Homeಕರ್ನಾಟಕಪತ್ರಕರ್ತರಿಗೆ ಲಂಚ ಪ್ರಕರಣ: ಬೊಮ್ಮಾಯಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ಪತ್ರಕರ್ತರಿಗೆ ಲಂಚ ಪ್ರಕರಣ: ಬೊಮ್ಮಾಯಿ ವಿರುದ್ಧ ಲೋಕಾಯುಕ್ತಕ್ಕೆ ದೂರು

- Advertisement -
- Advertisement -

ಪತ್ರಕರ್ತರಿಗೆ ಲಂಚ ನೀಡಿದ ಆರೋಪಕ್ಕೆ ಗುರಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಶಂಕರ್‌ ಪಾಗೋಜಿ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.

ಭ್ರಷ್ಟಾಚಾರದ ವಿರುದ್ಧ ಕಾನೂನಾತ್ಮಕ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಜನಾಧಿಕಾರ ಸಂಘರ್ಷ ಪರಿಷತ್‌ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಲೋಕಾಯುಕ್ತ ಮತ್ತು ಲೋಕಾಯುಕ್ತ ಪೊಲೀಸ್ ವಿಭಾಗದ ಎಡಿಜಿಪಿಗೆ ದೂರು ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡೆಕ್ಕನ್ ಹೆರಾಲ್ಡ್ ಮತ್ತು ಪ್ರಜಾವಾಣಿಯ ಪ್ರಧಾನ/ಮುಖ್ಯ ವರದಿಗಾರರಿಬ್ಬರಿಗೆ ದೀಪಾವಳಿ ಹಬ್ಬದ ಸೋಗಿನಲ್ಲಿ ಸ್ವೀಟ್ ಬಾಕ್ಸ್‌ನೊಂದಿಗೆ 1 ಲಕ್ಷ ರೂ. ನಗದನ್ನಿರಿಸಿ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಶಂಕರ್ ಪಾಗೋಜಿ ಎಂಬುವರು ನಗದು ನೀಡಿದ್ದಾರೆ ಎಂದು ದೂರಿರುವ ಜನಾಧಿಕಾರ ಸಂಘರ್ಷ ಪರಿಷತ್‌, ಮುಖ್ಯಮಂತ್ರಿ ಮತ್ತು ಮಾಧ್ಯಮ ಸಂಯೋಜಕರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ 2018ರ ತಿದ್ದುಪಡಿ ಅಧಿನಿಯಮದ ಅನ್ವಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿರುವುದಾಗಿ ‘ದಿ ಫೈಲ್‌’ ವರದಿ ಮಾಡಿದೆ.

“ವಿಶ್ವಾಸನೀಯ ಮೂಲಗಳ ಪ್ರಕಾರ ಡೆಕ್ಕನ್ ಹೆರಾಲ್ಡ್‌ನ ಮುಖ್ಯ ವರದಿಗಾರ ಭರತ್‌ ಜೋಷಿ ಅವರಿಗೆ ತಲುಪಿಸಿದ್ದ ಸ್ವೀಟ್ ಬಾಕ್ಸ್‌ನಲ್ಲಿಯೇ 1 ಲಕ್ಷ ರೂ. ನಗದನ್ನು ತಲುಪಿಸಲಾಗಿತ್ತು. ಇದು ಅವರ ಗಮನಕ್ಕೆ ಬಂದ ನಂತರ ಡೆಕ್ಕನ್ ಹೆರಾಲ್ಡ್‌ನ ಸಂಪಾದಕರು ಮತ್ತು ಸಿಇಒ ಅವರ ಗಮನಕ್ಕೆ ತಂದು ಅವರ ಸೂಚನೆಯಂತೆ ಹಣವನ್ನು ಹಿಂದಿರುಗಿಸಿದ್ದಾರೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಪ್ರಜಾವಾಣಿಯ ಮುಖ್ಯ ವರದಿಗಾರ ವೈ.ಗ.ಜಗದೀಶ್ ಅವರಿಗೂ ಹಣ ತಲುಪಿಸಲಾಗಿತ್ತು. ಈ ಬಗ್ಗೆ ಖುದ್ದು ಜಗದೀಶ್‌ ಅವರೇ ಹಣ ಪಡೆದಿದ್ದನ್ನು ಖಚಿತಪಡಿಸಿ ಒಪ್ಪಿಕೊಂಡಿದ್ದರು. ಇವರೂ ಸಹ ಸಂಸ್ಥೆಯ ಸಿಇಒ ಮತ್ತು ಸಂಪಾದಕರ ಗಮನಕ್ಕೆ ತಂದು ಹಣವನ್ನು ಹಿಂದಿರುಗಿಸಿದ್ದರು. ಅಲ್ಲದೇ ಜಗದೀಶ್ ಅವರೇ ಒಪ್ಪಿಕೊಂಡಿರುವಂತೆ ಈ ಸಂಬಂಧ ಮುಖ್ಯಮಂತ್ರಿ ಅವರಿಗೆ ಸಂಸ್ಥೆಯಿಂದ ಖಂಡನಾ ಪತ್ರವನ್ನು ಬರೆಯಲಾಗಿದೆ. ಇದಕ್ಕೆ ಮುಖ್ಯಮಂತ್ರಿ ಅವರು ಕ್ಷಮೆಯನ್ನೂ ಯಾಚಿಸಿದ್ದಾರೆ.”

“ಮುಖ್ಯಮಂತ್ರಿ ವಿರುದ್ಧ ಕೇಳಿ ಬಂದಿರುವ ಭ್ರಷ್ಟಾಚಾರದ ಆರೋಪ, ಕೆಟ್ಟ ಆಡಳಿತದ ಕುರಿತು ಪತ್ರಿಕೆಯಲ್ಲಿ ಪ್ರಕಟಿಸದಂತೆ ಹಣ ನೀಡಲಾಗಿದೆ ಎಂಬುದಕ್ಕೆ ಪುಷ್ಠಿ ನೀಡಿದಂತಾಗಿದೆ. ಮುಖ್ಯಮಂತ್ರಿ ಕಚೇರಿಯೇ ನೇರವಾಗಿ ಮಾಧ್ಯಮ ಪ್ರತಿನಿಧಿಗಳಿಗೆ ಲಂಚ ನೀಡಿರುವುದು ಅನೈತಿಕವಾದದ್ದಾಗಿದೆ. ಅಲ್ಲದೇ ಮಾಧ್ಯಮ ಸಂಸ್ಥೆಗಳ ಮೇಲೆ ಪ್ರಭಾವ ಬೀರಿ ಸರ್ಕಾರದ ಪರವಾಗಿ ಇರುವಂತೆ ನೋಡಿಕೊಂಡಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ” ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಪೋಸ್ಟ್‌ ಹಾಕಿರುವ ಹಿರಿಯ ಪತ್ರಕರ್ತರಾದ ರಾಜಾರಾಮ್‌ ತಲ್ಲೂರು, “ಇಂದು ಬೆಳಗ್ಗಿನಿಂದ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಕಚೇರಿಯಿಂದ, ಸಚಿವರ ಕಚೇರಿಗಳಿಂದ ರಾಜ್ಯದ ಹಲವು ಪತ್ರಕರ್ತರಿಗೆ ದೀಪಾವಳಿ ಇನಾಮಿನ ಜೊತೆಯಲ್ಲಿ ನಗದು ಹಣವನ್ನು ನೀಡಲಾಗಿದೆ ಎಂಬ ವದಂತಿಗಳು ಹಬ್ಬಿವೆ. ಇದು ಹೌದೆಂದಾಗಿದ್ದಲ್ಲಿ, ಚುನಾವಣಾ ಪೂರ್ವ ಭ್ರಷ್ಟಾಚಾರ ಎಂದು ಇದನ್ನು ಪರಿಗಣಿಸುವುದು ಕರ್ನಾಟಕದ ಸಾರ್ವಜನಿಕ ಸ್ವಾಸ್ಥ್ಯದ ದೃಷ್ಟಿಯಿಂದ ಅತ್ಯಗತ್ಯ” ಎಂದಿದ್ದಾರೆ.

“ತಾವು ತಕ್ಷಣ ಈಬಗ್ಗೆ ಕೂಲಂಕಷ ತನಿಖೆ ನಡೆಸಬೇಕು ಮತ್ತು ಭ್ರಷ್ಟಾಚಾರ ನಡೆದಿರುವುದು ಹೌದೆಂದಾದರೆ, ಆ ಬಗ್ಗೆ ತಕ್ಷಣ ಕಾನೂನು ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಕರ್ನಾಟಕದ ಜನತೆಯ ಪರವಾಗಿ ತಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇನೆ” ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ #SayCM ಹ್ಯಾಷ್‌ಟ್ಯಾಗ್‌ನಲ್ಲಿ ಕಾಂಗ್ರೆಸ್ ಪಕ್ಷ ಸರಣಿ ಟ್ವೀಟ್ ಮಾಡಿದೆ. “ಪತ್ರಕರ್ತರಿಗೆ ಮುಖ್ಯಮಂತ್ರಿ ಕಚೇರಿಯ ‘ಸ್ವೀಟ್ ಬಾಕ್ಸ್ ಲಂಚ’ದ ಕುರಿತು ನ್ಯಾಯಾಂಗ ತನಿಖೆಯಾಗಬೇಕು. ಅದು ಸಾರ್ವಜನಿಕರ ತೆರಿಗೆ ಹಣದ ದುರ್ಬಳಕೆಯೇ? ಕಮಿಷನ್ ಭ್ರಷ್ಟಾಚಾರದ ಪಾಪದ ಹಣವೇ? ಆ ಹಣದ ಮೂಲ ಯಾವುದು? ಎಷ್ಟು ಹಣ ಲಂಚವಾಗಿ ನೀಡಲಾಗಿದೆ, ಪಡೆದವರೆಷ್ಟು, ವಾಪಸ್ ನೀಡಿದವರೆಷ್ಟು ಎಂಬಿತ್ಯಾದಿ ಸಂಗತಿ ರಾಜ್ಯದ ಜನತೆಗೆ ತಿಳಿಯಬೇಕು” ಎಂದು ಆಗ್ರಹಿಸಿದೆ.

ಇದನ್ನೂ ಓದಿರಿ: ಮುಖ್ಯಮಂತ್ರಿ ಕಚೇರಿಯಿಂದ ಆಯ್ದ ಪತ್ರಕರ್ತರಿಗೆ ತಲಾ 2.5 ಲಕ್ಷ ರೂ ಗಿಫ್ಟ್ ರೂಪದ ಲಂಚದ ಆರೋಪ

“ಸಿಎಂ ಕಚೇರಿ ನೀಡಿದ ₹2.5 ಲಕ್ಷ ಲಂಚವನ್ನು ವಾಪಸ್ ಮಾಡುವ ಮೂಲಕ ಪತ್ರಿಕಾಧರ್ಮವನ್ನು ಎತ್ತಿ ಹಿಡಿದಿದ್ದಾರೆ ಎಂಬುದು ತಿಳಿದುಬಂದಿದೆ. ಕರ್ನಾಟಕದ ಪತ್ರಕರ್ತರು ಪತ್ರಿಕಾಧರ್ಮದ ಪಾವಿತ್ರ್ಯತೆಗೆ ದಕ್ಕೆ ತರುವುದಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಪತ್ರಕರ್ತರಿಗೆ ಲಂಚ ನೀಡಿದ್ದೇಕೆ ಎಂಬುದನ್ನು ಸಿಎಂ ಉತ್ತರಿಸಬೇಕು” ಎಂದು ಕಾಂಗ್ರೆಸ್ ಒತ್ತಾಯಿಸಿದೆ.

“ನಾವು ಸುಮ್ಮನೇ ಬೊಮ್ಮಾಯಿಯವರನ್ನು ಪೇಸಿಎಂ ಎಂದಿಲ್ಲ! ಈ ಸರ್ಕಾರ ಲಂಚವನ್ನು ಪಡೆಯುತ್ತದೆ, ಲಂಚವನ್ನು ನೀಡುತ್ತದೆ! ಇವೆಲ್ಲವೂ #PayCM ಮೂಲಕವೇ ನಡೆಯುತ್ತದೆಯೇ ಮುಖ್ಯಮಂತ್ರಿಗಳೇ? ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದಂತೆ ಮಾಧ್ಯಮಗಳನ್ನೂ ಖರೀದಿಸಿ ಅಕ್ರಮಗಳನ್ನು ಮುಚ್ಚಿಕೊಳ್ಳುವ ಹುನ್ನಾರವೇ?” ಎಂದು ಖಾರವಾಗಿ ಪ್ರಶ್ನೆಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...