Homeಮುಖಪುಟಜೋಶಿಮಠ ಕುಸಿತ ಬಿಕ್ಕಟ್ಟು: ಸ್ಥಳೀಯರಿಂದ ಹೆಚ್ಚುತ್ತಿದೆ ‘ಎನ್‌ಟಿಪಿಸಿ ಗೋಬ್ಯಾಕ್‌’ ಘೋಷಣೆ

ಜೋಶಿಮಠ ಕುಸಿತ ಬಿಕ್ಕಟ್ಟು: ಸ್ಥಳೀಯರಿಂದ ಹೆಚ್ಚುತ್ತಿದೆ ‘ಎನ್‌ಟಿಪಿಸಿ ಗೋಬ್ಯಾಕ್‌’ ಘೋಷಣೆ

- Advertisement -
- Advertisement -

ಹಾನಿಗೊಳಗಾದ ಮನೆಗಳನ್ನು ಬಿಟ್ಟು ಬರಬೇಕಾದ ಪರಿಸ್ಥಿತಿ ಇಲ್ಲಿನ ಜನಗಳದ್ದು. ಹೀಗಾಗಿ ಉತ್ತರಾಖಂಡದ ಜೋಶಿಮಠದ ನಿವಾಸಿಗಳು ಈಗ ರಾಷ್ಟ್ರೀಯ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (ಎನ್‌ಟಿಪಿಸಿ) ವಿರುದ್ಧ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರಿ ಸ್ವಾಮ್ಯದ ಇಂಧನ ದೈತ್ಯ ಕಂಪನಿಯ ಯೋಜನೆಯು ಈ ಪ್ರದೇಶದಲ್ಲಿ ಕುಸಿತಕ್ಕೆ ಕಾರಣವಾಗಿದೆ ಎಂಬ ಆರೋಪ ಎದುರಾಗಿದೆ.

“ಎನ್‌ಟಿಪಿಸಿ ಗೋ ಬ್ಯಾಕ್” ಎಂಬ ಘೋಷಣೆಯೊಂದಿಗೆ ಹಲವಾರು ಪೋಸ್ಟರ್‌ಗಳು ಕಳೆದ ಕೆಲವು ದಿನಗಳಿಂದ ಪಟ್ಟಣದಾದ್ಯಂತ ರಾರಾಜಿಸುತ್ತಿವೆ. 520 ಮೆಗಾವ್ಯಾಟ್ ತಪೋವನ ವಿಷ್ಣುಗಢ ಜಲವಿದ್ಯುತ್ ಯೋಜನೆಗಾಗಿ 12 ಕಿಮೀ ಸುರಂಗವನ್ನು ತೋಡುತ್ತಿರುವುದರಿಂದ ಈ ಪ್ರದೇಶದಲ್ಲಿ ಕುಸಿತ ಉಲ್ಬಣಗೊಂಡಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಜೋಶಿಮಠದಲ್ಲಿ ಉಂಟಾಗಿರುವ ಭೂಮಿ ಕುಸಿತದ ಕಾರಣಗಳನ್ನು ಪತ್ತೆ ಹಚ್ಚಲು ಎಂಟು ಸಂಸ್ಥೆಗಳು ತನಿಖೆ ಮಾಡುತ್ತವೆ. ಎನ್‌ಟಿಪಿಸಿ ಪಾತ್ರದ ಬಗ್ಗೆಯೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ಮಾಧ್ಯಮದ ವರದಿಗಳು ಹೇಳುತ್ತಿವೆ.

ಇಂಧನ ದೈತ್ಯ ಸಂಸ್ಥೆ ಎದುರಿಸುತ್ತಿರುವ ಆರೋಪಗಳ ಬಗ್ಗೆ ಚಮೋಲಿ ಡಿಎಂ ಹಿಮಾಂಶು ಖುರಾನಾ ‘ನ್ಯೂಸ್‌ಲಾಂಡ್ರಿ’ ಜಾಲತಾಣಕ್ಕೆ ಪ್ರತಿಕ್ರಿಯಿಸಿದ್ದಾರೆ. “ಇದೀಗ (ಎನ್‌ಟಿಪಿಸಿ) ಸ್ಥಾವರದ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ. ಈ ಸ್ಥಾವರದಿಂದ ಹಾನಿಯಾಗಿದೆ ಎಂಬ ಆರೋಪವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನಕ್ಕೆ ತರಲಾಗಿದೆ. ತಜ್ಞರು ಇದನ್ನು ಸ್ವತಂತ್ರವಾಗಿ ಪರಿಶೀಲಿಸಬೇಕು ಎಂದು ಸರ್ಕಾರಕ್ಕೆ ತಿಳಿದಿದೆ. ನಾವು ಸತ್ಯವನ್ನು ತಿಳಿದುಕೊಳ್ಳಲು ಬಯಸುತ್ತೇವೆ. ಆ ಮುಖೇನ ಆದಷ್ಟು ಬೇಗ ಕ್ರಮಕೈಗೊಳ್ಳಬಹುದು” ಎಂದಿದ್ದಾರೆ.

ಇದನ್ನೂ ಓದಿರಿ: ಉತ್ತರಖಾಂಡ್‌ನ ಜೋಶಿಮಠ ಪಟ್ಟಣ ಕುಸಿಯುತ್ತಿರುವುದೇಕೆ?

ಎನ್‌ಟಿಪಿಸಿಯನ್ನು ನಿಯಂತ್ರಿಸುವ ಕೇಂದ್ರ ವಿದ್ಯುತ್ ಸಚಿವಾಲಯವು ಜನವರಿ 10ರಂದು ಜೋಶಿಮಠ ಸಮಸ್ಯೆಯನ್ನು ಚರ್ಚಿಸಲು ಸಭೆ ಕರೆದಿತ್ತು. ಕಂಪನಿಯ ಅಧಿಕಾರಿಗಳೂ ಸಭೆಯಲ್ಲಿ ಭಾಗವಹಿಸಿದ್ದರು.

ಆದರೆ ಎನ್‌ಟಿಪಿಸಿ ಎಲ್ಲಾ ಆರೋಪಗಳನ್ನು ನಿರಾಕರಿಸಿದೆ. ತಪೋವನ ವಿಷ್ಣುಗಢ ಜಲವಿದ್ಯುತ್ ಯೋಜನೆಗೆ ಸಂಪರ್ಕ ಕಲ್ಪಿಸುವ ಸುರಂಗವು ಒಂದು ಕಿಲೋಮೀಟರ್‌ಗಿಂತಲೂ ಹೆಚ್ಚು ನೆಲದಡಿಯಲ್ಲಿದೆ ಮತ್ತು ಜೋಶಿಮಠಕ್ಕಿಂತ ಕೆಳಭಾಗದಿಲ್ಲ ಎಂದು ಕಂಪನಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಪೋವನ ಯೋಜನೆಯ ಮುಖ್ಯಸ್ಥ ಆರ್‌ಪಿ ಅಹಿರ್ವಾರ್ ಅವರನ್ನು ಈ ವಿಷಯದ ಬಗ್ಗೆ ಪ್ರಶ್ನಿಸಿದಾಗ ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದೆ. ಆದಾಗ್ಯೂ, ದುರಂತದ ಹಿಂದೆ ಇಂಧನ ದೈತ್ಯ ಸಂಸ್ಥೆಯ ಯಾವುದೇ ಪಾತ್ರವಿಲ್ಲ ಎಂದು ವಾದಿಸಲು ಎನ್‌ಟಿಪಿಸಿ ಕಡೆಯಿಂದ ಪ್ರೆಸೆಂಟೇಷನ್‌ ಬಿಡುಗಡೆ ಮಾಡಲಾಗಿದೆ. ಪವರ್ ಹೌಸ್ ಮತ್ತು ಬ್ಯಾರೇಜ್ ಸೈಟ್ ಎರಡೂ ಜೋಶಿಮಠ ಪಟ್ಟಣದಿಂದ 15 ಕಿಲೋಮೀಟರ್ ದೂರದಲ್ಲಿದೆ ಎಂದು ಎನ್‌ಟಿಪಿಸಿ ಹೇಳುತ್ತಿದೆ.

ಬಿಕ್ಕಟ್ಟಿನ ಆರಂಭದಲ್ಲಿ ಜೋಶಿಮಠದಲ್ಲಿ ಸುಮಾರು 50 ಮನೆಗಳು ಬಿರುಕು ಬಿಟ್ಟಿದ್ದವು. ಸ್ಥಳೀಯರ ಪ್ರಕಾರ ಈ ಸಂಖ್ಯೆ ಕ್ರಮೇಣ 700ಕ್ಕೆ ಏರಿಕೆಯಾಗಿದೆ. ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಎರಡು ಹೊಟೇಲ್‌ಗಳನ್ನು ನೆಲಸಮಗೊಳಿಸುವ ಕಾರ್ಯ ಆರಂಭಿಸಿದ್ದಾರೆ.

ಡಿಎಂ ಖುರಾನಾ ಅವರು ‘ನ್ಯೂಸ್‌ಲಾಂಡ್ರಿ’ ಜೊತೆ ಮಾತನಾಡಿ, “ಮುಳುಗುತ್ತಿರುವ ಪ್ರದೇಶಗಳನ್ನೂ ಒಳಗೊಂಡ ಅಪಾಯಗಳ ಮೌಲ್ಯಮಾಪನದ ಪ್ರಕಾರ ‘ಕೋರ್ ಮತ್ತು ಬಫರ್ ವಲಯಗಳು’ ಎಂದು ವಿಂಗಡಿಸಲಾಗಿದೆ. ಇಲ್ಲಿಯವರೆಗೆ, ನಾವು 169 ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದೇವೆ” ಎಂದು ಮಾಹಿತಿ ನೀಡಿದ್ದಾರೆ.

ಬದರಿನಾಥದ ಹೆಬ್ಬಾಗಿಲು ಎಂದು ಕರೆಯಲ್ಪಡುವ ಈ ಪಟ್ಟಣವು ಚಮೋಲಿ ಜಿಲ್ಲೆಯಲ್ಲಿದ್ದು ಸಮುದ್ರ ಮಟ್ಟದಿಂದ ಸುಮಾರು 6,000 ಅಡಿ ಎತ್ತರದಲ್ಲಿದೆ. ಇದು ಬಹುಮಹಡಿ ಕಟ್ಟಡಗಳು ಮತ್ತು ಹೋಟೆಲ್‌ಗಳಿಗೆ, ಚಾರ್‌ಧಾಮ್ ಯಾತ್ರಾ ಮಾರ್ಗದಂತಹ ಬೃಹತ್ ಯೋಜನೆಗಳಿಗೆ ನೆಲೆಯಾಗಿದೆ.

ಇದನ್ನೂ ಓದಿರಿ: ಜೋಶಿಮಠದಲ್ಲಿನ ಭೂಕುಸಿತದ ಬಗ್ಗೆ ಸರ್ಕಾರಿ ಸಂಸ್ಥೆಗಳು ಅಂಕಿ-ಅಂಶ ಹಂಚಿಕೊಳ್ಳಬಾರದು: ವಿಪತ್ತು ಪ್ರಾಧಿಕಾರ ಸೂಚನೆ

ಜೋಶಿಮಠದಲ್ಲಿ ಸಮಸ್ಯೆ ಹೊಸದೇನಲ್ಲ. ಸುಮಾರು 50 ವರ್ಷಗಳ ಹಿಂದೆ ಗರ್ವಾಲ್‌ನ ಆಗಿನ ಕಮಿಷನರ್ ನೇತೃತ್ವದ ಸಮಿತಿಯು ಮುಂಬರುವ ಬಿಕ್ಕಟ್ಟಿನ ಬಗ್ಗೆ ಎಚ್ಚರಿಕೆ ನೀಡಿತ್ತು. ಪರ್ವತದ ಉದ್ದಕ್ಕೂ ಅಗೆಯಬೇಡಿ ಮತ್ತು ಸ್ಫೋಟಿಸಬೇಡಿ ಅಥವಾ ಭಾರವಾದ ಕಲ್ಲುಗಳನ್ನು ತೆಗೆಯಬೇಡಿ ಎಂದು ಸಮಿತಿಯು ಆಡಳಿತಕ್ಕೆ ಎಚ್ಚರಿಕೆ ನೀಡಿತ್ತು.

ಈ ಪ್ರದೇಶ ಮುಳುಗುತ್ತಿರುವ ತ್ವರಿತ ಗತಿಯನ್ನು ಸೂಚಿಸುವ ಇಸ್ರೋ ವರದಿಯನ್ನು ಸಂಸ್ಥೆಯ ವೆಬ್‌ಸೈಟ್‌ನಿಂದ ಶುಕ್ರವಾರ ತೆಗೆದುಹಾಕಲಾಗಿದೆ. ಈ ವಿಷಯದ ತನಿಖೆ ನಡೆಸುತ್ತಿರುವ ತಜ್ಞರ ಗುಂಪು ತನ್ನ ವರದಿಯನ್ನು ಬಿಡುಗಡೆ ಮಾಡುವವರೆಗೆ ಮಾಧ್ಯಮಗಳೊಂದಿಗೆ ಅಥವಾ ಸಾಮಾಜಿಕ ಮಾಧ್ಯಮಗಳೊಂದಿಗೆ ಮಾಹಿತಿಯನ್ನು ಹಂಚಿಕೊಳ್ಳದಂತೆ ಸರ್ಕಾರಿ ಸಂಸ್ಥೆಗಳಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ.

ವರದಿ ಕೃಪೆ: ನ್ಯೂಸ್‌ಲಾಂಡ್ರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...