Homeಚಳವಳಿನಿಷ್ಟೂರ ಪತ್ರಕರ್ತ ರವೀಶ್ ಕುಮಾರ್ ಗೆ ಒಲಿದ ಏಷ್ಯಾದ ನೊಬೆಲ್ ಪ್ರಶಸ್ತಿ..

ನಿಷ್ಟೂರ ಪತ್ರಕರ್ತ ರವೀಶ್ ಕುಮಾರ್ ಗೆ ಒಲಿದ ಏಷ್ಯಾದ ನೊಬೆಲ್ ಪ್ರಶಸ್ತಿ..

- Advertisement -
- Advertisement -

ಜನಪರ ಪತ್ರಕರ್ತ ಎನ್.ಡಿ.ಟಿ.ವಿಯ ರವೀಶ್ ಕುಮಾರ್ ರವರಿಗೆ ‘ಪತ್ರಿಕೋಧ್ಯಮದ ಮೂಲಕ ದನಿಯಿಲ್ಲದವರಿಗೆ ದನಿಯಾದ’ ಸಾಧನೆಗಾಗಿ ಏಷ್ಯಾದ ನೊಬೆಲ್ ಎನಿಸಿಕೊಂಡಿರುವ ಪ್ರತಿಷ್ಟಿತ ರಾಮನ್ ಮ್ಯಾಗ್ಸೆಸ್ಸೆ ಪ್ರಶಸ್ತಿ ಲಭಿಸಿದೆ.

ರವೀಶ್ ಕುಮಾರ್, ಬಿಹಾರದ ಮೊತಿಹಾರಿಯ ಮೂಲದವರು. ಉನ್ನತ ವ್ಯಾಸಂಗಕ್ಕಾಗಿ 1974ರಲ್ಲಿ ದೆಹಲಿಗೆ ಬಂದರು. ದೆಹಲಿಯಲ್ಲಿ ಪತ್ರಿಕೋದ್ಯಮವನ್ನು ಅಭ್ಯಾಸ ಮಾಡಿದ ರವೀಶ್, ತಮಗೆ ಇಂಗ್ಲೀಷ್ ಬರದಿದ್ದಕ್ಕಾಗಿ ಕೀಳರಿಮೆಯನ್ನು ಅನುಭವಿಸಿದವರು. ಸ್ವಪ್ರಯತ್ನದಿಂದಲೇ ಮೇಲೆಬಂದ ರವೀಶ್ 1996ರಲ್ಲಿ NDTV ಸೇರಿಕೊಂಡರು. ಸ್ವಂತ ಪರಿಶ್ರಮದಿಂದ NDTV India ಹಿಂದಿ ವಾಹಿನಿಯ ಸಂಪಾದಕರಾದರು. ಹಿಂದಿ ಗೊತ್ತಿರುವ ಎಲ್ಲರಿಗೂ ರವೀಶ್ ಚಿರಪರಿಚಿತರು. ಇವರ ಆಳವಾದ ವಿಶ್ಲೇಷಣೆ, ಪತ್ರಿಕೋದ್ಯಮದ ಸಾಂಪ್ರದಾಯಿಕವಲ್ಲದ ವಿಧಾನ, ಮಾತುಗಾರಿಕೆ, ಸತ್ಯವನ್ನು ಹುಡುಕುವುದಕ್ಕಾಗಿ ಎಲ್ಲೆಲ್ಲೋ ಸುತ್ತಾಡುವ ಇವರಿಗೆ ಖ್ಯಾತಿ, ಪ್ರಶಸ್ತಿಗಳು ಹುಡುಕಿಕೊಂಡು ಬಂದವು.

ಇತರ ಟಿವಿ ಆಂಕರ್‍ಗಳು ಒಂದು ವಿಷಯದ ಬಗ್ಗೆ ಅರ್ಧ ಗಂಟೆ ಚರ್ಚೆ ನಡೆಸುವುದೇ ಕಷ್ಟವಾಗಿರುವಾಗ, ಕೆಲವು ಮಹತ್ವದ ಸಂದರ್ಭದಲ್ಲಿ ಒಂದೇ ವಿಷಯದ ಮೇಲೆ ವಾರಗಟ್ಟಲೆ ವರದಿ, ಚರ್ಚೆ ಮಾಡಿದ ದಿಟ್ಟ ಪತ್ರಕರ್ತ ಈತ. ತೋರಿಸಿದ್ದನ್ನೇ ಮತ್ತೆ ಮತ್ತೆ ತೋರಿಸುವ, ಜೋರು ಗಂಟಲಿನಲ್ಲಿ ಅರ್ಥವಿಲ್ಲದ ಪ್ರಲಾಪ ಮಾಡುವ ಅದೆಷ್ಟೋ ‘ಖ್ಯಾತ’ ಪತ್ರಕರ್ತರಿಗಿಂತ ರವೀಶ್ ತೀರಾ ಭಿನ್ನ. ಯಾವುದೇ ಅಬ್ಬರವಿಲ್ಲದೆ ತಣ್ಣಗೆ ಈ ದೇಶದ ಸಾಮಾಜಿಕ, ರಾಜಕೀಯ, ಧಾರ್ಮಿಕ ಸಮಸ್ಯೆಗಳನ್ನು ಆಧಾರಸಮೇತ ಎಳೆಎಳೆಯಾಗಿ ಬಿಚ್ಚಿಡುವ ರವೀಶ್ ಲಕ್ಷಾಂತರ ಅಭಿಮಾನಿಗಳನ್ನು ಗಳಿಸಿದ್ದಾರೆ. ಹಾಗೆಯೆ ಪಟ್ಟಭದ್ರ ಶಕ್ತಿಗಳ ಕೆಂಗಣ್ಣಿಗೂ ಗುರಿಯಾಗಿದ್ದಾರೆ.

ಕೃಪೆ: ಅರವಿಂದ ತೆಗ್ಗಿನಮಠ

ರವೀಶ್ ಕುಮಾರ್‍ರವರು ಯಾವುದೇ ಮಿಂಚಿನ ಪದಗಳನ್ನು ಬಳಸದೇ ರಾಜಕೀಯ ನಾಯಕರನ್ನು ನೇರವಾಗಿ ಟೀಕೆ ಮಾಡುವ ಮತ್ತು ಜನರ ನೈಜ ಅಜೆಂಡಾಗಳನ್ನು ಮುಂದೆತರುವಲ್ಲಿ ಯಶಸ್ವಿಯಾದ ಪತ್ರಕರ್ತರಾಗಿದ್ದಾರೆ. ಆದ ಕಾರಣ ಭಾರತೀಯ ಜನತಾ ಪಾರ್ಟಿ ಬಹಿಷ್ಕರಿಸಿದ ಮೊದಲ ಪತ್ರಕರ್ತರಾಗಿದ್ದಾರೆ. ಇವರ ಹೆಸರಿಗೆ ಕಳಂಕ ತರಲು ಯತ್ನಿಸುತ್ತಿರುವ ಬಲಪಂಥೀಯ ನೂರು ಕಾರ್ಯಕರ್ತರು ಓದುವುದಕ್ಕಿಂತ ಹೆಚ್ಚು ಓದಿರುವ ರವೀಶ್ ವಿಚಾರವಂತರಾಗಿದ್ದಾರೆ. ಹಿಂದಿ ಮಾತನಾಡುತ್ತಾ, ಅವರ ಆಲೋಚನೆಗಳನ್ನು ಗ್ರಹಿಸುವ ಯುವಜನರ ಆದರ್ಶವಾಗಿದ್ದಾರೆ. ಇವರ ಆದರ್ಶಗಳು ಮೋಡಿ ಮಾಡುವಂತವಲ್ಲದೆ ನೈಜತೆಯಿಂದ ಕೂಡಿವೆ. ಕಳೆದ ಎರಡು ವರ್ಷಗಳಿಂದ ನಿರುದ್ಯೋಗದ ವಿಚಾರದಲ್ಲಿ ರವೀಶ್ ಕುಮಾರ್ ರವರು ನಡೆಸಿದ ಸರಣಿ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ರೈಲ್ವೆ ಇಲಾಖೆ ಹಲವು ಲಕ್ಷ ಉದ್ಯೋಗಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಿತ್ತು ಎಂದರೆ ಇವರ ಕಾರ್ಯಕ್ರಮದ ಪರಣಾಮ ಎಷ್ಟಿರಬೇಕು ಊಹಿಸಿ.

ಪರಿಣಾಮವಾಗಿ ಇವರಿಗೆ ಮಾತ್ರವಲ್ಲದೆ, ಇವರ ಕುಟುಂಬದ ಸದಸ್ಯರಿಗೂ ಬೆದರಿಕೆಗಳು ಶುರುವಾದವು. ಸಾಮಾಜಿಕ ಜಾಲತಾಣಗಳಲ್ಲಿ ಇವರನ್ನು ಎಷ್ಟು troll ಮಾಡಲಾಯಿತೆಂದರೆ ಒಂದು ಕಾಲದಲ್ಲಿ ಇವರು ಸಾಮಾಜಿಕ ಜಾಲತಾಣಗಳನ್ನು ಸಂಪೂರ್ಣವಾಗಿ ತೊರೆಯುವಂತಾಯಿತು. ಕೊಲೆಯ ಬೆದರಿಕೆಗಳು ಸಾಮಾನ್ಯವಾದವು. ರವೀಶ್‍ರನ್ನು ಕೊಲೆ ಮಾಡುತ್ತೇನೆ ಎಂದು ಕೆಲವರು ಮಾಡಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ರವೀಶ್ ಪ್ರಸ್ತುತ ಸಮಯದಲ್ಲಿ ಎಲ್ಲಿದ್ದಾರೆ, ಎಲ್ಲಿಗೆ ಹೊರಟಿದ್ದಾರೆ ಎನ್ನುವ ವಿಷಯಗಳನ್ನು ಈ ಪೀಡಕರು ರವೀಶ್‍ಗೆ ನಿರಂತರವಾಗಿ ಕಳುಹಿಸುತ್ತಿರುತ್ತಾರೆ.

ಈಗ ರವೀಶ್ ಕುಮಾರ್ ರವರ ಅಪ್ರತಿಮ ಸಾಧನೆಯನ್ನು ಗುರುತಿಸಿ ಇವರನ್ನು ಸೇರಿ ಐದು ಮಂದಿಗೆ ಈ ಪ್ರಶಸ್ತಿ ನೀಡಲಾಗಿದೆ. ಭಾರತದ ಹಲವು ಗಣ್ಯರು ರವೀಶ್ ಕುಮಾರ್ ರವರನ್ನು ಅಭಿನಂದಿಸಿದ್ದಾರೆ. ಆದರೆ ಪ್ರಜಾತಂತ್ರ ಯಶಸ್ವಿಯಾಗಬೇಕಾದರೆ ನಾಲ್ಕನೇ ಸ್ಥಂಬವೆಂದು ಪರಿಗಣಿತವಾಗಿರುವ ಪತ್ರಿಕಾರಂಗ ಸ್ವತಂತ್ರವಾಗಿ ಕೆಲಸ ಮಾಡುವಂತಿರಬೇಕು. ಮಾತ್ರವಲ್ಲ, ಪತ್ರಿಕಾರಂಗಕ್ಕೆ ಸಮಾಜದ ಹಿತವನ್ನು ಕಾಪಾಡುವ ಹೊಣೆಗಾರಿಕೆ ಇರಬೇಕು. ಇಂಥಾ ಜನಪರ ಪತ್ರಿಕೋದ್ಯಮವನ್ನು ಉಳಿಸಿ, ಬೆಳೆಸಲು ನಾವೇನು ಮಾಡಬೇಕು? ಸತ್ಯವನ್ನು ನುಡಿಯುವ ದಿಟ್ಟ ಪತ್ರಕರ್ತರ ರಕ್ಷಣೆಗೆ ನಾವು ಮಾಡಬೇಕಾಗಿರುವುದೇನು? ಇದು ನಾವು ಆದ್ಯತೆಯ ಮೇಲೆ ಪರಿಹಾರ ಕಂಡುಕೊಳ್ಳಬೇಕಾದ ಸಮಸ್ಯೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...