Homeಮುಖಪುಟಉತ್ತರ ಪ್ರದೇಶದ ಸಚಿವರನ್ನು ಪ್ರಶ್ನಿಸಿದ ಪತ್ರಕರ್ತನ ಬಂಧನ: ಗ್ರಾಮದ ಪರಿಸ್ಥಿತಿ ಹೀಗಿದೆ

ಉತ್ತರ ಪ್ರದೇಶದ ಸಚಿವರನ್ನು ಪ್ರಶ್ನಿಸಿದ ಪತ್ರಕರ್ತನ ಬಂಧನ: ಗ್ರಾಮದ ಪರಿಸ್ಥಿತಿ ಹೀಗಿದೆ

- Advertisement -
- Advertisement -

ಇತ್ತೀಚೆಗೆ ಉತ್ತರ ಪ್ರದೇಶದ ಪತ್ರಕರ್ತರೊಬ್ಬರು ಚುನಾವಣಾ ಸಮಯದಲ್ಲಿ ನೀಡಿದ ಭರವಸೆಗಳ ಬಗ್ಗೆ ರಾಜ್ಯ ಸಚಿವರನ್ನು ಪ್ರಶ್ನಿಸಿದ್ದಕ್ಕೆ ಬಂಧನಕ್ಕೊಳಗಾಗಿದ್ದರು. ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯ ಬುಧ್ ನಗರ  ಗ್ರಾಮಕ್ಕೆ ಭೇಟಿ ನೀಡಿರುವ ಇಂಡಿಯನ್ ಎಕ್ಸ್‌ಪ್ರೆಸ್‌ ತಂಡವು ಅಲ್ಲಿನ ಸಮಸ್ಯೆಗಳ ಸರಮಾಲೆಯನ್ನು ವರದಿ ಮಾಡಿದೆ. ಬಹುಪಾಲು ಮನೆಗಳಲ್ಲಿ ಶೌಚಾಲಯಗಳಿಲ್ಲ, ಮುಖ್ಯ ರಸ್ತೆಗೆ ಸಂಪರ್ಕವಿಲ್ಲ, ಚರಂಡಿ ನೀರು ಬೀದಿಗೆ ಹರಿಯುತ್ತಿದೆ ಎಂಬ ಕರುಣಜನಕ ಸ್ಥಿತಿಯನ್ನು ಬಿಚ್ಚಿಟ್ಟಿದೆ.

80 ವರ್ಷದ ಶಿವದೇಯಿ ಎಂಬ ಹಿರಿಯ ಮಹಿಳೆಯನ್ನು ಎಕ್ಸ್‌ಪ್ರೆಸ್‌ ಪತ್ರಕರ್ತರು ಮಾತನಾಡಿಸಿದ್ದಾರೆ. “ನನ್ನ ಜೀವಿತಾವಧಿಯಲ್ಲಿ ಶೌಚಾಲಯ ಬಳಸುವ ಭರವಸೆಯನ್ನು ಹೊಂದಿಲ್ಲ. ಆದರೆ ಈ ವಯಸ್ಸಿನಲ್ಲಿ ಹಗಲು-ರಾತ್ರಿ ಬಯಲು ಶೌಚಾಲಯಕ್ಕೆ ಹೋಗುವುದು ತ್ರಾಸದಾಯಕ” ಎಂದಿದ್ದಾರೆ.

ಸುಮಾರು 1,000 ಜನರಿರುವ ಬುಧ್ ಗ್ರಾಮದಲ್ಲಿ ಅನೇಕ ಮನೆಗಳಲ್ಲಿ ಶೌಚಾಲಯವಿಲ್ಲ. ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಮಳೆ ಬಂದಾಗ ರಸ್ತೆಗಳಲೆಲ್ಲ ನೀರು ತುಂಬಿಕೊಂಡು ನಡೆಯಲು ಆಗುವುದಿಲ್ಲ. ನಮ್ಮಂಥ ಹೀನ ಸ್ಥಿತಿ ಯಾರಿಗೂ ಬೇಡ ಅನ್ನುತ್ತಾರೆ 45 ವರ್ಷದ ಮತ್ತೊಬ್ಬ ನಿವಾಸಿ ಬಿರ್ಪಾಲ್ ಸಿಂಗ್.

“ನಮ್ಮಿಂದ ಮತ ಹಾಕಿಸಿಕೊಂಡವರು ಶಾಸಕರು, ಮಂತ್ರಿಗಳು, ಸಂಸದರಾಗಿದ್ದಾರೆ. ಆದರೆ ನಾವು ಇದ್ದ ಸ್ಥಳದಲ್ಲಿಯೇ ಉಳಿದಿದ್ದೇವೆ. ಬಯಲು ಶೌಚ ಮುಕ್ತ ಗ್ರಾಮಗಳು ಎಂದು ಭಾಷಣ ಮಾಡುತ್ತಾರೆ. ಆದರೆ ನಮ್ಮ ಕುಟುಂಬದ ಎಲ್ಲಾ 10 ಸದಸ್ಯರು ಶೌಚಕ್ಕೆ ಹೊಲಗಳನ್ನು ಬಳಸುತ್ತಿದ್ದೇವೆ ಎಂದಿದ್ದಾರೆ.

ಕಳೆದ ವರ್ಷದ ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬುಧ್ ನಗರ & ಖಾಂಡ್ವಾ ಗ್ರಾಮಕ್ಕೆ ಮದುವೆ ಮಂಟಪ, ಸಾರ್ವಜನಿಕ ರಸ್ತೆ ಮತ್ತು ಸಾರ್ವಜನಿಕ ಶೌಚಾಲಯಗಳ ನಿರ್ಮಾಣ ಮಾಡಿಕೊಡುವುದಾಗಿ ಹಾಲಿ ಆ ಕ್ಷೇತ್ರದ ಶಾಸಕರು ಮತ್ತು ಮಾಧ್ಯಮಿಕ ಶಿಕ್ಷಣ ರಾಜ್ಯ ಸಚಿವರಾದ ಗುಲಾಬ್ ದೇವಿಯವರು ಭರವಸೆ ನಿಡಿದ್ದರು. ಆದರೆ ಯಾವೊಂದು ಅಭಿವೃದ್ದಿ ಕೆಲಸವೂ ಆಗಿಲ್ಲ, ಕನಿಷ್ಠ ಮೂಲಭೂತ ಸೌಲಭ್ಯಗಳು ದೊರಕಿಲ್ಲ ಎಂದು ಸ್ಥಳೀಯ ಪತ್ರಕರ್ತ ಮತ್ತು ಯೂಟ್ಯೂಬರ್ ಸಂಜಯ್ ರಾಣಾ ಎಂಬುವವರು ಇತ್ತೀಚಿಗೆ ಸಚಿವರನ್ನು ಪ್ರಶ್ನಿಸಿದ್ದರು. ಅಷ್ಟಕ್ಕೆ ಅವರ ಮೇಲೆ  “ನಕಲಿ” ಪತ್ರಕರ್ತ ಮತ್ತು ರಾಜ್ಯ ಸಚಿವರ ಕಾರ್ಯಕ್ರಮವೊಂದರಲ್ಲಿ ಸರ್ಕಾರಿ ಕೆಲಸದಲ್ಲಿ ಹಸ್ತಕ್ಷೇಪ ಮಾಡಿದ್ದಾರೆ ಎಂಬ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು.

ಸ್ಥಳೀಯ ಬಿಜೆಪಿ ಮುಖಂಡ, ಬಿಜೆವೈಎಂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶುಭಂ ರಾಘವ್ ಪೊಲೀಸ್ ದೂರು ದಾಖಲಿಸಿದ್ದರು. CrPC ಯ ಸೆಕ್ಷನ್ 151 ರ ಅಡಿಯಲ್ಲಿ ಪೊಲೀಸರು ರಾಣಾನನ್ನು ಬಂಧಿಸಿದ್ದರು. ಆನಂತರ  ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.

ಬಿಡುಗಡೆ ನಂತರ ಮಾತನಾಡಿದ ಪತ್ರಕರ್ತ ರಾಣಾ ಅವರು “ದೂರದಾರ ವ್ಯಕ್ತಿ ಬಗ್ಗೆ ನನಗೆ ಗೊತ್ತಿಲ್ಲ. ಅವರನ್ನು ನಾನು ಎಂದೂ ಭೇಟಿಯಾಗಿಲ್ಲ. ಆದರೆ ನಾನು ಏನೋ ಮಹಾ ಅಪರಾಧ ಮಾಡಿದ ಹಾಗೆ ನನ್ನ ಕೈಗೆ ಕೋಳ ಹಾಕಿ ಪೊಲೀಸರು ಮೆರವಣಿಗೆ ರಿತಿ ಕರೆದುಕೊಂಡು ಹೋದರು. 30 ಗಂಟೆಗಳ ಕಾಲ ನನ್ನನ್ನು ಬಂಧನದಲ್ಲಿಟ್ಟರು. ನಾನು ಸಚಿವರನ್ನು ಏನು ಪ್ರಶ್ನಿಸಿದ್ದೇನೆ ಎಂಬುದನ್ನು ವಿಡಿಯೋದಲ್ಲಿ ನೋಡಿ. ನಾವು ಅವರಿಗೆ ಮತ ಹಾಕಿದ್ದೇವೆ. ಹಾಗಾಗಿ ಅವರನ್ನು ಪ್ರಶ್ನಿಸುವ ಹಕ್ಕು ನಮಗಿದೆ” ಎಂದಿದ್ದಾರೆ.

ಈ ಕುರಿತು ಸಚಿವರಾದ ಗುಲಾಬ್ ದೇವಿಯವರನ್ನು ಇಂಡಿಯನ್ ಎಕ್ಸ್‌ಪ್ರೆಸ್ ಪ್ರಶ್ನಿಸಿದಾಗ, “ಶಾಸಕರು ಅನುದಾನದಿಂದ ಆ ಊರಿಗೆ ರಸ್ತೆ ಮಂಜೂರಾಗಿದೆ. ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭವಾಗುವುದು. ಜಿಲ್ಲಾ ಪಂಚಾಯ್ತಿಯಿಂದ ಒಳಚರಂಡಿ ವ್ಯವಸ್ಥೆ ಮತ್ತು ಶಾಲಾ ಆಟದ ಮೈದಾನ ವ್ಯವಸ್ಥೆ ಮಾಡಲಾಗುವುದು. ಶೌಚಾಲಯಗಳು ಎಷ್ಟಿವೆ ಎಂಬುದರ ಕುರಿತು ಸಮೀಕ್ಷೆ ನಡೆಸಲಾಗುವುದು” ಎಂದಿದ್ದಾರೆ.

ಇದನ್ನೂ ಓದಿ; ಉತ್ತರ ಪ್ರದೇಶ: ಚುನಾವಣಾ ಭರವಸೆಗಳ ಬಗ್ಗೆ ಸಚಿವರನ್ನು ಪ್ರಶ್ನಿಸಿದ ಯುಟ್ಯೂಬರ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...