Homeಮುಖಪುಟಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣ: ಆರೋಪಿಗಳಿಗೆ ಜಾಮೀನು ಪ್ರಶ್ನಿಸಿ ಸುಪ್ರೀಂ ಕದ ತಟ್ಟಿದ ತಾಯಿ

ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣ: ಆರೋಪಿಗಳಿಗೆ ಜಾಮೀನು ಪ್ರಶ್ನಿಸಿ ಸುಪ್ರೀಂ ಕದ ತಟ್ಟಿದ ತಾಯಿ

- Advertisement -
- Advertisement -

ಟಿವಿ ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಾಲ್ವರು ಅಪರಾಧಿಗಳಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸೌಮ್ಯಾ ತಾಯಿ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದಾರೆ.

ಫೆಬ್ರವರಿ 12ರಂದು ದೆಹಲಿ ಹೈಕೋರ್ಟ್ ಪ್ರಕರಣದ ಆರೋಪಿಗಳಾದ ರವಿ ಕಪೂರ್, ಅಮಿತ್ ಶುಕ್ಲಾ, ಬಲ್ಜೀತ್ ಸಿಂಗ್ ಮಲಿಕ್ ಮತ್ತು ಅಜಯ್ ಕುಮಾರ್ ಅವರ ಶಿಕ್ಷೆಯನ್ನು ಅಮಾನತುಗೊಳಿಸಿದೆ. ಶಿಕ್ಷೆ ವಜಾಗೊಳಿಸುವಂತೆ ಅಪರಾಧಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಅಪರಾಧಿಗಳು 14 ವರ್ಷಗಳಿಂದ ಜೈಲಿನಲ್ಲಿದ್ದಾರೆ ಎಂಬುವುದನ್ನು ಗಣನೆಗೆ ತೆಗೆದುಕೊಂಡಿತ್ತು. ಬಿಡುಗಡೆ ಕೋರಿ ಅಪರಾಧಿಗಳು ಸಲ್ಲಿಸಿದ್ದ ಅರ್ಜಿ ಕುರಿತು ಪ್ರತಿಕ್ರಿಯಿಸುವಂತೆ ದೆಹಲಿ ಪೊಲೀಸರಿಗೆ ಜನವರಿ 23ರಂದು ಸೂಚಿಸಿತ್ತು.

ಪ್ರಮುಖ ಇಂಗ್ಲಿಷ್ ಸುದ್ದಿ ವಾಹಿನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸೌಮ್ಯ ವಿಶ್ವನಾಥನ್ ಅವರು ಸೆಪ್ಟೆಂಬರ್ 30, 2008ರ ಮುಂಜಾನೆ ದಕ್ಷಿಣ ದೆಹಲಿಯ ನೆಲ್ಸನ್ ಮಂಡೇಲಾ ಮಾರ್ಗದಲ್ಲಿ ಕೆಲಸ ಮುಗಿಸಿ ತಮ್ಮ ಕಾರಿನಲ್ಲಿ ಮನೆಗೆ ಮರಳುತ್ತಿದ್ದಾಗ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿದೆ.

ಸೌಮ್ಯಾ ಅವರ ತಾಯಿ ಮಾಧವಿ ವಿಶ್ವನಾಥನ್ ಅವರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರ ಸುಪ್ರೀಂಕೋರ್ಟ್ ಪೀಠವು ಆಲಿಸುವ ಸಾಧ್ಯತೆಯಿದೆ.

ವಿಶೇಷ ನ್ಯಾಯಾಲಯವು ನವೆಂಬರ್ 26, 2023ರಂದು ರವಿ ಕಪೂರ್, ಅಮಿತ್ ಶುಕ್ಲಾ, ಬಲ್ಜೀತ್ ಮಲಿಕ್ ಮತ್ತು ಅಜಯ್ ಕುಮಾರ್ ಅವರಿಗೆ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 302 (ಕೊಲೆ) ಮತ್ತು ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯಿದೆಯ (MCOCA) ಸೆಕ್ಷನ್ 3(1)(i) (ಐ)  ರಡಿಯಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ನೀಡಿತ್ತು. ಐದನೇ ಅಪರಾಧಿ ಅಜಯ್ ಸೇಥಿಗೆ ಐಪಿಸಿಯ ಸೆಕ್ಷನ್ 411ರಡಿಯಲ್ಲಿ ಮೂರು ವರ್ಷಗಳ ಸರಳ ಜೈಲು ಶಿಕ್ಷೆ ವಿಧಿಸಲಾಗಿತ್ತು.

ರವಿ ಕಪೂರ್ ಪರ ವಕೀಲರು, ಅವರು ಕಳೆದ 14 ವರ್ಷ 9 ತಿಂಗಳುಗಳಿಂದ ಬಂಧನದಲ್ಲಿದ್ದಾರೆ ಮತ್ತು ಮೇಲ್ಮನವಿ ಬಾಕಿ ಇರುವಾಗ ಅವರ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಶುಕ್ಲಾ, ಮಲಿಕ್ ಮತ್ತು ಅಜಯ್ ಕುಮಾರ್ ಅವರನ್ನು ಪ್ರತಿನಿಧಿಸಿದ ವಕೀಲ ಅಮಿತ್ ಕುಮಾರ್ ಕೂಡ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಕೋರ್ಟ್‌ ಮೊರೆ ಹೋಗಿದ್ದರು.

ಇದನ್ನು ಓದಿ: ಕೇಜ್ರಿವಾಲ್‌ ‘ಅಂಗಾಂಗ ವೈಫಲ್ಯಗೊಳಿಸಿ ನಿಧಾನವಾಗಿ ಸಾವಿಗೆ ತಳ್ಳಲು ಸಂಚು ರೂಪಿಸಲಾಗುತ್ತಿದೆ’: ಎಎಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...