Homeಮುಖಪುಟಛತ್ರಪತಿ ಶಿವಾಜಿಯ ಹಾಸ್ಯ: ಹಾಸ್ಯನಟಿ ಜೋಶುವಾ ಅವರಿಗೆ ಅತ್ಯಾಚಾರದ ಬೆದರಿಕೆ

ಛತ್ರಪತಿ ಶಿವಾಜಿಯ ಹಾಸ್ಯ: ಹಾಸ್ಯನಟಿ ಜೋಶುವಾ ಅವರಿಗೆ ಅತ್ಯಾಚಾರದ ಬೆದರಿಕೆ

ಜೋಶುವ ಅವರ ಸ್ಟಾಂಡಪ್ ಹಾಸ್ಯ ವೈರಲಾಗಿದ್ದು, ಅವರ ಮನೆ, ಕಛೇರಿಯ ಮೇಲೆ ದಾಳಿ ನಡೆಸಲಾಗಿದೆ.

- Advertisement -
- Advertisement -

ಛತ್ರಪತಿ ಶಿವಾಜಿಯನ್ನು ಅವಮಾನಿಸಿದ ಆರೋಪದ ಮೇಲೆ ಮುಂಬೈ ಮೂಲದ ಸ್ಟ್ಯಾಂಡ್-ಅಪ್ ಹಾಸ್ಯನಟಿ ಅಗ್ರಿಮಾ ಜೋಶುವಾಗೆ ಅತ್ಯಾಚಾರ ಮತ್ತು ಜೀವ ಬೆದರಿಕೆ ಹಾಕಲಾಗಿದೆ.

ಜೋಶುವಾ ಅವರ ಹಾಸ್ಯಗಳು ಮಹಾರಾಷ್ಟ್ರದ ಆಡಳಿತಾರೂಡ ಪಕ್ಷ ಶಿವಸೇನೆಯನ್ನು ಅಸಮಾಧಾನಗೊಳಿಸಿದ್ದು, ಗೃಹ ಸಚಿವ ಅನಿಲ್ ದೇಶ್ಮುಖ್ ಆಕೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಭಾರಿ ನಿಂದನೆ ಎದುರಿಸಿದ ನಂತರ ಜೋಶುವಾ ಟ್ವಿಟರ್‌ನಲ್ಲಿ ಕ್ಷಮೆಯಾಚಿಸಿದ್ದರು.

ಆದರೆ ಬೆದರಿಕೆಗಳು ನಿಂತಿಲ್ಲ ಎನ್ನಲಾಗಿದ್ದು, ಯೂಟ್ಯೂಬ್‌ನಲ್ಲಿ ಭಾರಿ ಅನುಯಾಯಿಗಳನ್ನು ಹೊಂದಿರುವ ಸಾಮಾಜಿಕ ಜಾಲತಾಣ ಬಳಕೆದಾರ ಶುಭಮ್ ಮಿಶ್ರಾ ಅಸಭ್ಯ ಭಾಷೆ ಬಳಸಿ ಮತ್ತು ಜೋಶುವಾ ವಿರುದ್ಧ ಅತ್ಯಾಚಾರ ಬೆದರಿಕೆ ಹಾಕುವ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಜುಲೈ 12 ರ ಭಾನುವಾರ ವಡೋದರಾ ಪೊಲೀಸರು ಈ ವಿಷಯದಲ್ಲಿ ಸ್ವಯಂ ಪ್ರೇರಿತ ಕ್ರಮ ಕೈಗೊಂಡು, ಮಿಶ್ರಾ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಿದರು. ಈ ವಿಷಯದಲ್ಲಿ ಶೀಘ್ರದಲ್ಲೇ ಎಫ್‌ಐಆರ್ ದಾಖಲಿಸುವ ಸಾಧ್ಯತೆ ಇದೆ.

ಅನೇಕ ಸ್ಟ್ಯಾಂಡ್-ಅಪ್ ಹಾಸ್ಯನಟರು ಮತ್ತು ಬಾಲಿವುಡ್ ನಟರು ವೀಡಿಯೊದ ಬಗ್ಗೆ ಕಳವಳ ವ್ಯಕ್ತಪಡಿಸಿದ ನಂತರ, ರಾಷ್ಟ್ರೀಯ ಮಹಿಳಾ ಆಯೋಗವು ಈ ವಿಷಯವನ್ನು ಗಣನೆಗೆ ತೆಗೆದುಕೊಂಡಿದೆ. ಮಿಶ್ರಾ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಗುಜರಾತ್ ಪೊಲೀಸರನ್ನು ಕೋರಲಾಗಿದೆ ಎಂದು ಟ್ವಿಟ್ಟರ್ನಲ್ಲಿ ಬರೆದಿದೆ.

ಅಗ್ರಿಮಾ ಜೋಶುವಾ ವಿವಾದದ ಮಧ್ಯೆ ಏಕೆ?

ಮುಂಬೈನ ಖಾರ್ (ಪಶ್ಚಿಮ) ದಲ್ಲಿ ಹಾಸ್ಯ ಮತ್ತು ಸಂಗೀತ ಕೆಫೆಯಲ್ಲಿ ಪ್ರದರ್ಶನ ನೀಡುತ್ತಿರುವ ಜೋಶುವಾ ಅವರ ಹಳೆಯ ವಿಡಿಯೋ ವೈರಲ್ ಆಗಿದ್ದು, ಅಲ್ಲಿ ಅರೇಬಿಯನ್ ಸಮುದ್ರದಲ್ಲಿ ಮರಾಠಾ ರಾಜನ ಮುಂಬರುವ ಪ್ರತಿಮೆಯ ಬಗ್ಗೆ ಹಾಸ್ಯ ಮಾಡಿದ್ದಾರೆ. ಕಳೆದ ವರ್ಷ ಈ ವಿಡಿಯೊ ಕೋಲಾಹಲ ಸೃಷ್ಟಿಸಿತ್ತು, ಈಗ ಮತ್ತೊಮ್ಮೆ ಶಿವಸೇನೆಯ ಥಾಣೆ ಶಾಸಕ ಪ್ರತಾಪ್ ಸರ್ನಾಯಕ್ ಅವರು ಜೋಶುವಾ ಅವರ ಬಂಧನಕ್ಕೆ ಒತ್ತಾಯಿಸಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರಿಗೆ ಪತ್ರ ಬರೆದಿದ್ದಾರೆ.

ಪ್ರಸ್ತುತ ಡಿಲೀಟ್ ಮಾಡಲಾಗಿರುವ ವೀಡಿಯೊದಲ್ಲಿ, ಅರಬ್ಬಿ ಸಮುದ್ರದಲ್ಲಿ ನಿರ್ಮಿಸುವ ರಾಜ್ಯ ಸರ್ಕಾರದ ಯೋಜನೆಯ ಊಹಾಪೋಹಗಳ ಬಗ್ಗೆ ಜೋಶುವ ಹಾಸ್ಯ ಮಾಡಿದ್ದರು.

ಶನಿವಾರ ಮಧ್ಯಾಹ್ನ ಈ ವಿಷಯದ ಬಗ್ಗೆ ತಿಳಿದುಕೊಂಡ ದೇಶ್ಮುಖ್ “ನಾನು ಕಾನೂನು ಕ್ರಮ ಕೈಗೊಳ್ಳುವಂತೆ ಸಿಪಿ (ಪೊಲೀಸ್ ಆಯುಕ್ತ) ಮುಂಬೈ ಮತ್ತು ಐಜಿ (ಇನ್ಸ್‌ಪೆಕ್ಟರ್ ಜನರಲ್) ಗೆ ಸೂಚನೆ ನೀಡಿದ್ದೇನೆ. ಪ್ರತಿಯೊಬ್ಬರೂ ಶಾಂತವಾಗಿರಿ, ಕಾನೂನು ತನ್ನ ಕೆಲಸವನ್ನು ಮಾಡುತ್ತದೆ” ಎಂದಿದ್ದಾರೆ.

ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜೋಶುವ ಅವರ ಮನೆ, ಕಛೇರಿಯ ಮೇಲೆ ದಾಳಿ ನಡೆಸಲಾಗಿದೆ.

ವಿವಾದ ಹೆಚ್ಚಾಗುತ್ತಿದ್ದಂತೆ, ಜೋಶುವಾ ಟ್ವಿಟರ್‌ನಲ್ಲಿ ಕ್ಷಮೆಯಾಚಿಸಿದರು. “ಮಹಾನ್ ನಾಯಕ ಛತ್ರಪತಿ ಶಿವಾಜಿ ಮಹಾರಾಜರ ಅನೇಕ ಅನುಯಾಯಿಗಳ ಭಾವನೆಗಳನ್ನು ನೋಯಿಸಿದ್ದಕ್ಕಾಗಿ ನನಗೆ ವಿಷಾದವಿದೆ. ನಾನು ಪ್ರಾಮಾಣಿಕವಾಗಿ ಗೌರವಿಸುವ ಮಹಾನ್ ನಾಯಕನ ಅನುಯಾಯಿಗಳಿಗೆ ಹೃತ್ಪೂರ್ವಕವಾಗಿ ಕ್ಷಮೆಯಾಚಿಸುತ್ತೇವೆ. ವೀಡಿಯೊವನ್ನು ಈಗಾಗಲೇ ತೆಗೆದುಹಾಕಲಾಗಿದೆ. ದಯವಿಟ್ಟು ಕ್ಷಮಿಸಿ ಎಂದು ಜೋಶುವಾ ಕೇಳಿಕೊಂಡಿದ್ದಾರೆ.


ಇದನ್ನೂ ಓದಿ: ಆನ್‌ಲೈನ್ ಪರೀಕ್ಷೆ ನಡೆಸುವ ನಿರ್ಧಾರವನ್ನು ವಿರೋಧಿಸಿ ಬೆಂಗಳೂರು ಕ್ರೈಸ್ಟ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...