Homeಮುಖಪುಟ‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

- Advertisement -
- Advertisement -

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ.

ಬಿಜೆಪಿಯ ಹನುಮಂಗಂಜ್ ಮಂಡಲ ಘಟಕದ ಪ್ರಧಾನ ಕಾರ್ಯದರ್ಶಿ ಅಮರೀಶ್ ಕುಮಾರ್ ಪಾಂಡೆ ಅವರು ನೀಡಿದ ದೂರಿನ ಮೇರೆಗೆ ನಗರ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.

ಎಫ್‌ಐಆರ್ ಪ್ರಕಾರ, ಪವನ್ ತಿವಾರಿ ಎಂದು ಗುರುತಿಸಲಾದ ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 196(1)(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದು ಧರ್ಮ, ಜನಾಂಗ ಅಥವಾ ಜನ್ಮಸ್ಥಳದಂತಹ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದಕ್ಕೆ ಸಂಬಂಧಿಸಿದೆ.

ಭಾನುವಾರ ಅಪ್‌ಲೋಡ್ ಮಾಡಲಾದ ಪೋಸ್ಟ್‌ನಲ್ಲಿ ಮುಖ್ಯಮಂತ್ರಿಯ ಕುರಿತು “ಆಕ್ಷೇಪಾರ್ಹ” ಚಿತ್ರ ಮತ್ತು “ವಿವಾದಾತ್ಮಕ ಶೀರ್ಷಿಕೆ” ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾಮಾಜಿಕ ಸಾಮರಸ್ಯವನ್ನು ಕದಡುವ, ನಿರ್ದಿಷ್ಟ ಸಮುದಾಯವನ್ನು ಪ್ರಚೋದಿಸುವ ಮತ್ತು ಅಶಾಂತಿಯನ್ನು ಸೃಷ್ಟಿಸುವ ಉದ್ದೇಶವನ್ನು ಈ ವಿಷಯ ಹೊಂದಿದೆ ಎಂದು ದೂರುದಾರರು ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬ್ರಾಹ್ಮಣನ ಭುಜವನ್ನು ಎಳೆಯುತ್ತಿರುವ ಚಿತ್ರವನ್ನು ಒಳಗೊಂಡ ಫೇಸ್‌ಬುಕ್ ಪೋಸ್ಟ್ ಅನ್ನು ತಿವಾರಿ ಹಂಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ, ಜೊತೆಗೆ “ಒಂದು ಸಂತರ ದೇಶದಲ್ಲಿ, ರಾವಣನೊಬ್ಬ ದೇಶದ ಘನತೆಯನ್ನು ಹರಿದು ಹಾಕಿದನು. ತಮ್ಮನ್ನು ತಾವು ಯೋಗಿಗಳೆಂದು ಕರೆದುಕೊಳ್ಳುವವರು ಮತ್ತು ಬ್ರಾಹ್ಮಣ ಯುವಕರ ಮೇಲೆ ಬೂಟುಗಳಿಂದ ಹೊಡೆಯುವವರು, ಸನಾತನಿಗಳು ಇದನ್ನು ಎಂದಿಗೂ ಮರೆಯುವುದಿಲ್ಲ ಎಂಬ ಹೇಳಿಕೆಯನ್ನು ದಾಖಲಿಸಿದ್ದರು. ದೂರು ದಾಖಲಾದ ನಂತರ ಪೋಸ್ಟ್ ಡಿಲೀಟ್ ಆಗಿದೆ. 

35 ವರ್ಷದ ತಿವಾರಿ ಅವರನ್ನು ಸೋಮವಾರ ಬಂಧಿಸಿ ನಂತರ ಜೈಲಿಗೆ ಕಳುಹಿಸಲಾಗಿದೆ ಎಂದು ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಕ್ಷಿತಿಜ್ ತ್ರಿಪಾಠಿ ದೃಢಪಡಿಸಿದ್ದಾರೆ. 

ಮೂಲತಃ ಬಲ್ಲಿಯಾ ಜಿಲ್ಲೆಯ ಸುಖಪುರ ಪೊಲೀಸ್ ಠಾಣೆ ಪ್ರದೇಶದ ನಿವಾಸಿಯಾಗಿದ್ದರೂ, ತಿವಾರಿ ಪ್ರಸ್ತುತ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನೆಲೆಸಿದ್ದು, ಅಲ್ಲಿ ಅವರು ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದಾರೆ. ಪೋಸ್ಟ್ ಅಪ್‌ಲೋಡ್ ಮಾಡಿದ ಸಮಯದಲ್ಲಿ ಅವರು ಕುಟುಂಬದ ವಿವಾಹದಲ್ಲಿ ಪಾಲ್ಗೊಳ್ಳಲು ತಮ್ಮ ಸ್ಥಳೀಯ ಹಳ್ಳಿಗೆ ಪ್ರಯಾಣಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ, ನಂತರ ಅದು ವೈರಲ್ ಆಗಿದೆ.

ಪ್ರಕರಣದಲ್ಲಿ ಮುಂದಿನ ಕಾನೂನು ಕ್ರಮಗಳು ನಡೆಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...