Homeಮುಖಪುಟಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಕೊಲೆ ಪ್ರಕರಣ: ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಕೊಲೆ ಪ್ರಕರಣ: ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

ಟಿವಿ ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ಇನ್ನೋರ್ವನಿಗೆ ಮೂರು ವರ್ಷ ಸಾದಾ ಜೈಲು ಶಿಕ್ಷೆ ವಿಧಿಸಿ ದೆಹಲಿಯ ಸಾಕೇತ್ ನ್ಯಾಯಾಲಯ ಇಂದು ಆದೇಶಿಸಿದೆ.

ರವಿ ಕಪೂರ್, ಅಮಿತ್ ಶುಕ್ಲಾ, ಬಲ್ಬೀರ್ ಮಲಿಕ್, ಅಜಯ್ ಕುಮಾರ್ ಮತ್ತು ಅಜಯ್‌ ಸೇಥಿ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದವರು. ನ್ಯಾಯಾಲಯ ನಾಲ್ವರು ಅಪರಾಧಿಗಳಿಗೆ ತಲಾ 1.25 ಲಕ್ಷ ರೂ. ಹಾಗೂ 5ನೇ ಅಪರಾಧಿಗೆ 7.25 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಅಪರಾಧಿಗಳಿಗೆ ವಿಧಿಸಿದ ದಂಡದ ಹಣದಲ್ಲಿ 12 ಲಕ್ಷ ರೂಪಾಯಿಯನ್ನು ಮೃತಳ ಕುಟುಂಬಕ್ಕೆ ನೀಡಲು ನ್ಯಾಯಾಲಯ ಆದೇಶಿಸಿದೆ.

ದೆಹಲಿ ಮೂಲದ ಟಿವಿ ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಅವರನ್ನು ಸೆಪ್ಟೆಂಬರ್ 30, 2008 ರಂದು ದೆಹಲಿಯ ನೆಲ್ಸನ್ ಮಂಡೇಲಾ ಮಾರ್ಗದಲ್ಲಿ ಗುಂಡಿಕ್ಕಿ ಕೊಲ್ಲಲಾಗಿತ್ತು. ರಾತ್ರಿ ಪಾಳಿ ಕೆಲಸ ಮುಗಿಸಿಕೊಂಡು ಕಚೇರಿಯಿಂದ ಹೊರಟಿದ್ದ ಸೌಮ್ಯ ಅವರನ್ನು ಮುಂಜಾನೆ 3:30ರ ಸುಮಾರಿಗೆ ಮಾರ್ಗ ಮಧ್ಯೆ ಹತ್ಯೆ ಮಾಡಲಾಗಿತ್ತು. ಸೌಮ್ಯ ಅವರ ಮೃತದೇಹ ಕಾರೊಂದರಲ್ಲಿ ಪತ್ತೆಯಾಗಿತ್ತು.

ಸೌಮ್ಯ ಕೊಲೆ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು ಆರು ತಿಂಗಳ ಬಳಿಕ ಆರೋಪಿಗಳನ್ನು ಬಂಧಿಸಿದ್ದರು. ಮತ್ತೊಂದು ಪ್ರಕರಣ ತನಿಖೆ ವೇಳೆ ಸೌಮ್ಯಾ ಕೊಲೆ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದರು. ಹಂತಕರು ದರೋಡೆ ನಡೆಸಲು ಸೌಮ್ಯಾ ಅವರನ್ನು ಕೊಲೆ ಮಾಡಿದ್ದಾರೆ ಎಂಬುವುದು ತನಿಖೆಯಲ್ಲಿ ಬಯಲಾಗಿದೆ.

ಇಂದು (ನ.25) ನ್ಯಾಯಾಲಯ ತೀರ್ಪು ಪ್ರಕಟಿಸುತ್ತಿದ್ದಂತೆ ಪ್ರತಿಕ್ರಿಯಿಸಿದ ಸೌಮ್ಯಾ ಅವರ ತಾಯಿ ಮಾಧವಿ ವಿಶ್ವನಾಥನ್, ನನ್ನ ಮಗಳು 15 ವರ್ಷಗಳಿಂದ ನ್ಯಾಯಕ್ಕಾಗಿ ಕಾಯುತ್ತಿದ್ದಳು ಎಂದಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ಖರೀದಿಸಲು ಇಬ್ಬರು ಮಕ್ಕಳ ಮಾರಾಟ: ದಂಪತಿ ಸೇರಿ ಮೂವರ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...