Homeಮುಖಪುಟಪ್ರತಿಭಟನೆ ನಡೆಸುತ್ತಿದ್ದ ಭಾರತೀಯ ಕಾರ್ಮಿಕರನ್ನು ಥಳಿಸಿದ ಜೋರ್ಡಾನ್ ಪೊಲೀಸರು

ಪ್ರತಿಭಟನೆ ನಡೆಸುತ್ತಿದ್ದ ಭಾರತೀಯ ಕಾರ್ಮಿಕರನ್ನು ಥಳಿಸಿದ ಜೋರ್ಡಾನ್ ಪೊಲೀಸರು

- Advertisement -
- Advertisement -

ಜೋರ್ಡಾನ್‌ನಲ್ಲಿ ಕೆಲಸ ನೀಡಿರುವ ಅಸೀಲ್ ಯೂನಿವರ್ಸಲ್ ಗಾರ್ಮೆಂಟ್ಸ್‌ನಿಂದ ಅಕ್ರಮವಾಗಿ ಇರಿಸಲ್ಪಟ್ಟಿದ್ದಾರೆ ಎನ್ನಲಾದ ಕಾರ್ಮಿಕರು ನ್ಯಾಯಾಲಯದ ಹೊರಗೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾಗ ಜೋರ್ಡನ್ ಪೊಲೀಸರು ಅಮಾನವೀಯವಾಗಿ ಥಳಿದ್ದಾರೆ ಎಂದು ‘ದಿ ನ್ಯೂಸ್ ಮಿನಿಟ್’ ವರದಿ ಮಾಡಿದೆ.

ಜ 8ರಂದು ಅವರಿಗೆ ಬರಬೇಕಾದ ಬಾಕಿ ವೇತನ ನೀಡುವಂತೆ ಒತ್ತಾಯಿಸಿ ಹಾಗೂ ಆಯಾ ದೇಶಗಳಿಗೆ ವಾಪಸ್ ಕಳುಹಿಸುವಂತೆ ಒತ್ತಾಯಿಸುತ್ತಿದ್ದರು. ಪೊಲೀಸರು ಮಾತುಕತೆ ನಡೆಸದೆ ಗುಂಪನ್ನು ಚದುರಿಸಲು ಪ್ರಯತ್ನಿಸಿದಾಗ, ಪರಿಸ್ಥಿತಿ ಉಲ್ಬಣಗೊಂಡಿದೆ. ಅವರು ಅಂತಿಮವಾಗಿ ಪ್ರತಿಭಟನಾಕಾರರ ಮೇಲೆ ಚಾರ್ಜ್ ಮಾಡಿದ್ದಾರೆ. ಈ ಘಟನೆಯಲ್ಲಿ ಏಳು ಭಾರತೀಯರು ಸೇರಿದಂತೆ, ಇತರ ದೇಶಗಳ 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಅಸೀಲ್ ಯೂನಿವರ್ಸಲ್ ಗಾರ್ಮೆಂಟ್ಸ್ ತಿಂಗಳಿನಿಂದ ಹಲವಾರು ಕಾರ್ಮಿಕರಿಗೆ ವೇತನ ನೀಡದೆ, ಕಾರ್ಮಿಕರನ್ನು ಕೆಲಸದ ಪರವಾನಗಿ ಮತ್ತು ವೀಸಾ ಕಸಿದುಕೊಂಡಿದೆ. ಭಾರತೀಯ ಪ್ರಜೆಗಳು ನವೆಂಬರ್‌ನಲ್ಲಿ ಜೋರ್ಡಾನ್‌ನ ಕಾರ್ಮಿಕ ನ್ಯಾಯಾಲಯದಲ್ಲಿ ಅಸೀಲ್ ವಿರುದ್ಧ ಪ್ರಕರಣವನ್ನು ದಾಖಲಿಸಿ ಗೆದ್ದಿದ್ದರು. ಎಲ್ಲ ಬಾಕಿಗಳನ್ನು ಪಾವತಿಸಲು ಮತ್ತು ಕಾರ್ಮಿಕರನ್ನು ಅವರ ದೇಶಗಳಿಗೆ ಕಳುಹಿಸುವಂತೆ ನ್ಯಾಯಾಲಯವು ಕಂಪನಿಗೆ ಆದೇಶಿಸಿದೆ. ಆದರೆ, ಕಂಪನಿ ಆದೇಶವನ್ನು ಪಾಲಿಸಿಲ್ಲ ಎನ್ನಲಾಗಿದೆ. ಕಾರ್ಮಿಕರಿಗೆ ನೀಡಿರುವ ವಸತಿ ಹಾಸ್ಟೆಲ್‌ಗಳಲ್ಲಿ ಆಹಾರ ಮತ್ತು ನೀರನ್ನು ನಿರಾಕರಿಸಲಾಗಿದೆ ಎಂದು ವರದಿಯಾಗಿದ್ದು, ರೊಚ್ಚಿಗೆದ್ದ ಕಾರ್ಮಿಕರು ಪ್ರತಿಭಟನೆ ನಡೆಸಿದ್ದರು.

ಜನವರಿ 8ರಂದು ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಜೋರ್ಡಾನ್ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಪ್ರತಿಭಟನಾಕಾರರ ಮೇಲೆ ಚಾರ್ಜ್ ಮಾಡಿ, ಹಲವಾರು ಜನರು ಗಾಯಗೊಂಡರು. ಗಾಯಗೊಂಡವರಲ್ಲಿ ಏಳು ಮಂದಿ ಭಾರತೀಯರು. ರಾಜೂಕುಮಾರ್, ವಿಲ್ಸನ್, ಅಮೀರ್, ಮೊಹಮ್ಮದ್ ಸಮೀಮ್, ಸಂಜಯ್, ಮುನ್ನಾ ಮತ್ತು ಸಂತೋಷ್ ಎಂದು ತಮಿಳುನಾಡಿನ ಅರಿಯಲೂರು ಮೂಲದ ಪವೇಂದನ್ ರಾಜವೇಲ್ ಅವರು ಟಿಎನ್ಎಮ್‌ಗೆ ಹೇಳಿದ್ದಾರೆ.

‘ನಾವು ಶಾಂತಿಯುತವಾಗಿ ಪ್ರತಿಭಟಿಸುತ್ತೇವೆ ಎಂದು ನಾವು ಪೊಲೀಸರೊಂದಿಗೆ ವಾದಿಸುತ್ತಿದ್ದೆವು. ಕೂಡಲೇ ಅವರು ನಮ್ಮ ಮೇಲೆ ಚಾರ್ಜ್ ಮಾಡಿ, ಅಶ್ರುವಾಯು ಹಾರಿಸಿದರು. ಶ್ರೀಲಂಕಾ ಮತ್ತು ಬಾಂಗ್ಲಾದೇಶದ ಅನೇಕ ಮಹಿಳೆಯರು ತೀವ್ರವಾಗಿ ಗಾಯಗೊಂಡಿದ್ದಾರೆ. ಉಳಿದವರು ಪ್ರಾಣ ರಕ್ಷಣೆಗಾಗಿ ಓಡಿದೆವು. ನಂತರ ನಾವು ಸಾಧ್ಯವಾದಷ್ಟು ಗಾಯಾಳುಗಳನ್ನು ಹೊತ್ತುಕೊಂಡು ಆಸ್ಪತ್ರೆಗೆ ದಾಖಲಿಸಿದೆವು’ ಎಂದು ಘಟನೆ ಬಗ್ಗೆ ವಿವರಿಸಿದ್ದಾರೆ.

ಗಾಯಗೊಂಡ ಭಾರತೀಯರಲ್ಲಿ ಒಬ್ಬರಾದ ಬಿಹಾರ ಮೂಲದ ಮುನ್ನಾ ಮಾತನಾಡಿ, ‘ಪೊಲೀಸರು ಪದೇ ಪದೇ ತನ್ನ ತಲೆಗೆ ಹೊಡೆದಿದ್ದಾರೆ. ನಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದೆವು. ಪೊಲೀಸರು ಬಂದು ಮೊದಲು ನಮ್ಮ ಪ್ಯಾಂಟ್ ಪಾಕೆಟ್‌ಗಳನ್ನು ಪರಿಶೀಲಿಸಿದರು. ನಂತರ ಬಂದು ನಮ್ಮನ್ನು ಎಳೆದುಕೊಂಡು ಹೋಗಿ ಥಳಿಸಿದ್ದಾರೆ. ಅವರು ನೇರವಾಗಿ 30 ನಿಮಿಷಗಳ ಕಾಲ ನನ್ನನ್ನು ಹೊಡೆದರು. ಅವರು ಪದೇಪದೇ ನನ್ನ ತಲೆಗೆ ಹೊಡೆದರು ಮತ್ತು ನಾವು ಮತ್ತೆ ಪ್ರತಿಭಟನೆ ಮಾಡುವ ಧೈರ್ಯ ಮಾಡಬಾರದು ಎಂದು ಹೇಳುತ್ತಲೇ ಇದ್ದರು’ ಎಂದು ಅವರು ಹೇಳಿದರು.

ಹಲವಾರು ತಿಂಗಳಿನಿಂದ ಕಾರ್ಮಿಕರಿಗೆ ಸಂಬಳ ಸಿಗದ ಕಾರಣ ಅವರಲ್ಲಿ ಹಲವರಿಗೆ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತಿಲ್ಲ. ‘ಇತರ ಕಾರ್ಖಾನೆಗಳಲ್ಲಿ ಮತ್ತು ಹತ್ತಿರದ ಹೋಟೆಲ್‌ಗಳಲ್ಲಿ ಕೆಲಸ ಮಾಡುವ ಕೆಲವು ಭಾರತೀಯರು ಬಂದು ನಮಗೆ ಸಹಾಯ ಮಾಡಿದರು. ಅವರು ನಮಗೆ ಆಹಾರವನ್ನು ಕೊಟ್ಟು, ಆಸ್ಪತ್ರೆ ಬಿಲ್ಲುಗಳನ್ನು ಪಾವತಿಸಲು ನಮಗೆ ಸಹಾಯ ಮಾಡಿದರು. ನಾವು ಭಾರತೀಯ ರಾಯಭಾರ ಕಚೇರಿಗೆ ಮಾಹಿತಿ ನೀಡಿ ಸಹಾಯ ಮಾಡುವಂತೆ ಕೇಳಿಕೊಂಡೆವು. ಅವರು ಸಹಾಯ ಮಾಡುವುದಾಗಿ ಹೇಳಿದರು. ಆದರೆ, ನಾಲ್ಕು ದಿನಗಳು ಕಳೆದಿವೆ; ಅವರು ನಮ್ಮ ರಕ್ಷಣೆಗೆ ಬಂದಿಲ್ಲ’ ಎಂದು ಪಾವೇಂದನ್ ಎನ್ನುವವರು ಅಸಮಾಧಾನ ಹೊರಹಾಕಿದ್ದಾರೆ.

120 ಭಾರತೀಯ ಕಾರ್ಮಿಕರಲ್ಲಿ, ನಾಲ್ವರು ತಮಿಳುನಾಡಿಗೆ ಸೇರಿದವರಾಗಿದ್ದು, ಹೆಚ್ಚಿನವರು ಬಿಹಾರ ಮತ್ತು ಉತ್ತರ ಪ್ರದೇಶಕ್ಕೆ ಸೇರಿದವರು.

ಇದನ್ನೂ ಓದಿ; ತಮಿಳುನಾಡು: ದಲಿತ ಯುವಕನನ್ನು ಮದುವೆಯಾದ ಯುವತಿ; ಪೋಷಕರಿಂದ ಮಾರ್ಯಾದೆಗೇಡು ಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...