Homeಮುಖಪುಟ'ಪಾಕಿಸ್ತಾನಿ' ಎಂದು ಹೀಯಾಳಿಸಿ ಥಳಿಸಿದ ಪತ್ರಕರ್ತ; ಮನನೊಂದು ಆತ್ಮಹತ್ಯೆಗೆ ಶರಣಾದ ಮುಸ್ಲಿಂ ವ್ಯಕ್ತಿ

‘ಪಾಕಿಸ್ತಾನಿ’ ಎಂದು ಹೀಯಾಳಿಸಿ ಥಳಿಸಿದ ಪತ್ರಕರ್ತ; ಮನನೊಂದು ಆತ್ಮಹತ್ಯೆಗೆ ಶರಣಾದ ಮುಸ್ಲಿಂ ವ್ಯಕ್ತಿ

- Advertisement -
- Advertisement -

ಮಹಾರಾಷ್ಟ್ರದ ಲಾತೂರ್ ಜಿಲ್ಲೆಯಲ್ಲಿ ಮೇ 3 ರಂದು ನಡೆದ ರಸ್ತೆ ಗಲಭೆಯ ಘಟನೆಯ ಸಂದರ್ಭದಲ್ಲಿ 30 ವರ್ಷದ ಮುಸ್ಲಿಂ ವ್ಯಕ್ತಿ ಅಮೀರ್ ಪಠಾಣ್ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಸ್ಥಳೀಯ ಪತ್ರಕರ್ತನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಗಲಾಟೆ ಸಂದರ್ಭದಲ್ಲಿ ಪತ್ರಕರ್ತನು ಅಮೀರ್ ಪಠಾಣ್ ಮೇಲೆ ಧರ್ಮಾಧಾರಿತವಾಗಿ ನಿಂದನೆ ಮಾಡಿದ್ದಾನೆ. ನೀನಿ ಪಾಕಿಸ್ತಾನಿಯೋ ಅಥವಾ ಕಾಶ್ಮೀರಿಯೋ” ಎಂದು ಪ್ರಶ್ನಿಸಿದ್ದಾನೆ. ಬಳಿಕ ಪಠಾಣ್ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿ ಘಟನೆಯನ್ನು ಚಿತ್ರೀಕರಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಆನ್‌ಲೈನ್‌ನಲ್ಲಿ ವೀಡಿಯೊ ಪ್ರಸಾರವಾಗಿದ್ದರಿಂದ ಪಠಾಣ ಅವಮಾನಗೊಂಡಿದ್ದು, ಪತ್ರಕರ್ತನ ಬೆದರಿಕೆಗಳಿಂದ ನೊಂದಿದ್ದ ಅವರು ಮರುದಿನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಟೆಲಿಕಾಂ ಕಂಪನಿಯಲ್ಲಿ ಹಿರಿಯ ಕಾರ್ಯನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದ ಪಠಾಣ್, ಮೇ 4 ರಂದು ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ಅವರ ಪತ್ನಿ ಸಮ್ರಿನ್ ಪಠಾಣ್ ನೀಡಿದ ದೂರಿನ ನಂತರ ಮೇ 5 ರಂದು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಔಪಚಾರಿಕ ಪ್ರಕರಣವನ್ನು ದಾಖಲಿಸಲಾಗಿದೆ.

ಡಿಜಿಟಲ್ ಸುದ್ದಿ ವೇದಿಕೆಯೊಂದಿಗೆ ಸಂಬಂಧ ಹೊಂದಿರುವ ಪತ್ರಕರ್ತ ಎಂದು ಗುರುತಿಸಲಾದ ಆರೋಪಿ ಪ್ರಸ್ತುತ ತಲೆಮರೆಸಿಕೊಂಡಿದ್ದಾನೆ. ಎಂಐಸಿಡಿ ಲಾತೂರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಥಮ ಮಾಹಿತಿ ವರದಿ (ಎಫ್‌ಐಆರ್‌) ಪ್ರಕಾರ, ಈ ಘಟನೆ ಮೇ 3 ರ ರಾತ್ರಿ ನಡೆದಿದೆ.

ಧಾರಾಶಿವ್ ಜಿಲ್ಲೆಯ ಖಾಸಗಿ ಬ್ಯಾಂಕ್‌ನಲ್ಲಿ ಉಪ ವ್ಯವಸ್ಥಾಪಕಿಯಾಗಿ ಸೇವೆ ಸಲ್ಲಿಸುತ್ತಿರುವ 29 ವರ್ಷದ ಸಮ್ರಿನ್, ತನ್ನ ಪತಿಯನ್ನು ಸಂವಿಧಾನ್ ಚೌಕ್‌ನಿಂದ ಕರೆದುಕೊಂಡು ಹೋಗಲು ಎಂದಿನಂತೆ ಕರೆ ಮಾಡಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾರೆ.

ಕರೆಯ ಸಮಯದಲ್ಲಿ, ತನ್ನ ಪತಿ ಒಬ್ಬ ವ್ಯಕ್ತಿಗೆ ತನಗೆ ನೋವುಂಟು ಮಾಡಬೇಡಿ ಎಂದು ಬೇಡಿಕೊಳ್ಳುವುದು ಹಾಗೂ ತನ್ನ ತಪ್ಪಿಲ್ಲ ಎಂದು ಮನವಿ ಮಾಡುತ್ತಿರುವುದನ್ನು ಕೇಳಿಸಿಕೊಂಡಿದ್ದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ.

“ಫೋನ್ ಕರೆಯ ಸಮಯದಲ್ಲಿ, ಇನ್ನೊಬ್ಬ ವ್ಯಕ್ತಿ ನನ್ನ ಪತಿಗೆ ತಾನು ಪತ್ರಕರ್ತ ಎಂದು ಹೇಳುವುದನ್ನು ನಾನು ಕೇಳಿಸಿಕೊಂಡೆ. ಅವನು ನನ್ನ ಪತಿ ಕಾಶ್ಮೀರದವನೋ ಅಥವಾ ಪಾಕಿಸ್ತಾನದವನೋ ಎಂದು ಪ್ರಶ್ನಿಸಿದನು. ನಂತರ ಪತಿಗೆ ಪತ್ರಕರ್ತ ಹೊಡೆದಿದ್ದಾನೆ. ನನ್ನ ಪತಿ ನೋವಿನಿಂದ ಕಿರುಚುವುದನ್ನು ನಾನು ಕೇಳಿದೆ” ಎಂದು ಸಮ್ರಿನ್ ತನ್ನ ದೂರಿನಲ್ಲಿ ತಿಳಿಸಿದ್ದಾರೆ.

ಗಾಬರಿಗೊಂಡ ಸಮ್ರಿನ್ ಸ್ಥಳಕ್ಕೆ ಧಾವಿಸಿ ನೋಡಿದಾಗ ಎಂಎಚ್‌24 ಬಿಆರ್‌ 7008 ನೋಂದಣಿ ಸಂಖ್ಯೆಯ ಕಾರನ್ನು ಸ್ಥಳದಲ್ಲಿ ಕಂಡರು. ಅದನ್ನು ದಾಳಿಕೋರ ಬಳಸಿದ್ದಾನೆಂದು ನಂಬಲಾಗಿದೆ. ಆದರೂ, ಆಕೆ ಬರುವ ಹೊತ್ತಿಗೆ, ದಾಳಿಕೋರ ಸ್ಥಳದಿಂದ ಪರಾರಿಯಾಗಿದ್ದ.

ಹಲ್ಲೆಕೋರನು ಹಲ್ಲೆಯ ಚಿತ್ರಗಳು ಮತ್ತು ವೀಡಿಯೊಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಮ್ರಿನ್ ತನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತನ್ನ ಪತಿ ಅದನ್ನು ಮುಂದುವರಿಸದಂತೆ ಬೇಡಿಕೊಂಡಳು. ಈ ಘಟನೆಯು ಅಮೀರ್ ಅವರನ್ನು ತೀವ್ರವಾಗಿ ತೊಂದರೆಗೊಳಿಸಿದೆ ಎಂದು ಅವರು ಹೇಳಿದ್ದಾರೆ.

“ತಾನು ಭಾರತೀಯನೆಂದು ಪಠಾಣ್ ಹೇಳಿದನು. ಆದರೆ ಆರೋಪಿಯು ಅವನನ್ನು ಸಾರ್ವಜನಿಕವಾಗಿ ಅವಮಾನಿಸಿ ಪಾಕಿಸ್ತಾನಿ ಎಂದು ಕರೆದು ವೀಡಿಯೊವನ್ನು ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದನು. ನೋವಿನಿಂದ ಅವರು ಇನ್ನು ಮುಂದೆ ಬದುಕಲು ಬಯಸುವುದಿಲ್ಲ ಎಂದು ಹೇಳಿದರು; ನಾನು ಅವರನ್ನು ಸಮಾಧಾನಪಡಿಸಿದೆ. ಅವರ ಒತ್ತಡ ಕಡಿಮೆ ಮಾಡಲು ಪ್ರಯತ್ನಿಸಿದೆ. ಮರುದಿನ, ವೀಡಿಯೊ ಪ್ರಸಾರವಾಗಿದೆಯೇ ಎಂದು ನೋಡಲು ಅವರು ನಿರಂತರವಾಗಿ ಇಂಟರ್ನೆಟ್ ಅನ್ನು ಪರಿಶೀಲಿಸುತ್ತಿದ್ದರು” ಎಂದು ಸಮ್ರಿನ್ ವಿವರಿಸಿದರು.

ಮೇ 4 ರ ಸಂಜೆ, ಕುಟುಂಬವರು ಮದುವೆಯ ಆರತಕ್ಷತೆಗೆ ಹೋಗುತ್ತಿದ್ದಾಗ, ಅಮೀರ್ ಅವರಿಗೆಲ್ಲಾ ಮೊದಲು ತೆರಳುವಂತೆ ಹೇಳಿದ್ದು, ಸ್ವಲ್ಪ ಹೊತ್ತಿನ ಬಳಿಕ ಸೇರುವುದಾಗಿ ಭರವಸೆ ನೀಡಿದ್ದರು. ಸುಮಾರು ಒಂದು ಗಂಟೆಯ ನಂತರ ಹಿಂತಿರುಗಿ ಬಂದು ನೋಡಿದಾಗ, ಅಮೀರ್ ಪಠಾಣ್ ದುಪಟ್ಟಾದಿಂದ ನೇಣು ಬಿಗಿದುಕೊಂಡಿರುವುದನ್ನು ಸಮ್ರಿನ್ ನೋಡಿದ್ದಾರೆ.

ಕುಟುಂಬದವರು ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಅಲ್ಲಿನ ವೈದ್ಯರು ಅವರನ್ನು ಲಾತೂರ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಂತೆ ತಿಳಿಸಿದ್ದಾರೆ. ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು.

ಕುಟುಂಬದವರು ಶಂಕಿತನ ಹೆಸರು ಮತ್ತು ವಾಹನ ನೋಂದಣಿ ಸಂಖ್ಯೆಯನ್ನು ನೀಡಿದ್ದರೂ, ಪೊಲೀಸರು ಆರಂಭದಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

“ನಾವು ಪೊಲೀಸರಿಗೆ ಕಾರು ಸಂಖ್ಯೆ ಮತ್ತು ವಾಹನ ಚಾಲಕನ ಹೆಸರನ್ನು ನೀಡಿದ್ದೇವೆ. ಆದರೆ, ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ” ಎಂದು ಸಮ್ರಿನ್ ತಂದೆ ಅತ್ತೌಲ್ಲಾ ಪಠಾಣ್ ಹೇಳಿದರು.

“ಯಾವುದೇ ಆತ್ಮಹತ್ಯೆ ಪತ್ರ ಇರಲಿಲ್ಲ. ಆಪಾದಿತ ಘಟನೆಯ ಸಮಯದಲ್ಲಿ ಸ್ಥಳದಲ್ಲಿ ಇಲ್ಲದ ಪಠಾಣ್ ಅವರ ಪತ್ನಿಯ ಹೇಳಿಕೆಯ ಆಧಾರದ ಮೇಲೆ ನಾವು ಆತ್ಮಹತ್ಯಾ ಪ್ರಚೋದನೆ ಪ್ರಕರಣವನ್ನು ದಾಖಲಿಸಿದ್ದೇವೆ. ಆರೋಪಿಯು ಮೃತ ವ್ಯಕ್ತಿಯನ್ನು ನೀವು ಪಾಕಿಸ್ತಾನಿಯೇ ಎಂದು ಕೇಳಿದ್ದಾಗಿ ಅವರು ಹೇಳಿಕೊಂಡಿದ್ದಾರೆ. ನಾವು ತನಿಖೆ ನಡೆಸುತ್ತಿದ್ದೇವೆ, ಆರೋಪಿಯನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ” ಎಂದು ಲಾತೂರ್ ಪೊಲೀಸ್ ವರಿಷ್ಠಾಧಿಕಾರಿ ಸೋಮಯ್ ಮುಂಡೆ ಹೇಳಿದ್ದಾರೆ.

ಪಾಕಿಸ್ತಾನದ ಶೆಲ್ ದಾಳಿಗೆ ಆಂಧ್ರಪ್ರದೇಶದ ಸೈನಿಕ ಮುರಳಿ ನಾಯಕ್ ಹುತಾತ್ಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...