ನಡಿಗರು #StopHindiImposition ಮತ್ತು #ಹಿಂದಿಹೇರಿಕೆನಿಲ್ಲಿಸಿ ಎಂಬ ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಬೇಕು ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರು ತಮ್ಮ ಫೇಸ್‌ಬುಕ್ ಖಾತೆಯ ಮೂಲಕ ಕೋರಿದ್ದಾರೆ.

ಬಹುಭಾಷೆಗಳನ್ನು ಆಡುವ ಜನರ ನಾಡಾದ ಭಾರತವು ವಿವಿಧತೆಯಲ್ಲಿ ಏಕತೆಯನ್ನು ಪ್ರತಿಪಾದಿಸುತ್ತದೆ. ಆದರೆ ಇಡೀ ದೇಶಕ್ಕೆ ಒಂದೇ ಭಾಷೆಯಿರಬೇಕು ಎಂಬ ಕುತ್ಸಿತ ಮನಸ್ಥಿತಿಯವರಿಂದಾಗಿ ಹಿಂದಿಹೇರಿಕೆ ಎಗ್ಗಿಲ್ಲದೆ ಸಾಗುತ್ತಿದೆ. ಇದನ್ನು ನಾವು ಪ್ರಬಲವಾಗಿ ವಿರೋಧಿಸೋಣ. ಹಿಂದಿಹೇರಿಕೆಯು ಕೇವಲ ಭಾಷೆಯ ಹೇರಿಕೆಯ ವಿಷಯ ಮಾತ್ರವಲ್ಲ. ಇದು ಕನ್ನಡಿಗರೂ ಸೇರಿದಂತೆ ದೇಶದ ಇತರ ಭಾಷಿಕರ ಉದ್ಯೋಗಗಳನ್ನು ಕಿತ್ತುಕೊಳ್ಳುತ್ತಿದೆ. ಇತರ ಭಾಷಾ ಸಮುದಾಯಗಳ ಸಂಸ್ಕೃತಿ, ಪರಂಪರೆಯನ್ನು ನಗಣ್ಯಗೊಳಿಸುತ್ತಿದೆ. ಇತರ ಭಾಷಿಕರನ್ನು ಎರಡನೇ ದರ್ಜೆ ಪ್ರಜೆಗಳನ್ನಾಗಿ ಮಾಡುತ್ತಿದೆ. ನಾವು ಯಾವ ಭಾಷೆಯ ಅಥವಾ ಭಾಷಿಕರ ವಿರೋಧಿಗಳಲ್ಲ. ಆದರೆ ಸರ್ಕಾರವೇ ಒಂದು ಭಾಷೆಯನ್ನು, ನಮ್ಮದೇ ತೆರಿಗೆ ಹಣ ಬಳಸಿ, ವ್ಯವಸ್ಥಿತವಾಗಿ ನಮ್ಮ ಮೇಲೆ ಹೇರುವುದನ್ನು ಸಹಿಸುವುದು ಸಾಧ್ಯವಿಲ್ಲ. ಹಿಂದಿ ಹೇರಿಕೆಯು ದೇಶದ ಐಕ್ಯತೆಯನ್ನು ಒಡೆಯುತ್ತಿದೆ ಎಂಬುದನ್ನು ಒಕ್ಕೂಟ ಸರ್ಕಾರ ಈಗಲಾದರೂ ಅರ್ಥ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಸೆಪ್ಟೆಂಬರ್ 14ರಂದು ರಾಜ್ಯದ ಎಲ್ಲ ಜಿಲ್ಲೆ, ತಾಲ್ಲೂಕು, ಹೋಬಳಿ ಕೇಂದ್ರಗಳಲ್ಲಿ ಸಾವಿರಾರು ಬ್ಯಾಂಕ್ ಗಳ ಮುಂಭಾಗ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಸ್ಥಳೀಯ ಶಾಸಕರು, ಸಂಸದರಿಗೆ ಆಗ್ರಹ ಪತ್ರಗಳನ್ನು ನೀಡಲಿದ್ದಾರೆ. ಸಮಸ್ತ ಕನ್ನಡಿಗರು, ವಿವಿಧ ಕ್ಷೇತ್ರಗಳ ಗಣ್ಯರು ಸೆಪ್ಟೆಂಬರ್ 14 ರಂದು ಟ್ವಿಟರ್, ಫೇಸ್ ಬುಕ್, ಇನ್ಸ್ಟಾ ಗ್ರಾಂ, ವಾಟ್ಸಾಪ್, ಕ್ಲಬ್ ಹೌಸ್ ಸೇರಿದಂತೆ ಎಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿ ದಿವಸ ಆಚರಣೆ ವಿರುದ್ಧ ಧ್ವನಿ ಎತ್ತಬೇಕು ಎಂದು ಮನವಿ ಮಾಡಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ,ಒಕ್ಕೂಟ ಸರ್ಕಾರದ ಹಿಂದಿ ಹೇರಿಕೆಯನ್ನು ಪ್ರತಿಯೊಬ್ಬ ಕನ್ನಡಿಗರೂ ವಿರೋಧಿಸಬೇಕು

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...