Homeಮುಖಪುಟಛತ್ತೀಸ್‌ಗಢದಲ್ಲಿ ಪತ್ರಕರ್ತ ಮುಕೇಶ್‌ ಚಂದ್ರಾಕರ್‌ ಹತ್ಯೆ: ಯಾರಿ ಪತ್ರಕರ್ತ, ಏನಿದು ಪ್ರಕರಣ

ಛತ್ತೀಸ್‌ಗಢದಲ್ಲಿ ಪತ್ರಕರ್ತ ಮುಕೇಶ್‌ ಚಂದ್ರಾಕರ್‌ ಹತ್ಯೆ: ಯಾರಿ ಪತ್ರಕರ್ತ, ಏನಿದು ಪ್ರಕರಣ

- Advertisement -
- Advertisement -

ಛತ್ತೀಸ್‌ಗಢದ ಬಿಜಾಪುರದಲ್ಲಿ ರಸ್ತೆ ಕಾಮಗಾರಿಯ ಕುರಿತ ವರದಿ ಮಾಡಿದ್ದ ಕಾರಣಕ್ಕಾಗಿ  28ರ ಹರೆಯದ ಮುಕೇಶ್ ಚಂದ್ರಾಕರ್‌ ಎಂಬ ಪತ್ರಕರ್ತ ಹತ್ಯೆಯಾಗಿದ್ದಾರೆ. ಜನವರಿ 1ರಿಂದ ಕಾಣೆಯಾಗಿದ್ದ ಚಂದ್ರಾಕರ್ ಅವರ ಶವವು ಜನವರಿ 3ರಂದು ಗುತ್ತಿಗೆದಾರರೊಬ್ಬರ ಸೈಟ್‌ನಲ್ಲಿದ್ದ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಪತ್ತೆಯಾಗಿತ್ತು.

ಇದೊಂದು ವ್ಯವಸ್ಥಿತ ಹತ್ಯೆ ಪ್ರಕರಣವಾಗಿದ್ದು  ಇಲ್ಲಿಯವರೆಗೆ  ಮೂವರು ಶಂಕಿತರನ್ನು ಬಂಧಿಸಲಾಗಿದೆ. ಪತ್ರಕರ್ತನ ಹತ್ಯೆ ರಾಷ್ಟ್ರದೆಲ್ಲೆಡೆ ಭಾರೀ ಚರ್ಚೆಯ ವಿಷಯವಾಗಿದೆ.

ಪತ್ರಕರ್ತನ ಮೃತದೇಹದ ಮೇಲೆ ಶಸ್ತ್ರಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ ಗುರುತುಗಳಿದ್ದವು. ಈ ಪ್ರಕರಣದಲ್ಲಿ ದುಷ್ಕರ್ಮಿಗಳು ಅನುಮಾನಬಾರಬಾರದೆಂದು  ಟ್ಯಾಂಕ್‌ನ ಮೇಲೆ 4 ಇಂಚು ಸಿಮೆಂಟ್ ಸ್ಲ್ಯಾಬ್‌ ಇಟ್ಟು ಬಂದ್ ಮಾಡಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಛತ್ತೀಸಗಡದ ಬಿಜಾಪುರದ ಮುಕೇಶ್ ಬಾಲ್ಯದಲ್ಲೇ  ತನ್ನ ಹೆತ್ತವರನ್ನು ಕಳೆದುಕೊಂಡಿದ್ದು, ಸಹೋದರ ಯುಕೇಶ್ ಚಂದ್ರಾಕರ್ ಜತೆಗೆ ಬೆಳೆದು ಪತ್ರಕರ್ತನಾದವನು. 2021ರಲ್ಲಿ  ಮಾವೋವಾದಿಗಳು ಅಪಹರಿಸಿದ್ದ ಸಿಆರ್‌ಪಿಎಫ್‌ ಕಮಾಂಡೋ ರಾಕೇಶ್ವರ್ ಸಿಂಗ್ ಮನ್ಹಾಸ್‌ ಬಿಡುಗಡೆಯಲ್ಲಿ ಮುಕೇಶ್ ಚಂದ್ರಾಕರ್‌ ಪ್ರಮುಖ ಪಾತ್ರವಹಿಸಿದ್ದರು.

ಪ್ರಮುಖ ಸುದ್ದಿ ಚಾನೆಲ್‌ಗೆ ಸುದ್ದಿಗಾರನಾಗಿದ್ದ ಮುಕೇಶ್ ಚಂದ್ರಾಕರ್, ಸ್ಥಳೀಯವಾಗಿ ಬಸ್ತರ್‌ ಜಂಕ್ಷನ್ ಎಂಬ ಯೂಟ್ಯೂಬ್ ಚಾನೆಲ್ ಅನ್ನೂ ಹೊಂದಿದ್ದರು. ಅದು ಒಂದೂವರೆ ಲಕ್ಷಕ್ಕೂ ಹೆಚ್ಚು ಚಂದಾದಾರರನ್ನು ಹೊಂದಿತ್ತು. ಅವರ ಯೂಟ್ಯೂಬ್‌ ಚಾನೆಲ್‌ ಬಸ್ತರ್ ಜಂಕ್ಷನ್‌ನಲ್ಲಿ 486 ವಿಡಿಯೋಗಳಿದ್ದು, 1.61 ಲಕ್ಷಕ್ಕೂ ಹೆಚ್ಚು ಚಂದಾದಾರರಿದ್ದಾರೆ. ಇದರಲ್ಲಿರುವ ಹೆಚ್ಚಿನ ವಿಡಿಯೋಗಳು ಸರ್ಕಾರ ಮತ್ತು ಮಾವೋವಾದಿ ಸಂಘರ್ಷಕ್ಕೆ ಸಂಬಂಧಿಸಿವೆ.

ಪತ್ರಕರ್ತನಾಗಿರುವ ಸಹೋದರ ಯುಕೇಶ್‌ ಚಂದ್ರಾಕರ್‌ ಅವರು ಸಲ್ಲಿಸಿದ ದೂರಿನ ಆಧಾರದಲ್ಲಿ ಪೊಲೀಸರು ಮುಕೇಶ್ ಚಂದ್ರಾಕರ್‌ ಮೊಬೈಲ್ ಟ್ರಾಕ್ ಮಾಡಿ ಬಸ್ತಿಯಲ್ಲಿ ಶವ ಪತ್ತೆ ಹಚ್ಚಿದ್ದಾರೆ. ಸುರೇಶ್ ಚಂದ್ರಾಕರ್ ಅವರ ಜಾಗದಲ್ಲಿ ಮೃತದೇಹ ಪತ್ತೆಯಾಗಿದೆ. ಸುರೇಶ್ ಚಂದ್ರಾಕರ್‌ ಅವರು ಗುತ್ತಿಗೆದಾರರಾಗಿದ್ದು, ಅವರ ಹೆಸರನ್ನೂ ಯುಕೇಶ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮುಕೇಶ್ ಚಂದ್ರಾಕರ್‌ ಕೆಲವು ದಿನಗಳ ಹಿಂದೆ ಗಂಗಾಳೂರಿನಿಂದ ನೆಲಸನಾರ್‌ ಗ್ರಾಮದ ರಸ್ತೆ ನಿರ್ಮಾಣದಲ್ಲಿ ಗೋಲ್‌ಮಾಲ್ ಆಗಿರುವುದಾಗಿ ವರದಿ ಮಾಡಿದ್ದರು. ಇದಾದ ಬಳಿಕ ಅವರಿಗೆ ಕೆಲವರಿಂದ ಬೆದರಿಕೆ ಕರೆಗಳು ಹೋಗಿದ್ದವು. ಬೆದರಿಕೆ ಕರೆ ಮಾಡಿದವರ ಪೈಕಿ ಸುರೇಸ್ ಚಂದ್ರಾಕರ್ ಕೂಡ ಇದ್ದರು.

ಮಾವೋವಾದಿಗಳ ವಿರುದ್ಧ ಛತ್ತೀಸಗಢ ಸರ್ಕಾರ ಪೊಲೀಸರ ರಕ್ಷಣೆಯಲ್ಲಿ ಸಂಘಟಿಸಿದ್ದ ‘ಸಲ್ವಾ ಜುಡೂಮ್’ ಎಂಬ ಅರೆಶಸ್ತ್ರ ಪಡೆಯಲ್ಲಿದ್ದ ಸುರೇಶ್ ಚಂದ್ರಾಕರ್ ಹಿನ್ನೆಲೆ ತೀರಾ ಬಡತನದ್ದು. ಆದರೆ ಇತ್ತೀಚಿನ ವರ್ಷಗಳಲ್ಲಿ ಮಾವೋವಾದಿ ಪ್ರಭಾವದ ಸೀಮೆಯಲ್ಲಿ ಸರ್ಕಾರಿ ಕಾಮಗಾರಿಗಳ ಗುತ್ತಿಗೆ ಹಿಡಿದು ಬಸ್ತರ್ ನ ದೊಡ್ಡ ಗುತ್ತಿಗೆದಾರ ಕುಳ ಎನಿಸಿದ್ದ. 2021ರಲ್ಲಿ ಈತನ ಮದುವೆ ಭಾರೀ ಅದ್ದೂರಿಯಿಂದ ಜರುಗಿತ್ತು. ಮಾವನ ಮನೆಗೆ ಹೆಲಿಕಾಪ್ಟರಿನಲ್ಲಿ ಬಂದಿಳಿದಿದ್ದ. ಮದುವೆಯ ನೃತ್ಯಕ್ಕಾಗಿ ರಷ್ಯಾದಿಂದ ನರ್ತಕಿಯರ ತಂಡವನ್ನು ಕರೆಯಿಸಿದ್ದ. ಮದುವೆ ಔತಣಕೂಟವನ್ನು ಬೀಜಾಪುರದ ಸ್ಟೇಡಿಯಂ ನಲ್ಲಿ ಏರ್ಪಡಿಸಿದ್ದ. ಬಸ್ತರ್ ಹಿಂದೆಂದೂ ಕಂಡು ಕೇಳಿ ಅರಿಯದ ಮದುವೆಯಿದು ಎನ್ನಲಾಗಿದೆ.

ಜಾಗತಿಕವಾಗಿ ಪತ್ರಕರ್ತರ ಹತ್ಯೆ ಪ್ರಮಾಣದಲ್ಲಿ ಇಂದು ಬಾರೀ ಏರಿಕೆಯಾಗಿರುವ ಆತಂಕಕಾರಿ ಅಂಶ ಬೆಳಕಿಗೆ ಬಂದಿದೆ.  ಈ ವರ್ಷ ಒಟ್ಟು 18 ದೇಶದಲ್ಲಿ 44 ಪತ್ರಕರ್ತರು ಹತ್ಯೆಯಾಗಿದ್ದಾರೆ. ಕಳೆದ ವರ್ಷಾವಧಿಗೆ ಹೋಲಿಸಿದರೆ 2018ರ ಮೊದಲ ನಾಲ್ಕು ತಿಂಗಳಲ್ಲಿ  28ರಷ್ಟು ಹೆಚ್ಚು ಪತ್ರಕರ್ತರ ಹತ್ಯೆಯಾಗಿದ್ದಾರೆ ಎಂದು ಜಿನೀವಾ ಮೂಲದ ಪ್ರೆಸ್ ಎಂಬ್ಲಮ್ ಕ್ಯಾಂಪೇನ್ (ಪಿಇಸಿ) ವರದಿ ಮಾಡಿದೆ.

ಭಾರತದಲ್ಲಿ 1992ರ ನಂತರ ಸುಮಾರು 70ಕ್ಕೂ ಹೆಚ್ಚು ಪತ್ರಕರ್ತರನ್ನು ವಿವಿಧ ಕಾರಣಗಳಿಗಾಗಿ ಹತ್ಯೆ ಮಾಡಲಾಗಿದೆ ಎಂದು ವರದಿಯೊಂದು ಹೇಳಿದೆ.

ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...