Homeಮುಖಪುಟಬಿಜೆಪಿ ಸೇರುತ್ತಿದ್ದೇನೆ ಎನ್ನುವುದು ಮೂರ್ಖತನದ ಪ್ರಚಾರ: ಸಿದ್ದರಾಮಯ್ಯ

ಬಿಜೆಪಿ ಸೇರುತ್ತಿದ್ದೇನೆ ಎನ್ನುವುದು ಮೂರ್ಖತನದ ಪ್ರಚಾರ: ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ, ಸಮಾನತೆ, ಮೀಸಲಾತಿ ವ್ಯವಸ್ಥೆ ಪರ ಹೋರಾಡುತ್ತಾ ಬಂದಿದ್ದೇನೆ, ಬಿಜೆಪಿ ಈ ಎಲ್ಲಾ ತತ್ವಗಳಿಗೂ ವಿರುದ್ಧವಾದ ಪಕ್ಷ. ಹೀಗಿರುವಾಗ ಬಿಜೆಪಿ ಸೇರಲು ಸಾಧ್ಯವೇ?

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಸೇರುತ್ತಿದ್ದಾರೆ ಎಂಬ ಪ್ರಚಾರಕ್ಕೆ ಸ್ವತಃ ಅವರೆ ತೆರೆ ಎಳೆದಿದ್ದಾರೆ. ತಾನು ಬಿಜೆಪಿಗೆ ಸೇರುತ್ತಿದ್ದೇನೆ ಎಂದು ಪ್ರಚಾರ ಮಾಡುವುದು ಮೂರ್ಖತನ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ನಾನು ಕಾನೂನು ವಿದ್ಯಾರ್ಥಿಯಾಗಿ 1972ರಲ್ಲಿ ರಾಜಕೀಯ ಪ್ರವೇಶ ಮಾಡಿದ್ದೇನೆ. ಅಂದಿನಿಂದ ಸಾಮಾಜಿಕ ನ್ಯಾಯ, ಸಮಾನತೆ, ಮೀಸಲಾತಿ ವ್ಯವಸ್ಥೆ ಪರ ಹೋರಾಡುತ್ತಾ ಬಂದಿದ್ದೇನೆ, ಬಿಜೆಪಿ ಈ ಎಲ್ಲಾ ತತ್ವಗಳಿಗೂ ವಿರುದ್ಧವಾದ ಪಕ್ಷ. ಹೀಗಿರುವಾಗ ಬಿಜೆಪಿ ಸೇರಲು ಸಾಧ್ಯವೇ? ಇದೊಂದು ಮೂರ್ಖತನದ ಪ್ರಚಾರ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

“ಯಾರೇ ಆಗಲಿ ಒಂದು ಸಿದ್ಧಾಂತಕ್ಕೆ ಬದ್ಧವಾಗಿದ್ದಾಗ ಪದೇ ಪದೇ ಪಕ್ಷ ಬದಲಿಸುವಂತಹ ಸನ್ನಿವೇಶವೇ ಉದ್ಭವಿಸುವುದಿಲ್ಲ. ಅವಕಾಶವಾದಿ ರಾಜಕಾರಣಿಗಳು ಮಾತ್ರ ಅಧಿಕಾರ ಹುಡುಕಿಕೊಂಡು ಹೋಗುತ್ತಾರೆ. ಪ್ರಜಾಪ್ರಭುತ್ವದಲ್ಲಿ ಅಧಿಕಾರ ಜನರಿಂದ ನೇರವಾಗಿ ಸಿಗಬೇಕೇ ಹೊರತು ವಾಮಮಾರ್ಗದ ಮೂಲಕ ಅಧಿಕಾರ ಪಡೆಯಲು ಹಪಹಪಿಸಬಾರದು” ಎಂದಿದ್ದಾರೆ.

“ಬಾದಾಮಿ ಕ್ಷೇತ್ರದಲ್ಲಿ ರೂ.500 ಕೋಟಿ ವೆಚ್ಚದ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಬೇಡಿಕೆ ಇಟ್ಟಿದ್ದೇನೆ. ಯೋಜನೆ ಇನ್ನೂ ಅನುಮೋದನೆಗೊಂಡಿಲ್ಲ, ಆಗಲೇ ಬಿಜೆಪಿಯ ಕೆಲವು ನಾಯಕರು ಬಾದಾಮಿಗೆ ನಾವು ರೂ.650 ಕೋಟಿ ಕೊಟ್ಟಿದ್ದೀವಿ ಅಂತ ಪ್ರಚಾರ ಶುರು ಮಾಡಿಕೊಂಡಿದ್ದಾರೆ” ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹೆಚ್ಚುವರಿ ಹಣ ಬೇಕಾದರೆ ಸುಪ್ರೀಂಕೋರ್ಟ್‌ನಿಂದ ಮೊಕದ್ದಮೆ ಹಿಂಪಡೆಯಿರಿ: ಕೇರಳ ಸರಕಾರಕ್ಕೆ ಹೇಳಿದ ಕೇಂದ್ರ

0
ಕೇರಳದ ಪ್ರಸ್ತುತ ಅನಿಶ್ಚಿತ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚುವರಿಯಾಗಿ 11,731 ಕೋಟಿ ರೂ.ಗಳ ಸಾಲವನ್ನು ಪಡೆಯಲು ಕೇರಳಕ್ಕೆ ಅವಕಾಶ ನೀಡುವ ಬಗ್ಗೆ ಪರಿಗಣಿಸಲು ಸಿದ್ಧ ಎಂದು ಕೇಂದ್ರ ಸರ್ಕಾರ ಹೇಳಿದೆ. ಆದರೆ ರಾಜ್ಯ...