Homeಮುಖಪುಟಪ್ರತಿಭಟನೆಗೆ ಕರೆ ನೀಡಿದ ಪತ್ರಕರ್ತ ಆಕಾರ್ ಪಟೇಲ್ ಟ್ವಿಟ್ಟರ್ ಖಾತೆ ಭಾರತದಲ್ಲಿ ನಿರ್ಬಂಧ!

ಪ್ರತಿಭಟನೆಗೆ ಕರೆ ನೀಡಿದ ಪತ್ರಕರ್ತ ಆಕಾರ್ ಪಟೇಲ್ ಟ್ವಿಟ್ಟರ್ ಖಾತೆ ಭಾರತದಲ್ಲಿ ನಿರ್ಬಂಧ!

- Advertisement -
- Advertisement -

ಪತ್ರಕರ್ತ ಆಕಾರ್ ಪಟೇಲ್ ಅವರ ಖಾತೆಯನ್ನು ಟ್ವಿಟ್ಟರ್‌ ಭಾರತದಲ್ಲಿ ನಿರ್ಬಂಧಿಸಿದೆ. ಆಫ್ರಿಕನ್ ಅಮೆರಿಕನ್‌ ಜಾರ್ಜ್‌ ಫ್ಲಾಯ್ಡ್‌ರನ್ನು ಪೊಲೀಸರು ಹತ್ಯೆಗೈದ ವಿರುದ್ಧ ಅಮೆರಿಕದಲ್ಲಿ ಪ್ರಸ್ತುತ ನಡೆಯುತ್ತಿರುವ ಪ್ರತಿಭಟನೆಗಳನ್ನು ‍ಭಾರತದ ತಳಸಮುದಾಯದ ಗುಂಪುಗಳು ಸಹ ಅನುಕರಿಸಬೇಕು ಎಂದು ಅವರು ಕರೆ ನೀಡಿದ್ದರು. ಆನಂತರ ಅವರ ಮೇಲೆ ಎಫ್‌ಐಆರ್‌ ದಾಖಲಾಗಿದ್ದಲ್ಲದೇ ಈಗ ಅವರ ಟ್ವಿಟ್ಟರ್‌ ಖಾತೆಯನ್ನು ನಿರ್ಬಂಧಿಸಲಾಗಿದೆ.

ಆಕಾರ್‌ ಪಟೇಲ್‌ಗೆ ನೀಡಿದ ನೋಟಿಸ್‌ನಲ್ಲಿ, ಅವರ ಖಾತೆಯು ಭಾರತೀಯ ಕಾನೂನುಗಳನ್ನು ಉಲ್ಲಂಘಿಸಿದೆ. ಅದಕ್ಕಾಗಿ ಭಾರತದ ಬಳಕೆದಾರರಿಗಾಗಿ ನಿರ್ಬಂಧಿಸಲಾಗುವುದು, ಆದರೆ ಭಾರತದ ಹೊರಗೆ ಅದು ಕಾರ್ಯನಿರ್ವಹಿಸುತ್ತಿದೆ ಎಂದು ಟ್ವಿಟ್ಟರ್‌ ಇಂಡಿಯಾ ಹೇಳಿದೆ.

ತಮ್ಮ ವಿರುದ್ಧದ ಆರೋಪಗಳ ಬಗ್ಗೆ ತಮಗೆ ಮಾಹಿತಿ ನೀಡಿಲ್ಲ ಮತ್ತು ಯಾರು ಈ ಕ್ರಮ ಕೈಗೊಂಡಿದ್ದಾರೆ ನನಗೆ ಗೊತ್ತಿಲ್ಲ ಎಂದು ಆಕಾರ್‌ ಪಟೇಲ್‌ ತಿಳಿಸಿದ್ದಾರೆ. “ಈ ಪರಿಸ್ಥಿತಿಯಲ್ಲಿ ಕಾನೂನು ನೆರವು ಪಡೆಯಲು ಸಾಧ್ಯವಿಲ್ಲ. ಸಾಮಾಜಿಕ ಮಾಧ್ಯಮಗಳು ಪಾರದರ್ಶಕವಾಗಿರಬೇಕು, ಒಬ್ಬ ವ್ಯಕ್ತಿಯ ಖಾತೆಯನ್ನು ಏಕೆ ನಿರ್ಬಂಧಿಸಲಾಗಿದೆ ಎಂದು ಕನಿಷ್ಟ ತಿಳಿಸಬೇಕು. ಆದರೆ ನನಗೆ ಯಾವುದೇ ಮಾಹಿತಿ ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಹೋರಾಡುವ ಅಮ್ನೆಸ್ಟಿ ಇಂಟರ್ನ್ಯಾಷನಲ್ ಇಂಡಿಯಾದ ಮಾಜಿ ಮುಖ್ಯಸ್ಥರಾದ ಆಕಾರ್‌ ಪಟೇಲ್‌ ಫ್ಲಾಯ್ಡ್ ಸಾವಿನ ವಿರುದ್ಧದ ಪ್ರತಿಭಟನೆಯ ಕೆಲವು ವಿಡಿಯೋ ತುಣುಕುಗಳನ್ನು ಪೋಸ್ಟ್ ಮಾಡಿದ್ದರು. ತಮ್ಮ ಟ್ವೀಟ್‌ಗಳಲ್ಲಿ, ನಮಗೂ ಇಂತದೇ ಪ್ರತಿಭಟನೆಗಳು ಬೇಕು. ದಲಿತ, ಮುಸ್ಲಿಂ, ಆದಿವಾಸಿ, ಬಡವ ಹಾಗೂ ಮಹಿಳೆಯರ ಕಡೆಯಿಂದ, ಆಗ ವಿಶ್ವ ಗಮನಿಸುತ್ತದೆ. ಎಂದಿದ್ದರು.

ಆಕಾರ್ ಅವರ ಟ್ವೀಟಿಗೆ ಸ್ವಯಂ ಪ್ರೇರಿತ ದೂರು ದಾಖಲಿಸಿರುವ ಜೆಸಿ ನಗರದ ಪೊಲೀಸರು, ಅಮೆರಿಕಾದಲ್ಲಿ ನಡೆದ ರೀತಿಯ ಪ್ರತಿಭಟನೆ ಮಾಡುವಂತೆ ಕರೆ ಕೊಟ್ಟಿರುವ ಅವರು ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ‘ಅಮೇರಿಕಾದ ರೀತಿಯಲ್ಲಿ ಪ್ರತಿಭಟನೆ ಮಾಡಬೇಕು’ ಎಂದ ಲೇಖಕ ಆಕಾರ್ ಪಟೇಲ್ ವಿರುದ್ದ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...