Homeಮುಖಪುಟಪತ್ರಕರ್ತ ಸಿದ್ದೀಕ್ ಕಪ್ಪನ್‌ಗೆ 5 ದಿನಗಳ ಮಧ್ಯಂತರ ಜಾಮೀನು

ಪತ್ರಕರ್ತ ಸಿದ್ದೀಕ್ ಕಪ್ಪನ್‌ಗೆ 5 ದಿನಗಳ ಮಧ್ಯಂತರ ಜಾಮೀನು

- Advertisement -
- Advertisement -

ಕೇರಳ ಮೂಲದ ಪತ್ರಕರ್ತ ಸಿದ್ದೀಕ್ ಕಪ್ಪನ್ ಅವರಿಗೆ ತಮ್ಮ ಅನಾರೋಗ್ಯ ಪೀಡಿತ ತಾಯಿಯನ್ನು ನೋಡುವುದಕ್ಕಾಗಿ 5 ದಿನಗಳ ಮಧ್ಯಂತರ ಜಾಮೀನು ನೀಡಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

“ಯುಪಿ ಪೊಲೀಸರು ಆತನನ್ನು ಕೇರಳದ ತಾಯಿಯ ಮನೆಗೆ ಕರೆದೊಯ್ಯುತ್ತಾರೆ, ಮನೆಯ ಕಾವಲು ಕಾಯುತ್ತಾರೆ ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ಭೇಟಿಯಾದಾಗ ಹಾಜರಿರುವುದಿಲ್ಲ” ಸಿಜೆಐ ಬೋಬ್ಡೆ ಹೇಳಿದ್ದಾರೆ.

ಸಿದ್ದೀಕ್ ಕಪ್ಪನ್ ಅವರು ಕೇರಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸೋಷಿಯಲ್ ಮೀಡಿಯಾ ಸೇರಿದಂತೆ ಯಾವುದೇ ಮಾಧ್ಯಮಗಳಿಗೆ ಸಂದರ್ಶನ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಷರತ್ತು ವಿಧಿಸಿದೆ.

ಸಿದ್ದೀಕ್ ಕಪ್ಪನ್ ಅವರನ್ನು ಬಿಡುಗಡೆ ಮಾಡಬೇಕೆಂದು ಕೋರಿ ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಆಲಿಸಿದೆ ಸುಪ್ರೀಂ ಕೋರ್ಟ್ ಮೇಲಿನ ಮಧ್ಯಂತರ ಜಾಮೀನು ನೀಡಿದೆ.

ಹತ್ರಾಸ್‌ನ ದಲಿತ ಯುವತಿಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ವರದಿ ಮಾಡಲು ಅಕ್ಟೋಬರ್ 5 ರಂದು ಉತ್ತರಪ್ರದೇಶಕ್ಕೆ ತೆರಳಿದ್ದ, ದೆಹಲಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೇರಳ ಮೂಲದ ಪರ್ತಕರ್ತ ಸಿದ್ದೀಕ್ ಕಪ್ಪನ್ ಅವರನ್ನುಉತ್ತರಪ್ರದೇಶ ಪೊಲೀಸರು ಬಂಧಿಸಿದ್ದರು.

ಕಪ್ಪನ್ ಮತ್ತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ (CFI) ಇಬ್ಬರು ಸದಸ್ಯರು ಹತ್ರಾಸ್ ಅತ್ಯಾಚಾರದ ಬಗ್ಗೆ ಧಾರ್ಮಿಕ ದ್ವೇಷವನ್ನು ಉಂಟುಮಾಡುವ “ಪಿತೂರಿಯ” ಭಾಗವಾಗಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರು ಆರೋಪಿಸಿದ್ದಾರೆ ಮತ್ತು ಕಠಿಣ ಯುಎಪಿಎ ಮತ್ತು ದೇಶದ್ರೋಹ ಸೇರಿದಂತೆ ವಿವಿಧ ಆರೋಪಗಳ ಮೇಲೆ ಬಂಧಿಸಿದ್ದಾರೆ.


ಇದನ್ನೂ ಓದಿ; ಕೇರಳ ಮೂಲದ ಪತ್ರಕರ್ತ ಸಿದ್ದೀಕ್‌ಗೆ ವಕೀಲರ ಭೇಟಿಗೆ ಸುಪ್ರೀಂ ಅನುಮತಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರತ್ಯೇಕ ರಾಜ್ಯದ ಬೇಡಿಕೆ: ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ

0
ನಾಗಾಲ್ಯಾಂಡ್‌ನ ಏಕೈಕ ಲೋಕಸಭಾ ಸ್ಥಾನಕ್ಕೆ ಶುಕ್ರವಾರ ಒಂದೇ ಹಂತದಲ್ಲಿ ಮತದಾನ ನಡೆದಿದೆ. ಆದರೆ, ಈಶಾನ್ಯ ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರತ್ಯೇಕ ರಾಜ್ಯದ ಬೇಡಿಕೆ ಮುಂದಿಟ್ಟುಕೊಂಡು ಜನರು ಮತದಾನದಿಂದ ದೂರ ಉಳಿದಿದ್ದಾರೆ ಎಂದು 'ಇಂಡಿಯಾ...