Homeಮುಖಪುಟಕಡೆಗೂ ದಕ್ಕಿದ ಜಾಮೀನು: 2 ವರ್ಷದ ನಂತರ ಬಿಡುಗಡೆಯಾಗುತ್ತಿದ್ದಾರೆ ಪತ್ರಕರ್ತ ಸಿದ್ದಿಕ್ ಕಪ್ಪನ್

ಕಡೆಗೂ ದಕ್ಕಿದ ಜಾಮೀನು: 2 ವರ್ಷದ ನಂತರ ಬಿಡುಗಡೆಯಾಗುತ್ತಿದ್ದಾರೆ ಪತ್ರಕರ್ತ ಸಿದ್ದಿಕ್ ಕಪ್ಪನ್

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಕುರಿತು ವರದಿ ಮಾಡಲು ತೆರಳುತ್ತಿದ್ದಾಗ ಬಂಧನಕ್ಕೆ ಒಳಗಾಗಿದ್ದ ಕೇರಳ ಮೂಲಕ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿದೆ. ಎರಡು ವರ್ಷಗಳಿಂದ ಯುಎಪಿಎ ಮತ್ತು ಮನಿ ಲಾಂಡರಿಂಗ್ ಪ್ರಕರಣಗಳಲ್ಲಿ ಸಿಲುಕಿ ಲಕ್ನೋ ಜೈಲಿನಲ್ಲಿದ್ದ ಅವರು ಬಿಡುಗೆಯಾಗಲಿದ್ದಾರೆ.

2022ರ ಸೆಪ್ಟಂಬರ್‌ನಲ್ಲಿ ಯುಎಪಿಎ ಪ್ರಕರಣದಲ್ಲಿ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು. ಆದರೆ ಜಾರಿ ನಿರ್ದೇಶನಾಲಯವು ತನಿಖೆ ನಡೆಸುತ್ತಿರುವ ಮನಿ ಲಾಂಡರಿಂಗ್ ಪ್ರಕರಣವು ಇನ್ನೂ ವಿಚಾರಣೆಗೆ ಬಾಕಿ ಇರುವ ಕಾರಣ ಅವರು ಲಕ್ನೋ ಜೈಲಿನಲ್ಲಿದ್ದರು. ಈಗ ಅಲಹಾಬಾದ್ ಹೈಕೋರ್ಟ್ ಆ ಪ್ರಕರಣದಲ್ಲಿಯೂ ಜಾಮೀನು ನೀಡಿದೆ.

ಸಿದ್ದಿಕ್ ಕಪ್ಪನ್ ಮತ್ತು ಇತರರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ವಿದ್ಯಾರ್ಥಿ ವಿಭಾಗವಾದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI) ನ ಸದಸ್ಯರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಅವರು ಭಯೋತ್ಪಾದಕ ಕೃತ್ಯಗಳು ಅಥವಾ ಅಕ್ರಮ ಹಣಕಾಸು ವಹಿವಾಟು ನಡೆಸಿಲ್ಲ. ಬದಲಾಗಿ ಪತ್ರಿಕೋದ್ಯಮದ ಕೆಲಸಕ್ಕಾಗಿ ಮಾತ್ರ ಹತ್ರಾಸ್‌ಗೆ ಪ್ರಯಾಣಿಸುತ್ತಿದ್ದರು ಆರೋಪಿಗಳ ಪರ ವಕೀಲರು ವಾದಿಸಿದ್ದರು.

ಕಪ್ಪನ್ ಮತ್ತು ಇತರರು ಮುಸ್ಲಿಮರು ಎಂಬ ಏಕೈಕ ಕಾರಣಕ್ಕಾಗಿ ಅವರ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಲಾಗಿದೆ. ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಲಾಗಿದೆ. ಯಾವುದೇ ಸಾಕ್ಷ್ಯಗಳು ಇಲ್ಲದಿದ್ದರೂ ಸಹ ಅವರನ್ನು ಎರಡು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿಡಲಾಗಿದೆ ಎಂದು ವಕೀಲರು ವಾದಿಸಿದ್ದರು.

ಸೆಪ್ಟಂಬರ್‌ನಲ್ಲಿ ಕಪ್ಪನ ಅವರಿಗೆ ಯುಎಪಿಎ ಪ್ರಕರಣದಲ್ಲಿ ಜಾಮೀನು ನೀಡುವಾಗ, ಪ್ರತಿಯೊಬ್ಬ ವ್ಯಕ್ತಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿಗಳಾದ ಯುಯು ಲಲಿತ್‌ರವರ ಹೇಳಿಕೆ ನೀಡಿದ್ದರು.

“ಕಪ್ಪನ್‌ ಮಾನ್ಯತೆ ಪಡೆದ ಪತ್ರಕರ್ತರಲ್ಲ. ಅವರಿಗೆ ಗಲಭೆಗಳನ್ನು ಪ್ರಚೋದಿಸಲು ಹಣ ನೀಡಲಾಗಿದೆ. ಅವರು ಗಲಭೆ ಪರಿಸ್ಥಿತಿಯನ್ನು ಸೃಷ್ಟಿಸಲು ಮತ್ತು ಸ್ಫೋಟಕಗಳನ್ನು ಬಳಸಲು ಪ್ರಯತ್ನಿಸುತ್ತಿದ್ದರು. ಅವರು ಪಿಎಫ್‌ಐಗೆ ಸೇರಿದವರು ಮತ್ತು ಇದು ಭಯೋತ್ಪಾದಕ ಸಂಘಟನೆ” ಎಂದು ಉತ್ತರ ಪ್ರದೇಶ ಸರ್ಕಾರದ ಪರವಾಗಿ ವಕೀಲ ಮಹೇಶ್ ಜೇಠ್ಮಲಾನಿ ಕೋರ್ಟ್‌ನಲ್ಲಿ ವಾದಿಸಿದ್ದರು.

ಕಪ್ಪನ್ ಬಳಿಯಿಂದ ಏನನ್ನು ವಶಪಡಿಸಿಕೊಂಡಿದ್ದೀರಿ? ಕಾರಿನಲ್ಲಿ ಯಾವುದೇ ಸ್ಫೋಟಕಗಳು ಕಂಡುಬಂದಿಲ್ಲ, ಅವನ ಬಳಿ ಯಾವುದೇ ವಸ್ತುಗಳು ಕಂಡುಬಂದಿಲ್ಲ. ಹಾಗಿದ್ದ ಮೇಲೆ ಸ್ಪೋಟಕಗಳನ್ನು ಎಲ್ಲಿ ಬಳಸಿದರು ಎಂದು ಪ್ರಶ್ನಿಸಿದ ಲಲಿತ್‌ರವರು ಜಾಮೀನು ಮಂಜೂರು ಮಾಡಿದ್ದರು. ಮುಂದಿನ ಆರು ವಾರಗಳ ಕಾಲ ದೆಹಲಿ ಪೊಲೀಸರಿಗೆ ಮತ್ತು ಆನಂತರ ಕೇರಳ ಪೊಲೀಸರಿಗೆ ವರದಿ ಮಾಡಿಕೊಳ್ಳಬೇಕು ಎಂಬ ಷರತ್ತು ವಿಧಿಸಲಾಗಿತ್ತು.

2020ರ ಅಕ್ಟೋಬರ್ 5 ರಂದು ಸಿದ್ದಿಕ್‌ ಕಪ್ಪನ್ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದರು. 2020ರ ಸೆಪ್ಟೆಂಬರ್ 14 ರಂದು ಹತ್ರಾಸ್‌ನಲ್ಲಿ 19 ವರ್ಷದ ದಲಿತ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ವರದಿ ಮಾಡುವುದಾಕ್ಕಾಗಿ ಕಪ್ಪನ್ ಇತರ ಮೂವರೊಂದಿಗೆ ಕಾರಿನಲ್ಲಿ ಹತ್ರಾಸ್‌ಗೆ ಪ್ರಯಾಣಿಸುತ್ತಿದ್ದಾಗ ಬಂಧನಕ್ಕೊಳಗಾಗಿದ್ದರು. ಅಂದಿನಿಂದ ಅವರಿಗೆ ಜಾಮೀನು ನಿರಾಕರಿಸಲಾಗಿತ್ತು.

ಕೇರಳ ಮೂಲದ ಪತ್ರಕರ್ತರಾಗಿರುವ ಸಿದ್ದಿಕ್‌ ಜಾತಿ ಆಧಾರಿತ ಗಲಭೆಯನ್ನು ಪ್ರಾರಂಭಿಸಲು ಮತ್ತು ಕೋಮು ಸೌಹಾರ್ದತೆಯನ್ನು ಸೃಷ್ಟಿಸಲು ಉದ್ದೇಶಿಸಿದ್ದಾರೆ ಎಂದು ಉತ್ತರ ಪ್ರದೇಶದ ಪೊಲೀಸರು ಮೊದಲು ಆರೋಪಿಸಿದ್ದರು. ತರುವಾಯ, ದೇಶದ್ರೋಹದ ಆರೋಪಗಳು ಮತ್ತು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

“ಸಿದ್ದಿಕ್ ಕಪ್ಪನ್ ನಿರಪರಾಧಿಯಾಗಿದ್ದು ಅವರು ಸಾಮರಸ್ಯ ಕದಡಲು ಯಾವುದೇ ವೇದಿಕೆಯನ್ನು ಬಳಸಿಲ್ಲ. ಕಪ್ಪನ್‌ ಅವರಿಗೆ ಮರೆಮಾಚಲು ಏನೂ ಇಲ್ಲ. ಅವರು ತಮ್ಮ ಮುಗ್ಧತೆಯನ್ನು ಸಾಬೀತುಪಡಿಸಲು ನಾರ್ಕೋ ವಿಶ್ಲೇಷಣೆ ಅಥವಾ ಬ್ರೈನ್ ಮ್ಯಾಪಿಂಗ್ ಪರೀಕ್ಷೆಗಳಿಗೆ ಒಳಗಾಗಲು ಕೂಡಾ ತಯಾರು” ಎಂದು ನ್ಯಾಯಾಲಯದಲ್ಲಿ ಅವರ ಪರ ವಕೀಲರು ವಾದಿಸಿದ್ದರು.

ಇದನ್ನೂ ಓದಿ; ಮಾತು ಮರೆತ ಭಾರತ-21; ಹತ್ರಾಸ್ ಫೈಲ್: ಬಿಜೆಪಿ ಆಡಳಿತದ ’ಬೇಟಿ ಬಚಾವೋ’ಗೊಂದು ಉದಾಹರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...