Homeಮುಖಪುಟಮಣಿಪುರ ಹಿಂಸಾಚಾರ: ಬಿಜೆಪಿಯನ್ನು ಪ್ರಶ್ನಿಸಿ ಲೇಖನ ಬರೆದಿದ್ದ ಪತ್ರಕರ್ತನ ಬಂಧನ

ಮಣಿಪುರ ಹಿಂಸಾಚಾರ: ಬಿಜೆಪಿಯನ್ನು ಪ್ರಶ್ನಿಸಿ ಲೇಖನ ಬರೆದಿದ್ದ ಪತ್ರಕರ್ತನ ಬಂಧನ

- Advertisement -
- Advertisement -

ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿ ಕುಕಿ ಸಮುದಯಕ್ಕೆ ಬಿಜೆಪಿಯ ಬೆಂಬವಿದೆಯೇ ಎಂದು ಪ್ರಶ್ನಿಸಿ ಲೇಖನವನ್ನು ಬರದಿದ್ದ ಪತ್ರಕರ್ತ ವಾಂಗ್‌ಖೇಮ್‌ಚಾ ಶ್ಯಾಮ್‌ಜೈ ಅವರನ್ನು ಮಣಿಪುರ ಪೊಲೀಸರು ಬಂಧಿಸಿದ್ದು, ಅವರ ವಿರುದ್ಧ ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸಿದ ಆರೋಪ ಹೊರಿಸಲಾಗಿದೆ.

‘ದಿ ಫ್ರಾಂಟಿಯರ್ ಮಣಿಪುರ’ ಪತ್ರಕರ್ತನ ಬಂಧನದ ಬಗ್ಗೆ ವರದಿಯನ್ನು ಮಾಡಿದೆ. ರಾಜ್ಯ ಬಿಜೆಪಿ ಉಪಾಧ್ಯಕ್ಷ ಲೈಶ್ರಾಮ್ ಮೀನಬಂಟ ಸಿಂಗ್ ಅವರ ದೂರಿನ ಮೇರೆಗೆ ಪೊಲೀಸರು ಡಿ.2ರಂದು ‘ಕಂಗ್ಲೇಪಕ್ಕಿ ಮೀರಾ’ ಪತ್ರಿಕೆಯ ಸಂಪಾದಕ ಶ್ಯಾಮ್‌ಜೈ ವಿರುದ್ಧ ಪ್ರಕರಣ ದಾಖಲಿಸಿದ್ದರು.

ರಾಜ್ಯದಲ್ಲಿ ಕುಕಿ ಸಶಸ್ತ್ರ ಗುಂಪಿಗೆ ದುಷ್ಕೃತ್ಯವನ್ನು ನಡೆಸಲು ಆಡಳಿತಾರೂಢ ಬಿಜೆಪಿ ಸರ್ಕಾರದ ಬೆಂಬಲವಿದೆಯೇ ಎಂದು ಲೇಖನದಲ್ಲಿ ಪ್ರಶ್ನಿಸಲಾಗಿತ್ತು. ಶ್ಯಾಮ್‌ಜೈ ಅವರ ಲೇಖನವು ಮಣಿಪುರದಲ್ಲಿ ಸಮುದಾಯಗಳ ನಡುವೆ ಉದ್ವಿಗ್ನತೆಗೆ ಕಾರಣವಾಗಿದೆ ಎಂದು ಲೈಶ್ರಾಮ್ ಮೀನಾಬಂಟ ಸಿಂಗ್ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಗಲಭೆಗೆ ಪ್ರಚೋದನೆ ನೀಡುವುದು, ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಕ್ರಿಮಿನಲ್ ಬೆದರಿಕೆ ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ಶ್ಯಾಮ್‌ಜೈ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಶ್ಯಾಮ್‌ಜೈ ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ಅವರನ್ನು ಭಾನುವಾರದವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಶ್ಯಾಮ್‌ಜೈ ಅವರ ಬಂಧನವನ್ನು ಮಣಿಪುರ ಕಾಂಗ್ರೆಸ್‌ ಮುಖ್ಯಸ್ಥ ಕೇಶಾಮ್ ಮೇಘಚಂದ್ರ ಅವರು ಖಂಡಿಸಿದ್ದು, ಇದು ಮಾದ್ಯಮ ಮತ್ತು ವಾಕ್ ಸ್ವಾತಂತ್ರ್ಯದ ಮೇಲಿನ ಅನ್ಯಾಯದ ಜೀವಂತ ಉದಾಹರಣೆಯಾಗಿದೆ ಎಂದು ಹೇಳಿದ್ದಾರೆ.

ಮೈತೈ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನ ನೀಡುವುದನ್ನು ವಿರೋಧಿಸಿ ಮಣಿಪುರದ ಗುಡ್ಡಗಾಡು ಜಿಲ್ಲೆಗಳಲ್ಲಿ ಮೇ 3, 2023ರಂದು ‘ಬುಡಕಟ್ಟು ಐಕಮತ್ಯ ಮೆರವಣಿಗೆ’ ಆಯೋಜಿಸಲಾಗಿತ್ತು. ಇದು ಬಳಿಕ ಜನಾಂಗೀಯ ಹಿಂಸಾಚಾರಕ್ಕೆ ತಿರುಗಿತ್ತು. ಮೇ.3ರಿಂದ ಮಣಿಪುರದಲ್ಲಿ ಕುಕಿಗಳು ಮತ್ತು ಮೈತೈ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಿಂದ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ರಾಜ್ಯದಲ್ಲಿ ಕನಿಷ್ಠ 60,000 ಜನರು ನಿರಾಶ್ರಿತರಾಗಿದ್ದಾರೆ.

ಡಿ.4ರಂದು ತೆಂಗೊಪಾಲ್ ಜಿಲ್ಲೆಯ ಲೀತು ಗ್ರಾಮದಲ್ಲಿ ನಡೆದ ಗುಂಡಿನ ಕಾಳಗದಲ್ಲಿ 13 ಮಂದಿ ಮೃತಪಟ್ಟಿದ್ದರು. ಕೆಲ ದಿನಗಳ ಕಾಲ ಶಾಂತವಾಗಿದ್ದ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಪ್ರತ್ಯೇಕವಾದ ಘಟನೆಯಲ್ಲಿ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೈತೈ ಮತ್ತು ಕುಕಿ ಗುಂಪುಗಳ ನಡುವೆ ನಡೆದ ಹಿಂಸಾಚಾರದಲ್ಲಿ ಮೈತೈ ಸಮುದಾಯದ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಇದಲ್ಲದೆ ಮಣಿಪುರ ಗಡಿಭಾಗದ ಮೊರೆಹ್ ಪಟ್ಟಣದಲ್ಲಿ ಪೊಲೀಸ್ ಕಮಾಂಡೋಗಳು ಮತ್ತು ಸಶಸ್ತ್ರದಾರಿ ಗುಂಪಿನ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್‌ ಪೇದೆ ಗಾಯಗೊಂಡಿದ್ದಾರೆ.

ಇದನ್ನು ಓದಿ: ವಿವಾದಾತ್ಮಕ ಏಕರೂಪ ನಾಗರಿಕ ಸಂಹಿತೆ ತ್ವರಿತ ಜಾರಿಗೆ ಮುಂದಾದ ಉತ್ತರಾಖಂಡ ಸರಕಾರ

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

0
ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರದ ವರದಿಗಳ ಮಧ್ಯೆ ಭಾರತ ಮತ್ತು ಪಾಕಿಸ್ತಾನವು ಶನಿವಾರ ಬಿಷ್ಕೆಕ್‌ನಲ್ಲಿರುವ ವಿದ್ಯಾರ್ಥಿಗಳಿಗೆ ತಾವು ತಂಗಿರುವ ಹಾಸ್ಟೆಲ್‌, ಮನೆಗಳಿಂದ ಹೊರಗೆ ಬರದಂತೆ ಸೂಚಿಸಿದೆ. ಕಿರ್ಗಿಸ್ತಾನ್‌ನಲ್ಲಿರುವ ಭಾರತದ...