Homeಮುಖಪುಟಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಗಳಿಗೆ ಜಾಮೀನು

ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಗಳಿಗೆ ಜಾಮೀನು

- Advertisement -
- Advertisement -

2008ರಲ್ಲಿ ನಡೆದಿದ್ದ ಟಿವಿ ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಾಲ್ವರು ಅಪರಾಧಿಗಳಿಗೆ ದೆಹಲಿ ಹೈಕೋರ್ಟ್ ಸೋಮವಾರ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿ ಸುರೇಶ್ ಕುಮಾರ್ ನೇತೃತ್ವದ ಪೀಠವು ಅಪರಾಧಿಗಳಾದ ರವಿ ಕಪೂರ್, ಅಮಿತ್ ಶುಕ್ಲಾ, ಬಲ್ಜೀತ್ ಸಿಂಗ್ ಮಲಿಕ್ ಮತ್ತು ಅಜಯ್ ಕುಮಾರ್ ಅವರ ಶಿಕ್ಷೆಯನ್ನು ಅಮಾನತುಗೊಳಿಸಿದೆ. ಅಪರಾಧ ಮತ್ತು ಶಿಕ್ಷೆಯನ್ನು ಪ್ರಶ್ನಿಸಿದ್ದ ಅವರ ಮೇಲ್ಮನವಿಗಳ ಬಾಕಿ ಇರುವವರೆಗೆ ಶಿಕ್ಷೆಯನ್ನು ಕೋರ್ಟ್‌ ರದ್ದುಪಡಿಸಿದೆ.

ನ್ಯಾಯಮೂರ್ತಿ ಗಿರೀಶ್ ಕತ್ಪಾಲಿಯಾ ಅವರನ್ನೊಳಗೊಂಡ ಪೀಠವು, ನಾಲ್ವರು ಅಪರಾಧಿಗಳು ಈಗಾಗಲೇ 14 ವರ್ಷ ಮತ್ತು 9 ತಿಂಗಳ ಕಾಲ ಶಿಕ್ಷೆಯನ್ನು ಅನುಭವಿಸಿದ್ದಾರೆ ಎಂದು ಗಮನಿಸಿದೆ. ನಾಲ್ವರು ಅಪರಾಧಿಗಳು ತಮ್ಮ ಶಿಕ್ಷೆಯನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು.

2008ರಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ  ಹದಿನೈದು ವರ್ಷಗಳ ನಂತರ ಕಳೆದ ವರ್ಷ ಅಕ್ಟೋಬರ್ 18ರಂದು ದೆಹಲಿ ನ್ಯಾಯಾಲಯವು ಕೊಲೆ ಪ್ರಕರಣದಲ್ಲಿ ನಾಲ್ವರನ್ನು ಅಪರಾಧಿಗಳೆಂದು ಘೋಷಿಸಿತ್ತು. ಪ್ರಾಸಿಕ್ಯೂಷನ್ ಎಲ್ಲಾ ಸಮಂಜಸವಾದ ಅನುಮಾನಗಳನ್ನು ಮೀರಿ ಅಪರಾಧವನ್ನು ಸರಿಯಾಗಿ ಸಾಬೀತುಪಡಿಸಿದೆ ಎಂದು ಕೋರ್ಟ್‌ ಹೇಳಿದೆ.

ರವಿ ಕಪೂರ್, ಅಮಿತ್ ಶುಕ್ಲಾ, ಅಜಯ್ ಕುಮಾರ್ ಮತ್ತು ಬಲ್ಜೀತ್ ಮಲಿಕ್ ಎಂಬ ನಾಲ್ವರು ಅಪರಾಧಿಗಳ ವಿರುದ್ಧ 302 (ಕೊಲೆ) ಮತ್ತು 34 (ಸಾಮಾನ್ಯ ಉದ್ದೇಶದಿಂದ ಮಾಡಿದ ಅಪರಾಧ)  ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಸನ್‌ಗಳಡಿಯಲ್ಲಿ ದಾಖಲಿಸಲಾಗಿದ್ದ ಪ್ರಕರಣದಲ್ಲಿ ಅವರಿಗೆ  ಶಿಕ್ಷೆ ವಿಧಿಸಲಾಗಿತ್ತು. ಇದಲ್ಲದೆ ಪ್ರಕರಣದ ಐದನೇ ಅಪರಾಧಿ ಅಜಯ್ ಸೇಥಿ ದರೋಡೆ ಮಾಡಿದ ಸೊತ್ತು ಪಡೆದ ಅಪರಾಧಕ್ಕೆ ಶಿಕ್ಷೆಗೆ ಗುರಿಯಾಗಿದ್ದಾನೆ. ಸಂಘಟಿತ ಅಪರಾಧ ಮತ್ತು ನಿರಂತರ ಕಾನೂನುಬಾಹಿರ ಚಟುವಟಿಕೆಯ ಹಿಂದಿನ ಒಳಗೊಳ್ಳುವಿಕೆಯ ಆಧಾರದ ಮೇಲೆ ವಿಧಿಸಲಾದ ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ಕಠಿಣ ನಿಯಂತ್ರಣ ಕಾಯ್ದೆ (MCOCA) ಅಡಿಯಲ್ಲಿ ಸೇಥಿ ಸೇರಿದಂತೆ ಎಲ್ಲಾ ಐವರು ಅಪರಾಧಿಗಳನ್ನು ಶಿಕ್ಷೆಗೆ ಗುರಿಪಡಿಸಲಾಗಿದೆ.

ಸೆಪ್ಟೆಂಬರ್ 30, 2008ರಲ್ಲಿ ಬೆಳಿಗ್ಗೆ 3.25 ರಿಂದ 3.55ರ ನಡುವೆ ದೆಹಲಿಯ ವಸಂತ ವಿಹಾರ್ ಕಡೆಯಿಂದ ವಸಂತ್ ಕುಂಜ್ ಕಡೆಗೆ ಹೋಗುವ ರಸ್ತೆಯಲ್ಲಿ ಅಪರಾಧಿಗಳು ಪತ್ರಕರ್ತೆ ಸೌಮ್ಯಾಳನ್ನು ದರೋಡೆ ಮಾಡುವ ಉದ್ದೇಶದಿಂದ ಗುಂಡು ಹಾರಿಸಿದ್ದರು. ಪ್ರಮುಖ ಇಂಗ್ಲೀಷ್ ನ್ಯೂಸ್ ಚಾನೆಲ್‌ನಲ್ಲಿ ಸೌಮ್ಯಾ ಅವರು ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಕಾರಿನಲ್ಲಿ ಹಿಂದಿರುಗುತ್ತಿದ್ದಾಗ ಅವರನ್ನು ದಕ್ಷಿಣ ದಿಲ್ಲಿಯ ನೆಲ್ಸನ್ ಮಂಡೇಲಾ ಮಾರ್ಗದಲ್ಲಿ 2008 ಸೆಪ್ಟಂಬರ್ 30ರಂದು ಮುಂಜಾನೆ ಗುಂಡು ಹಾರಿಸಿ ಹತ್ಯೆಗೈಯಲಾಗಿತ್ತು.

ಇದನ್ನು ಓದಿ: ರಾಜಸ್ಥಾನ: ಅತ್ಯಾಚಾರಿಯ ಬಂಧನಕ್ಕೆ ಆಗ್ರಹಿಸಿ ನೀರಿನ ಟ್ಯಾಂಕ್ ಏರಿದ ದಲಿತ ಮಹಿಳೆ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...